ಯೆಹೋಶುವ 24:18 - ಕನ್ನಡ ಸಮಕಾಲಿಕ ಅನುವಾದ18 ಇದಲ್ಲದೆ ದೇಶದಲ್ಲಿ ವಾಸವಾಗಿದ್ದ ಅಮೋರಿಯರ ಸಕಲ ಜನರನ್ನು ಯೆಹೋವ ದೇವರು ನಮ್ಮ ಮುಂದೆ ಹೊರಡಿಸಿಬಿಟ್ಟರು. ಆದ್ದರಿಂದ ನಾವು ಯೆಹೋವ ದೇವರನ್ನೇ ಸೇವಿಸುವೆವು. ಏಕೆಂದರೆ ಅವರು ನಮ್ಮ ದೇವರು,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಈ ದೇಶದ ನಿವಾಸಿಗಳಾಗಿದ್ದ ಅಮೋರಿಯರು ಮೊದಲಾದ ಸರ್ವ ಜನಾಂಗಗಳನ್ನು ನಮ್ಮ ಎದುರಿನಿಂದ ಹೊರಡಿಸಿ ಬಿಟ್ಟವನು ಆತನೇ. ಆದುದರಿಂದ ನಾವು ಯೆಹೋವನನ್ನೇ ಸೇವಿಸುವೆವು. ಆತನೇ ನಮ್ಮ ದೇವರು” ಎಂದು ಉತ್ತರ ಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಈ ನಾಡಿನ ನಿವಾಸಿಗಳಾಗಿದ್ದ ಅಮೋರಿಯರು ಮೊದಲಾದ ಎಲ್ಲಾ ಜನಾಂಗಗಳನ್ನು ಇಲ್ಲಿಂದ ಹೊರಡಿಸಿಬಿಟ್ಟವರು ಅವರೇ. ಆದುದರಿಂದ ನಾವು ಕೂಡ ಸರ್ವೇಶ್ವರನಿಗೆ ಸೇವೆಸಲ್ಲಿಸುತ್ತೇವೆ. ಅವರೇ ನಮ್ಮ ದೇವರು,” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಈ ದೇಶವಾಸಿಗಳಾಗಿದ್ದ ಅಮೋರಿಯರು ಮೊದಲಾದ ಸರ್ವಜನಾಂಗಗಳನ್ನು ನಮ್ಮ ಮುಂದೆ ಹೊರಡಿಸಿ ಬಿಟ್ಟವನು ಆತನೇ. ಆದದರಿಂದ ನಾವೂ ಯೆಹೋವನನ್ನೇ ಸೇವಿಸುವೆವು; ಆತನೇ ನಮ್ಮ ದೇವರು ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಆ ದೇಶಗಳ ಜನರನ್ನು ಸೋಲಿಸಲು ಯೆಹೋವನು ನಮಗೆ ಸಹಾಯ ಮಾಡಿದನು. ಈಗ ನಾವಿರುವ ಸ್ಥಳದಲ್ಲಿ ಮುಂಚೆ ವಾಸಮಾಡಿಕೊಂಡಿದ್ದ ಅಮೋರಿಯರನ್ನು ಸೋಲಿಸಲು ಯೆಹೋವನು ನಮಗೆ ಸಹಾಯ ಮಾಡಿದ್ದಾನೆ. ಅದಕ್ಕಾಗಿ ನಾವು ಯೆಹೋವನ ಸೇವೆಯನ್ನು ಮುಂದುವರಿಸುತ್ತೇವೆ; ಏಕೆಂದರೆ ಆತನು ನಮ್ಮ ದೇವರು” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿ |