ಯೆಹೋಶುವ 24:15 - ಕನ್ನಡ ಸಮಕಾಲಿಕ ಅನುವಾದ15 ಯೆಹೋವ ದೇವರನ್ನು ಸೇವಿಸುವುದು ನಿಮಗೆ ಇಷ್ಟವಿಲ್ಲದಿದ್ದರೆ, ಈ ಹೊತ್ತು ನೀವು ಯಾರನ್ನು ಸೇವಿಸಬೇಕೆಂದಿದ್ದೀರಿ? ನಿಮ್ಮ ಪಿತೃಗಳು ಯೂಫ್ರೇಟೀಸ್ ನದಿಯ ಆಚೆ ಸೇವಿಸಿದ ದೇವರುಗಳನ್ನೋ ಇಲ್ಲವೆ ನೀವು ವಾಸವಾಗಿರುವ ಅಮೋರಿಯರ ದೇವರುಗಳನ್ನೋ? ನೀವು ಆಯ್ದುಕೊಳ್ಳಿರಿ. ಆದರೆ ನಾನೂ ನನ್ನ ಮನೆಯವರೂ ಯೆಹೋವ ದೇವರನ್ನೇ ಸೇವಿಸುವೆವು,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಯೆಹೋವನನ್ನು ಆರಾಧಿಸುವುದು ನಿಮಗೆ ಸರಿಕಾಣದಿದ್ದರೆ ಯಾರನ್ನು ಸೇವಿಸಬೇಕೆಂದಿದ್ದೀರೆಂಬುದನ್ನು? ಈ ಹೊತ್ತೇ ಆರಿಸಿಕೊಳ್ಳಿರಿ: ನಿಮ್ಮ ಪೂರ್ವಿಕರು ಯೂಫ್ರೆಟಿಸ್ ನದಿಯ ಆಚೆಯಲ್ಲಿ ಸೇವಿಸುತ್ತಿದ್ದ ದೇವತೆಗಳೋ ಈ ದೇಶದ ಮೂಲ ನಿವಾಸಿಗಳಾದ ಅಮೋರಿಯರ ದೇವತೆಗಳೋ ಹೇಳಿರಿ. ನಾನೂ, ನನ್ನ ಮನೆಯವರೂ ಯೆಹೋವನನ್ನೇ ಸೇವಿಸುವೆವು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಸರ್ವೇಶ್ವರನಿಗೆ ಸೇವೆಸಲ್ಲಿಸಿರಿ. ನಿಮಗೆ ಇದು ಸರಿಕಾಣದಿದ್ದರೆ ಯಾರಿಗೆ ಸೇವೆಸಲ್ಲಿಸಬೇಕೆಂದಿದ್ದೀರಿ? ಇಂದೇ ಆರಿಸಿಕೊಳ್ಳಿ: ನಿಮ್ಮ ಪೂರ್ವಜರು ಯೂಫ್ರಟಿಸ್ ನದಿಯ ಆಚೆಯಲ್ಲಿ ಪೂಜಿಸುತ್ತಿದ್ದ ದೇವತೆಗಳಿಗೋ? ಈ ನಾಡಿನ ಮೂಲನಿವಾಸಿಗಳಾದ ಅಮೋರಿಯರ ದೇವತೆಗಳಿಗೋ? ಹೇಳಿ. ನಾನು ಮತ್ತು ನನ್ನ ಮನೆಯವರು ಮಾತ್ರ ಸರ್ವೇಶ್ವರನಿಗೇ ಸೇವೆ ಸಲ್ಲಿಸುತ್ತೇವೆ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಯೆಹೋವನನ್ನು ಸೇವಿಸುವದು ನಿಮಗೆ ಸರಿಕಾಣದಿದ್ದರೆ ಯಾರನ್ನು ಸೇವಿಸಬೇಕೆಂದಿದ್ದೀರಿ? ಈ ಹೊತ್ತೇ ಆರಿಸಿಕೊಳ್ಳಿರಿ. ನಿಮ್ಮ ಪೂರ್ವಿಕರು [ಯೂಫ್ರೇಟೀಸ್] ನದಿಯ ಆಚೆಯಲ್ಲಿ ಸೇವಿಸುತ್ತಿದ್ದ ದೇವತೆಗಳೋ ಈ ದೇಶದ ಮೂಲನಿವಾಸಿಗಳಾದ ಅಮೋರಿಯರ ದೇವತೆಗಳೋ, ಹೇಳಿರಿ. ನಾನೂ ನನ್ನ ಮನೆಯವರೂ ಯೆಹೋವನನ್ನೇ ಸೇವಿಸುವೆವು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 “ನೀವು ಯೆಹೋವನ ಸೇವೆಮಾಡಲು ಇಷ್ಟಪಡದಿದ್ದರೆ ಯಾರ ಸೇವೆಯನ್ನು ಮಾಡಬೇಕೆಂದಿದ್ದೀರಿ? ಈ ಹೊತ್ತೇ ಆರಿಸಿಕೊಳ್ಳಿರಿ. ನಿಮ್ಮ ಪೂರ್ವಿಕರು ಯೂಫ್ರೇಟೀಸ್ ನದಿಯ ಆಚೆ ಇದ್ದಾಗ ಪೂಜಿಸುತ್ತಿದ್ದ ದೇವರುಗಳ ಸೇವೆಮಾಡುವಿರೋ ಅಥವಾ ಈ ಪ್ರದೇಶದಲ್ಲಿದ್ದ ಅಮೋರಿಯರ ದೇವತೆಗಳ ಸೇವೆಮಾಡುವಿರೋ ಎಂಬುದನ್ನು ನೀವು ಇಂದು ನಿರ್ಧರಿಸಬೇಕು. ಆಯ್ಕೆ ನಿಮಗೆ ಬಿಟ್ಟಿದ್ದು. ಆದರೆ ನಾನು ಮತ್ತು ನನ್ನ ಕುಟುಂಬದವರು ಯೆಹೋವನನ್ನೇ ಸೇವಿಸುತ್ತೇವೆ” ಅಂದನು. ಅಧ್ಯಾಯವನ್ನು ನೋಡಿ |