ಯೆಹೋಶುವ 24:1 - ಕನ್ನಡ ಸಮಕಾಲಿಕ ಅನುವಾದ1 ಅನಂತರ ಯೆಹೋಶುವನು ಶೆಕೆಮಿನಲ್ಲಿ ಇಸ್ರಾಯೇಲಿನ ಸಮಸ್ತ ಗೋತ್ರದವರನ್ನು ಕೂಡಿಸಿ, ಇಸ್ರಾಯೇಲಿನ ಹಿರಿಯರನ್ನೂ ಅವರ ಮುಖ್ಯಸ್ಥರನ್ನೂ ಅವರ ನ್ಯಾಯಾಧಿಪತಿಗಳನ್ನೂ ಅವರ ಅಧಿಕಾರಿಗಳನ್ನೂ ಕರೆಯಿಸಿದನು. ಅವರು ದೇವರ ಮುಂದೆ ಬಂದು ನಿಂತರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ತರುವಾಯ ಯೆಹೋಶುವನು ಇಸ್ರಾಯೇಲ್ಯರ ಎಲ್ಲಾ ಕುಲದವರನ್ನು ಶೆಕೆಮಿನಲ್ಲಿ ಸಭೆ ಸೇರಿಸಿದನು. ಹಿರಿಯರು, ಪ್ರಧಾನರು, ನ್ಯಾಯಾಧಿಪತಿಗಳು, ಅಧಿಕಾರಿಗಳು ಬಂದು ದೇವರ ಸನ್ನಿಧಿಯಲ್ಲಿ ಕಾಣಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ತರುವಾಯ ಯೆಹೋಶುವನು ಎಲ್ಲ ಇಸ್ರಯೇಲ ಕುಲದವರನ್ನು ಶೆಕೆಮಿನಲ್ಲಿ ಸಭೆ ಸೇರಿಸಿದನು. ಹಿರಿಯರು, ನಾಯಕರು, ನ್ಯಾಯಾಧಿಪತಿಗಳು, ಅಧಿಕಾರಿಗಳು ಬಂದು ದೇವರ ಸನ್ನಿಧಿಯಲ್ಲಿ ಉಪಸ್ಥಿತರಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ತರುವಾಯ ಯೆಹೋಶುವನು ಇಸ್ರಾಯೇಲ್ಯರ ಎಲ್ಲಾ ಕುಲದವರನ್ನು ಶೆಕೆವಿುನಲ್ಲಿ ಕೂಟಕ್ಕೆ ಕರಿಸಲು ಅವರ ಹಿರಿಯರೂ ಪ್ರಧಾನರೂ ನ್ಯಾಯಾಧಿಪತಿಗಳೂ ಅಧಿಕಾರಿಗಳೂ ಬಂದು ದೇವರ ಸನ್ನಿಧಿಯಲ್ಲಿ ಕಾಣಿಸಿಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೆಹೋಶುವನು ಶೆಕೆಮಿನಲ್ಲಿ ಇಸ್ರೇಲಿನ ಎಲ್ಲ ಕುಲದವರನ್ನು, ಹಿರಿಯ ನಾಯಕರನ್ನು, ಕುಲದ ಪ್ರಧಾನರನ್ನು, ನ್ಯಾಯಾಧೀಶರನ್ನು, ಮುಖಂಡರನ್ನು ಮತ್ತು ಇಸ್ರೇಲಿನ ಅಧಿಕಾರಿಗಳನ್ನು ಒಟ್ಟಾಗಿ ಸೇರಿಸಿದನು. ಈ ಜನರು ದೇವರ ಸನ್ನಿಧಿಯಲ್ಲಿ ನಿಂತರು. ಅಧ್ಯಾಯವನ್ನು ನೋಡಿ |