ಯೆಹೋಶುವ 5:4 - ಕನ್ನಡ ಸಮಕಾಲಿಕ ಅನುವಾದ4 ಯೆಹೋಶುವನು ಸುನ್ನತಿ ಮಾಡಿದ ಕಾರಣವೇನೆಂದರೆ: ಈಜಿಪ್ಟಿನಿಂದ ಹೊರಟ ಗಂಡಸರಲ್ಲಿ ಯುದ್ಧಮಾಡುವ ಸೈನ್ಯದವರೆಲ್ಲರೂ ಮರುಭೂಮಿಯ ಮಾರ್ಗದಲ್ಲಿ ಸತ್ತುಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಯೆಹೋಶುವನು ಸುನ್ನತಿ ಮಾಡಿದ್ದಕ್ಕೆ ಕಾರಣವೇನಂದರೆ ಐಗುಪ್ತದಿಂದ ಹೊರಟು ಬಂದ ಗಂಡಸರಲ್ಲಿ ಯುದ್ಧವೀರರೆಲ್ಲರು ಆ ದೇಶವನ್ನು ಬಿಟ್ಟು ಬಂದ ನಂತರ ಅರಣ್ಯದಲ್ಲಿ ಸತ್ತು ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಹೀಗೆ ಯೆಹೋಶುವನು ಸುನ್ನತಿ ಮಾಡುವುದಕ್ಕೆ ಕಾರಣ ಏನೆಂದರೆ - ಈಜಿಪ್ಟಿನಿಂದ ಹೊರಟುಬಂದ ಗಂಡಸರಲ್ಲಿ ಯುದ್ಧವೀರರೆಲ್ಲರು ಆ ದೇಶವನ್ನು ಬಿಟ್ಟು, ಅನಂತರ ಅರಣ್ಯದಲ್ಲಿ ಸತ್ತುಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಯೆಹೋಶುವನು ಸುನ್ನತಿಮಾಡಿದ್ದಕ್ಕೆ ಕಾರಣವೇನಂದರೆ - ಐಗುಪ್ತದಿಂದ ಹೊರಟುಬಂದ ಗಂಡಸರಲ್ಲಿ ಯುದ್ಧವೀರರೆಲ್ಲಾ ಆ ದೇಶವನ್ನು ಬಿಟ್ಟನಂತರ ಅರಣ್ಯದಲ್ಲಿ ಸತ್ತುಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4-7 ಯೆಹೋಶುವನು ಸುನ್ನತಿ ಮಾಡಲು ಕಾರಣವೇನೆಂದರೆ: ಈಜಿಪ್ಟನ್ನು ಬಿಟ್ಟುಹೊರಟಾಗ ಸೈನ್ಯಸೇರಲು ಯೋಗ್ಯರಾದ ಇಸ್ರೇಲಿನ ಗಂಡಸರಿಗೆ ಸುನ್ನತಿಯಾಗಿತ್ತು. ಅವರು ಮರುಭೂಮಿಯಲ್ಲಿದ್ದಾಗ ಅನೇಕ ಯುದ್ಧವೀರರು ಯೆಹೋವನಿಗೆ ಕಿವಿಗೂಡಲಿಲ್ಲ. ಆದಕಾರಣ, “ಹಾಲೂ ಜೇನೂ ಹರಿಯುವ ವಾಗ್ದತ್ತ ನಾಡನ್ನು” ಆ ಜನರು ಕಾಣುವುದಿಲ್ಲ ಎಂದು ಯೆಹೋವನು ಪ್ರಮಾಣ ಮಾಡಿದನು. ನಮ್ಮ ಪೂರ್ವಿಕರಿಗೆ ಆ ಭೂಮಿಯನ್ನು ಕೊಡುವುದಾಗಿ ಯೆಹೋವನು ವಾಗ್ದಾನ ಮಾಡಿದ್ದನು. ಆದರೆ ಆ ಜನರು ಯೆಹೋವನ ಮಾತನ್ನು ಕೇಳದೆ ಅವಿಧೇಯರಾದ ಕಾರಣ ಆತನು ಅವರನ್ನು ನಲವತ್ತು ವರ್ಷಗಳ ಕಾಲ ಅಂದರೆ ಆ ಯೋಧರು ಸಾಯುವವರೆಗೆ ಮರುಭೂಮಿಯಲ್ಲಿ ಅಲೆದಾಡುವಂತೆ ಮಾಡಿದನು. ಆ ಎಲ್ಲ ಯುದ್ಧವೀರರು ಸತ್ತುಹೋದರು ಮತ್ತು ಅವರ ಸ್ಥಾನಕ್ಕೆ ಅವರ ಗಂಡುಮಕ್ಕಳು ಬಂದರು. ಆದರೆ ಈಜಿಪ್ಟಿನಿಂದ ಹೊರಟು ಮರುಭೂಮಿಯಲ್ಲಿ ಪ್ರಯಾಣ ಮಾಡುತ್ತಿದ್ದಾಗ ಹುಟ್ಟಿದ ಯಾವ ಗಂಡುಮಕ್ಕಳಿಗೂ ಸುನ್ನತಿ ಆಗಿರಲಿಲ್ಲ. ಅದಕ್ಕಾಗಿ ಯೆಹೋಶುವನು ಅವರಿಗೆ ಸುನ್ನತಿ ಮಾಡಿಸಿದನು. ಅಧ್ಯಾಯವನ್ನು ನೋಡಿ |