ಯೆಹೋಶುವ 24:13 - ಕನ್ನಡ ಸಮಕಾಲಿಕ ಅನುವಾದ13 ನೀವು ವ್ಯವಸಾಯಮಾಡದ ಭೂಮಿಯನ್ನೂ ನೀವು ಕಟ್ಟದ ಪಟ್ಟಣಗಳನ್ನೂ ನಾನು ನಿಮಗೆ ಕೊಟ್ಟೆನು. ನೀವು ಅವುಗಳಲ್ಲಿ ವಾಸವಾಗಿದ್ದೀರಿ. ನೀವು ನೆಟ್ಟು ಬೆಳೆಸದ ದ್ರಾಕ್ಷಿತೋಟಗಳ ಫಲವನ್ನೂ ಹಿಪ್ಪೆತೋಪುಗಳ ಫಲವನ್ನೂ ಅನುಭವಿಸುತ್ತಿದ್ದೀರಿ,’ ಎಂಬುದೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನೀವು ವ್ಯವಸಾಯ ಮಾಡದೆ ಬೆಳೆದಿರುವ ಭೂಮಿಯನ್ನು ನಿಮಗೆ ಕೊಟ್ಟೆನು. ನೀವು ಕಟ್ಟದೆ ಇರುವ ಪಟ್ಟಣಗಳಲ್ಲಿ ವಾಸಿಸುತ್ತಿದ್ದೀರಿ. ನೀವು ನೆಟ್ಟು ಬೆಳೆಸದೆ ಇರುವ ದ್ರಾಕ್ಷಿ, ಎಣ್ಣೆಮರ ಇವುಗಳ ಫಲಗಳನ್ನು ಅನುಭವಿಸುತ್ತೀದ್ದೀರಿ” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ನೀವು ಕೃಷಿಮಾಡದ, ಬೆಳೆ ತುಂಬಿದ ಭೂಮಿಯನ್ನು ನಿಮಗೆ ಕೊಟ್ಟೆ, ನೀವು ಕಟ್ಟದ ನಗರಗಳಲ್ಲಿ ವಾಸಮಾಡುತ್ತಿದ್ದೀರಿ. ನೀವು ನೆಟ್ಟು ಬೆಳೆಸದ ದ್ರಾಕ್ಷಿ ಹಾಗೂ ಎಣ್ಣೆಮರಗಳ ತೋಟಗಳನ್ನು ಅನುಭವಿಸುತ್ತಿದ್ದೀರಿ’. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನೀವು ವ್ಯವಸಾಯಮಾಡದೆ ಬೆಳೆದಿರುವ ಭೂವಿುಯನ್ನು ನಿಮಗೆ ಕೊಟ್ಟೆನು. ನೀವು ಕಟ್ಟದೆ ಇರುವ ಪಟ್ಟಣಗಳಲ್ಲಿ ನೀವು ವಾಸಿಸುತ್ತೀರಿ. ನೀವು ನೆಟ್ಟು ಬೆಳಸದೆ ಇರುವ ದ್ರಾಕ್ಷೆ, ಎಣ್ಣೇಮರ ಇವುಗಳ ತೋಟಗಳನ್ನು ಅನುಭವಿಸುತ್ತಿದ್ದೀರಿ ಎಂಬದೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 “‘ಯೆಹೋವನಾದ ನಾನು ನಿಮಗೆ ಆ ದೇಶವನ್ನು ಕೊಟ್ಟಿದ್ದೇನೆ. ನೀವು ಆ ದೇಶಕ್ಕಾಗಿ ಏನನ್ನೂ ಮಾಡಿಲ್ಲ. ನಿಮಗೆ ಅದನ್ನು ಕೊಟ್ಟವನು ನಾನೇ. ನೀವು ಆ ನಗರಗಳನ್ನು ಕಟ್ಟಲೇ ಇಲ್ಲ. ಅವುಗಳನ್ನು ನಿಮಗೆ ಕೊಟ್ಟವನು ನಾನೇ. ಈಗ ನೀವು ಆ ಪ್ರದೇಶದಲ್ಲಿ ಮತ್ತು ಆ ನಗರಗಳಲ್ಲಿ ವಾಸಮಾಡುತ್ತಿದ್ದೀರಿ. ನೀವು ದ್ರಾಕ್ಷಿ ಮತ್ತು ಆಲಿವ್ ಮರದ ತೋಟಗಳನ್ನು ಹೊಂದಿರುವಿರಿ. ಆದರೆ ಆ ತೋಟಗಳನ್ನು ನೀವು ಬೆಳೆಸಲಿಲ್ಲ.’” ಅಧ್ಯಾಯವನ್ನು ನೋಡಿ |