Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 3:11 - ಕನ್ನಡ ಸಮಕಾಲಿಕ ಅನುವಾದ

11 ಇಗೋ, ಸಮಸ್ತ ಭೂಮಿಗೆ ಯೆಹೋವ ದೇವರ ಒಡಂಬಡಿಕೆಯ ಮಂಜೂಷವು ನಿಮ್ಮ ಮುಂದೆ ಯೊರ್ದನ್ ನದಿಯನ್ನು ದಾಟಿ ಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಹೇಗೆಂದರೆ ಸರ್ವಲೋಕದ ಒಡೆಯನ ಒಡಂಬಡಿಕೆಯ ಮಂಜೂಷವು ನಿಮ್ಮ ಮುಂದಾಗಿ ಹೋಗಿ ಯೊರ್ದನಿನಲ್ಲಿ ಇಳಿಯವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಹೇಗೆಂದರೆ - ಸರ್ವಲೋಕದ ಒಡೆಯನ ಒಡಂಬಡಿಕೆಯ ಮಂಜೂಷವು ನಿಮ್ಮ ಮುಂದಾಗಿ ಹೋಗಿ ಜೋರ್ಡನಿನಲ್ಲಿ ಇಳಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನಿಮಗೆ ಗೊತ್ತಾಗುವದು ಹೇಗಂದರೆ - ಸರ್ವಲೋಕದ ಒಡೆಯನ ಒಡಂಬಡಿಕೆಯ ಮಂಜೂಷವು ನಿಮ್ಮ ಮುಂದಾಗಿ ಹೋಗಿ ಯೊರ್ದನಿನಲ್ಲಿ ಇಳಿಯುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಇದೋ ಇಲ್ಲಿದೆ ಸಾಕ್ಷಿ. ನೀವು ಜೋರ್ಡನ್ ನದಿಯನ್ನು ದಾಟುವಾಗ ಸರ್ವಲೋಕದ ಒಡೆಯನಾದ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯು ನಿಮ್ಮ ಮುಂದೆ ಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 3:11
15 ತಿಳಿವುಗಳ ಹೋಲಿಕೆ  

ದೂತನು ನನಗೆ, “ಇವು ಸ್ವರ್ಗದ ನಾಲ್ಕು ಆತ್ಮಗಳು. ಇವು ಇಡೀ ಜಗತ್ತಿನ ಕಡೆಗೆ ಯೆಹೋವ ದೇವರ ಮುಂದೆ ನಿಂತಲ್ಲಿಂದ ಹೊರಟಿವೆ.


ಆಗ ಅವನು, “ಇವು ಸಮಸ್ತ ಭೂಮಿಯ ಕರ್ತ ಆಗಿರುವವರ ಸನ್ನಿಧಿಸೇವೆ ಮಾಡಲು ಅಭಿಷೇಕ ಹೊಂದಿರುವ ಇಬ್ಬರು ಸೇವಕರನ್ನು ಸೂಚಿಸುತ್ತದೆ,” ಎಂದನು.


ಭೂಮಿಯೂ ಅದರಲ್ಲಿರುವ ಸಮಸ್ತವೂ ಯೆಹೋವ ದೇವರದ್ದೇ; ಲೋಕವೂ ಅದರ ನಿವಾಸಿಗಳೂ ಅವರಿಗೇ ಸೇರಿದ್ದು.


ಚೀಯೋನ್ ಪುತ್ರಿಯೇ, ಎದ್ದು ತುಳಿ. ಏಕೆಂದರೆ ನಿನ್ನ ಕೊಂಬನ್ನು ಕಬ್ಬಿಣವಾಗಿಯೂ ನಿನ್ನ ಗೊರಸುಗಳನ್ನು ಕಂಚಿನದಾಗಿಯೂ ಮಾಡುವೆನು. ನೀನು ಅನೇಕ ಜನಾಂಗಗಳನ್ನು ಚೂರುಚೂರಾಗಿ ಮಾಡುವೆ. ಅವರ ಕೊಳ್ಳೆಹೊಡೆದು ಸಂಪಾದಿಸಿದ್ದ ಸ್ವತ್ತನ್ನು ಯೆಹೋವ ದೇವರಿಗೂ ಅವರ ಸಂಪತ್ತನ್ನು ಲೋಕದ ಕರ್ತ ದೇವರಿಗೂ ಪ್ರತಿಷ್ಠೆಮಾಡುವೆನು.


ಸಮಸ್ತ ಭೂಮಿಗೂ ಒಡೆಯರಾಗಿರುವ ಯೆಹೋವ ದೇವರ ಮಂಜೂಷವನ್ನು ಹೊರುವ ಯಾಜಕರ ಪಾದಗಳು ಯೊರ್ದನ್ ನದಿಯ ನೀರಲ್ಲಿ ಇಡುತ್ತಲೇ, ಮೇಲಿನಿಂದ ಹರಿದು ಬರುವ ನೀರು ಮುಂದೆ ಹರಿಯದೆ ಅಲ್ಲಿಯೇ ರಾಶಿಯಾಗಿ ನಿಲ್ಲುವುದು,” ಎಂದು ಹೇಳಿದನು.


ಯೆಹೋವ ದೇವರು ಭೂಮಿಗೆಲ್ಲಾ ಅರಸನಾಗಿರುವರು. ಆ ದಿವಸದಲ್ಲಿ ಯೆಹೋವ ದೇವರು ಒಬ್ಬರೇ ಇರುವರು. ಆತನ ಹೆಸರು ಒಂದೇ ಹೆಸರಾಗಿರುವುದು.


ಅವರು ಭೂಮಿಯ ಎಲ್ಲಾ ದೇವರುಗಳನ್ನು ನಾಶಮಾಡುವಾಗ, ಯೆಹೋವ ದೇವರು ಅವರಿಗೆ ಭಯಂಕರವಾಗಿರುವರು. ಇತರ ಜನಾಂಗಗಳ ದ್ವೀಪಗಳವರೆಲ್ಲರು ತಮ್ಮ ತಮ್ಮ ಸ್ಥಳಗಳಲ್ಲಿ ಅವರನ್ನು ಆರಾಧಿಸುವರು.


ಓ ಜನಾಂಗಗಳ ಅರಸರಾದವರೇ, ನಿಮಗೆ ಭಯಪಡದವನ್ಯಾರು? ಏಕೆಂದರೆ, ನಿಮಗೆ ಅದು ಸಲ್ಲತಕ್ಕದ್ದು. ಏಕೆಂದರೆ, ಜನಾಂಗಗಳ ಎಲ್ಲಾ ಜ್ಞಾನಿಗಳಲ್ಲಿಯೂ, ಅವುಗಳ ಎಲ್ಲಾ ರಾಜ್ಯಗಳಲ್ಲಿಯೂ ನಿಮ್ಮ ಹಾಗೆ ಯಾರೂ ಇಲ್ಲ.


ನಿನ್ನನ್ನು ಉಂಟುಮಾಡಿದವನೇ ನಿನ್ನ ಪತಿ. ಸೇನಾಧೀಶ್ವರ ಯೆಹೋವ ದೇವರು ಎಂಬುದು ಆತನ ಹೆಸರು. ನಿನ್ನ ವಿಮೋಚಕನು ಇಸ್ರಾಯೇಲಿನ ಪರಿಶುದ್ಧನೇ. ಸಮಸ್ತ ಭೂಮಿಯ ದೇವರು ಎಂದು ಆತನನ್ನು ಕರೆಯಲಾಗುತ್ತದೆ.


ನನ್ನ ಪ್ರಜೆಗಳನ್ನು ಹುಡುಗರು ಬಾಧಿಸುವರು. ಸ್ತ್ರೀಯರು ಅವರನ್ನು ಆಳುವರು. ನನ್ನ ಪ್ರಜೆಗಳೇ, ನಿಮ್ಮನ್ನು ನಡೆಸುವವರು ದಾರಿ ತಪ್ಪಿಸುವವರಾಗಿದ್ದಾರೆ. ನೀವು ನಡೆಯುವ ದಾರಿಯನ್ನು ಹಾಳು ಮಾಡಿದ್ದಾರೆ.


ನಾನು ಸಾಲ ತೀರಿಸಬೇಕೆಂದು ನನಗೆ ವಿರೋಧವಾಗಿ ಹಕ್ಕು ಸಾಧಿಸುವವರು ಯಾರು? ಆಕಾಶದ ಕೆಳಗೆ ಇರುವಂಥ ಪ್ರತಿಯೊಂದೂ ನನ್ನದೇ.


ಹೀಗಿರುವುದರಿಂದ ನೀವು ಈ ಹೊತ್ತು ತಿಳಿದುಕೊಳ್ಳತಕ್ಕದ್ದೇನೆಂದರೆ, ನಿಮ್ಮ ದೇವರಾದ ಯೆಹೋವ ದೇವರೇ ನಿಮ್ಮ ಮುಂದೆ ಹೋಗುತ್ತಾರೆ. ಅವರು ದಹಿಸುವ ಅಗ್ನಿಯಾಗಿ ಅವರನ್ನು ನಾಶಮಾಡುವರು. ದೇವರು ಅವರನ್ನು ನಿಮ್ಮ ಮುಂದೆ ಸೋಲಿಸುವರು. ಯೆಹೋವ ದೇವರು ನಿಮಗೆ ಹೇಳಿದ ಹಾಗೆ ನೀವು ಅವರನ್ನು ಸ್ವಾಧೀನಪಡಿಸಿಕೊಂಡು ಅವರನ್ನು ಬೇಗ ತೆಗೆದುಹಾಕುವಿರಿ.


ಯೆಹೋವ ದೇವರ ಸನ್ನಿಧಿಯಲ್ಲಿ ಬೆಟ್ಟಗಳು ಕರಗುತ್ತವೆ, ಸಮಸ್ತ ಭೂಮಿಯು ಮೇಣದ ಹಾಗೆ ಕರಗುತ್ತವೆ.


ಯೆಹೋವ ದೇವರೇ, ಮಹತ್ವವೂ, ಪರಾಕ್ರಮವೂ, ಮಹಿಮೆಯೂ, ಜಯವೂ, ವೈಭವವೂ ನಿಮ್ಮವೇ. ಆಕಾಶಗಳಲ್ಲಿಯೂ, ಭೂಮಿಯಲ್ಲಿಯೂ ಇರುವುದೆಲ್ಲಾ ನಿಮ್ಮದೇ. ಯೆಹೋವ ದೇವರೇ, ರಾಜ್ಯವು ನಿಮ್ಮದು. ನೀವು ಸಮಸ್ತಕ್ಕೂ ತಲೆಯಾಗಿ ಉನ್ನತರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು