Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 3:7 - ಕನ್ನಡ ಸಮಕಾಲಿಕ ಅನುವಾದ

7 ಯೆಹೋವ ದೇವರು ಯೆಹೋಶುವನಿಗೆ, “ನಾನು ಮೋಶೆಯ ಸಂಗಡ ಇದ್ದ ಪ್ರಕಾರ, ನಿನ್ನ ಸಂಗಡ ಇರುವುದನ್ನು ಇಸ್ರಾಯೇಲರೆಲ್ಲರೂ ತಿಳಿಯುವಂತೆ, ನಾನು ಈ ದಿನ ನಿನ್ನನ್ನು ಅವರ ಮುಂದೆ ಉನ್ನತಗೊಳಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಗ ಯೆಹೋವನು ಯೆಹೋಶುವನಿಗೆ “ನಾನು ಈ ದಿನ ನಿನ್ನನ್ನು ಇಸ್ರಾಯೇಲ್ಯರೆಲ್ಲರ ಮುಂದೆ ಘನಪಡಿಸುವೆನು; ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡಲೂ ಇರುವೆನೆಂದು ಅವರಿಗೆ ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆಗ ಸರ್ವೇಶ್ವರ, ಯೆಹೋಶುವನಿಗೆ: “ನಾನು ಇಂದಿನಿಂದ ನಿನ್ನನ್ನು ಇಸ್ರಯೇಲರ ಮುಂದೆ ಮಹಾತ್ಮನನ್ನಾಗಿಸುವೆನು. ನಾನು ಮೋಶೆಯ ಸಂಗಡ ಇದ್ದಹಾಗೆ ನಿನ್ನ ಸಂಗಡವೂ ಇರುವೆನೆಂದು ಅವರಿಗೆ ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆಗ ಯೆಹೋವನು ಯೆಹೋಶುವನಿಗೆ - ನಾನು ಇಂದಿನಿಂದ ನಿನ್ನನ್ನು ಇಸ್ರಾಯೇಲ್ಯರೆಲ್ಲರ ಮುಂದೆ ಘನಪಡಿಸುವೆನು; ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡಲೂ ಇರುವೆನೆಂಬದು ಅವರಿಗೆ ಗೊತ್ತಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆಗ ಯೆಹೋವನು ಯೆಹೋಶುವನಿಗೆ, “ನಾನು ನಿನ್ನನ್ನು ಇಂದಿನಿಂದ ಎಲ್ಲಾ ಇಸ್ರೇಲರ ಮುಂದೆ ಘನವಂತನನ್ನಾಗಿ ಮಾಡುವೆನು. ನಾನು ಮುಂಚೆ ಮೋಶೆಯ ಸಂಗಡ ಇದ್ದಂತೆಯೇ ನಿನ್ನ ಸಂಗಡವೂ ಇದ್ದೇನೆಂಬುದು ಆಗ ಜನರಿಗೆ ತಿಳಿಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 3:7
13 ತಿಳಿವುಗಳ ಹೋಲಿಕೆ  

ಆ ದಿನದಲ್ಲಿ ಯೆಹೋವ ದೇವರು ಯೆಹೋಶುವನನ್ನು ಇಸ್ರಾಯೇಲರೆಲ್ಲರ ಮುಂದೆ ಘನಪಡಿಸಿದರು. ಅವರು ಮೋಶೆಯನ್ನು ಗೌರವಿಸಿದ ಹಾಗೆಯೇ, ಅವನಿಗೂ ಅವನು ಬದುಕಿದ ದಿನಗಳಲ್ಲೆಲ್ಲಾ ಗೌರವ ಕೊಟ್ಟರು.


ನೀನು ಜೀವಿಸುವ ದಿವಸಗಳಲ್ಲೆಲ್ಲಾ ಒಬ್ಬನೂ ನಿನ್ನ ಮುಂದೆ ನಿಲ್ಲನು. ನಾನು ಮೋಶೆಯ ಸಂಗಡ ಇದ್ದ ಹಾಗೆಯೇ ನಿನ್ನ ಸಂಗಡ ಇರುವೆನು. ನಾನು ನಿನ್ನನ್ನು ಮರೆಯುವುದಿಲ್ಲ, ನಿನ್ನನ್ನು ತೊರೆಯುವುದಿಲ್ಲ.


ಇದಲ್ಲದೆ ಯೆಹೋವ ದೇವರು ಸಮಸ್ತ ಇಸ್ರಾಯೇಲಿನ ಸಮ್ಮುಖದಲ್ಲಿ ಸೊಲೊಮೋನನನ್ನು ಅಧಿಕವಾಗಿ ಹೆಚ್ಚಿಸಿ, ಇಸ್ರಾಯೇಲಿನಲ್ಲಿ ಅವನಿಗಿಂತ ಮುಂಚೆ ಇದ್ದ ಯಾವ ಅರಸನಿಗಾದರೂ ಇಲ್ಲದಂಥ ರಾಜ್ಯದ ವೈಭವವನ್ನು ಅವನಿಗೆ ಕೊಟ್ಟರು.


ನಿಮ್ಮ ರಕ್ಷಣೆಯ ಸಹಾಯವನ್ನು ನನಗೆ ಗುರಾಣಿಯನ್ನಾಗಿ ಮಾಡಿದ್ದೀರಿ. ನಿಮ್ಮ ಬಲಗೈ ನನಗೆ ಆಧಾರವಾಗಿದೆ; ನಿಮ್ಮ ಸಹಾಯವು ನನ್ನನ್ನು ಘನವಂತನನ್ನಾಗಿ ಮಾಡಿದೆ.


ನಾವು ಮೋಶೆಯ ಎಲ್ಲಾ ಮಾತು ಕೇಳಿದ ಹಾಗೆಯೇ ನಿನ್ನ ಮಾತು ಕೇಳುವೆವು. ನಿನ್ನ ದೇವರಾದ ಯೆಹೋವ ದೇವರು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡವೂ ಇರಲಿ.


“ದೇವರೇ, ಮಾನವನು ಎಷ್ಟರವನು? ನೀವು ಮಾನವನಿಗೆ ಬಹು ಗೌರವ ಕೊಡುತ್ತೀರಿ, ಅವನ ಕಡೆಗೆ ಗಮನಹರಿಸುತ್ತೀರಿ.


ದಾವೀದನ ಮಗ ಸೊಲೊಮೋನನು ತನ್ನ ರಾಜ್ಯದಲ್ಲಿ ಬಲಗೊಂಡನು ಮತ್ತು ಅವನ ದೇವರಾದ ಯೆಹೋವ ದೇವರು ಅವನ ಸಂಗಡ ಇದ್ದು, ಅವನನ್ನು ಉನ್ನತನನ್ನಾಗಿ ಮಾಡಿದರು.


ಯೇಸು ಇಷ್ಟೆಲ್ಲಾ ಮಾತನಾಡಿ ಆಕಾಶದ ಕಡೆಗೆ ಕಣ್ಣೆತ್ತಿ ನೋಡಿ, “ತಂದೆಯೇ, ಸಮಯ ಬಂದಿದೆ. ನಿಮ್ಮ ಪುತ್ರನು ನಿಮ್ಮನ್ನು ಮಹಿಮೆಪಡಿಸುವುದಕ್ಕಾಗುವಂತೆ ಆತನನ್ನು ಮಹಿಮೆಪಡಿಸಿರಿ.


ಹೇಗೆಂದರೆ, ನಾನು ಯಾವ ವಿಷಯದಲ್ಲೂ ನಾಚಿಕೆಪಡದೆ ಎಂದಿನಂತೆ ಈಗಲೂ ಪೂರ್ಣ ಧೈರ್ಯದಿಂದಿರುವಂತೆಯೇ ಬದುಕಿದರೂ ಸತ್ತರೂ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂಬುದೇ ನನ್ನ ಬಯಕೆಯೂ ನಿರೀಕ್ಷೆಯೂ ಆಗಿದೆ.


ಆಗ ಯೆಹೋಶುವನು ಯಾಜಕರಿಗೆ, “ನೀವು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರಿಗೆ ಮುಂದಾಗಿ ಹೋಗಿರಿ,” ಎಂದನು. ಹಾಗೆಯೇ ಅವರು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರ ಮುಂದೆ ಹೊರಟರು.


ನೀನು ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರಿಗೆ ಯೊರ್ದನ್ ನದಿಯ ಅಂಚಿಗೆ ಬಂದಾಗ, ಅಲ್ಲೇ ನಿಲ್ಲಬೇಕೆಂದು ಆಜ್ಞಾಪಿಸು,” ಎಂದರು.


ನಾನು ನಿನಗೆ ಆಜ್ಞಾಪಿಸಿದ್ದೇನಲ್ಲಾ, ಬಲಿಷ್ಠನಾಗಿರು. ಧೈರ್ಯದಿಂದಿರು, ಭಯಪಡಬೇಡ, ನಿರುತ್ಸಾಹಗೊಳ್ಳಬೇಡ. ಏಕೆಂದರೆ ನೀನು ಹೋಗುವ ಕಡೆಯೆಲ್ಲಾ ನಿನ್ನ ದೇವರಾದ ಯೆಹೋವ ದೇವರು ನಿನ್ನ ಸಂಗಡ ಇದ್ದಾರೆ,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು