ಯೆಹೋಶುವ 24:32 - ಕನ್ನಡ ಸಮಕಾಲಿಕ ಅನುವಾದ32 ಇಸ್ರಾಯೇಲರು ಈಜಿಪ್ಟಿನಿಂದ ತಂದ ಯೋಸೇಫನ ಎಲುಬುಗಳನ್ನು ಶೆಕೆಮ್ ಊರಿನ ಹೊಲದಲ್ಲಿ ಹೂಳಿಟ್ಟರು. ಈ ಹೊಲವನ್ನು ಯಾಕೋಬನು ಶೆಕೆಮನ ತಂದೆಯಾದ ಹಮೋರನ ಮಕ್ಕಳಿಂದ ನೂರು ಬೆಳ್ಳಿ ನಾಣ್ಯಗಳನ್ನು ಕೊಟ್ಟು ಕೊಂಡುಕೊಂಡಿದ್ದನು. ಅದು ಯೋಸೇಫ್ಯರ ಸೊತ್ತಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಇಸ್ರಾಯೇಲ್ಯರು ಐಗುಪ್ತದಿಂದ ತಂದ ಯೋಸೇಫನ ಎಲುಬುಗಳನ್ನು, ಯಾಕೋಬನು ಶೆಕೆಮಿನ ತಂದೆಯಾದ ಹಮೋರನ ಮಕ್ಕಳಿಂದ ನೂರು ವರಹಾ ಕೊಟ್ಟು ಕೊಂಡು ಕೊಂಡ ಶೆಕೆಮ್ ಊರಿನ ಹೊಲದಲ್ಲಿ ಹೂಣಿಟ್ಟರು. ಆ ಹೊಲವು ಯೋಸೇಫ್ಯರ ಸ್ವತ್ತಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಇಸ್ರಯೇಲರು ಈಜಿಪ್ಟಿನಿಂದ ತಂದ ಜೋಸೆಫನ ಎಲುಬುಗಳನ್ನು ಶೆಕೆಮ್ ಊರಿನ ಹೊಲದಲ್ಲಿ ಹೂಳಿಟ್ಟರು. ಈ ಹೊಲವನ್ನು ಯಕೋಬನು ಶೆಕೆಮನ ತಂದೆಯಾದ ಹಮೋರನ ಮಕ್ಕಳಿಂದ ನೂರು ಬೆಳ್ಳಿನಾಣ್ಯ ಕೊಟ್ಟು ಕೊಂಡುಕೊಂಡಿದ್ದನು. ಅದು ಜೋಸೆಫ್ಯರ ಸೊತ್ತಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಇಸ್ರಾಯೇಲ್ಯರು ಐಗುಪ್ತದಿಂದ ತಂದ ಯೋಸೇಫನ ಎಲುಬುಗಳನ್ನು, ಯಾಕೋಬನು ಶೆಕೆಮನ ತಂದೆಯಾದ ಹಮೋರನ ಮಕ್ಕಳಿಂದ ನೂರು ವರಹಾ ಕೊಟ್ಟು ಕೊಂಡುಕೊಂಡ ಶೆಕೆಮ್ ಊರಿನ ಹೊಲದಲ್ಲಿ ಹೂಣಿಟ್ಟರು. ಆ ಹೊಲವು ಯೋಸೇಫ್ಯರ ಸ್ವಾಸ್ತ್ಯವಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಇಸ್ರೇಲರು ಈಜಿಪ್ಟಿನಿಂದ ಹೊರಟಾಗ ತಮ್ಮೊಂದಿಗೆ ಯೋಸೇಫನ ಎಲುಬುಗಳನ್ನೂ ತೆಗೆದುಕೊಂಡು ಬಂದಿದ್ದರು. ಅವರು ಯೋಸೇಫನ ಎಲುಬುಗಳನ್ನು ಶೆಕೆಮಿನಲ್ಲಿ ಹೂಳಿಟ್ಟರು. ಯಾಕೋಬನು ಶೆಕೆಮನ ತಂದೆಯಾದ ಹಮೋರನ ಗಂಡುಮಕ್ಕಳಿಂದ ನೂರು ಬೆಳ್ಳಿನಾಣ್ಯಗಳನ್ನು ಕೊಟ್ಟು ಕೊಂಡುಕೊಂಡ ಶೆಕೆಮ್ ಊರಿನ ಹೊಲದಲ್ಲಿ ಆ ಎಲುಬುಗಳನ್ನು ಹೂಳಿಟ್ಟರು. ಈ ಭೂಮಿಯ ಯೋಸೇಫನ ಮಕ್ಕಳದಾಗಿತ್ತು. ಅಧ್ಯಾಯವನ್ನು ನೋಡಿ |