Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 24:14 - ಕನ್ನಡ ಸಮಕಾಲಿಕ ಅನುವಾದ

14 “ಆದ್ದರಿಂದ ನೀವು ಈಗ ಯೆಹೋವ ದೇವರಿಗೆ ಭಯಪಟ್ಟು ಯಥಾರ್ಥದಲ್ಲಿಯೂ ಸತ್ಯದಲ್ಲಿಯೂ ಅವರನ್ನು ಸೇವಿಸಿರಿ. ನಿಮ್ಮ ಪೂರ್ವಜರು ಯೂಫ್ರೇಟೀಸ್ ನದಿಯ ಆಚೆಯಲ್ಲಿಯೂ ಈಜಿಪ್ಟಿನಲ್ಲಿಯೂ ಸೇವಿಸಿದ ದೇವರುಗಳನ್ನು ತೊರೆದುಬಿಟ್ಟು ಯೆಹೋವ ದೇವರನ್ನೇ ನೀವು ಸೇವಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಹೀಗಿರುವುದರಿಂದ, “ನೀವು ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿರಿ ಆತನನ್ನು ಪೂರ್ಣಮನಸ್ಸಿನಿಂದಲೂ, ಯಥಾರ್ಥಚಿತ್ತದಿಂದಲೂ ಸೇವಿಸಿರಿ. ನಿಮ್ಮ ಪೂರ್ವಿಕರು ಯೂಫ್ರೆಟಿಸ್ ನದಿಯ ಆಚೆಯಲ್ಲಿಯೂ ಐಗುಪ್ತದಲ್ಲಿಯೂ ಪೂಜಿಸುತ್ತಿದ್ದ ದೇವತೆಗಳನ್ನು ನಿಮ್ಮಲ್ಲಿಂದ ತೆಗೆದುಹಾಕಿರಿ. ಯೆಹೋವನನ್ನೇ ಸೇವಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 “ಈ ಕಾರಣ ನೀವು ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿರಿ. ಪೂರ್ಣ ಮನಸ್ಸಿನಿಂದ ಯಥಾರ್ಥಚಿತ್ತದಿಂದ ಅವರಿಗೆ ಸೇವೆಸಲ್ಲಿಸಿರಿ. ನಿಮ್ಮ ಪೂರ್ವಜರು ಯೂಫ್ರಟಿಸ್ ನದಿಯಾಚೆಯಲ್ಲೂ ಈಜಿಪ್ಟಿನಲ್ಲೂ ಪೂಜಿಸುತ್ತಿದ್ದ ದೇವತೆಗಳನ್ನು ತೊರೆದುಬಿಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಹೀಗಿರುವದರಿಂದ ನೀವು ಯೆಹೋವನಲ್ಲಿ ಭಯ ಭಕ್ತಿಯುಳ್ಳವರಾಗಿರ್ರಿ; ಆತನನ್ನು ಪೂರ್ಣಮನಸ್ಸಿನಿಂದಲೂ ಯಥಾರ್ಥಚಿತ್ತದಿಂದಲೂ ಸೇವಿಸಿರಿ. ನಿಮ್ಮ ಪೂರ್ವಿಕರು [ಯೂಫ್ರೇಟೀಸ್] ನದಿಯ ಆಚೆಯಲ್ಲಿಯೂ ಐಗುಪ್ತದಲ್ಲಿಯೂ ಪೂಜಿಸುತ್ತಿದ್ದ ದೇವತೆಗಳನ್ನು ನಿಮ್ಮಲ್ಲಿಂದ ತೆಗೆದುಹಾಕಿರಿ; ಯೆಹೋವನನ್ನೇ ಸೇವಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ತರುವಾಯ ಯೆಹೋಶುವನು ಜನರಿಗೆ, “ಈಗ ನೀವು ಯೆಹೋವನ ಮಾತುಗಳನ್ನು ಕೇಳಿದ್ದೀರಿ. ನೀವು ಆತನಲ್ಲಿ ಭಯಭಕ್ತಿಯಿಂದಿರಬೇಕು. ನಿಮ್ಮ ಪೂರ್ವಿಕರು ಯೂಫ್ರೇಟೀಸ್ ನದಿಯ ಆಚೆಯಲ್ಲಿಯೂ ಈಜಿಪ್ಟಿನಲ್ಲಿಯೂ ಪೂಜಿಸುತ್ತಿದ್ದ ಸುಳ್ಳುದೇವರುಗಳನ್ನು ಎಸೆದುಬಿಡಿ. ಈಗ ನೀವು ಯೆಹೋವನ ಸೇವೆಯನ್ನು ಮಾತ್ರ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 24:14
34 ತಿಳಿವುಗಳ ಹೋಲಿಕೆ  

ಆದರೆ ನೀವು ಯೆಹೋವ ದೇವರಿಗೆ ಭಯಪಟ್ಟು, ನಿಮ್ಮ ಪೂರ್ಣಹೃದಯದಿಂದ ನಂಬಿಗಸ್ತರಾಗಿ ಅವರನ್ನು ಸೇವಿಸಿರಿ. ಏಕೆಂದರೆ ಅವರು ನಿಮಗೋಸ್ಕರ ಎಂಥ ಮಹತ್ತಾದ ಕಾರ್ಯಗಳನ್ನು ಮಾಡಿದರೆಂದು ಆಲೋಚಿಸಿರಿ.


ಈಗ ಇಸ್ರಾಯೇಲರೇ, ನಿಮ್ಮ ದೇವರಾದ ಯೆಹೋವ ದೇವರಿಗೆ ಭಯಪಟ್ಟು, ಅವರ ಎಲ್ಲಾ ಮಾರ್ಗಗಳಲ್ಲಿ ನಡೆದುಕೊಂಡು, ಅವರನ್ನು ಪ್ರೀತಿಸಿ, ನಿಮ್ಮ ದೇವರಾದ ಯೆಹೋವ ದೇವರಿಗೆ ನಿಮ್ಮ ಪೂರ್ಣಹೃದಯದಿಂದಲೂ, ನಿಮ್ಮ ಪೂರ್ಣಪ್ರಾಣದಿಂದಲೂ ಸೇವೆಮಾಡಿರಿ.


ಆಗ ಯಾಕೋಬನು ತನ್ನ ಮನೆಯವರಿಗೂ, ತನ್ನ ಸಂಗಡ ಇದ್ದವರೆಲ್ಲರಿಗೂ, “ನಿಮ್ಮ ಮಧ್ಯದಲ್ಲಿರುವ ಅನ್ಯದೇವರುಗಳನ್ನು ತೆಗೆದುಹಾಕಿ ಶುದ್ಧರಾಗಿರಿ, ನೀವು ನಿಮ್ಮ ಬಟ್ಟೆಗಳನ್ನು ಬದಲಾಯಿಸಿರಿ.


ಈ ಲೋಕದೊಂದಿಗೂ, ವಿಶೇಷವಾಗಿ ನಮ್ಮ ಮತ್ತು ನಿಮ್ಮ ಸಂಬಂಧದಲ್ಲಿಯೂ, ನಾವು ದೇವರಿಂದ ಹೊಂದಿದ ಪವಿತ್ರತೆ ಮತ್ತು ದೈವಿಕ ನಿಷ್ಕಪಟತ್ವದಿಂದ ಯೋಗ್ಯರಾಗಿ ವರ್ತಿಸಿದ್ದೇವೆ ಎಂದು ನಮ್ಮ ಮನಸ್ಸಾಕ್ಷಿ ಹೇಳುತ್ತದೆ. ಈ ಮನಸ್ಸಾಕ್ಷಿಯ ಹೇಳಿಕೆಯು ನಮಗೆ ಹೆಮ್ಮೆಯ ವಿಷಯವಾಗಿದೆ. ನಾವು ಇದನ್ನು ಈ ಲೋಕದ ಜ್ಞಾನದಿಂದ ಅಲ್ಲ, ದೇವರ ಕೃಪೆಯನ್ನೇ ಆಶ್ರಯಿಸಿ ಮಾಡಿದ್ದೇವೆ.


ಆಗ ಯೆಹೋಶುವನು ಅವರಿಗೆ, “ಹಾಗಾದರೆ, ಈಗ ನಿಮ್ಮ ಮಧ್ಯದಲ್ಲಿರುವ ಅನ್ಯದೇವರುಗಳನ್ನು ತೊರೆದು, ನಿಮ್ಮ ಹೃದಯವನ್ನು ಇಸ್ರಾಯೇಲಿನ ದೇವರಾದ ಯೆಹೋವ ದೇವರ ಕಡೆಗೆ ತಿರುಗಿಸಿರಿ,” ಎಂದನು.


ಯೆಹೋವ ದೇವರ ನಿಯಮಕ್ಕೆ ಅನುಸಾರವಾಗಿದ್ದು, ದೋಷರಹಿತ ಮಾರ್ಗದಲ್ಲಿ ನಡೆದುಕೊಳ್ಳುವವರೂ ಧನ್ಯರು.


ಮರುಭೂಮಿಯಲ್ಲಿ ನಾನು ಅವರ ಮಕ್ಕಳಿಗೆ ಹೇಳಿದ್ದೇನೆಂದರೆ, “ನೀವು ನಿಮ್ಮ ತಂದೆಗಳ ನಿಯಮಗಳನ್ನು ಅನುಸರಿಸಬೇಡಿರಿ, ಅವರ ನ್ಯಾಯಗಳನ್ನು ಕೈಕೊಳ್ಳಬೇಡಿರಿ, ಅವರ ವಿಗ್ರಹಗಳಿಂದ ನಿಮ್ಮನ್ನು ಅಪವಿತ್ರಮಾಡಿಕೊಳ್ಳಬೇಡಿರಿ.


ಯೆಹೋವ ದೇವರ ಭಯವು ಜ್ಞಾನದ ಮೂಲವು; ಅವರ ಸೂತ್ರಗಳನ್ನು ಕೈಗೊಳ್ಳುವವರಿಗೆ ಒಳ್ಳೆಯ ತಿಳುವಳಿಕೆ ಉಂಟಾಗುವುದು; ನಿತ್ಯ ಸ್ತೋತ್ರವು ದೇವರಿಗೆ ಸಲ್ಲಲಿ.


ದೇವರು ಮನುಷ್ಯನಿಗೆ, “ಇಗೋ, ಕರ್ತ ದೇವರಲ್ಲಿ ಭಯಭಕ್ತಿ ಇಡುವುದೇ ಜ್ಞಾನ! ದುಷ್ಟತನವನ್ನು ಬಿಟ್ಟುಬಿಡುವುದೇ ವಿವೇಕ,” ಎಂದು ಹೇಳಿದರು.


ನಿಮ್ಮ ಸೇವಕರಾದ ಪ್ರವಾದಿಗಳ ಮುಖಾಂತರ ನೀವು ಆ ನಿಮ್ಮ ಆಜ್ಞೆಗಳನ್ನು ಕೊಟ್ಟಿದ್ದೀರಿ. ‘ನೀವು ಸ್ವಾಧೀನಮಾಡಿಕೊಳ್ಳಲು ಹೋಗುವ ದೇಶವು, ಆ ದೇಶಗಳ ಜನರ ಅಶುದ್ಧತ್ವದಿಂದ ಮೈಲಿಗೆಯಾದ ದೇಶವಾಗಿದೆ. ಆ ಜನರು ತಮ್ಮ ಅಸಹ್ಯ ಅಭ್ಯಾಸಗಳಿಂದ ಅದನ್ನು ಒಂದು ಮೂಲೆಯಿಂದ ಮತ್ತೊಂದು ಮೂಲೆಯವರೆಗೂ ತುಂಬಿಸಿದ್ದಾರೆ.


“ಯೆಹೋವ ದೇವರೇ, ನಾನು ಸತ್ಯದಿಂದಲೂ, ಪೂರ್ಣಹೃದಯದಿಂದಲೂ ನಿಮ್ಮ ಮುಂದೆ ನಡೆದು, ನಿಮ್ಮ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದ್ದೇನೆಂಬುದನ್ನು ಜ್ಞಾಪಕಕ್ಕೆ ತಂದುಕೊಳ್ಳಿರಿ,” ಎಂದು ಬೇಡಿಕೊಂಡನು. ಹೀಗೆ ಹಿಜ್ಕೀಯನು ವ್ಯಥೆಪಟ್ಟು ಅತ್ತನು.


ಯೆಹೋಶುವನು ಅವರೆಲ್ಲರಿಗೂ, “ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ: ‘ಪೂರ್ವದಲ್ಲಿ ನಿಮ್ಮ ಮೂಲ ಪುರುಷರಾದ ಅಬ್ರಹಾಮನಿಗೂ ನಾಹೋರನಿಗೂ ತಂದೆಯಾದ ತೆರಹನು ಯೂಫ್ರೇಟೀಸ್ ನದಿಯ ಆಚೆ ವಾಸವಾಗಿದ್ದಾಗ ಅವರೆಲ್ಲರೂ ಅನ್ಯದೇವರುಗಳನ್ನು ಆರಾಧಿಸುತ್ತಿದ್ದರು.


ನೀವು ನಿಮ್ಮ ದೇವರಾದ ಯೆಹೋವ ದೇವರ ಮುಂದೆ ನಿರ್ದೋಷಿಯಾಗಿರಬೇಕು.


ಜಾರತ್ವ ಮಾಡುವಂತೆ ಅವರು ಇದುವರೆಗೆ ಪೂಜಿಸುತ್ತಿದ್ದ ಆ ಮೇಕೆ ದೇವತೆಗಳಿಗೆ ಇನ್ನೆಂದಿಗೂ ತಮ್ಮ ಯಜ್ಞಗಳನ್ನು ಸಮರ್ಪಿಸಬಾರದು. ಇದು ಅವರಿಗೂ ಅವರ ಸಂತತಿಯವರಿಗೂ ಶಾಶ್ವತವಾದ ನಿಯಮ.’


ಆ ಸಮಯದಲ್ಲಿ ಯೂದಾಯ, ಗಲಿಲಾಯ, ಸಮಾರ್ಯದಲ್ಲೆಲ್ಲಾ ಇದ್ದ ಸಭೆಯು ಸಮಾಧಾನ ಹೊಂದಿತು. ಸಭೆ ಬಲಗೊಂಡು ಪವಿತ್ರಾತ್ಮರಿಂದ ಧೈರ್ಯಹೊಂದಿ ಸಂಖ್ಯೆಯಲ್ಲಿ ವೃದ್ಧಿಸುತ್ತಾ, ಕರ್ತ ಯೇಸುವಿನ ಭಯದಲ್ಲಿ ಮುನ್ನಡೆಯಿತು.


ಆದರೆ ಬೀಜ ಬಿದ್ದ ಒಳ್ಳೆಯ ಭೂಮಿಯವರು ಯಾರೆಂದರೆ ಯಥಾರ್ಥವಾದ ಒಳ್ಳೆಯ ಹೃದಯದಿಂದ, ವಾಕ್ಯವನ್ನು ಕೇಳಿ ಅದನ್ನು ಕೈಕೊಂಡು, ತಾಳ್ಮೆಯಿಂದ ಫಲಿಸುವವರೇ,” ಎಂದು ಹೇಳಿದರು.


ಆಮೇಲೆ ಇಸ್ರಾಯೇಲರು ತಿರುಗಿಕೊಂಡು ಅವರ ದೇವರಾದ ಯೆಹೋವ ದೇವರನ್ನು ಮತ್ತು ಅವರ ಅರಸನಾದ ದಾವೀದನನ್ನು ಹುಡುಕಿಕೊಂಡು, ಅಂತ್ಯ ದಿವಸಗಳಲ್ಲಿ ಯೆಹೋವ ದೇವರನ್ನೂ, ಆತನ ಒಳ್ಳೆಯತನವನ್ನೂ ಭಯಭಕ್ತಿಯಿಂದ ಪಡೆಯುವರು.


ಅವರು ಈಜಿಪ್ಟಿನಲ್ಲಿ ವೇಶ್ಯೆ ಆದರು. ಅವರು ಎಳೆಯ ಪ್ರಾಯದಲ್ಲಿ ವ್ಯಭಿಚಾರ ಮಾಡಿದ್ದರಿಂದ ಕನ್ಯಾವಸ್ಥೆಯ ಅವರ ಸ್ತನಗಳು ಹಿಸುಕಲಾದವು; ಅವುಗಳ ತೊಟ್ಟುಗಳು ನಸುಕಲಾದವು.


ಆಗ, ಅತ್ಯುತ್ತಮ ಕಾರ್ಯಗಳನ್ನು ನೀವು ವಿವೇಚಿಸಿಕೊಳ್ಳುವಿರಿ. ಕ್ರಿಸ್ತನ ಪುನರಾಗಮನ ದಿನದವರೆಗೆ ನೀವು ಪರಿಶುದ್ಧರಾಗಿಯೂ ನಿರ್ದೋಷಿಗಳಾಗಿಯೂ ಇರಬೇಕೆಂತಲೂ


ನಮ್ಮ ಕರ್ತ ಆಗಿರುವ ಯೇಸು ಕ್ರಿಸ್ತರನ್ನು ಅಳಿದು ಹೋಗದ ಪ್ರೀತಿಯಿಂದ ಪ್ರೀತಿಸುವವರೆಲ್ಲರ ಮೇಲೆ ಕೃಪೆಯಿರಲಿ.


ಆದರೆ ನಿಮ್ಮಲ್ಲಿ ಕ್ಷಮಾಪಣೆ ಉಂಟು. ನಾವು ನಿಮ್ಮನ್ನು ಭಯಭಕ್ತಿಯಿಂದ ಸೇವೆಮಾಡುವಂತೆ ನಿಮ್ಮ ಕ್ಷಮಾಪಣೆಯಿದೆ.


ನಿಷ್ಕಳಂಕ ಹೃದಯದಿಂದ ನಾನು ನಿಮ್ಮ ತೀರ್ಪುಗಳನ್ನು ಪಾಲಿಸುವೆನು, ಅದರಿಂದ ನಾನು ನಾಚಿಕೆಗೆ ಗುರಿಯಾಗದಿರುವೆನು.


ಊಚ್ ದೇಶದಲ್ಲಿ ಯೋಬ ಎಂಬ ಮನುಷ್ಯನಿದ್ದನು. ಅವನು ನಿರ್ದೋಷಿಯೂ ಯಥಾರ್ಥನೂ ದೇವರಿಗೆ ಭಯಪಡುವವನೂ ಕೆಟ್ಟದ್ದನ್ನು ತೊರೆಯುವವನೂ ಆಗಿದ್ದನು.


ಅಬ್ರಾಮನು ತೊಂಬತ್ತೊಂಬತ್ತು ವರ್ಷದವನಾದಾಗ, ಯೆಹೋವ ದೇವರು ಅಬ್ರಾಮನಿಗೆ ಕಾಣಿಸಿಕೊಂಡು, “ನಾನೇ ಸರ್ವಶಕ್ತ ದೇವರು. ನೀನು ನನ್ನ ಸನ್ನಿಧಿಯಲ್ಲಿಯೇ ನಡೆಯುತ್ತಾ ದೋಷವಿಲ್ಲದವನಾಗಿರು.


ಆಗ ಸಮುಯೇಲನು ಇಸ್ರಾಯೇಲ್ ಮನೆಯವರಿಗೆಲ್ಲಾ ಮಾತನಾಡಿ, “ನೀವು ನಿಮ್ಮ ಪೂರ್ಣಹೃದಯದಿಂದ ಯೆಹೋವ ದೇವರ ಕಡೆಗೆ ತಿರುಗಿ, ನಿಮ್ಮಲ್ಲಿರುವ ಅನ್ಯದೇವರುಗಳನ್ನೂ, ಅಷ್ಟೋರೆತನ್ನೂ ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಿ, ನಿಮ್ಮ ಹೃದಯವನ್ನು ಯೆಹೋವ ದೇವರಿಗೆ ಸಿದ್ಧಮಾಡಿ, ಅವರೊಬ್ಬರನ್ನೇ ಸೇವಿಸಿದರೆ ಅವರು ನಿಮ್ಮನ್ನು ಫಿಲಿಷ್ಟಿಯರ ಕೈಗಳೊಳಗಿಂದ ತಪ್ಪಿಸುವರು,” ಎಂದನು.


ನೀವು ಯೆಹೋವ ದೇವರ ಮಾತಿಗೆ ವಿರೋಧವಾಗಿ ತಿರುಗಿ ಬೀಳದೆ ಯೆಹೋವ ದೇವರಿಗೆ ಭಯಪಟ್ಟು ಅವರನ್ನು ಸೇವಿಸಿ, ಅವರ ಮಾತಿಗೆ ವಿಧೇಯರಾದರೆ ನೀವೂ, ನಿಮ್ಮ ಮೇಲೆ ಆಳುವ ಅರಸನೂ ನಿಮ್ಮ ದೇವರಾದ ಯೆಹೋವ ದೇವರನ್ನು ತಪ್ಪದೆ ಹಿಂಬಾಲಿಸುವಿರಿ.


ನಿಮ್ಮ ದೇವರಾದ ಯೆಹೋವ ದೇವರಿಗೆ ನೀವು ಭಯಪಡಬೇಕು. ಅವರಿಗೆ ಮಾತ್ರವೇ ಸೇವೆ ಸಲ್ಲಿಸಬೇಕು ಮತ್ತು ಅವರ ಹೆಸರಿನಲ್ಲಿ ಆಣೆಯಿಟ್ಟುಕೊಳ್ಳಬೇಕು.


ಈಜಿಪ್ಟ್ ದೇಶದಿಂದ ನಿಮ್ಮನ್ನು ಹೊರಗೆ ತಂದ ನಿಮ್ಮ ದೇವರಾದ ಯೆಹೋವ ದೇವರು ನಾನೇ; ನಿಮ್ಮ ಬಾಯಿಯನ್ನು ಅಗಲವಾಗಿ ತೆರೆ, ಆಗ ಅದನ್ನು ತುಂಬಿಸುವೆನು.


ಮನುಷ್ಯನೇ, ಒಳ್ಳೆಯದೇನೆಂದು ನಿನಗೆ ದೇವರು ತೋರಿಸಿದ್ದಾರೆ. ಹೌದು, ನ್ಯಾಯವನ್ನು ಕೈಗೊಳ್ಳುವದೂ ಕರುಣೆಯನ್ನು ಪ್ರೀತಿಸುವುದೂ ನಿನ್ನ ದೇವರ ಮುಂದೆ ನಮ್ರನಾಗಿ ನಡೆದುಕೊಳ್ಳುವದೂ ಇದನ್ನೇ ಹೊರತು ಯೆಹೋವ ದೇವರು ನಿನ್ನಿಂದ ಇನ್ನೇನನ್ನು ಅಪೇಕ್ಷಿಸುತ್ತಾರೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು