Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 24:16 - ಕನ್ನಡ ಸಮಕಾಲಿಕ ಅನುವಾದ

16 ಜನರು ಯೆಹೋಶುವನಿಗೆ ಉತ್ತರವಾಗಿ, “ನಾವು ಯೆಹೋವ ದೇವರನ್ನು ಬಿಟ್ಟು ಅನ್ಯದೇವತೆಗಳನ್ನು ಸೇವಿಸುವ ಕಾರ್ಯವು ನಮಗೆ ದೂರವಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅದಕ್ಕೆ ಜನರು, “ಯೆಹೋವನ ಸೇವೆಯನ್ನು ಬಿಟ್ಟು ಅನ್ಯದೇವತೆಗಳನ್ನು ಸೇವಿಸುವುದು ನಮಗೆ ದೂರವಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅದಕ್ಕೆ ಜನರು, “ಸರ್ವೇಶ್ವರನನ್ನು ಬಿಟ್ಟು ಅನ್ಯದೇವತೆಗಳಿಗೆ ಸೇವೆಸಲ್ಲಿಸುವುದು ನಮ್ಮಿಂದ ದೂರವಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅದಕ್ಕೆ ಜನರು - ಯೆಹೋವನ ಸೇವೆಯನ್ನು ಬಿಟ್ಟು ಅನ್ಯದೇವತೆಗಳನ್ನು ಸೇವಿಸುವದು ನಮಗೆ ದೂರವಾಗಿರಲಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಅದಕ್ಕೆ ಜನರು, “ನಾವು ಯೆಹೋವನನ್ನು ಅನುಸರಿಸುವುದನ್ನು ಎಂದಿಗೂ ನಿಲ್ಲಿಸುವದಿಲ್ಲ. ನಾವು ಬೇರೆ ದೇವರುಗಳ ಸೇವೆಯನ್ನು ಎಂದಿಗೂ ಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 24:16
8 ತಿಳಿವುಗಳ ಹೋಲಿಕೆ  

ಇದಲ್ಲದೆ ನಾನು ನಿಮಗೋಸ್ಕರ ಪ್ರಾರ್ಥನೆ ಮಾಡದೆ, ಯೆಹೋವ ದೇವರಿಗೆ ವಿರೋಧವಾಗಿ ಮಾಡುವ ಪಾಪವು ನನಗೆ ದೂರವಾಗಿರಲಿ. ಉತ್ತಮವಾದ, ಸರಿಯಾದ ಮಾರ್ಗವನ್ನು ನಿಮಗೆ ಬೋಧಿಸುವೆನು.


ಎಂದಿಗೂ ಹಾಗಾಗದಿರಲಿ! ನಾವು ಪಾಪದ ಪಾಲಿಗೆ ಸತ್ತೆವು, ನಾವು ಇನ್ನೂ ಪಾಪದಲ್ಲಿ ಜೀವಿಸುವುದು ಹೇಗೆ?


ಎಂದಿಗೂ ಹಾಗೆ ಆಗದಿರಲಿ. ದೇವರು ಅನ್ಯಾಯಗಾರರಾಗಿದ್ದರೆ ಲೋಕಕ್ಕೆ ನ್ಯಾಯತೀರಿಸುವುದು ಹೇಗೆ?


ಯೆಹೋವ ದೇವರನ್ನು ಸೇವಿಸುವುದು ನಿಮಗೆ ಇಷ್ಟವಿಲ್ಲದಿದ್ದರೆ, ಈ ಹೊತ್ತು ನೀವು ಯಾರನ್ನು ಸೇವಿಸಬೇಕೆಂದಿದ್ದೀರಿ? ನಿಮ್ಮ ಪಿತೃಗಳು ಯೂಫ್ರೇಟೀಸ್ ನದಿಯ ಆಚೆ ಸೇವಿಸಿದ ದೇವರುಗಳನ್ನೋ ಇಲ್ಲವೆ ನೀವು ವಾಸವಾಗಿರುವ ಅಮೋರಿಯರ ದೇವರುಗಳನ್ನೋ? ನೀವು ಆಯ್ದುಕೊಳ್ಳಿರಿ. ಆದರೆ ನಾನೂ ನನ್ನ ಮನೆಯವರೂ ಯೆಹೋವ ದೇವರನ್ನೇ ಸೇವಿಸುವೆವು,” ಎಂದನು.


ಏಕೆಂದರೆ ನಮ್ಮ ದೇವರಾದ ಯೆಹೋವ ದೇವರು ತಾವೇ ನಮ್ಮನ್ನೂ ನಮ್ಮ ಪಿತೃಗಳನ್ನೂ ದಾಸತ್ವದ ಮನೆಯಾದ ಈಜಿಪ್ಟ್ ದೇಶದಿಂದ ಬರಮಾಡಿ, ನಮ್ಮ ಕಣ್ಣುಗಳ ಮುಂದೆ ಆ ಅದ್ಭುತ ಸೂಚಕಕಾರ್ಯಗಳನ್ನು ಮಾಡಿ, ನಾವು ನಡೆದ ಎಲ್ಲಾ ಮಾರ್ಗಗಳಲ್ಲಿಯೂ ನಾವು ಅವರ ಮಧ್ಯದಲ್ಲಿ ಹಾದು ಬಂದ ಎಲ್ಲಾ ಜನಗಳಲ್ಲಿಯೂ ನಮ್ಮನ್ನು ಕಾಪಾಡಿದವರು.


“ಆದರೆ ನಮ್ಮ ದೇವರಾದ ಯೆಹೋವ ದೇವರ ಗುಡಾರದ ಮುಂದೆ ಇರುವ ಅವರ ಯಜ್ಞವೇದಿಯನ್ನು ಅಲ್ಲದೆ ನಾವು ದಹನಬಲಿ, ಧಾನ್ಯ ನೈವೇದ್ಯ ಮತ್ತು ಇತರ ಬಲಿಗೋಸ್ಕರವಾಗಿಯೂ ಮತ್ತೊಂದು ಬಲಿಪೀಠವನ್ನು ಕಟ್ಟಿ, ಯೆಹೋವ ದೇವರಿಗೆ ವಿರೋಧವಾಗಿ ವಿಮುಖರಾಗಿ ತಿರುಗಿಬೀಳುವುದು ನಮಗೆ ದೂರವಾಗಿರಲಿ,” ಎಂದರು.


ನಿಮ್ಮ ನೀತಿಯ ನಿಯಮಗಳನ್ನು ಪಾಲಿಸುವೆನೆಂದು ನಾನು ಒಂದು ಶಪಥಮಾಡಿದ್ದೇನೆ; ಅದನ್ನು ನಾನು ದೃಢಪಡಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು