Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 3:16 - ಕನ್ನಡ ಸಮಕಾಲಿಕ ಅನುವಾದ

16 ಮೇಲಿಂದ ಇಳಿದು ಬರುವ ನೀರು ನಿಂತು ಬಹು ದೂರದಲ್ಲಿ ಚಾರೆತಾನಿಗೆ ಸಮೀಪವಾಗಿದ್ದ ಆದಾಮ್ ಪಟ್ಟಣಕ್ಕೆ ಬಂದು ರಾಶಿಯಾಗಿ ನಿಂತುಕೊಂಡಿತು. ಕೆಳಗಿನ ನೀರು ಅರಾಬಾ ಎಂಬ ಲವಣ ಸಮುದ್ರಕ್ಕೆ ಹರಿದುಹೋಯಿತು. ಆಗ ಜನರು ಯೆರಿಕೋವಿನ ಎದುರಾಗಿ ನದಿ ದಾಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಮೇಲಿನಿಂದ ಹರಿದು ಬರುತ್ತಿದ್ದ ನೀರು ಬಹುದೂರದಲ್ಲಿದ್ದ ಚಾರೆತಾನಿನ ಹತ್ತಿರವಿರುವ ಆದಾಮ್ ಊರಿನ ತನಕ ರಾಶಿಯಾಗಿ ನಿಂತಿತು. ಕೆಳಗಿನ ನೀರು ಅರಾಬಾ ತಗ್ಗಿನಲ್ಲಿರುವ ಲವಣಸಮುದ್ರಕ್ಕೆ ಹರಿದು ಹೋಯಿತು ಜನರು ಯೆರಿಕೋವಿನ ಎದುರಿನಲ್ಲಿ ಹೊಳೆದಾಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಮೇಲಿಂದ ಬರುತ್ತಿದ್ದ ನೀರು ಬಹು ದೂರದಲ್ಲಿದ್ದ ಚಾರೆತಾನಿನ ಬಳಿಯಿರುವ ಆದಾಮ್ ಊರಿನ ತನಕ ರಾಶಿಯಾಗಿ ನಿಂತುಕೊಂಡಿತು. ಕೆಳಗಿನ ನೀರು ಅರಾಬಾ ತಗ್ಗಿನಲ್ಲಿರುವ ಲವಣಸಮುದ್ರಕ್ಕೆ ಹರಿದುಹೋಯಿತು. ಜನರು ಜೆರಿಕೋವಿನ ಎದುರಿನಲ್ಲಿ ನದಿ ದಾಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಮೇಲಣಿಂದ ಬರುವ ನೀರು ಬಹುದೂರದಲ್ಲಿದ್ದ ಚಾರೆತಾನಿನ ಹತ್ತಿರವಿರುವ ಆದಾಮ್ ಊರಿನ ತನಕ ರಾಶಿಯಾಗಿ ನಿಂತುಕೊಂಡಿತು. ಕೆಳಗಣ ನೀರು ಅರಾಬಾ ತಗ್ಗಿನಲ್ಲಿರುವ ಲವಣ ಸಮುದ್ರಕ್ಕೆ ಹರಿದುಹೋಯಿತು. ಜನರು ಯೆರಿಕೋವಿನ ಎದುರಿನಲ್ಲಿ ಹೊಳೆದಾಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆಗ ನೀರು ಹರಿಯದೆ ನಿಂತುಬಿಟ್ಟಿತು. ಆ ಸ್ಥಳದ ಹಿಂಭಾಗದಲ್ಲಿ ಒಂದು ಸರೋವರದಂತೆ ನೀರು ತುಂಬಿಕೊಂಡಿತು. ನೀರು ಬಹುದೂರದಲ್ಲಿರುವ ಆದಾಮ್ ಊರು ಅಂದರೆ ಜಾರೆತಾನಿನ ಹತ್ತಿರ ಇರುವ ಒಂದು ಊರಿನವರೆಗೂ ರಾಶಿರಾಶಿಯಾಗಿ ನಿಂತುಕೊಂಡಿತು. ಜನರು ಜೆರಿಕೊವಿನ ಹತ್ತಿರ ನದಿಯನ್ನು ದಾಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 3:16
31 ತಿಳಿವುಗಳ ಹೋಲಿಕೆ  

ಸಮಸ್ತ ಭೂಮಿಗೂ ಒಡೆಯರಾಗಿರುವ ಯೆಹೋವ ದೇವರ ಮಂಜೂಷವನ್ನು ಹೊರುವ ಯಾಜಕರ ಪಾದಗಳು ಯೊರ್ದನ್ ನದಿಯ ನೀರಲ್ಲಿ ಇಡುತ್ತಲೇ, ಮೇಲಿನಿಂದ ಹರಿದು ಬರುವ ನೀರು ಮುಂದೆ ಹರಿಯದೆ ಅಲ್ಲಿಯೇ ರಾಶಿಯಾಗಿ ನಿಲ್ಲುವುದು,” ಎಂದು ಹೇಳಿದನು.


ಯೊರ್ದನಿಗೆ ಸೇರಿದ ಬಯಲಾದ ಸುಕ್ಕೋತಿಗೂ, ಚಾರೆತಾನಿಗೂ ನಡುವೆ ಇರುವ ಜೇಡಿಮಣ್ಣಿನ ಅಚ್ಚುಗಳಲ್ಲಿ ಅರಸನು ಅವುಗಳನ್ನು ಎರಕ ಹೊಯ್ಯಿಸಿದನು.


ಅಹೀಲೂದನ ಮಗ ಬಾಣಾ ಎಂಬವನು ತಾನಕ್, ಮೆಗಿದ್ದೋ, ಬೇತ್ ಷೆಯಾನಿನ ಎಲ್ಲಾ ಕಡೆಗಳಲ್ಲಿಯೂ ಆಳಿಕೆಮಾಡುತ್ತಿದ್ದನು. ಬೇತ್ ಶಾನ್ ಚಾರೆತಾನಿನ ಪಕ್ಕದಲ್ಲಿದ್ದ ಇಜ್ರೆಯೇಲ್ ಎಂಬ ಪಟ್ಟಣದ ಕೆಳಗಿತ್ತು. ಅವನ ಪ್ರಾಂತವು ಬೇತ್ ಷೆಯಾನಿನಿಂದ ಆಬೇಲ್ ಮೆಹೋಲದವರೆಗೆ ಯೊಕ್ಮೆಯಾಮಿನಲ್ಲಿ ಅಂತ್ಯಗೊಂಡಿತ್ತು.


ಇವರೆಲ್ಲರು ಉಪ್ಪಿನ ಸಮುದ್ರವಾಗಿರುವ ಸಿದ್ದೀಮ್ ತಗ್ಗಿನಲ್ಲಿ ಒಟ್ಟಾಗಿ ಕೂಡಿಬಂದರು.


ಸಮುದ್ರವು ನೋಡಿ ಓಡಿಹೋಯಿತು; ಯೊರ್ದನ್ ನದಿ ಹಿಂದಿರುಗಿತು.


ಯೊರ್ದನ್ ನದಿಯ ಆಚೆ ಪಾರಾನ್, ತೋಫೆಲ್, ಲಾಬಾನ್, ಹಚೇರೋತ್, ದೀಜಾಹಾಬ್ ಎಂಬ ಊರುಗಳ ನಡುವೆ, ಮರುಭೂಮಿಯಲ್ಲಿ ಅರಾಬಾ ಎಂಬ ತಗ್ಗಾದ ಪ್ರದೇಶದಲ್ಲಿ ಸೂಫಿಗೆ ಎದುರಾಗಿ, ಮೋಶೆ ಇಸ್ರಾಯೇಲರಿಗೆ ಹೇಳಿದ ಮಾತುಗಳು ಇವು.


“ ‘ನಿಮ್ಮ ದಕ್ಷಿಣ ಕಡೆಯು ಚಿನ್ ಮರುಭೂಮಿಯಿಂದ ಎದೋಮಿಗೆ ಅನುಸಾರವಾಗಿರಬೇಕು. ನಿಮ್ಮ ದಕ್ಷಿಣ ಮೇರೆಯು, ಉಪ್ಪಿನ ಸಮುದ್ರದ ಪೂರ್ವದ ಕಡೆಯಿಂದ ಆರಂಭಿಸಬೇಕು.


ನೀವು ಸಮುದ್ರದಲ್ಲಿ ಮಾರ್ಗಮಾಡಿದಿರಿ. ಮಹಾಜಲರಾಶಿಗಳನ್ನು ದಾಟಿದಿರಿ. ಆದರೂ ನಿಮ್ಮ ಹೆಜ್ಜೆಯ ಗುರುತು ಕಾಣಲಿಲ್ಲ.


ನೀವು ಬುಗ್ಗೆಯನ್ನೂ, ಪ್ರವಾಹವನ್ನೂ ವಿಭಾಗ ಮಾಡಿದ್ದೀರಿ. ನೀವು ಯಾವಾಗಲೂ ತುಂಬಿ ಹರಿಯುವ ನದಿಗಳನ್ನು ಒಣಗಿಸಿದ್ದೀರಿ.


ದೇವರು ಸಮುದ್ರವನ್ನು ಒಣ ಭೂಮಿಯನ್ನಾಗಿ ಮಾಡಿದರು. ಜನರು ಕಾಲಿನಿಂದ ನದಿಯನ್ನು ದಾಟಿದರು. ಬನ್ನಿರಿ, ದೇವರಲ್ಲಿ ಆನಂದಿಸೋಣ.


ಯೆಹೋವ ದೇವರು ಪ್ರಳಯದ ಮೇಲೆ ಕುಳಿತುಕೊಳ್ಳುತ್ತಾರೆ; ಯುಗಯುಗಕ್ಕೂ ಯೆಹೋವ ದೇವರು ಅರಸರಾಗಿ ಕುಳಿತುಕೊಂಡಿದ್ದಾರೆ.


ಲವಣ ಸಮುದ್ರದ ಕಡೆಯಲ್ಲಿ ದಕ್ಷಿಣ ಕಡೆಗಿರುವ ಕೊನೆಯಿಂದ,


ಅದಲ್ಲದೆ ಪಶ್ಚಿಮದಲ್ಲಿ ಅವರ ಪ್ರದೇಶ ಅರಾಬಾದ ಯೊರ್ದನ್ ನದಿಯವರೆಗೆ ಹರಡಿತ್ತು, ಅದರಲ್ಲಿ ಕಿನ್ನೆರೆತ್ ಮೊದಲ್ಗೊಂಡು ಪೂರ್ವದಲ್ಲಿರುವ ಪಿಸ್ಗಾದ ಕೆಳಗಿರುವ ಉಪ್ಪಿನ ಸಮುದ್ರವಾದ ಬಯಲು ಸಮುದ್ರದವರೆಗೆ ವ್ಯಾಪಿಸಿತ್ತು.


ಆಗ ಮೋಶೆಯು ಸಮುದ್ರದ ಮೇಲೆ ತನ್ನ ಬಲಗೈಯನ್ನು ಚಾಚಲಾಗಿ, ಯೆಹೋವ ದೇವರು ರಾತ್ರಿಯೆಲ್ಲಾ ಬಲವಾದ ಪೂರ್ವದಿಕ್ಕಿನ ಗಾಳಿಯಿಂದ ಸಮುದ್ರವನ್ನು ಹಿಂದಕ್ಕೆ ಹೋಗುವಂತೆ ಸಮುದ್ರವನ್ನು ಸರಿಸಿ, ಒಣ ನೆಲ ಕಾಣಿಸುವಂತೆ ಮಾಡಿದರು. ಆಗ ನೀರು ವಿಭಾಗವಾಯಿತು.


ಅವರು ಸಮುದ್ರದ ನೀರನ್ನು ಒಟ್ಟುಗೂಡಿಸುತ್ತಾರೆ; ಅವರು ಅಗಾಧವನ್ನು ಉಗ್ರಾಣಗಳಲ್ಲಿ ಇಡುತ್ತಾರೆ.


ಸಮುದ್ರವೇ, ನಿನಗೆ ಏನಾಯಿತು? ಏಕೆ ಓಡಿ ಹೋಗುತ್ತೀ? ಯೊರ್ದನ್ ನದಿಯೇ, ಏಕೆ ಹಿಂದಿರುಗುತ್ತೀ?


ನಾನು ಬಂದಾಗ ಏಕೆ ಅಲ್ಲಿ ಒಬ್ಬನೂ ಇರಲಿಲ್ಲ? ನಾನು ಕರೆದಾಗ ಏಕೆ ಯಾರೂ ಉತ್ತರ ಕೊಡಲಿಲ್ಲ? ನನ್ನ ಕೈ ವಿಮೋಚಿಸದಂಥಾ ಮೋಟುಗೈಯೋ? ಇಲ್ಲವೆ ನನಗೆ ಬಿಡಿಸುವುದಕ್ಕೆ ಶಕ್ತಿಯಿಲ್ಲವೋ? ಇಗೋ, ನನ್ನ ಗದರಿಕೆಯಿಂದ ನಾನು ಸಮುದ್ರವನ್ನು ಒಣಗಿಸುತ್ತೇನೆ. ನಾನು ನದಿಗಳನ್ನು ಮರುಭೂಮಿಯನ್ನಾಗಿ ಮಾಡುತ್ತೇನೆ. ನೀರಿಲ್ಲದ ಕಾರಣ ಅಲ್ಲಿಯ ಮೀನುಗಳು ಬಾಯಾರಿ, ಸತ್ತು ನಾರುವುವು.


ಆಗ ಅವನು, “ಈ ನೀರು ಪೂರ್ವಸೀಮೆಗೆ ಹೋಗಿ ಅರಾಬಾ ಎಂಬ ಒಣಭೂಮಿಗೆ ಇಳಿದು ಲವಣ ಸಮುದ್ರ ಸೇರುವುದು. ಲವಣ ಸಮುದ್ರ ಸೇರಿದ ಮೇಲೆ ಅಲ್ಲಿಯ ನೀರು ಸಿಹಿಯಾಗುವುದು.


ಅವರು ಸಮುದ್ರವನ್ನು ಗದರಿಸಿ, ಅದನ್ನು ಒಣಗುವಂತೆ ಮಾಡುತ್ತಾರೆ. ಸಕಲನದಿಗಳನ್ನು ಬತ್ತಿಸುತ್ತಾರೆ. ಬಾಷಾನು, ಕರ್ಮೆಲು ಬಾಡಿ ಹೋಗುತ್ತವೆ ಮತ್ತು ಲೆಬನೋನಿನ ಹೂವು ಬಾಡಿ ಹೋಗುತ್ತದೆ.


ಯೆಹೋವ ದೇವರೇ, ನದಿಗಳ ಮೇಲೆ ರೌದ್ರಗೊಂಡಿರುವಿರೋ? ಪ್ರವಾಹಗಳ ಮೇಲೆ ನಿಮ್ಮ ಕೋಪವಿತ್ತೋ? ನೀವು ಕುದುರೆಗಳನ್ನು ಮತ್ತು ರಥಗಳನ್ನು ಮುನ್ನಡೆಸಿದಾಗ ವಿಜಯಕ್ಕೆ ನೀವು ಸಮುದ್ರದ ಮೇಲೆ ಕೋಪಗೊಂಡಿದ್ದೀರಾ?


ಹೀಗೆ ಇಸ್ರಾಯೇಲರು ಸಮುದ್ರದ ಮಧ್ಯದಲ್ಲಿ ಒಣಗಿದ ನೆಲದ ಮೇಲೆ ನಡೆದುಹೋದರು. ನೀರು ಅವರಿಗೆ ಎಡಗಡೆ ಮತ್ತು ಬಲಗಡೆಗಳಲ್ಲಿ ಗೋಡೆಯಾಗಿ ನಿಂತಿತ್ತು.


ಆದರೆ ಇಸ್ರಾಯೇಲರು ಸಮುದ್ರದ ಮಧ್ಯದಲ್ಲಿದ್ದ ಒಣಗಿದ ನೆಲದ ಮೇಲೆ ನಡೆದುಹೋದರು. ನೀರು ಅವರಿಗೆ ಎಡಗಡೆ ಮತ್ತು ಬಲಗಡೆಗಳಲ್ಲಿ ಗೋಡೆಯಂತಿತ್ತು.


ನೀವು ಬೀಸಿದ ಬಿರುಸಾದ ಗಾಳಿಯಿಂದ ನೀರು ಒಟ್ಟುಗೂಡಿದವು. ಪ್ರವಾಹಗಳು ರಾಶಿಯಂತೆ ನಿಂತವು. ಜಲರಾಶಿಗಳು ಸಮುದ್ರದ ಮಧ್ಯದಲ್ಲಿ ಗಟ್ಟಿಯಾದವು.


ನೀವು ಅವರಿಗೆ, ‘ಇಸ್ರಾಯೇಲರು ಒಣನೆಲದಲ್ಲಿ ಈ ಯೊರ್ದನ್ ನದಿಯನ್ನು ದಾಟಿ ಬಂದರು.


ಇದಾದ ಮೇಲೆ ಯೆಹೋವ ದೇವರು ಇಸ್ರಾಯೇಲರು ದಾಟಿಹೋಗುವವರೆಗೆ ಅವರ ಮುಂದೆ ಯೊರ್ದನ್ ನದಿಯನ್ನು ಒಣಗಿ ಹೋಗುವಂತೆ ಮಾಡಿದ್ದನ್ನು ಯೊರ್ದನ್ ನದಿ ಪಶ್ಚಿಮದ ಆಚೆದಡದಲ್ಲಿ ವಾಸಿಸಿದ್ದ ಅಮೋರಿಯರ ಸಕಲ ಅರಸರು ಮತ್ತು ಸಮುದ್ರದ ಆಚೆಯಲ್ಲಿ ವಾಸಿಸಿದ್ದ ಕಾನಾನ್ಯರ ಸಕಲ ಅರಸರು ಕೇಳಿದಾಗ ಅವರ ಹೃದಯವು ಕುಂದಿಹೋಯಿತು. ಇಸ್ರಾಯೇಲರ ನಿಮಿತ್ತವಾಗಿ ಅವರಿಗೆ ಪ್ರಾಣಹೋದಂತೆ ಆಯಿತು.


ಯೊರ್ದನ್ ನದಿಯ ಪೂರ್ವದಲ್ಲಿ ಕಿನ್ನೆರೆತ್ ಸಮುದ್ರದಿಂದ ಲವಣ ಸಮುದ್ರವೆನಿಸಿಕೊಳ್ಳುವ ಅರಾಬಾ ಸಮುದ್ರದ ಹತ್ತಿರವಿರುವ ಬೇತ್ ಯೆಷೀಮೋತನವರೆಗೂ ದಕ್ಷಿಣದಲ್ಲಿರುವ ಪಿಸ್ಗಾ ಬೆಟ್ಟದ ಬುಡದವರೆಗೂ ಇರುವ ತಗ್ಗಾದ ಪ್ರದೇಶವು ಸಹ ಅವನ ರಾಜ್ಯವಾಗಿತ್ತು.


ಯಾನೋಹದಿಂದ ಅಟಾರೋತ್‌ಗೂ ನಾರಾ ಎಂಬ ಊರುಗಳ ಮೇಲೆ ಇಳಿದು ಯೆರಿಕೋವಿನ ಬಳಿಯಲ್ಲಿ ಬಂದು ಯೊರ್ದನ್ ನದಿಗೆ ಮುಗಿಯುವುದು.


ಮುನ್ನೂರು ಜನರು ತುತೂರಿಗಳನ್ನು ಊದುವಾಗ, ಯೆಹೋವ ದೇವರು ಪಾಳೆಯದಲ್ಲಿ ಎಲ್ಲೆಲ್ಲಿಯೂ ಒಬ್ಬನ ಖಡ್ಗವನ್ನು ಒಬ್ಬನ ಮೇಲೆ ಬರಮಾಡಿದರು. ಪಾಳೆಯ ಚೆರೇರಿನಲ್ಲಿರುವ ಬೇತ್ ಷಿಟ್ಟದವರೆಗೂ, ಟಬ್ಬಾತಿನ ಬಳಿಯಲ್ಲಿರುವ ಆಬೇಲ್ ಮೆಹೋಲಾದ ಮೇರೆಯವರೆಗೂ ಓಡಿಹೋಯಿತು.


ದೇವರು ಸಮುದ್ರವನ್ನು ವಿಭಾಗಿಸಿ ಅವರನ್ನು ದಾಟಿಸಿದರು. ನೀರನ್ನು ಗೋಡೆಯಾಗಿ ನಿಲ್ಲಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು