Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 4:7 - ಕನ್ನಡ ಸಮಕಾಲಿಕ ಅನುವಾದ

7 ನೀವು ಅವರಿಗೆ, ‘ಯೆಹೋವ ದೇವರ ಒಡಂಬಡಿಕೆಯ ಮಂಜೂಷದ ಮುಂದೆ ಯೊರ್ದನ್ ನದಿಯ ನೀರು ವಿಭಾಗವಾಯಿತು. ಒಡಂಬಡಿಕೆಯ ಮಂಜೂಷವು ಯೊರ್ದನ್ ನದಿಯನ್ನು ದಾಟುವಾಗ, ಯೊರ್ದನ್ ನದಿಯ ನೀರು ನಿಂತುಹೋಯಿತು. ಈ ಕಲ್ಲುಗಳು ಇಸ್ರಾಯೇಲರಿಗೆ ಎಂದೆಂದಿಗೂ ಜ್ಞಾಪಕಾರ್ಥವಾದ ಗುರುತು,’ ಎಂದು ಉತ್ತರಕೊಡಬೇಕು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನೀವು ಅವರಿಗೆ ಯೆಹೋವನ ಒಡಂಬಡಿಕೆಯ ಮಂಜೂಷವು ಯೊರ್ದನ್ ನದಿ ದಾಟುವಾಗ ಅದರ ಮುಂದೆ ಯೊರ್ದನಿನ ನೀರು ನಿಂತುಹೋಯಿತೆಂದು ಹೇಳಿರಿ. ಯೊರ್ದನಿನ ನೀರು ನಿಂತು ಹೋಯಿತೆಂಬುದಕ್ಕೆ ಈ ಕಲ್ಲುಗಳು ಇಸ್ರಾಯೇಲ್ಯರಿಗೆ ಸದಾಕಾಲಕ್ಕೂ ಸಾಕ್ಷಿಗಳಾಗಿರುವವು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ‘ಸರ್ವೇಶ್ವರನ ಒಡಂಬಡಿಕೆಯ ಮಂಜೂಷವು ಜೋರ್ಡನನ್ನು ದಾಟುವಾಗ ಅದರ ಮುಂದೆ ಜೋರ್ಡನಿನ ನೀರು ನಿಂತುಹೋಯಿತು,’ ಎಂದು ಹೇಳಿರಿ. ಅದರ ನೀರು ನಿಂತುಹೋಯಿತೆಂಬುದಕ್ಕೆ ಈ ಕಲ್ಲುಗಳು ಇಸ್ರಯೇಲರಿಗೆ ಚಿರಸ್ಮಾರಕಗಳಾಗಿರುವುವು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನೀವು ಅವರಿಗೆ - ಯೆಹೋವನ ಒಡಂಬಡಿಕೆಯ ಮಂಜೂಷವು ಯೊರ್ದನನ್ನು ದಾಟುವಾಗ ಅದರ ಮುಂದೆ ಯೊರ್ದನಿನ ನೀರು ನಿಂತುಹೋಯಿತೆಂದು ಹೇಳಿರಿ. ಯೊರ್ದನಿನ ನೀರು ನಿಂತುಹೋಯಿತೆಂಬದಕ್ಕೆ ಈ ಕಲ್ಲುಗಳು ಇಸ್ರಾಯೇಲ್ಯರಿಗೆ ಸದಾಕಾಲವೂ ಸಾಕ್ಷಿಗಳಾಗಿರುವವು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅದಕ್ಕೆ ನೀವು, ‘ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯು ಜೋರ್ಡನ್ ನದಿಯನ್ನು ದಾಟುತ್ತಿರುವಾಗ ಹರಿಯುವ ನೀರು ನಿಂತುಹೋಯಿತು’ ಎಂದು ಹೇಳಿರಿ. ಆ ಕಲ್ಲುಗಳು ಇಸ್ರೇಲರಿಗೆ ಸದಾಕಾಲ ಸಾಕ್ಷಿಗಳಾಗಿರುತ್ತವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 4:7
11 ತಿಳಿವುಗಳ ಹೋಲಿಕೆ  

“ಈ ದಿನವು ನಿಮಗೆ ಜ್ಞಾಪಕಾರ್ಥವಾಗಿರುವುದು. ನೀವು ಅದನ್ನು ಯೆಹೋವ ದೇವರಿಗೆ ಹಬ್ಬವಾಗಿ ತಲತಲಾಂತರಗಳಲ್ಲಿ ಆಚರಿಸಬೇಕು. ಅದನ್ನು ಶಾಶ್ವತ ನಿಯಮವೆಂದು ಎಂದೆಂದಿಗೂ ಆಚರಿಸಬೇಕು.


ದೇವರು ತಮ್ಮ ಅದ್ಭುತಗಳ ಜ್ಞಾಪಕವನ್ನು ಉಳಿದಿರುವಂತೆ ಮಾಡಿದ್ದಾರೆ; ಯೆಹೋವ ದೇವರು ಕೃಪೆಯೂ, ಅನುಕಂಪವೂ ಉಳ್ಳವರು.


ಆರೋನನ ಸಂತಾನವಲ್ಲದ ಪರಕೀಯನು ಯೆಹೋವ ದೇವರ ಸಮ್ಮುಖದಲ್ಲಿ ಧೂಪವನ್ನು ಅರ್ಪಿಸಬಾರದು, ಅರ್ಪಿಸಿದರೆ ಕೋರಹ ಮತ್ತು ಅವನ ಸಮೂಹಕ್ಕೆ ಆದ ಸ್ಥಿತಿಯೇ ಇವರಿಗೂ ಉಂಟಾಗುವುದೆಂಬುದನ್ನು ಇಸ್ರಾಯೇಲರಿಗೆ ಜ್ಞಾಪಿಸುವದಕ್ಕಾಗಿ ಅದು ಗುರುತಾಯಿತು.


ಆ ಎರಡು ರತ್ನಗಳನ್ನು ಏಫೋದಿನ ಹೆಗಲಿನ ಭಾಗದ ಮೇಲೆ ಇಸ್ರಾಯೇಲರ ಜ್ಞಾಪಕಾರ್ಥವಾದ ರತ್ನಗಳಾಗಿ ಇಡಬೇಕು. ಆರೋನನು ತನ್ನ ಎರಡು ಹೆಗಲುಗಳ ಮೇಲೆ ಅವರ ಹೆಸರುಗಳನ್ನು ಯೆಹೋವ ದೇವರ ಸನ್ನಿಧಿಯಲ್ಲಿ ಜ್ಞಾಪಕಾರ್ಥವಾಗಿ ಹೊರಬೇಕು.


ಸ್ತೋತ್ರಮಾಡಿ ಮುರಿದು, “ಇದು ನಿಮಗೋಸ್ಕರವಾಗಿರುವ ನನ್ನ ದೇಹ, ನನ್ನ ನೆನಪಿಗಾಗಿ ನೀವು ಇದನ್ನು ಮಾಡಿರಿ,” ಎಂದರು.


ಎತ್ತನ್ನು ಕೊಂದುಹಾಕುವವನು ಮನುಷ್ಯನನ್ನು ಹತ್ಯೆ ಮಾಡುವವನ ಹಾಗಿದ್ದಾನೆ. ಕುರಿಮರಿಯನ್ನು ಬಲಿ ಕೊಡುವವನು, ನಾಯಿಯ ಕುತ್ತಿಗೆಯನ್ನು ಕಡಿಯುವವನ ಹಾಗಿದ್ದಾನೆ. ಕಾಣಿಕೆಯನ್ನು ಅರ್ಪಿಸುವವನು, ಹಂದಿಯ ರಕ್ತವನ್ನು ಅರ್ಪಿಸುವವನ ಹಾಗಿದ್ದಾನೆ. ಧೂಪವನ್ನು ಹಾಕುವವನು, ವಿಗ್ರಹವನ್ನು ಪೂಜಿಸುವವನ ಹಾಗಿದ್ದಾನೆ. ಹೀಗೆ, ಅವರು ಸ್ವಂತ ಮಾರ್ಗಗಳನ್ನು ಆಯ್ದುಕೊಂಡಿದ್ದಾರೆ. ಅವರ ಪ್ರಾಣವು ಅವರ ಅಸಹ್ಯಗಳಲ್ಲಿ ಹರ್ಷಿಸುತ್ತವೆ.


ಏಕೆಂದರೆ ಇದು ನಿಮ್ಮ ಮಧ್ಯದಲ್ಲಿ ಗುರುತಾಗಿರಬೇಕು. ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳು ನಿಮ್ಮನ್ನು, ‘ಈ ಕಲ್ಲುಗಳೇನು?’ ಎಂದು ಕೇಳುವಾಗ,


ಪ್ರಾಯಶ್ಚಿತ್ತದ ಹಣವನ್ನು ಇಸ್ರಾಯೇಲರಿಂದ ತೆಗೆದುಕೊಂಡು ದೇವದರ್ಶನದ ಗುಡಾರದ ಕೆಲಸಕ್ಕಾಗಿ ಪ್ರತ್ಯೇಕಿಸಬೇಕು. ಇದೇ ಯೆಹೋವ ದೇವರ ಮುಂದೆ ಇಸ್ರಾಯೇಲರಿಗೆ ಜ್ಞಾಪಕಾರ್ಥಕ್ಕಾಗಿಯೂ ಅವರ ಪ್ರಾಯಶ್ಚಿತ್ತಕ್ಕಾಗಿಯೂ ಇರುವುದು,” ಎಂದರು.


ನಾನು ಯಾವನನ್ನು ಆಯ್ದುಕೊಳ್ಳುತ್ತೇನೋ, ಆ ಮನುಷ್ಯನ ಕೋಲು ಚಿಗುರುವುದು. ಹೀಗೆ ಇಸ್ರಾಯೇಲರು ನಿಮಗೆ ವಿರೋಧವಾಗಿ ಗೊಣಗುಟ್ಟುವುದನ್ನು ನಾನು ನಿಲ್ಲಿಸಿಬಿಡುವೆನು,” ಎಂದರು.


ಅದರೊಂದಿಗೆ ಹುಳಿರೊಟ್ಟಿಯನ್ನು ತಿನ್ನಬಾರದು. ಏಳು ದಿವಸ ಹುಳಿಯಿಲ್ಲದ ಶ್ರಮೆಯ ರೊಟ್ಟಿಗಳನ್ನು ತಿನ್ನಬೇಕು. ಏಕೆಂದರೆ ತ್ವರೆಯಾಗಿ ಈಜಿಪ್ಟ್ ದೇಶದೊಳಗಿಂದ ನೀವು ಹೊರಗೆ ಬಂದದ್ದರಿಂದ ನೀವು ಜೀವಿಸುವ ದಿವಸಗಳಲ್ಲೆಲ್ಲಾ ಇದನ್ನು ಜ್ಞಾಪಕಮಾಡಿಕೊಳ್ಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು