ಯೆಹೋಶುವ 23:8 - ಕನ್ನಡ ಸಮಕಾಲಿಕ ಅನುವಾದ8 ಆದರೆ, ಈವರೆಗೂ ಹೇಗೋ ಹಾಗೆಯೇ ಇನ್ನು ಮುಂದೆಯೂ ನಿಮ್ಮ ದೇವರಾದ ಯೆಹೋವ ದೇವರನ್ನೇ ನಂಬಿಕೊಂಡಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಈವರೆಗೆ ಹೇಗೊ ಹಾಗೆಯೇ ಇನ್ನು ಮುಂದೆಯೂ ನಿಮ್ಮ ದೇವರಾದ ಯೆಹೋವನನ್ನೇ ಆತುಕೊಂಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಈವರೆಗೆ ಹೇಗೋ ಹಾಗೆಯೇ ಇನ್ನು ಮುಂದಕ್ಕೂ ನಿಮ್ಮ ದೇವರಾದ ಸರ್ವೇಶ್ವರನನ್ನೇ ಅಂಟಿಕೊಂಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಈವರೆಗೆ ಹೇಗೋ ಹಾಗೆಯೇ ಇನ್ನು ಮುಂದಕ್ಕೂ ನಿಮ್ಮ ದೇವರಾದ ಯೆಹೋವನನ್ನೇ ಹೊಂದಿಕೊಂಡಿರ್ರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನಿಮ್ಮ ದೇವರಾದ ಯೆಹೋವನನ್ನೇ ಅನುಸರಿಸಿಕೊಂಡಿರಿ. ಈವರೆಗೆ ನೀವು ಹೇಗಿದ್ದಿರೋ ಅದೇ ರೀತಿಯಲ್ಲಿ ಮುಂದೆಯೂ ಇರಿ. ಅಧ್ಯಾಯವನ್ನು ನೋಡಿ |
ಆ ಪ್ರವಾದಿಯನ್ನು, ಕನಸು ಕಾಣುವವನಿಗೆ ಮರಣದಂಡನೆ ವಿಧಿಸಬೇಕು. ಏಕೆಂದರೆ ಈಜಿಪ್ಟ್ ದೇಶದೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿ, ದಾಸತ್ವದಿಂದ ನಿಮ್ಮನ್ನು ವಿಮೋಚಿಸಿದ ನಿಮ್ಮ ದೇವರಾದ ಯೆಹೋವ ದೇವರಿಂದ ತಿರುಗುವಂತೆ ಮತ್ತು ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ನಡೆಯಲು ಆಜ್ಞಾಪಿಸಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸುವಂತೆ ಅವನು ಮಾತನಾಡಿದ್ದಾನೆ. ಹೀಗೆ ನೀವು ಕೆಟ್ಟದ್ದನ್ನು ನಿಮ್ಮಿಂದ ತೆಗೆದುಹಾಕಬೇಕು.