Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 3:13 - ಕನ್ನಡ ಸಮಕಾಲಿಕ ಅನುವಾದ

13 ಸಮಸ್ತ ಭೂಮಿಗೂ ಒಡೆಯರಾಗಿರುವ ಯೆಹೋವ ದೇವರ ಮಂಜೂಷವನ್ನು ಹೊರುವ ಯಾಜಕರ ಪಾದಗಳು ಯೊರ್ದನ್ ನದಿಯ ನೀರಲ್ಲಿ ಇಡುತ್ತಲೇ, ಮೇಲಿನಿಂದ ಹರಿದು ಬರುವ ನೀರು ಮುಂದೆ ಹರಿಯದೆ ಅಲ್ಲಿಯೇ ರಾಶಿಯಾಗಿ ನಿಲ್ಲುವುದು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಸರ್ವಲೋಕದ ಒಡೆಯನಾದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ತಮ್ಮ ಕಾಲುಗಳನ್ನು ಯೊರ್ದನ್ ನದಿಯ ನೀರಲ್ಲಿ ಇಡುತ್ತಲೇ ಮೇಲಿನಿಂದ ಹರಿದು ಬರುವ ನೀರು ಮುಂದೆ ಸಾಗದೆ, ಅಲ್ಲೇ ರಾಶಿಯಾಗಿ ನಿಂತುಕೊಳ್ಳುವುದು” ಎಂದು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಸರ್ವಲೋಕದ ಒಡೆಯನಾದ ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ತಮ್ಮ ಕಾಲುಗಳನ್ನು ಜೋರ್ಡನ್ ನದಿಯ ನೀರಿನಲ್ಲಿ ಇಡುತ್ತಲೇ ಮೇಲಿಂದ ಹರಿದುಬರುವ ನೀರು ಮುಂದೆ ಸಾಗದೆ ಅಲ್ಲೇ ರಾಶಿಯಾಗಿ ನಿಂತುಕೊಳ್ಳುವುದು,” ಎಂದು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಸರ್ವಲೋಕದ ಒಡೆಯನಾದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ತಮ್ಮ ಕಾಲುಗಳನ್ನು ಯೊರ್ದನ್ ಹೊಳೆಯ ನೀರಲ್ಲಿ ಇಡುತ್ತಲೇ ಮೇಲಣಿಂದ ಬರುವ ನೀರು ಮುಂದೆ ಹೋಗದೆ ಅಲ್ಲೇ ರಾಶಿಯಾಗಿ ನಿಂತುಕೊಳ್ಳುವದು ಎಂದು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯಾಜಕರು ಯೆಹೋವನ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗುವರು. ಯೆಹೋವನು ಸರ್ವಲೋಕದ ಒಡೆಯನಾಗಿದ್ದಾನೆ. ಅವರು ಆ ಪೆಟ್ಟಿಗೆಯನ್ನು ನಿಮ್ಮ ಮುಂದೆ ಜೋರ್ಡನ್ ನದಿಯಲ್ಲಿ ತೆಗೆದುಕೊಂಡು ಹೋಗುವರು. ಅವರು ನೀರಿನಲ್ಲಿ ಪ್ರವೇಶ ಮಾಡಿದಾಗ ಜೋರ್ಡನ್ ನದಿಯ ನೀರು ಹರಿಯದೆ ನಿಂತುಬಿಡುವುದು. ನೀರು ಮುಂದಕ್ಕೆ ಹರಿಯದೆ ಹರಡಿಕೊಂಡು ಸರೋವರದಂತೆ ತೋರುವುದು” ಎಂದು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 3:13
13 ತಿಳಿವುಗಳ ಹೋಲಿಕೆ  

ನೀವು ಬೀಸಿದ ಬಿರುಸಾದ ಗಾಳಿಯಿಂದ ನೀರು ಒಟ್ಟುಗೂಡಿದವು. ಪ್ರವಾಹಗಳು ರಾಶಿಯಂತೆ ನಿಂತವು. ಜಲರಾಶಿಗಳು ಸಮುದ್ರದ ಮಧ್ಯದಲ್ಲಿ ಗಟ್ಟಿಯಾದವು.


ದೇವರು ಸಮುದ್ರವನ್ನು ವಿಭಾಗಿಸಿ ಅವರನ್ನು ದಾಟಿಸಿದರು. ನೀರನ್ನು ಗೋಡೆಯಾಗಿ ನಿಲ್ಲಿಸಿದರು.


ನೀನು ನಿನ್ನ ಕುದುರೆಗಳ ಸಂಗಡ ಸಮುದ್ರದಲ್ಲಿಯೂ, ಮಹಾಜಲಗಳ ಸಮೂಹದಲ್ಲಿಯೂ ನಡೆದು ಹೋದೆ.


ಅವರು ಸಮುದ್ರದ ನೀರನ್ನು ಒಟ್ಟುಗೂಡಿಸುತ್ತಾರೆ; ಅವರು ಅಗಾಧವನ್ನು ಉಗ್ರಾಣಗಳಲ್ಲಿ ಇಡುತ್ತಾರೆ.


ಇಗೋ, ಸಮಸ್ತ ಭೂಮಿಗೆ ಯೆಹೋವ ದೇವರ ಒಡಂಬಡಿಕೆಯ ಮಂಜೂಷವು ನಿಮ್ಮ ಮುಂದೆ ಯೊರ್ದನ್ ನದಿಯನ್ನು ದಾಟಿ ಹೋಗುವುದು.


ನೀವು ಅವರಿಗೆ, ‘ಯೆಹೋವ ದೇವರ ಒಡಂಬಡಿಕೆಯ ಮಂಜೂಷದ ಮುಂದೆ ಯೊರ್ದನ್ ನದಿಯ ನೀರು ವಿಭಾಗವಾಯಿತು. ಒಡಂಬಡಿಕೆಯ ಮಂಜೂಷವು ಯೊರ್ದನ್ ನದಿಯನ್ನು ದಾಟುವಾಗ, ಯೊರ್ದನ್ ನದಿಯ ನೀರು ನಿಂತುಹೋಯಿತು. ಈ ಕಲ್ಲುಗಳು ಇಸ್ರಾಯೇಲರಿಗೆ ಎಂದೆಂದಿಗೂ ಜ್ಞಾಪಕಾರ್ಥವಾದ ಗುರುತು,’ ಎಂದು ಉತ್ತರಕೊಡಬೇಕು,” ಎಂದನು.


ನೀವು ಬುಗ್ಗೆಯನ್ನೂ, ಪ್ರವಾಹವನ್ನೂ ವಿಭಾಗ ಮಾಡಿದ್ದೀರಿ. ನೀವು ಯಾವಾಗಲೂ ತುಂಬಿ ಹರಿಯುವ ನದಿಗಳನ್ನು ಒಣಗಿಸಿದ್ದೀರಿ.


ಯೆಹೋವ ದೇವರೇ, ಮಹತ್ವವೂ, ಪರಾಕ್ರಮವೂ, ಮಹಿಮೆಯೂ, ಜಯವೂ, ವೈಭವವೂ ನಿಮ್ಮವೇ. ಆಕಾಶಗಳಲ್ಲಿಯೂ, ಭೂಮಿಯಲ್ಲಿಯೂ ಇರುವುದೆಲ್ಲಾ ನಿಮ್ಮದೇ. ಯೆಹೋವ ದೇವರೇ, ರಾಜ್ಯವು ನಿಮ್ಮದು. ನೀವು ಸಮಸ್ತಕ್ಕೂ ತಲೆಯಾಗಿ ಉನ್ನತರು.


ನಿನ್ನನ್ನು ಉಂಟುಮಾಡಿದವನೇ ನಿನ್ನ ಪತಿ. ಸೇನಾಧೀಶ್ವರ ಯೆಹೋವ ದೇವರು ಎಂಬುದು ಆತನ ಹೆಸರು. ನಿನ್ನ ವಿಮೋಚಕನು ಇಸ್ರಾಯೇಲಿನ ಪರಿಶುದ್ಧನೇ. ಸಮಸ್ತ ಭೂಮಿಯ ದೇವರು ಎಂದು ಆತನನ್ನು ಕರೆಯಲಾಗುತ್ತದೆ.


ಆಗ ಅವನು, “ಇವು ಸಮಸ್ತ ಭೂಮಿಯ ಕರ್ತ ಆಗಿರುವವರ ಸನ್ನಿಧಿಸೇವೆ ಮಾಡಲು ಅಭಿಷೇಕ ಹೊಂದಿರುವ ಇಬ್ಬರು ಸೇವಕರನ್ನು ಸೂಚಿಸುತ್ತದೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು