Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 3:6 - ಕನ್ನಡ ಸಮಕಾಲಿಕ ಅನುವಾದ

6 ಆಗ ಯೆಹೋಶುವನು ಯಾಜಕರಿಗೆ, “ನೀವು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರಿಗೆ ಮುಂದಾಗಿ ಹೋಗಿರಿ,” ಎಂದನು. ಹಾಗೆಯೇ ಅವರು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರ ಮುಂದೆ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಂತರ ಯೆಹೋಶುವನು ಯಾಜಕರಿಗೆ “ನೀವು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರ ಮುಂದಾಗಿ ನಡೆದು ಹೊಳೆ ದಾಟಿರಿ” ಎಂದು ಆಜ್ಞಾಪಿಸಲು ಅವರು ಆ ಮಂಜೂಷವನ್ನು ಹೊತ್ತುಕೊಂಡು ಜನರ ಮುಂದಾಗಿ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಯಾಜಕರಿಗೆ, “ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರ ಮುಂದಾಗಿ ನಡೆದು ನದಿದಾಟಿರಿ,” ಎಂದು ಆಜ್ಞಾಪಿಸಿದನು. ಅವರು ಅಂತೆಯೇ ಮಂಜೂಷವನ್ನು ಹೊತ್ತುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಮತ್ತು ಯಾಜಕರಿಗೆ - ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರ ಮುಂದಾಗಿ ನಡೆದು ಹೊಳೆ ದಾಟಿರಿ ಎಂದು ಆಜ್ಞಾಪಿಸಲು ಅವರು ಆ ಮಂಜೂಷವನ್ನು ಹೊತ್ತುಕೊಂಡು ಅವರ ಮುಂದಾಗಿ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಬಳಿಕ ಯೆಹೋಶುವನು ಯಾಜಕರಿಗೆ, “ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡು ಜನಗಳ ಮುಂದೆ ನದಿಯ ಕಡೆಗೆ ನಡೆಯಿರಿ” ಎಂದನು. ಯಾಜಕರು ಪೆಟ್ಟಿಗೆಯನ್ನು ಹೊತ್ತುಕೊಂಡು ಜನರ ಮುಂದೆ ನಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 3:6
11 ತಿಳಿವುಗಳ ಹೋಲಿಕೆ  

ಮಾರ್ಗ ತೆರೆಯುವಾತನು ಅವರ ಮುಂದೆ ಹೋಗುವನು. ಅವರು ಬಾಗಿಲು ತೆರೆದು ಹೊರಗೆ ಹೋಗುವರು. ಅವರ ಅರಸನು ಅವರ ಮುಂದೆ ಹಾದು ಹೋಗುತ್ತಾನೆ. ಯೆಹೋವ ದೇವರು ಅವರ ಮುಂದಾಳತ್ವವನ್ನು ವಹಿಸುವರು.”


ಜನರಿಗೆ ಆಜ್ಞಾಪಿಸಿ, “ಯಾಜಕರಾದ ಲೇವಿಯರು ನಿಮ್ಮ ದೇವರಾದ ಯೆಹೋವ ದೇವರ ಒಡಂಬಡಿಕೆಯ ಮಂಜೂಷ ಹೊರುವುದನ್ನು ಕಾಣುವಾಗ ನೀವು ನಿಮ್ಮ ಸ್ಥಳದಿಂದ ಹೊರಟು ಅದರ ಹಿಂದೆ ಹೋಗಬೇಕು.


ಈಗ ನೀವು ಈ ಜನರನ್ನೆಲ್ಲಾ ಕೊಂದುಹಾಕಿದರೆ, ನಿಮ್ಮ ಪ್ರಖ್ಯಾತಿಯನ್ನು ಕೇಳಿದ ಜನಾಂಗಗಳು ನಿಮ್ಮ ವಿಷಯದಲ್ಲಿ,


ಅವರು ಯೆಹೋವ ದೇವರ ಪರ್ವತದ ಬಳಿಯಿಂದ ಮೂರು ದಿವಸಗಳವರೆಗೆ ಪ್ರಯಾಣಮಾಡಿದರು. ಯೆಹೋವ ದೇವರ ಒಡಂಬಡಿಕೆಯ ಮಂಜೂಷವು ಅವರಿಗೆ ಇಳಿದುಕೊಳ್ಳುವ ಸ್ಥಳವನ್ನು ಹುಡುಕುವುದಕ್ಕೆ ಅವರ ಮೂರು ದಿವಸಗಳ ಪ್ರಯಾಣದಲ್ಲಿ ಅವರ ಮುಂದಾಗಿ ಹೋಯಿತು.


ಯೇಸು ಸದಾಕಾಲವೂ ಮೆಲ್ಕಿಜೆದೇಕನ ಕ್ರಮದ ಮಹಾಯಾಜಕರಾಗಿ ಅತಿ ಪರಿಶುದ್ಧ ಸ್ಥಳಕ್ಕೆ ಮುಂದಾಗಿ ಹೋಗಿ ಯೇಸು ನಮ್ಮ ಪರವಾಗಿ ಪ್ರವೇಶಿಸಿದ್ದಾರೆ.


ಯೆಹೋಶುವನು ಜನರಿಗೆ, “ಇಂದು ನಿಮ್ಮನ್ನು ಶುದ್ಧಮಾಡಿಕೊಳ್ಳಿರಿ, ನಾಳೆ ಯೆಹೋವ ದೇವರು ನಿಮ್ಮ ಮಧ್ಯದಲ್ಲಿ ಅದ್ಭುತಗಳನ್ನು ಮಾಡುವರು,” ಎಂದನು.


ಯೆಹೋವ ದೇವರು ಯೆಹೋಶುವನಿಗೆ, “ನಾನು ಮೋಶೆಯ ಸಂಗಡ ಇದ್ದ ಪ್ರಕಾರ, ನಿನ್ನ ಸಂಗಡ ಇರುವುದನ್ನು ಇಸ್ರಾಯೇಲರೆಲ್ಲರೂ ತಿಳಿಯುವಂತೆ, ನಾನು ಈ ದಿನ ನಿನ್ನನ್ನು ಅವರ ಮುಂದೆ ಉನ್ನತಗೊಳಿಸುವೆನು.


ಇಸ್ರಾಯೇಲಿನ ಹಿರಿಯರೆಲ್ಲರೂ ಬಂದ ತರುವಾಯ ಯಾಜಕರು ಯೆಹೋವ ದೇವರ ಮಂಜೂಷವನ್ನು ಎತ್ತಿಕೊಂಡು,


ಇಸ್ರಾಯೇಲಿನ ಹಿರಿಯರೆಲ್ಲರೂ ಬಂದ ತರುವಾಯ, ಲೇವಿಯರು ಯೆಹೋವ ದೇವರ ಮಂಜೂಷವನ್ನು ಎತ್ತಿಕೊಂಡರು.


ಆದ್ದರಿಂದ ನೂನನ ಮಗನಾದ ಯೆಹೋಶುವನು ಯಾಜಕರನ್ನು ಕರೆದು ಅವರಿಗೆ, “ನೀವು ಒಡಂಬಡಿಕೆಯ ಮಂಜೂಷವನ್ನು ಎತ್ತಿಕೊಳ್ಳಿರಿ. ಏಳುಮಂದಿ ಯಾಜಕರು ಏಳು ಟಗರು ಕೊಂಬುಗಳ ತುತೂರಿಗಳೊಂದಿಗೆ ಯೆಹೋವ ದೇವರ ಮಂಜೂಷದ ಮುಂದೆ ಹೋಗಲಿ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು