ಯೆಹೋಶುವ 5:13 - ಕನ್ನಡ ಸಮಕಾಲಿಕ ಅನುವಾದ13 ಇದಾದ ಮೇಲೆ ಯೆಹೋಶುವನು ಯೆರಿಕೋವಿನ ಬಳಿಯಲ್ಲಿ ಇದ್ದಾಗ, ಒಮ್ಮೆ ಕಣ್ಣೆತ್ತಿ ನೋಡಿದನು. ಆಗ ಒಬ್ಬ ಮನುಷ್ಯನು ಅವನಿಗೆದುರಾಗಿ ನಿಂತಿದ್ದನು. ಆತನ ಕೈಯಲ್ಲಿ ಹಿರಿದ ಖಡ್ಗ ಇರುವುದನ್ನು ಕಂಡನು. ಯೆಹೋಶುವನು ಆತನ ಬಳಿಗೆ ಹೋಗಿ ಆತನಿಗೆ, “ನೀವು ನಮ್ಮವರೋ ಅಥವಾ ಶತ್ರು ಕಡೆಯವರೋ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಯೆಹೋಶುವನು ಯೆರಿಕೋವಿನ ಹತ್ತಿರದಲ್ಲಿ ಇದ್ದಾಗ ಒಮ್ಮೆ ತನ್ನ ಕಣ್ಣೆತ್ತಿ ನೋಡಲು ಒಬ್ಬ ಮನುಷ್ಯನು ಹಿರಿದ ಕತ್ತಿಯನ್ನು ಕೈಯಲ್ಲಿ ಹಿಡಿದು ತನ್ನೆದುರಿನಲ್ಲಿ ನಿಂತಿರುವುದನ್ನು ಕಂಡನು. ಯೆಹೋಶುವನು ಅವನ ಸಮೀಪಕ್ಕೆ ಹೋಗಿ “ನೀನು ನಮ್ಮವನೋ ಅಥವಾ ಶತ್ರು ಪಕ್ಷದವನೋ?” ಎಂದು ಕೇಳಲು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಯೆಹೋಶುವನು ಜೆರಿಕೋವಿಗೆ ಹತ್ತಿರವಿದ್ದಾಗ, ಒಮ್ಮೆ ಕಣ್ಣೆತ್ತಿ ನೋಡಿದನು. ಇಗೋ, ಒಬ್ಬ ವ್ಯಕ್ತಿ ಕಾಣಿಸಿಕೊಂಡನು. ಹಿರಿದ ಕತ್ತಿಯನ್ನು ಕೈಯಲ್ಲಿ ಹಿಡಿದು ನಿಂತಿದ್ದನು. ಯೆಹೋಶುವ ಅವನನ್ನು ಸಮೀಪಿಸಿ, “ನೀನು ನಮ್ಮವನೋ ಅಥವಾ ಶತ್ರು ಕಡೆಯವನೋ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಯೆಹೋಶುವನು ಯೆರಿಕೋವಿನ ಹತ್ತಿರದಲ್ಲಿದ್ದಾಗ ಒಂದಾನೊಂದು ದಿನ ಕಣ್ಣೆತ್ತಿ ನೋಡಲು ಒಬ್ಬ ಮನುಷ್ಯನು ಹಿರಿದ ಕತ್ತಿಯನ್ನು ಕೈಯಲ್ಲಿ ಹಿಡಿದು ತನ್ನೆದುರಿನಲ್ಲಿ ನಿಂತಿರುವದನ್ನು ಕಂಡನು. ಅವನು ಅವನ ಬಳಿಗೆ ಹೋಗಿ - ನೀನು ನಮ್ಮವನೋ ಅಥವಾ ಶತ್ರುಪಕ್ಷದವನೋ ಎಂದು ಕೇಳಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಯೆಹೋಶುವನು ಜೆರಿಕೊವಿನ ಸಮೀಪದಲ್ಲಿದ್ದಾಗ ಕಣ್ಣೆತ್ತಿ ನೋಡಲು ಒಬ್ಬ ಮನುಷ್ಯನು ಅವನ ಎದುರಿಗೆ ನಿಂತಿರುವುದನ್ನು ಕಂಡನು. ಆ ಮನುಷ್ಯನ ಕೈಯಲ್ಲಿ ಒಂದು ಖಡ್ಗವಿತ್ತು. ಯೆಹೋಶುವನು ಆ ಮನುಷ್ಯನ ಹತ್ತಿರಹೋಗಿ, “ನೀನು ನಮ್ಮ ಜನರ ಸ್ನೇಹಿತನೋ ಅಥವಾ ನೀನು ನಮ್ಮ ಶತ್ರುಗಳಲ್ಲಿ ಒಬ್ಬನೋ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿ |