Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 5:10 - ಕನ್ನಡ ಸಮಕಾಲಿಕ ಅನುವಾದ

10 ಇಸ್ರಾಯೇಲರು ಗಿಲ್ಗಾಲಿನಲ್ಲಿ ಇಳಿದುಕೊಂಡು ತಿಂಗಳಿನ ಹದಿನಾಲ್ಕನೆಯ ದಿವಸ ಸಂಜೆಯಲ್ಲಿ ಯೆರಿಕೋವಿನ ಬಯಲುಗಳಲ್ಲಿ ಪಸ್ಕವನ್ನು ಆಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಇಸ್ರಾಯೇಲ್ಯರು ಗಿಲ್ಗಾಲಿನಲ್ಲಿ ತಂಗಿದ್ದಾಗ ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಾಯಂಕಾಲ ಯೆರಿಕೋವಿನ ಬೈಲಿನಲ್ಲಿ ಪಸ್ಕಹಬ್ಬವನ್ನು ಆಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಇಸ್ರಯೇಲರು ಗಿಲ್ಗಾಲಿನಲ್ಲಿ ತಂಗಿದ್ದಾಗ ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆ ಜೆರಿಕೋವಿನ ಬಯಲಿನಲ್ಲಿ ಪಾಸ್ಕಹಬ್ಬವನ್ನಾಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಇಸ್ರಾಯೇಲ್ಯರು ಗಿಲ್ಗಾಲಿನಲ್ಲಿ ಇಳುಕೊಂಡಿದ್ದಾಗ ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಾಯಂಕಾಲ ಯೆರಿಕೋವಿನ ಬೈಲಿನಲ್ಲಿ ಪಸ್ಕ ಹಬ್ಬವನ್ನು ಆಚರಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಇಸ್ರೇಲರು ಇನ್ನೂ ಗಿಲ್ಗಾಲಿನಲ್ಲಿಯೇ ಇಳಿದುಕೊಂಡಿದ್ದಾಗ ಜೆರಿಕೊವಿನ ಮೈದಾನಗಳಲ್ಲಿ ಅವರು ಆ ತಿಂಗಳಿನ ಹದಿನಾಲ್ಕನೆಯ ದಿನದ ಸಾಯಂಕಾಲ ಪಸ್ಕಹಬ್ಬವನ್ನು ಆಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 5:10
14 ತಿಳಿವುಗಳ ಹೋಲಿಕೆ  

ಈ ತಿಂಗಳಿನ ಹದಿನಾಲ್ಕನೆಯ ದಿನದವರೆಗೆ ಅವುಗಳನ್ನು ಇಟ್ಟುಕೊಳ್ಳಬೇಕು. ತರುವಾಯ ಸಂಜೆಯಲ್ಲಿ ಇಸ್ರಾಯೇಲಿನ ಜನಾಂಗದವರೆಲ್ಲರೂ ಅವುಗಳನ್ನು ವಧಿಸಬೇಕು.


“ಆದ್ದರಿಂದ ಮನುಷ್ಯಪುತ್ರನೇ, ನೀನು ಸಲಕರಣೆಗಳನ್ನು ಸಿದ್ಧಮಾಡಿ, ಹಗಲಿನಲ್ಲಿ ಅವರ ದೃಷ್ಟಿಯಿಂದ ತೊಲಗಿಹೋಗು, ಹೌದು, ಅವರ ಕಣ್ಣುಗಳ ಮುಂದೆಯೇ ನಿನ್ನ ಸ್ಥಳವನ್ನು ಬಿಟ್ಟು ಬೇರೊಂದು ಸ್ಥಳಕ್ಕೆ ಹೋಗು. ಅವರು ದ್ರೋಹಿಗಳಾದವರ ಮನೆತನದವರಾದರೂ, ಒಂದು ವೇಳೆ ಅರ್ಥಮಾಡಿಕೊಳ್ಳಬಹುದು.


ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆಯಿಂದ ಅದೇ ತಿಂಗಳಿನ ಇಪ್ಪತ್ತೊಂದನೆಯ ದಿನ ಸಂಜೆಯವರೆಗೆ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು.


ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆಯಲ್ಲಿ ಯೆಹೋವ ದೇವರ ಪಸ್ಕಹಬ್ಬವಾಗಬೇಕು.


ಜನರು ಮೊದಲನೆಯ ತಿಂಗಳಿನ ಹತ್ತನೆಯ ದಿವಸದಲ್ಲಿ ಯೊರ್ದನಿನಿಂದ ಹೊರಟು, ಯೆರಿಕೋವಿನ ಪೂರ್ವದಿಕ್ಕಿನ ಮೇರೆಯಾದ ಗಿಲ್ಗಾಲಿನಲ್ಲಿ ಇಳಿದುಕೊಂಡರು.


ಪಸ್ಕದ ಮರುದಿವಸ ಅವರು ಆ ದೇಶದ ಬೆಳೆಯನ್ನು ಅಂದರೆ ಹುಳಿಯಿಲ್ಲದ ರೊಟ್ಟಿಗಳನ್ನೂ ಹುರಿದ ಧಾನ್ಯಗಳನ್ನೂ ತಿಂದರು.


ಅನಂತರ ಅವರು ಗಿಲ್ಗಾಲಿನಲ್ಲಿ ಇರುವ ಪಾಳೆಯಕ್ಕೆ ಸೇರಿ ಯೆಹೋಶುವನ ಬಳಿಗೆ ಬಂದರು. ಅವರು ಅವನಿಗೂ ಇಸ್ರಾಯೇಲರಿಗೂ, “ನಾವು ದೂರದೇಶದಿಂದ ಬಂದೆವು. ಈಗ ನಮ್ಮ ಸಂಗಡ ಒಡಂಬಡಿಕೆ ಮಾಡಿಕೊಳ್ಳಿರಿ,” ಎಂದರು.


ಅವನು ಪ್ರತಿವರ್ಷ ಹೊರಟು ಬೇತೇಲನ್ನೂ, ಗಿಲ್ಗಾಲನ್ನೂ, ಮಿಚ್ಪೆಯನ್ನೂ ಸುತ್ತಿಕೊಂಡು ಹೋಗಿ ಆ ಸ್ಥಳಗಳಲ್ಲೆಲ್ಲಾ ಇಸ್ರಾಯೇಲರಿಗೆ ನ್ಯಾಯತೀರಿಸಿದನು.


ನೋಡು, ನನಗೆ ತಿಳಿಸುವುದಕ್ಕೆ ನಿಮ್ಮ ಬಳಿಯಿಂದ ವರ್ತಮಾನ ಬರುವವರೆಗೂ, ನಾನು ಮರುಭೂಮಿಯ ಬಳಿಯಲ್ಲಿ ಇರುವೆನು,” ಎಂದನು.


ಆಗ ಕಸ್ದೀಯರ ದಂಡು ಅವರನ್ನು ಹಿಂದಟ್ಟಿ, ಯೆರಿಕೋವಿನ ಬಯಲು ಸ್ಥಳದಲ್ಲಿ ಚಿದ್ಕೀಯನನ್ನು ಹಿಡಿದರು. ಅನಂತರ ಹಮಾತ್ ನಾಡಿನ ರಿಬ್ಲದಲ್ಲಿರುವ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ಅವನನ್ನು ತೆಗೆದುಕೊಂಡು ಬಂದು, ಅವನ ಮೇಲೆ ನ್ಯಾಯವನ್ನು ನಿರ್ಣಯಿಸಿದರು.


ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಯೋಚಿಸಿದ್ದನ್ನೂ ಬೆಯೋರನ ಮಗ ಬಿಳಾಮನು ಅವನಿಗೆ ಉತ್ತರವಾಗಿ ಹೇಳಿದ್ದನ್ನೂ ಶಿಟ್ಟೀಮು ಮೊದಲುಗೊಂಡು ಗಿಲ್ಗಾಲಿನ ವರೆಗೆ ಆದ ನಿಮ್ಮ ಪ್ರಯಾಣವನ್ನೂ ಈಗ ಜ್ಞಾಪಕಮಾಡಿಕೊಳ್ಳಿರಿ. ಆಗ ಯೆಹೋವ ದೇವರ ನೀತಿಯ ಕೃತ್ಯಗಳನ್ನು ತಿಳಿದುಕೊಳ್ಳುವಿರಿ.


ನೀವು ಅದನ್ನು ತಿನ್ನತಕ್ಕ ರೀತಿ ಇದೇ: ನೀವು ನಿಮ್ಮ ನಡುಕಟ್ಟಿಕೊಂಡು, ಕೆರಮೆಟ್ಟಿಕೊಂಡು ಊರುಗೋಲನ್ನು ಹಿಡಿದುಕೊಂಡು ತ್ವರೆಯಾಗಿ ಅದನ್ನು ತಿನ್ನಬೇಕು, ಅದು ಯೆಹೋವ ದೇವರ ಪಸ್ಕವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು