Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 24:33 - ಕನ್ನಡ ಸಮಕಾಲಿಕ ಅನುವಾದ

33 ಆರೋನನ ಮಗ ಎಲಿಯಾಜರನೂ ಮರಣಹೊಂದಿದನು. ಅವನನ್ನು ಅವನ ಮಗ ಫೀನೆಹಾಸನಿಗೆ ಎಫ್ರಾಯೀಮ್ ಬೆಟ್ಟದ ದೇಶದಲ್ಲಿ ಕೊಡಲಾದ ಗಿಬೆಯದಲ್ಲಿ ಸಮಾಧಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಆರೋನನ ಮಗನಾದ ಎಲಿಯಾಜರನು ಮರಣ ಹೊಂದಿದನು. ಅವನ ಶವವನ್ನು ಎಫ್ರಾಯೀಮ್ ಪರ್ವತ ಪ್ರಾಂತ್ಯದಲ್ಲಿ ಅವನ ಮಗನಾದ ಫೀನೆಹಾಸನ ಪಾಲಿಗೆ ಬಂದ ಗುಡ್ಡದಲ್ಲಿ ಸಮಾಧಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಆರೋನನ ಮಗ ಎಲ್ಲಾಜಾರನೂ ಮರಣಹೊಂದಿದನು. ಅವನ ಶವವನ್ನು ಎಫ್ರಯಿಮ್ ಮಲೆನಾಡಿನಲ್ಲಿ ಅವನ ಮಗ ಫೀನೆಹಾಸನ ಪಾಲಿಗೆ ಬಂದ ಗುಡ್ಡದಲ್ಲಿ ಸಮಾಧಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಆರೋನನ ಮಗನಾದ ಎಲ್ಲಾಜಾರನೂ ಮರಣ ಹೊಂದಿದನು. ಅವನ ಶವವನ್ನು ಎಫ್ರಾಯೀಮ್ ಪರ್ವತಪ್ರಾಂತದಲ್ಲಿ ಅವನ ಮಗನಾದ ಫೀನೆಹಾಸನ ಪಾಲಿಗೆ ಬಂದ ಗುಡ್ಡದಲ್ಲಿ ಸಮಾಧಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಆರೋನನ ಮಗನಾದ ಎಲ್ಲಾಜಾರನು ಮರಣಹೊಂದಿದನು. ಗಿಬೇತ್‌ನಲ್ಲಿ ಎಲ್ಲಾಜಾರನನ್ನು ಸಮಾಧಿ ಮಾಡಲಾಯಿತು. ಗಿಬೇತ್ ಊರು ಎಫ್ರಾಯೀಮ್ ಪರ್ವತ ಪ್ರಾಂತ್ಯದಲ್ಲಿತ್ತು. ಆ ಊರನ್ನು ಎಲ್ಲಾಜಾರನ ಮಗನಾದ ಫೀನೆಹಾಸನಿಗೆ ಕೊಡಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 24:33
22 ತಿಳಿವುಗಳ ಹೋಲಿಕೆ  

ಅವರು ಗಿಲ್ಯಾದ್ ನಾಡಿನಲ್ಲಿರುವ ರೂಬೇನ್ಯರ, ಗಾದ್ಯರ ಹಾಗು ಮನಸ್ಸೆಯ ಅರ್ಧ ಗೋತ್ರದವರ ಬಳಿಗೆ ಯಾಜಕ ಎಲಿಯಾಜರನ ಮಗ ಫೀನೆಹಾಸನನ್ನೂ


ಆರೋನನ ಮಗ ಎಲಿಯಾಜರನು ಪೂಟಿಯೇಲನ ಹೆಣ್ಣುಮಕ್ಕಳಲ್ಲಿ ಒಬ್ಬಳನ್ನು ಮದುವೆಯಾದನು. ಆಕೆಯು ಅವನಿಗೆ ಫೀನೆಹಾಸನನ್ನು ಹೆತ್ತಳು. ಗೋತ್ರಗಳ ಪ್ರಕಾರ ಇವರು ಲೇವಿಯರ ಗೋತ್ರಗಳ ಮುಖ್ಯಸ್ಥರು.


ಇನ್ನೊಂದು ಕಡೆ ಯೇಸುವಾದರೋ ಸದಾಕಾಲ ಇರುವುದರಿಂದ ನಿರಂತರವಾಗಿ ತಮ್ಮ ಯಾಜಕತ್ವವನ್ನು ಹೊಂದಿದವರಾಗಿದ್ದಾರೆ.


“ದಾವೀದನು ತನ್ನ ಜೀವಮಾನದಲ್ಲಿ ದೇವರ ಉದ್ದೇಶಕ್ಕೆ ಅನುಗುಣವಾಗಿ ಸೇವೆಮಾಡಿ ಮರಣಹೊಂದಿದನು. ಅವನ ಪಿತೃಗಳೊಂದಿಗೆ ಅವನನ್ನು ಸೇರಿಸಿದರು. ಅವನ ದೇಹ ಕೊಳೆತುಹೋಯಿತು.


ನಿಮ್ಮ ಪಿತೃಗಳೋ, ಅವರು ಎಲ್ಲಿ? ಪ್ರವಾದಿಗಳು, ಅವರು ನಿತ್ಯವಾಗಿ ಬದುಕುತ್ತಾರೋ?


ಏಕೆಂದರೆ, ಜ್ಞಾನಿಗಳು ಸಾಯುವುದನ್ನು ಕಾಣುತ್ತೇವೆ. ಹಾಗೆಯೇ ಮೂರ್ಖರೂ ಜ್ಞಾನಹೀನರೂ ಸಹ ನಾಶವಾಗುತ್ತಾರೆ. ಅವರ ಆಸ್ತಿಯನ್ನು ಇತರರು ಪಡೆಯುತ್ತಾರೆ.


ದೇವರೇ, ನೀವು ನನ್ನನ್ನು ಎಲ್ಲಾ ಜೀವಿಗಳಿಗೆ ನೇಮಕವಾದ ಮನೆಯೆಂಬ ಮರಣಕ್ಕೆ, ಸೇರಿಸುವಿರಿ ಎಂದು ನನಗೆ ಗೊತ್ತಿದೆ.


ಆರೋನನ ಮೊಮ್ಮಗನೂ, ಎಲಿಯಾಜರನ ಮಗನೂ ಆದ ಫೀನೆಹಾಸನು ಅವರ ಮುಂದೆ ನಿಂತಿದ್ದದರಿಂದಲೂ, ಇಸ್ರಾಯೇಲರು, “ನಮ್ಮ ಸಹೋದರರಾದ ಬೆನ್ಯಾಮೀನ್ಯರಿಗೆ ವಿರೋಧವಾಗಿ ಇನ್ನೂ ಯುದ್ಧಮಾಡುವುದಕ್ಕೆ ಹೋಗಬೇಕೋ ಬೇಡವೋ?” ಎಂದು ದೇವರನ್ನು ಕೇಳಿಕೊಂಡರು. ಯೆಹೋವ ದೇವರು, “ಹೋಗಿರಿ, ಏಕೆಂದರೆ ನಾಳೆ ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿಕೊಡುವೆನು,” ಎಂದರು.


ಯಾಜಕನಾದ ಎಲಿಯಾಜರನೂ ನೂನನ ಮಗನಾದ ಯೆಹೋಶುವನೂ ಇಸ್ರಾಯೇಲರ ಗೋತ್ರಗಳ ಮುಖ್ಯಸ್ಥರೂ ಜನರಿಗೆ ಸೊತ್ತಾಗಿ ಕೊಡಲು ಕಾನಾನ್ ದೇಶದಲ್ಲಿ ಇಸ್ರಾಯೇಲರು ಬಾಧ್ಯವಾಗಿ ಪ್ರದೇಶಗಳನ್ನು ಹೊಂದಿದರು.


ಇದಲ್ಲದೆ ಯಾಜಕನಾಗಿರುವ ಆರೋನನ ಮಗ ಎಲಿಯಾಜರನು ಲೇವಿಯರ ಮತ್ತೊಬ್ಬ ನಾಯಕನಾಗಿದ್ದನು. ಪರಿಶುದ್ಧಸ್ಥಳದ ಜವಾಬ್ದಾರಿಕೆಯುಳ್ಳವನ ಮೇಲೆ ವಿಚಾರಕನು ಅವನೇ.


ಆರೋನನು ಅಮ್ಮೀನಾದಾಬನ ಮಗಳೂ ನಹಶೋನನ ಸಹೋದರಿಯೂ ಆದ ಎಲೀಶೇಬಳನ್ನು ಮದುವೆಯಾದನು. ಆಕೆಯು ಅವನಿಗೆ ನಾದಾಬ್, ಅಬೀಹೂ, ಎಲಿಯಾಜರ್, ಈತಾಮಾರ್ ಇವರನ್ನು ಹೆತ್ತಳು.


ಆ ಮನುಷ್ಯನು ಸಿಕ್ಕುವ ಸ್ಥಳದಲ್ಲಿ ಪ್ರವಾಸಿಯಾಗುವುದಕ್ಕೆ ಯೆಹೂದದ ಬೇತ್ಲೆಹೇಮ್ ಪಟ್ಟಣವನ್ನು ಬಿಟ್ಟುಹೋದನು. ಪ್ರಯಾಣ ಮಾಡುವಾಗ ಎಫ್ರಾಯೀಮ್ ಬೆಟ್ಟದಲ್ಲಿರುವ ಮೀಕನ ಮನೆಯ ಬಳಿಗೆ ಬಂದನು.


ಎಫ್ರಾಯೀಮ್ ಬೆಟ್ಟದ ಪ್ರದೇಶ ರಾಮತಾಯೀಮ್ ಚೋಫಿಮಿನಲ್ಲಿ ಎಲ್ಕಾನ ಎಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು. ಅವನು ಎಫ್ರಾಯೀಮ್ಯನಾದ ಚೂಫನ ಮೊಮ್ಮಗನೂ ತೋಹುವಿನ ಮಗನೂ ಆದ ಎಲೀಹುವಿನ ಮಗನಾದ ಯೆರೋಹಾಮನ ಮಗನಾಗಿದ್ದನು.


ಹಾಗೆಯೇ ಅವನು ಎಫ್ರಾಯೀಮ್ ಬೆಟ್ಟವನ್ನು ಶಾಲಿಷಾ ದೇಶವನ್ನೂ ದಾಟಿಹೋದನು, ಆದರೆ ಅವು ಸಿಕ್ಕಲಿಲ್ಲ. ಶಾಲೀಮ್ ದೇಶವನ್ನು ಹಾದುಹೋದನು, ಅಲ್ಲಿಯೂ ಅವುಗಳು ಕಾಣದೆ ಹೋದವು. ಅವನು ಬೆನ್ಯಾಮೀನನ ದೇಶವನ್ನು ದಾಟಿ, ಅವುಗಳನ್ನು ಕಾಣದೆ ಹೋದನು.


ಕಾರ್ಯವು ಹಾಗಲ್ಲ. ಏಕೆಂದರೆ ಬಿಕ್ರಿಯ ಮಗನಾದ ಶೆಬನೆಂಬ ಹೆಸರುಳ್ಳ ಎಫ್ರಾಯೀಮ್ ಬೆಟ್ಟದವನಾದ ಒಬ್ಬ ಮನುಷ್ಯನು, ಅರಸನಾದ ದಾವೀದನಿಗೆ ವಿರೋಧವಾಗಿ ತನ್ನ ಕೈಯನ್ನು ಎತ್ತಿದ್ದಾನೆ. ನೀವು ಅವನೊಬ್ಬನನ್ನೇ ಒಪ್ಪಿಸಿಕೊಡಿರಿ. ಆಗ ನಾನು ಪಟ್ಟಣವನ್ನು ಬಿಟ್ಟು ಹೋಗುವೆನು,” ಎಂದನು. ಆ ಸ್ತ್ರೀಯು ಯೋವಾಬನಿಗೆ, “ಅವನ ತಲೆಯು ಗೋಡೆಯ ಮೇಲಿನಿಂದ ನಿನ್ನ ಕಡೆಗೆ ಎಸೆಯಲಾಗುವುದು,” ಎಂದಳು.


ಅವರ ಹೆಸರುಗಳು, ಅವರ ಜಿಲ್ಲೆಗಳು: ಬೆನ್ ಹೂರ್ ಎಫ್ರಾಯೀಮ್ ಪರ್ವತ ಪ್ರದೇಶದ ಅಧಿಕಾರಿ.


ಅದಕ್ಕೆ ಗೇಹಜಿಯು, “ಎಲ್ಲಾ ಕ್ಷೇಮ. ಪ್ರವಾದಿಗಳ ಮಂಡಳಿಯಲ್ಲಿಯ ಇಬ್ಬರು ಯುವಕರು ಎಫ್ರಾಯೀಮ್ ಬೆಟ್ಟದಿಂದ ಈಗಲೇ ನನ್ನ ಬಳಿಗೆ ಬಂದಿದ್ದಾರೆ. ನೀನು ದಯಮಾಡಿ ಅವರಿಗೆ ಮೂರು ಸಾವಿರ ಬೆಳ್ಳಿ ನಾಣ್ಯಗಳನ್ನೂ, ಎರಡು ಜೊತೆ ಬಟ್ಟೆಗಳನ್ನೂ ಕೊಡಬೇಕೆಂದು ನಿನಗೆ ಹೇಳು ಎಂದು ನನ್ನ ಯಜಮಾನನು ಕಳುಹಿಸಿದ್ದಾನೆ,” ಎಂದನು.


ಅದು ಕಿರ್ಯತ್ ಯಾರೀಮಿನ ಹಿಂದೆ ಇರುವುದು. ಅಲ್ಲಿಂದ ಅವರು ಎಫ್ರಾಯೀಮ್ ಬೆಟ್ಟಕ್ಕೆ ಹೋಗಿ, ಮೀಕನ ಮನೆಯವರೆಗೆ ಬಂದರು.


ಇವನು ಅಬೀಷೂವನ ಮಗನು; ಇವನು ಫೀನೆಹಾಸನ ಮಗನು; ಇವನು ಎಲಿಯಾಜರನ ಮಗನು; ಇವನು ಮುಖ್ಯಯಾಜಕನಾದ ಆರೋನನ ಮಗನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು