Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 5:1 - ಕನ್ನಡ ಸಮಕಾಲಿಕ ಅನುವಾದ

1 ಇದಾದ ಮೇಲೆ ಯೆಹೋವ ದೇವರು ಇಸ್ರಾಯೇಲರು ದಾಟಿಹೋಗುವವರೆಗೆ ಅವರ ಮುಂದೆ ಯೊರ್ದನ್ ನದಿಯನ್ನು ಒಣಗಿ ಹೋಗುವಂತೆ ಮಾಡಿದ್ದನ್ನು ಯೊರ್ದನ್ ನದಿ ಪಶ್ಚಿಮದ ಆಚೆದಡದಲ್ಲಿ ವಾಸಿಸಿದ್ದ ಅಮೋರಿಯರ ಸಕಲ ಅರಸರು ಮತ್ತು ಸಮುದ್ರದ ಆಚೆಯಲ್ಲಿ ವಾಸಿಸಿದ್ದ ಕಾನಾನ್ಯರ ಸಕಲ ಅರಸರು ಕೇಳಿದಾಗ ಅವರ ಹೃದಯವು ಕುಂದಿಹೋಯಿತು. ಇಸ್ರಾಯೇಲರ ನಿಮಿತ್ತವಾಗಿ ಅವರಿಗೆ ಪ್ರಾಣಹೋದಂತೆ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೊರ್ದನಿನ ಪಶ್ಚಿಮದಲ್ಲಿದ್ದ ಅಮೋರಿಯರ ಎಲ್ಲಾ ಅರಸರು ಮತ್ತು ಸಮುದ್ರದ ಬಳಿಯಲ್ಲಿದ್ದ ಎಲ್ಲಾ ಕಾನಾನ್ಯರ ರಾಜರು, ಯೆಹೋವನು ಇಸ್ರಾಯೇಲ್ಯರ ಮುಂದೆ ಯೊರ್ದನಿನ ಹೊಳೆಯನ್ನು ಬತ್ತಿಸಿ, ಅವರನ್ನು ದಾಟಿಸಿದನೆಂಬ ವಾರ್ತೆ ಕೇಳಲು ಅವರ ಎದೆಯೊಡೆದು ಹೋಯಿತು. ಇಸ್ರಾಯೇಲ್ಯರ ನಿಮಿತ್ತವಾಗಿ ಅವರು ಬಲಗುಂದಿ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಜೋರ್ಡನಿನ ಪಶ್ಚಿಮದಲ್ಲಿದ್ದ ಅಮೋರಿಯರ ಎಲ್ಲ ಅರಸರು ಮತ್ತು ಸಮುದ್ರದ ಬಳಿಯಿದ್ದ ಸರ್ವ ಕಾನಾನ್ ರಾಜರು ಸರ್ವೇಶ್ವರ ಸ್ವಾಮಿ ಇಸ್ರಯೇಲರ ಕಣ್ಮುಂದೆಯೇ ಜೋರ್ಡನನ್ನು ಬತ್ತಿಸಿ ಆ ನದಿ ದಾಟಿಸಿದರೆಂದು ಕೇಳಿದರು. ಆಗ ಅವರ ಎದೆ ಒಡೆದುಕೋಯಿತು. ಇಸ್ರಯೇಲರ ಮುಂದೆ ಅವರಿಗೆ ಧೈರ್ಯವಿಲ್ಲದೆ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೊರ್ದನಿನ ಪಶ್ಚಿಮದಲ್ಲಿದ್ದ ಎಲ್ಲಾ ಅಮೋರಿಯರ ಅರಸರೂ ಸಮುದ್ರದ ಬಳಿಯಲ್ಲಿದ್ದ ಸರ್ವ ಕಾನಾನ್ ರಾಜರೂ ಯೆಹೋವನು ಇಸ್ರಾಯೇಲ್ಯರ ಮುಂದೆ ಯೊರ್ದನನ್ನು ಬತ್ತಿಸಿ ಅವರನ್ನು ದಾಟಿಸಿದನೆಂದು ಕೇಳಲು ಅವರ ಎದೆಯೊಡೆದು ಹೋಯಿತು. ಇಸ್ರಾಯೇಲ್ಯರ ನಿವಿುತ್ತವಾಗಿ ಅವರಿಗೆ ಧೈರ್ಯವಿಲ್ಲವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಇಸ್ರೇಲರು ಜೋರ್ಡನ್ ನದಿಯನ್ನು ದಾಟುವವರೆಗೆ ಯೆಹೋವನು ಆ ನದಿಯನ್ನು ಬತ್ತಿಸಿದನು. ಜೋರ್ಡನ್ ನದಿಯ ಪಶ್ಚಿಮ ದಿಕ್ಕಿನಲ್ಲಿರುವ ಅಮೋರಿಯರ ಅರಸರು ಮತ್ತು ಭೂಮಧ್ಯ ಸಾಗರದ ಹತ್ತಿರವಿರುವ ಕಾನಾನ್ಯರ ಅರಸರು ಈ ಸಂಗತಿಯನ್ನು ಕೇಳಿ ಭಯಗ್ರಸ್ತರಾದರು; ಇಸ್ರೇಲರ ವಿರುದ್ಧವಾಗಿ ಹೋರಾಡುವಷ್ಟು ಧೈರ್ಯವಿಲ್ಲದವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 5:1
32 ತಿಳಿವುಗಳ ಹೋಲಿಕೆ  

ಅಮಾಲೇಕ್ಯರು ದೇಶದ ನೆಗೆವನಲ್ಲಿ ವಾಸವಾಗಿದ್ದಾರೆ. ಹಿತ್ತಿಯರೂ ಯೆಬೂಸಿಯರೂ ಅಮೋರಿಯರೂ ಪರ್ವತಗಳಲ್ಲಿಯೂ; ಕಾನಾನ್ಯರು ಸಮುದ್ರದ ಬಳಿಯಲ್ಲಿಯೂ ಯೊರ್ದನಿನ ತೀರದಲ್ಲಿಯೂ ವಾಸವಾಗಿದ್ದಾರೆ,” ಎಂದರು.


ಅವನ ಮೇಜಿನ ಭೋಜನವನ್ನೂ, ಅವನ ಅಧಿಪತಿಗಳು ಕುಳಿತಿರುವ ರೀತಿಯನ್ನೂ, ಅವನ ಸೇವಕರು ನಿಂತಿರುವುದನ್ನೂ, ಅವರ ವಸ್ತ್ರಗಳನ್ನೂ, ಅವನ ಪಾನದಾಯಕರನ್ನೂ, ಅವನು ಯೆಹೋವ ದೇವರ ಆಲಯದಲ್ಲಿ ಅರ್ಪಿಸಿದ ದಹನಬಲಿಗಳನ್ನೂ ಕಂಡಾಗ ಅವಳು ವಿಸ್ಮಯಗೊಂಡಳು.


ಆಕೆಯ ಯಾತನೆಯ ದೆಸೆಯಿಂದ ಹೆದರಿ, ದೂರದಲ್ಲಿ ನಿಂತು: “ ‘ಅಯ್ಯೋ! ಅಯ್ಯೋ! ಮಹಾನಗರಿಯೇ, ಬಲಿಷ್ಠನಗರಿ ಬಾಬಿಲೋನೇ! ಒಂದೇ ತಾಸಿನಲ್ಲಿ ನಿನಗೆ ತೀರ್ಪಾಯಿತಲ್ಲಾ?’ ಎಂದು ಶೋಕಿಸುವರು.


“ಆದರೂ ನನ್ನ ಜನರೇ, ದೇವದಾರು ಮರದಂತೆ ಎತ್ತರವಾಗಿ, ಅಲ್ಲೋನ್ ಮರದಂತೆ ಬಲಿಷ್ಠರಾಗಿ ಇದ್ದ, ಅಮೋರಿಯರನ್ನು ನಾನು ನಾಶ ಪಡಿಸಿದೆನು. ನಾನು ಮೇಲೆ ಅದರ ಫಲವನ್ನು ಮತ್ತು ಕೆಳಗೆ ಅದರ ಬೇರನ್ನು ಕಿತ್ತು ಹಾಕುವಂತೆ, ಅವರನ್ನು ನಿರ್ಮೂಲ ಮಾಡುವೆನು.


ಆಗ ಅರಸನ ಮುಖವು ಕಳೆಗುಂದಿತು. ಅವನು ತುಂಬಾ ಭಯಭೀತನಾದನು. ಅವನ ಸೊಂಟದ ಕೀಲುಗಳು ಸಡಿಲಗೊಂಡವು. ಮೊಣಕಾಲುಗಳು ಒಂದಕ್ಕೊಂದು ಬಡಿದುಕೊಂಡವು.


‘ನೀನು ಏಕೆ ನರಳಾಡುತ್ತೀ?’ ಎಂದು ಅವರು ನಿನಗೆ ಕೇಳಿದಾಗ, ನೀನು ಹೇಳಬೇಕಾದದ್ದೇನೆಂದರೆ, ‘ಆ ಸುದ್ದಿಯ ನಿಮಿತ್ತವೇ ಅದು ಬರುವುದು. ಏಕೆಂದರೆ ಆಗ ಹೃದಯಗಳೆಲ್ಲಾ ಕರಗುವುವು. ಕೈಗಳೆಲ್ಲಾ ನಿತ್ರಾಣವಾಗುವುವು. ಪ್ರತಿಯೊಂದು ಆತ್ಮವು ಕುಂದುವದು. ಎಲ್ಲಾ ಮೊಣಕಾಲುಗಳು ನೀರಿನಂತೆ ತೇವವಾಗಿರುತ್ತವೆ. ಅದು ಬರುತ್ತದೆ, ಅದು ತರಲಾಗುತ್ತದೆ,’ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”


ಹೀಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಯೆರೂಸಲೇಮಿನವರಿಗೆ ಹೀಗೆ ಹೇಳುತ್ತಾರೆ: ನಿಮ್ಮ ಪೂರ್ವಜರು ಮತ್ತು ನೀನು ಹುಟ್ಟಿದ್ದು ಕಾನಾನ್ ದೇಶದಲ್ಲಿ; ಅದೇ ನಿನ್ನ ಜನ್ಮಭೂಮಿ. ನಿನ್ನ ತಂದೆ ಅಮೋರಿಯನು, ನಿನ್ನ ತಾಯಿ ಹಿತ್ತಿಯಳು.


ಅಮೋರಿಯರ ಅರಸನಾದ ಸೀಹೋನನನ್ನು, ಬಾಷಾನಿನ ಅರಸನಾದ ಓಗನನ್ನೂ, ಕಾನಾನಿನ ಎಲ್ಲಾ ಅರಸರನ್ನೂ ದಂಡಿಸಿದರು.


ಈ ಸಂಗತಿಗಳನ್ನು ಮಾಡಿದ ತರುವಾಯ ಪ್ರಧಾನರು ನನ್ನ ಬಳಿಗೆ ಬಂದು, “ಇಸ್ರಾಯೇಲರೂ, ಯಾಜಕರೂ, ಲೇವಿಯರೂ ತಮ್ಮ ನೆರೆಯವರಿಂದ ಪ್ರತ್ಯೇಕಿಸಿಕೊಳ್ಳಲಿಲ್ಲ. ಅವರು ಕಾನಾನ್ಯರು, ಹಿತ್ತಿಯರು, ಪೆರಿಜೀಯರು, ಯೆಬೂಸಿಯರು, ಅಮ್ಮೋನ್ಯರು, ಮೋವಾಬ್ಯರು, ಈಜಿಪ್ಟರು, ಅಮೋರಿಯರು ಇವರ ಅಸಹ್ಯ ಸಂಗತಿಗಳ ಪದ್ಧತಿಗಳಂತೆ ನಡೆಯುತ್ತಾ ಇದ್ದಾರೆ.


ಆಗ ಅರಸನಾದ ದಾವೀದನು ಗಿಬ್ಯೋನ್ಯರನ್ನು ಕರೆಕಳುಹಿಸಿದನು. ಗಿಬ್ಯೋನ್ಯರು ಇಸ್ರಾಯೇಲರಿಗೆ ಸೇರಿದವರಲ್ಲ. ಅಮೋರಿಯರಲ್ಲಿ ಉಳಿದ ಜನರಾಗಿದ್ದರು. ಅವರನ್ನು ಕೊಲ್ಲುವುದಿಲ್ಲವೆಂದು ಇಸ್ರಾಯೇಲರು ಆಣೆ ಇಟ್ಟಿದ್ದರು. ಆದರೆ ಸೌಲನು ಇಸ್ರಾಯೇಲರಿಗಾಗಿಯೂ, ಯೆಹೂದದವರಿಗಾಗಿಯೂ ತನಗಿದ್ದ ಆಸಕ್ತಿಯಿಂದ ಅವರನ್ನು ಕೊಂದುಹಾಕಲು ಪ್ರಯತ್ನಮಾಡಿದ್ದನು.


ಉದಯದಲ್ಲಿ ನಾಬಾಲನ ದ್ರಾಕ್ಷಾರಸದ ಅಮಲು ಇಳಿದಾಗ, ಅವನ ಹೆಂಡತಿಯು ಈ ಮಾತುಗಳನ್ನು ಅವನಿಗೆ ತಿಳಿಸಲು, ಹೃದಯಾಘಾತವಾಗಿ ಅವನು ಕಲ್ಲಿನ ಹಾಗಾದನು.


“ಈಗ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಅಮೋರಿಯರನ್ನು ತಮ್ಮ ಜನರಾದ ಇಸ್ರಾಯೇಲಿನ ಮುಂದೆ ಹೊರಡಿಸಿರುವಾಗ, ನೀನು ಆ ದೇಶವನ್ನು ಸ್ವಾಧೀನ ಮಾಡಿಕೊಳ್ಳುವಿಯೋ?


ಆದ್ದರಿಂದ ಯೆಹೋವ ದೇವರು ಅವರನ್ನು ಹಾಚೋರಿನಲ್ಲಿ ಆಳುವ ಕಾನಾನಿನ ಅರಸನಾದ ಯಾಬೀನನ ಕೈಗೆ ಮಾರಿಬಿಟ್ಟರು. ಅವನ ಸೈನ್ಯಕ್ಕೆ ಜನಾಂಗಗಳ ಪಟ್ಟಣವಾದ ಹರೋಷೆತ್ ಹಗ್ಗೊಯಿಮ್‌ನಲ್ಲಿ ವಾಸವಾಗಿರುವ ಸೀಸೆರನು ಅಧಿಪತಿಯಾಗಿದ್ದನು.


ಐದು ಮಂದಿ ಫಿಲಿಷ್ಟಿಯರ ಅಧಿಪತಿಗಳೂ ಸಮಸ್ತ ಕಾನಾನ್ಯರೂ ಸೀದೋನ್ಯರೂ ಬಾಳ್ ಹೆರ್ಮೋನ್ ಬೆಟ್ಟದಿಂದ ಪ್ರಾರಂಭಿಸಿ ಹಮಾತಿನ ಪ್ರದೇಶದವರೆಗೂ ಲೆಬನೋನಿನ ಬೆಟ್ಟದಲ್ಲಿ ವಾಸವಾಗಿರುವ ಹಿವ್ವಿಯರು ಇವರೇ.


ಯೆಹೋಶುವನು ಮರಣ ಹೊಂದಿದ ಬಳಿಕ ಇಸ್ರಾಯೇಲರು, “ಕಾನಾನ್ಯರೊಡನೆ ಯುದ್ಧಕ್ಕೆ ನಮ್ಮಲ್ಲಿ ಮೊದಲು ಯಾರು ಹೋಗಬೇಕು?” ಎಂದು ಯೆಹೋವ ದೇವರನ್ನು ಕೇಳಿದರು.


ಯೆಹೋವ ದೇವರನ್ನು ಸೇವಿಸುವುದು ನಿಮಗೆ ಇಷ್ಟವಿಲ್ಲದಿದ್ದರೆ, ಈ ಹೊತ್ತು ನೀವು ಯಾರನ್ನು ಸೇವಿಸಬೇಕೆಂದಿದ್ದೀರಿ? ನಿಮ್ಮ ಪಿತೃಗಳು ಯೂಫ್ರೇಟೀಸ್ ನದಿಯ ಆಚೆ ಸೇವಿಸಿದ ದೇವರುಗಳನ್ನೋ ಇಲ್ಲವೆ ನೀವು ವಾಸವಾಗಿರುವ ಅಮೋರಿಯರ ದೇವರುಗಳನ್ನೋ? ನೀವು ಆಯ್ದುಕೊಳ್ಳಿರಿ. ಆದರೆ ನಾನೂ ನನ್ನ ಮನೆಯವರೂ ಯೆಹೋವ ದೇವರನ್ನೇ ಸೇವಿಸುವೆವು,” ಎಂದನು.


ಏಕೆಂದರೆ ಅದು ಅಡವಿಯಾಗಿದೆ. ಅದನ್ನು ನೀವು ಕಡಿಯಬೇಕು. ಅದರ ಅಂತ್ಯಗಳವರೆಗೂ ನಿಮ್ಮದಾಗಿರುವುದು. ಕಬ್ಬಿಣದ ರಥಗಳಿದ್ದರೂ ಅವರು ಬಲಿಷ್ಠರಾಗಿದ್ದರೂ ನೀವು ಅವರನ್ನು ಹೊರಡಿಸಿಬಿಡಲು ನಿಮಗೆ ಸಾಧ್ಯ,” ಎಂದನು.


ಆದರೆ ಮನಸ್ಸೆಯ ಸಂತತಿಯರಿಗೆ ಆ ಪಟ್ಟಣಗಳ ನಿವಾಸಿಗಳಾದ ಕಾನಾನ್ಯರನ್ನು ಹೊರಡಿಸುವುದಕ್ಕಾಗದೆ ಹೋಯಿತು. ಕಾನಾನ್ಯರು ಆ ಸೀಮೆಯಲ್ಲೇ ವಾಸವಾಗಿರಲು ನಿರ್ಧರಿಸಿದ್ದರು.


ಹಿವ್ವಿಯರು, ಕಾನಾನ್ಯರು ಮತ್ತು ಹಿತ್ತಿಯರೂ ನಿಮ್ಮ ಎದುರಿನಿಂದ ಓಡಿಹೋಗುವಂತೆ ಕಡಜದ ಹುಳಗಳನ್ನು ನಿಮ್ಮ ಮುಂದೆ ಕಳಹಿಸುವೆನು.


ಇದಲ್ಲದೆ ನಾನು ನನ್ನ ಖಡ್ಗದಿಂದಲೂ ಬಿಲ್ಲಿನಿಂದಲೂ ಅಮೋರಿಯರ ಕೈಯಿಂದ ತೆಗೆದುಕೊಂಡ ಒಂದು ಹೊಲವನ್ನು ನಿನ್ನ ಸಹೋದರರಿಗಿಂತ ಹೆಚ್ಚಾಗಿ ನಿನಗೆ ಕೊಟ್ಟಿದ್ದೇನೆ,” ಎಂದನು.


ಅಬ್ರಾಮನು ಆ ದೇಶದಲ್ಲಿ ಶೆಕೆಮ್ ಎಂಬ ಸ್ಥಳದ ಮೋರೆ ಎಂಬ ಮಹಾವೃಕ್ಷದವರೆಗೆ ಪ್ರಯಾಣಮಾಡಿದನು. ಆಗ ಕಾನಾನ್ಯರು ಆ ದೇಶದಲ್ಲಿ ಇದ್ದರು.


ದ್ವೀಪಗಳೆಲ್ಲವೂ ಕಂಡು ಬೆರಗಾದವು. ಭೂಮಿಯ ಕಟ್ಟಕಡೆಯು ನಡುಗಿತು. ಅವರು ಸಮೀಪಕ್ಕೆ ಬಂದರು.


ಮೇಲಿಂದ ಇಳಿದು ಬರುವ ನೀರು ನಿಂತು ಬಹು ದೂರದಲ್ಲಿ ಚಾರೆತಾನಿಗೆ ಸಮೀಪವಾಗಿದ್ದ ಆದಾಮ್ ಪಟ್ಟಣಕ್ಕೆ ಬಂದು ರಾಶಿಯಾಗಿ ನಿಂತುಕೊಂಡಿತು. ಕೆಳಗಿನ ನೀರು ಅರಾಬಾ ಎಂಬ ಲವಣ ಸಮುದ್ರಕ್ಕೆ ಹರಿದುಹೋಯಿತು. ಆಗ ಜನರು ಯೆರಿಕೋವಿನ ಎದುರಾಗಿ ನದಿ ದಾಟಿದರು.


ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ಯೊರ್ದನ್ ನದಿಯ ಮಧ್ಯದಲ್ಲಿ ಒಣನೆಲದಲ್ಲಿ ದೃಢವಾಗಿ ನಿಂತಿದ್ದರು. ಅಷ್ಟರಲ್ಲಿ ಇಸ್ರಾಯೇಲರೆಲ್ಲರೂ ಒಣನೆಲದ ಮೇಲೆ ನಡೆದರು. ಹೀಗೆ ಇಡೀ ರಾಷ್ಟ್ರವು ಯೊರ್ದನ್ ನದಿ ಆಚೆ ಸೇರಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು