Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 24:12 - ಕನ್ನಡ ಸಮಕಾಲಿಕ ಅನುವಾದ

12 ಇದಲ್ಲದೆ ನಾನು ನಿಮ್ಮ ಮುಂದೆ ಕಡಜದ ಹುಳಗಳನ್ನು ಕಳುಹಿಸಿದೆನು. ಅವು ಅವರನ್ನೂ ಅಮೋರಿಯರ ಇಬ್ಬರು ಅರಸರನ್ನೂ ನಿಮ್ಮ ಮುಂದೆ ಓಡಿಸಿಬಿಟ್ಟವು. ಇದು ಆದದ್ದು ನಿಮ್ಮ ಖಡ್ಗದಿಂದಲ್ಲಾ, ನಿಮ್ಮ ಬಿಲ್ಲಿನಿಂದಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಇದಲ್ಲದೆ ನಾನು ಕಡಜದ ಹುಳಗಳನ್ನು ನಿಮ್ಮ ಮುಂದಾಗಿ ಕಳುಹಿಸಿದೆನು. ಅವು ಅಮೋರಿಯರ ಅರಸರಿಬ್ಬರನ್ನು ಓಡಿಸಿಬಿಟ್ಟವು. ಇದು ನಿಮ್ಮ ಕತ್ತಿ ಬಿಲ್ಲುಗಳಿಂದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಇದಲ್ಲದೆ ಕಣಜದ ಹುಳುಗಳನ್ನು ನಿಮ್ಮ ಮುಂದಾಗಿ ಕಳುಹಿಸಿದೆ. ಅವು ಅಮೋರಿಯರ ಅರಸರಿಬ್ಬರನ್ನು ಓಡಿಸಿಬಿಟ್ಟವು. ಇದು ನಿಮ್ಮ ಕತ್ತಿಬಿಲ್ಲುಗಳಿಂದ ಆದುದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಇದಲ್ಲದೆ ನಾನು ಕಡಜದ ಹುಳಗಳನ್ನು ನಿಮ್ಮ ಮುಂದಾಗಿ ಕಳುಹಿಸಿದೆನು. ಅವು ಅಮೋರಿಯರ ಅರಸರಿಬ್ಬರನ್ನೂ ಓಡಿಸಿಬಿಟ್ಟವು. ಇದು ನಿಮ್ಮ ಕತ್ತಿಬಿಲ್ಲುಗಳಿಂದಾದದ್ದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಿಮ್ಮ ಸೈನಿಕರು ಯುದ್ಧಮಾಡಲು ಹೋಗುತ್ತಿರುವಾಗ ನಾನು ಅವರಿಗಿಂತ ಮುಂಚೆಯೇ ಕಡಜದ ಹುಳಗಳ ಗುಂಪನ್ನು ಕಳಿಸಿದ್ದೆ. ಈ ಹುಳಗಳು ಅಮೋರಿಯರ ಅರಸರಿಬ್ಬರನ್ನೂ ಓಡಿಸಿಬಿಟ್ಟವು. ಹೀಗೆ ನೀವು ಖಡ್ಗಗಳನ್ನು ಮತ್ತು ಬಿಲ್ಲುಬಾಣಗಳನ್ನು ಉಪಯೋಗಿಸದೆಯೇ ಆ ಪ್ರದೇಶವನ್ನು ವಶಪಡಿಸಿಕೊಂಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 24:12
13 ತಿಳಿವುಗಳ ಹೋಲಿಕೆ  

ಇದಲ್ಲದೆ ಉಳಿದವರೂ, ನಿಮಗೆ ಮರೆಯಾಗಿ ಉಳುಕೊಂಡವರೂ ನಾಶವಾಗುವ ತನಕ ನಿಮ್ಮ ದೇವರಾದ ಯೆಹೋವ ದೇವರು ಕಣಜದ ಹುಳವನ್ನು ಅವರಲ್ಲಿ ಕಳುಹಿಸುವರು.


ಹಿವ್ವಿಯರು, ಕಾನಾನ್ಯರು ಮತ್ತು ಹಿತ್ತಿಯರೂ ನಿಮ್ಮ ಎದುರಿನಿಂದ ಓಡಿಹೋಗುವಂತೆ ಕಡಜದ ಹುಳಗಳನ್ನು ನಿಮ್ಮ ಮುಂದೆ ಕಳಹಿಸುವೆನು.


“ಕೆಂಪು ಸಮುದ್ರದಿಂದ ಫಿಲಿಷ್ಟಿಯರ ಸಮುದ್ರದವರೆಗೆ ಮರುಭೂಮಿಯಿಂದ ನದಿಯವರೆಗೂ ನಿಮ್ಮ ಮೇರೆಗಳನ್ನು ನೇಮಿಸುವೆನು. ದೇಶದ ನಿವಾಸಿಗಳನ್ನು ನಿಮ್ಮ ಕೈಗಳಿಗೆ ಒಪ್ಪಿಸುವೆನು. ನೀವು ಅವರನ್ನು ನಿಮ್ಮ ಎದುರಿನಿಂದ ಓಡಿಸಿಬಿಡುವಿರಿ.


ಅದಕ್ಕಾಗಿ ಸ್ಥಳ ಸಿದ್ಧಮಾಡಿದಿರಿ. ಆಗ ಅದು ಬೇರೂರಿ ದೇಶವನ್ನು ತುಂಬಿತು.


ಹೀಗೆ ಇಸ್ರಾಯೇಲರು ಅಮೋರಿಯರ ದೇಶದಲ್ಲಿ ವಾಸಮಾಡಿದರು.


ಇದಲ್ಲದೆ ಮೋಶೆಯು ಯಜ್ಜೇರನ್ನು ಸಂಚರಿಸಿ ನೋಡುವುದಕ್ಕೆ ಗೂಢಚಾರರನ್ನು ಕಳುಹಿಸಿದನು. ಅವರು ಅವರ ಗ್ರಾಮಗಳನ್ನು ವಶಪಡಿಸಿಕೊಂಡು, ಅಲ್ಲಿರುವ ಅಮೋರಿಯರನ್ನು ಹೊರಡಿಸಿಬಿಟ್ಟರು.


ಯೊರ್ದನ್ ನದಿಯ ಆಚೆಯಲ್ಲಿ ಬೇತ್ ಪೆಗೋರಿಗೆ ಎದುರಾಗಿರುವ ತಗ್ಗಿನಲ್ಲಿ ಹೆಷ್ಬೋನಿನಲ್ಲಿ ವಾಸಮಾಡಿದ ಅಮೋರಿಯರ ಅರಸನಾದ ಸೀಹೋನನ ದೇಶದಲ್ಲಿ ಅವನನ್ನು ಮೋಶೆಯೂ, ಇಸ್ರಾಯೇಲರೂ ಈಜಿಪ್ಟಿನೊಳಗಿಂದ ಹೊರಟ ಮೇಲೆ ಸೋಲಿಸಿದರು.


ಸೀಹೋನನ ದೇಶವನ್ನೂ, ಬಾಷಾನಿನ ಅರಸನಾದ ಓಗನ ದೇಶವನ್ನೂ ಯೊರ್ದನಿನ ಆಚೆಯಲ್ಲಿ ಪೂರ್ವದಿಕ್ಕಿನಲ್ಲಿದ್ದ ಅಮೋರಿಯರ ಇಬ್ಬರು ಅರಸರ ದೇಶಗಳನ್ನೂ ಗೆದ್ದುಕೊಂಡರು.


ಯೆಹೋವ ದೇವರು ಅಮೋರಿಯರ ಅರಸನಾದ ಸೀಹೋನನಿಗೂ, ಓಗನಿಗೂ, ಅವರ ದೇಶಕ್ಕೂ ಮಾಡಿದ ಪ್ರಕಾರ ಆ ಜನಾಂಗಗಳನ್ನು ದಂಡಿಸುವರು.


ನೀವು ಈಜಿಪ್ಟಿನಿಂದ ಹೊರಡುವಾಗ ಯೆಹೋವ ದೇವರು ಹೇಗೆ ನಿಮಗೋಸ್ಕರ ಕೆಂಪುಸಮುದ್ರದ ನೀರನ್ನು ಬತ್ತಿಹೋಗಮಾಡಿದ್ದನ್ನೂ, ನೀವು ಸಂಪೂರ್ಣ ನಿರ್ಮೂಲ ಮಾಡಿದ ಯೊರ್ದನ್ ನದಿ ಆಚೆಯಲ್ಲಿದ್ದ ಅಮೋರಿಯರ ಇಬ್ಬರು ಅರಸುಗಳಾದ ಸೀಹೋನನಿಗೂ, ಓಗನಿಗೂ ಮಾಡಿದ್ದನ್ನೂ ನಾವು ಕೇಳಿದ್ದೇವೆ.


ಅದರ ನೆರಳಿನಿಂದ ಬೆಟ್ಟಗಳೂ ಅದರ ಕೊಂಬೆಗಳಿಂದ ದೇವದಾರುಗಳೂ ಮುಚ್ಚಲಾದವು.


ಅಮೋರಿಯರ ಅರಸನಾದ ಸೀಹೋನನನ್ನು, ಬಾಷಾನಿನ ಅರಸನಾದ ಓಗನನ್ನೂ, ಕಾನಾನಿನ ಎಲ್ಲಾ ಅರಸರನ್ನೂ ದಂಡಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು