ಯೆಹೋಶುವ 3:4 - ಕನ್ನಡ ಸಮಕಾಲಿಕ ಅನುವಾದ4 ಆದರೆ ನಿಮಗೂ ಅದಕ್ಕೂ ಸುಮಾರು ಎರಡು ಸಾವಿರ ಮೊಳ ಅಂತರ ಇರಬೇಕು. ಅದರ ಹತ್ತಿರ ಬರಬೇಡಿರಿ. ನೀವು ಹೋಗಬೇಕಾದ ಮಾರ್ಗ ನಿಮಗೆ ತಿಳಿಯುವುದು. ಏಕೆಂದರೆ ನೀವು ಆ ಮಾರ್ಗವಾಗಿ ಇದುವರೆಗೆ ಪ್ರಯಾಣ ಮಾಡಿರುವುದಿಲ್ಲ,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆದರೆ ನಿಮಗೂ ಮಂಜೂಷಕ್ಕೂ ಸುಮಾರು ಎರಡು ಸಾವಿರ ಮೊಳ ಅಂತರವಿರಬೇಕು; ಹತ್ತಿರ ಹೋಗಬಾರದು. ಹೀಗೆ ನೀವು ಹೋಗಬೇಕಾದ ಮಾರ್ಗವು ನಿಮಗೆ ಗೊತ್ತಾಗುವುದು; ಏಕೆಂದರೆ ನೀವು ಆ ಮಾರ್ಗವಾಗಿ ಇಲ್ಲಿಯವರೆಗೆ ಪ್ರಯಾಣ ಮಾಡಿರುವುದಿಲ್ಲ” ಅಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆದರೆ ಅದರ ಹತ್ತಿರ ನೀವು ಹೋಗಬಾರದು. ನಿಮಗೂ ಮಂಜೂಷಕ್ಕೂ ಸುಮಾರು ಒಂದು ಕಿಲೋಮೀಟರ್ ಅಂತರವಿರಬೇಕು. ಹೀಗೆ ನೀವು ಹೋಗಬೇಕಾದ ಮಾರ್ಗ ನಿಮಗೆ ಗೊತ್ತಾಗುವುದು. ಏಕೆಂದರೆ ನೀವು ಆ ಮಾರ್ಗವಾಗಿ ಇಲ್ಲಿಯವರೆಗೆ ಪ್ರಯಾಣ ಮಾಡಿದ್ದಿಲ್ಲ,” ಎಂದು ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆದರೆ ನಿಮಗೂ ಮಂಜೂಷಕ್ಕೂ ಸುಮಾರು ಎರಡು ಸಾವಿರ ಮೊಳ ಅಂತರವಿರಬೇಕು; ಹತ್ತಿರ ಹೋಗಬಾರದು. ಹೀಗೆ ನೀವು ಹೋಗತಕ್ಕ ಮಾರ್ಗವು ನಿಮಗೆ ಗೊತ್ತಾಗುವದು; ಆ ಮಾರ್ಗದಲ್ಲಿ ನೀವು ಮುಂಚೆ ಬರಲಿಲ್ಲವಲ್ಲಾ ಅಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ನಿಮಗೂ ಒಡಂಬಡಿಕೆಯ ಪೆಟ್ಟಿಗೆಗೂ ಮೂರು ಸಾವಿರ ಅಡಿ ಅಂತರವಿರಲಿ. ಅದರ ಸಮೀಪ ನೀವು ಹೋಗಕೂಡದು. ಈ ದಾರಿಯಲ್ಲಿ ನೀವು ಹಿಂದೆಂದೂ ಪ್ರಯಾಣ ಮಾಡಿಲ್ಲ. ಆದರೆ ನೀವು ಅವರನ್ನು ಹಿಂಬಾಲಿಸಿದರೆ ಎಲ್ಲಿಗೆ ಹೋಗಬೇಕೆಂದು ನಿಮಗೆ ತಿಳಿಯುತ್ತದೆ” ಎಂದು ಸಾರಿದರು. ಅಧ್ಯಾಯವನ್ನು ನೋಡಿ |