Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 3:8 - ಕನ್ನಡ ಸಮಕಾಲಿಕ ಅನುವಾದ

8 ನೀನು ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರಿಗೆ ಯೊರ್ದನ್ ನದಿಯ ಅಂಚಿಗೆ ಬಂದಾಗ, ಅಲ್ಲೇ ನಿಲ್ಲಬೇಕೆಂದು ಆಜ್ಞಾಪಿಸು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನ್ ನದಿಯ ಅಂಚಿಗೆ ಬಂದ ಕೂಡಲೆ ಅಲ್ಲೇ ನಿಲ್ಲಬೇಕೆಂದು ಆಜ್ಞಾಪಿಸು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಜೋರ್ಡನ್ ನದಿಯ ಅಂಚಿಗೆ ಬಂದ ಕೂಡಲೆ ಅಲ್ಲೇ ನಿಲ್ಲಬೇಕೆಂದು ಆಜ್ಞಾಪಿಸು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನ್ ಹೊಳೆಯ ಅಂಚಿಗೆ ಬಂದ ಕೂಡಲೆ ಅಲ್ಲೇ ನಿಲ್ಲಬೇಕೆಂದು ಆಜ್ಞಾಪಿಸು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗುತ್ತಿರುವ ಯಾಜಕರಿಗೆ, ‘ನೀವು ಜೋರ್ಡನ್ ನದಿಯ ತೀರಕ್ಕೆ ಹೋಗಿ, ನೀರಿನೊಳಗೆ ಕಾಲಿಡದೆ ಅದರ ಅಂಚಿನಲ್ಲೇ ನಿಂತುಕೊಳ್ಳಿರಿ’ ಎಂದು ಹೇಳು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 3:8
20 ತಿಳಿವುಗಳ ಹೋಲಿಕೆ  

ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ಯೊರ್ದನ್ ನದಿಯ ಮಧ್ಯದಲ್ಲಿ ಒಣನೆಲದಲ್ಲಿ ದೃಢವಾಗಿ ನಿಂತಿದ್ದರು. ಅಷ್ಟರಲ್ಲಿ ಇಸ್ರಾಯೇಲರೆಲ್ಲರೂ ಒಣನೆಲದ ಮೇಲೆ ನಡೆದರು. ಹೀಗೆ ಇಡೀ ರಾಷ್ಟ್ರವು ಯೊರ್ದನ್ ನದಿ ಆಚೆ ಸೇರಿತು.


ಜನರಿಗೆ ಆಜ್ಞಾಪಿಸಿ, “ಯಾಜಕರಾದ ಲೇವಿಯರು ನಿಮ್ಮ ದೇವರಾದ ಯೆಹೋವ ದೇವರ ಒಡಂಬಡಿಕೆಯ ಮಂಜೂಷ ಹೊರುವುದನ್ನು ಕಾಣುವಾಗ ನೀವು ನಿಮ್ಮ ಸ್ಥಳದಿಂದ ಹೊರಟು ಅದರ ಹಿಂದೆ ಹೋಗಬೇಕು.


ಮನುಷ್ಯನು ಮೌನವಾಗಿ ಯೆಹೋವ ದೇವರ ರಕ್ಷಣೆಗೆ ಕಾಯುವುದು ಒಳ್ಳೆಯದು.


ಮಹಾಯಾಜಕನಾದ ಎಲ್ಯಾಷೀಬನ ಮಗ ಯೋಯಾದನ ಮಕ್ಕಳಲ್ಲಿ ಒಬ್ಬನು ಹೋರೋನಿನವನಾದ ಸನ್ಬಲ್ಲಟನಿಗೆ ಅಳಿಯನಾದ ಕಾರಣ ನಾನು ಅವನನ್ನು ನನ್ನ ಬಳಿಯಿಂದ ಓಡಿಸಿಬಿಟ್ಟೆನು.


ಆಗ ಲೇವಿಯರು ತಮ್ಮನ್ನು ಶುಚಿ ಮಾಡಿಕೊಂಡು ಬಂದು ಸಬ್ಬತ್ ದಿನವನ್ನು ಪರಿಶುದ್ಧವಾಗಿ ಆಚರಿಸಬೇಕೆಂದೂ, ಬಾಗಿಲುಗಳನ್ನು ಕಾಯಬೇಕೆಂದೂ ಅವರಿಗೆ ಹೇಳಿದೆನು. ನನ್ನ ದೇವರೇ, ಇದಕ್ಕಾಗಿ ಸಹ ನೀವು ನನ್ನನ್ನು ನೆನಸಿ, ನಿಮ್ಮ ಮಹಾ ಪ್ರೀತಿಯ ಪ್ರಕಾರ ನನ್ನನ್ನು ಕರುಣಿಸಿರಿ.


ಇದಲ್ಲದೆ ಯೆಹೋವ ದೇವರ ವಾಕ್ಯದಿಂದ ಉಂಟಾದ ಅರಸನ ಪ್ರಧಾನರ ಆಜ್ಞೆಯನ್ನು ಕೈಗೊಳ್ಳಲು ಅವರಿಗೆ ಒಂದೇ ಹೃದಯವನ್ನು ಕೊಡಲು ದೇವರ ಕೈ ಯೆಹೂದದವರ ಮೇಲೆ ಇತ್ತು.


ಇದಲ್ಲದೆ ಅರಸನಾದ ಹಿಜ್ಕೀಯನೂ, ಪ್ರಧಾನರೂ ದಾವೀದನ ಮಾತುಗಳಿಂದಲೂ, ಆಸಾಫನ ಕೀರ್ತನೆಗಳಿಂದಲೂ ಯೆಹೋವ ದೇವರನ್ನು ಸ್ತುತಿಸಬೇಕೆಂದು ಲೇವಿಯರಿಗೆ ಹೇಳಿದರು. ಆಗ ಅವರು ಸಂತೋಷವಾಗಿ ಸ್ತುತಿಸಿ ಮೊಣಕಾಲೂರಿಕೊಂಡು ಆರಾಧಿಸಿದರು.


ಹಿಜ್ಕೀಯನು ಬಲಿಪೀಠದ ಮೇಲೆ ದಹನಬಲಿಯನ್ನು ಅರ್ಪಿಸಲು ಹೇಳಿದನು. ದಹನಬಲಿಯನ್ನು ಅರ್ಪಿಸಲು ಆರಂಭಿಸಿದಾಗ ತುತೂರಿಗಳಿಂದಲೂ, ಇಸ್ರಾಯೇಲಿನ ಅರಸನಾದ ದಾವೀದನ ವಾದ್ಯಗಳಿಂದಲೂ ಯೆಹೋವ ದೇವರ ಹಾಡು ಆರಂಭವಾಯಿತು.


ಇವರು ಅರಸನ ಆಜ್ಞಾಧಾರಕರಾಗಿ ಯೆಹೋವ ದೇವರ ವಾಕ್ಯವನ್ನು ಅನುಸರಿಸಿ, ತಮ್ಮ ಸಹೋದರರನ್ನು ಕೂಡಿಸಿ, ತಮ್ಮನ್ನು ಪ್ರತಿಷ್ಠೆ ಮಾಡಿಕೊಂಡು, ಯೆಹೋವ ದೇವರ ಆಲಯವನ್ನು ಶುಚಿಮಾಡಲು ಬಂದರು.


ಅದಕ್ಕೆ ಮೋಶೆಯು ಜನರಿಗೆ, “ನೀವು ಭಯಪಡಬೇಡಿರಿ, ದೃಢವಾಗಿ ನಿಲ್ಲಿರಿ. ಯೆಹೋವ ದೇವರು ನಿಮಗೆ ಈ ಹೊತ್ತು ತೋರಿಸುವ ರಕ್ಷಣೆಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಈಜಿಪ್ಟಿನವರನ್ನು ಇನ್ನು ಮುಂದೆ ಎಂದೆಂದಿಗೂ ನೋಡುವುದಿಲ್ಲ.


ಯೆಹೋವ ದೇವರು ಯೆಹೋಶುವನಿಗೆ, “ನಾನು ಮೋಶೆಯ ಸಂಗಡ ಇದ್ದ ಪ್ರಕಾರ, ನಿನ್ನ ಸಂಗಡ ಇರುವುದನ್ನು ಇಸ್ರಾಯೇಲರೆಲ್ಲರೂ ತಿಳಿಯುವಂತೆ, ನಾನು ಈ ದಿನ ನಿನ್ನನ್ನು ಅವರ ಮುಂದೆ ಉನ್ನತಗೊಳಿಸುವೆನು.


ಆಗ ಯೆಹೋಶುವನು ಇಸ್ರಾಯೇಲರಿಗೆ, “ನೀವು ಇಲ್ಲಿಗೆ ಬಂದು ನಿಮ್ಮ ದೇವರಾದ ಯೆಹೋವ ದೇವರ ವಾಕ್ಯಗಳನ್ನು ಕೇಳಿರಿ.


ಎಲೀಯನು ಅವನಿಗೆ, “ನೀನು ದಯಮಾಡಿ ಇಲ್ಲೇ ಇರು. ಯೆಹೋವ ದೇವರು ನನ್ನನ್ನು ಯೊರ್ದನಿಗೆ ಕಳುಹಿಸುತ್ತಿದ್ದಾರೆ,” ಎಂದನು. ಅದಕ್ಕವನು, “ಯೆಹೋವ ದೇವರ ಜೀವದಾಣೆ, ನನ್ನ ಪ್ರಾಣದ ಜೀವದಾಣೆ, ನಾನು ನಿನ್ನನ್ನು ಬಿಡುವುದಿಲ್ಲ,” ಎಂದನು. ಹಾಗೆಯೇ ಅವರಿಬ್ಬರೂ ಮುಂದಕ್ಕೆ ನಡೆದರು.


ಜನರೆಲ್ಲರೂ ಆಚೆಗೆ ದಾಟಿದ ಮೇಲೆ ಯೆಹೋವ ದೇವರ ಮಂಜೂಷವೂ ಯಾಜಕರೂ ಜನರ ಎದುರಿನಲ್ಲಿ ದಾಟಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು