ಯೆಹೋಶುವ 5:14 - ಕನ್ನಡ ಸಮಕಾಲಿಕ ಅನುವಾದ14 ಅದಕ್ಕೆ ಆತನು, “ನಾನು ಅಂಥವನಲ್ಲ, ಯೆಹೋವ ದೇವರ ಸೈನ್ಯದ ಅಧಿಪತಿಯಾಗಿ ಈಗ ನಾನು ಬಂದಿದ್ದೇನೆ,” ಎಂದನು. ಆಗ ಯೆಹೋಶುವನು ಬೋರಲು ಬಿದ್ದು ಆತನನ್ನು ಆರಾಧಿಸಿ, ಆತನಿಗೆ, “ನನ್ನ ಒಡೆಯಾ, ತಮ್ಮ ಸೇವಕನಿಗೆ ಹೇಳಬೇಕಾಗಿರುವ ಸಂದೇಶವೇನು?” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆ ಮನುಷ್ಯನು “ನಾನು ಅಂಥವನಲ್ಲ; ಯೆಹೋವನ ಸೇನಾಧಿಪತಿ; ಈಗಲೇ ಬಂದಿದ್ದೇನೆ” ಎಂದು ಉತ್ತರಿಸಿದನು. ಆಗ ಯೆಹೋಶುವನು ಅವನಿಗೆ ಸಾಷ್ಟಾಂಗ ನಮಸ್ಕಾರ ಮಾಡಿ “ಒಡೆಯಾ, ನಿಮ್ಮ ದಾಸನಾದ ನನಗೆ ಏನು ಆಜ್ಞಾಪಿಸಬೇಕೆಂದಿದ್ದೀರಿ?” ಅನ್ನಲು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಆಗ ಆ ವ್ಯಕ್ತಿ, “ನಾನು ಅಂಥವನಲ್ಲ; ನಾನು ಸರ್ವೇಶ್ವರನ ಸೇನಾಪತಿ. ಇದೀಗಲೆ ಬಂದವನು,’ ಎಂದು ಉತ್ತರಿಸಿದನು. ಕೂಡಲೆ ಯೆಹೋಶುವ ಅವನಿಗೆ ಸಾಷ್ಟಾಂಗವೆರಗಿ, “ಒಡೆಯಾ, ತಮ್ಮ ದಾಸನಾದ ನನಗೆ ಏನು ಆಜ್ಞಾಪಿಸಬೇಕೆಂದಿದ್ದೀರಿ?” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆ ಮನುಷ್ಯನು - ನಾನು ಅಂಥವನಲ್ಲ; ಯೆಹೋವನ ಸೇನಾಪತಿಯು; ಈಗಲೇ ಬಂದಿದ್ದೇನೆ ಎಂದನು. ಆಗ ಯೆಹೋಶುವನು ಅವನಿಗೆ ಸಾಷ್ಟಾಂಗನಮಸ್ಕಾರ ಮಾಡಿ - ಸ್ವಾವಿುಯವರು ತಮ್ಮ ಸೇವಕನಿಗೆ ಏನು ಆಜ್ಞಾಪಿಸಬೇಕೆಂದಿದ್ದೀರಿ ಅನ್ನಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆ ಮನುಷ್ಯನು, “ನಾನು ಶತ್ರುವಲ್ಲ, ನಾನು ಯೆಹೋವನ ಸೇನಾಧಿಪತಿ. ನಾನು ಈಗಲೇ ನಿನ್ನಲ್ಲಿಗೆ ಬಂದಿದ್ದೇನೆ” ಎಂದು ಉತ್ತರಿಸಿದನು. ಆಗ ಯೆಹೋಶುವನು ನೆಲದವರೆಗೂ ತಲೆಬಾಗಿ ನಮಸ್ಕರಿಸಿ ಅವನಿಗೆ, “ನಾನು ನಿನ್ನ ಸೇವಕ. ನನ್ನ ಒಡೆಯನು ನನಗೆ ಯಾವುದಾದರೂ ಆಜ್ಞೆಯನ್ನು ವಿಧಿಸಬೇಕಾಗಿದೆಯೇ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿ |