Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 4:5 - ಕನ್ನಡ ಸಮಕಾಲಿಕ ಅನುವಾದ

5 ಯೆಹೋಶುವನು ಅವರಿಗೆ, “ನೀವು ಯೊರ್ದನ್ ನದಿ ಮಧ್ಯದಲ್ಲಿ ನಿಮ್ಮ ದೇವರಾದ ಯೆಹೋವ ದೇವರ ಮಂಜೂಷದ ಮುಂದೆ ಇಸ್ರಾಯೇಲರ ಗೋತ್ರಗಳ ಲೆಕ್ಕಕ್ಕೆ ಸರಿಯಾಗಿ ಒಬ್ಬೊಬ್ಬನೂ ಒಂದೊಂದು ಕಲ್ಲನ್ನು ಭುಜದ ಮೇಲೆ ಹೊತ್ತುಕೊಂಡು ಬನ್ನಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 “ನೀವು ನಿಮ್ಮ ದೇವರಾದ ಯೆಹೋವನ ಮಂಜೂಷದ ಮುಂದಾಗಿ ಯೊರ್ದನಿನ ಮಧ್ಯಕ್ಕೆ ಹೋಗಿ ಇಸ್ರಾಯೇಲರ ಕುಲಗಳ ಸಂಖ್ಯೆಗೆ ಸರಿಯಾಗುವಂತೆ ಪ್ರತಿಯೊಬ್ಬನು ಒಂದೊಂದು ಕಲ್ಲನ್ನು ಹೆಗಲ ಮೇಲೆ ಹೊತ್ತುಕೊಂಡು ಬನ್ನಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 “ನೀವು ನಮ್ಮ ದೇವರಾದ ಸರ್ವೇಶ್ವರನ ಮಂಜೂಷದ ಮುಂದಾಗಿ ಜೋರ್ಡನಿನ ಮಧ್ಯಕ್ಕೆ ಹೋಗಿ ಇಸ್ರಯೇಲ್ ಕುಲಗಳ ಸಂಖ್ಯೆಗೆ ಸರಿಯಾಗಿ ಪ್ರತಿಯೊಬ್ಬನು ಒಂದೊಂದು ಕಲ್ಲನ್ನು ಹೆಗಲ ಮೇಲೆ ಹೊತ್ತುಕೊಂಡು ಬನ್ನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನೀವು ನಿಮ್ಮ ದೇವರಾದ ಯೆಹೋವನ ಮಂಜೂಷದ ಮುಂದಾಗಿ ಯೊರ್ದನಿನ ಮಧ್ಯಕ್ಕೆ ಹೋಗಿ ಇಸ್ರಾಯೇಲ್ ಕುಲಗಳ ಸಂಖ್ಯೆಗೆ ಸರಿಯಾಗುವಂತೆ ಪ್ರತಿಯೊಬ್ಬನು ಒಂದೊಂದು ಕಲ್ಲನ್ನು ಹೆಗಲ ಮೇಲೆ ಹೊತ್ತುಕೊಂಡು ಬನ್ನಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ನದಿಯಲ್ಲಿ ನಿಮ್ಮ ದೇವರಾದ ಯೆಹೋವನ ಪವಿತ್ರ ಪೆಟ್ಟಿಗೆ ಇರುವ ಸ್ಥಳಕ್ಕೆ ಹೋಗಿ. ನಿಮ್ಮಲ್ಲಿ ಪ್ರತಿಯೊಬ್ಬರೂ ಒಂದೊಂದು ಕಲ್ಲನ್ನು ಹೆಗಲ ಮೇಲೆ ಹೊತ್ತುಕೊಂಡು ಬನ್ನಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 4:5
7 ತಿಳಿವುಗಳ ಹೋಲಿಕೆ  

ಆಗ ಯೆಹೋಶುವನು ಇಸ್ರಾಯೇಲರಲ್ಲಿ ಒಂದೊಂದು ಗೋತ್ರಕ್ಕೆ ಒಬ್ಬೊಬ್ಬನ ಪ್ರಕಾರ ತಾನು ಆರಿಸಿಕೊಂಡ ಹನ್ನೆರಡು ಮಂದಿ ಗಂಡಸರನ್ನು ಕರೆದನು.


ಏಕೆಂದರೆ ಇದು ನಿಮ್ಮ ಮಧ್ಯದಲ್ಲಿ ಗುರುತಾಗಿರಬೇಕು. ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳು ನಿಮ್ಮನ್ನು, ‘ಈ ಕಲ್ಲುಗಳೇನು?’ ಎಂದು ಕೇಳುವಾಗ,


ಯಾಕೋಬನು ತನ್ನ ಕಡೆಯವರಿಗೆ, “ಕಲ್ಲುಗಳನ್ನು ಕೂಡಿಸಿರಿ,” ಎಂದನು. ಅವರು ಕಲ್ಲುಗಳನ್ನು ತೆಗೆದುಕೊಂಡು ಒಂದು ಕುಪ್ಪೆ ಮಾಡಿದರು. ಅವರು ಆ ಕುಪ್ಪೆಯ ಬಳಿಯಲ್ಲಿ ಕುಳಿತುಕೊಂಡು ಊಟಮಾಡಿದರು.


ಮೋಶೆಯು ಯೆಹೋವ ದೇವರು ಪ್ರಕಟಪಡಿಸಿದ ಮಾತುಗಳನ್ನೆಲ್ಲಾ ಬರೆದಿಟ್ಟನು. ಅವನು ಮರುದಿನ ಬೆಳಿಗ್ಗೆ ಎದ್ದು ಬೆಟ್ಟದ ಕೆಳಗೆ ಬಲಿಪೀಠವನ್ನು ಕಟ್ಟಿಸಿ, ಇಸ್ರಾಯೇಲಿನ ಹನ್ನೆರಡು ಗೋತ್ರಗಳಿಗನುಸಾರವಾಗಿ ಹನ್ನೆರಡು ಸ್ತಂಭಗಳನ್ನು ನಿಲ್ಲಿಸಿದನು.


ಇಸ್ರಾಯೇಲರೇ, ಕೇಳಿರಿ, ನೀವು ಹೋಗಿ ನಿಮಗಿಂತ ದೊಡ್ಡ, ಬಲಿಷ್ಠ ಜನಾಂಗಗಳನ್ನೂ, ಆಕಾಶದವರೆಗೆ ಭದ್ರಮಾಡಿದ ದೊಡ್ಡ ಪಟ್ಟಣಗಳನ್ನೂ ಸ್ವಾಧೀನಮಾಡಿಕೊಳ್ಳುವುದಕ್ಕೆ ಈ ಹೊತ್ತು ಯೊರ್ದನ್ ನದಿಯನ್ನು ದಾಟಲಿದ್ದೀರಿ.


ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ದೇಶಕ್ಕೆ ನೀವು ಯೊರ್ದನನ್ನು ದಾಟಿ ಪ್ರವೇಶಿಸುವಾಗ, ದೊಡ್ಡ ಕಲ್ಲುಗಳನ್ನು ನಿಲ್ಲಿಸಿ, ಅವುಗಳಿಗೆ ಗಿಲಾವು ಮಾಡಿಸಿ,


ರೂಬೇನ್ಯರೂ ಗಾದ್ಯರೂ ಮನಸ್ಸೆಯ ಅರ್ಧ ಗೋತ್ರದವರು ಕಾನಾನ್ ದೇಶದಲ್ಲಿರುವ ಯೊರ್ದನ್ ನದಿ ಪ್ರಾಂತಕ್ಕೆ ಬಂದಾಗ, ಅಲ್ಲಿ ದೊಡ್ಡ ಬಲಿಪೀಠವನ್ನು ಕಟ್ಟಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು