ಯೆಹೋಶುವ 5:9 - ಕನ್ನಡ ಸಮಕಾಲಿಕ ಅನುವಾದ9 ಆಗ ಯೆಹೋವ ದೇವರು ಯೆಹೋಶುವನಿಗೆ, “ಈ ದಿನ ಈಜಿಪ್ಟಿನ ನಿಂದೆಯನ್ನು ನಿಮ್ಮಿಂದ ನಿವಾರಿಸಿಬಿಟ್ಟಿದ್ದೇನೆ,” ಎಂದರು. ಆದ್ದರಿಂದ ಆ ಸ್ಥಳವು ಇಂದಿನವರೆಗೂ ಗಿಲ್ಗಾಲ್ ಎಂದು ಕರೆಯಲಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಯೆಹೋವನು ಯೆಹೋಶುವನಿಗೆ, “ನಾನು ಐಗುಪ್ತ್ಯರ ನಿಂದೆಯನ್ನು ಈ ಹೊತ್ತು ನಿಮ್ಮಿಂದ ನಿವಾರಿಸಿ ಬಿಟ್ಟಿದ್ದೇನೆ” ಎಂದು ಹೇಳಿದ್ದರಿಂದ ಆ ಸ್ಥಳಕ್ಕೆ ಇಂದಿನವರೆಗೂ ಗಿಲ್ಗಾಲ್ ಎಂಬ ಹೆಸರಿರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಸರ್ವೇಶ್ವರ ಸ್ವಾಮಿ ಯೆಹೋಶುವನಿಗೆ, “ನಾನು ಈಜಿಪ್ಟಿನ ಕಳಂಕವನ್ನು ಈ ದಿನ ನಿಮ್ಮಿಂದ ನಿವಾರಿಸಿಬಿಟ್ಟಿದ್ದೇನೆ,” ಎಂದು ಹೇಳಿದ್ದರಿಂದ ಆ ಸ್ಥಳಕ್ಕೆ ಇಂದಿನವರೆಗೂ ಗಿಲ್ಗಾಲ್ ಎಂಬ ಹೆಸರಿಡಲಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಯೆಹೋವನು ಯೆಹೋಶುವನಿಗೆ - ನಾನು ಐಗುಪ್ತ್ಯರ ನಿಂದೆಯನ್ನು ಈ ಹೊತ್ತು ನಿಮ್ಮಿಂದ ನಿವಾರಿಸಿಬಿಟ್ಟಿದ್ದೇನೆಂದು ಹೇಳಿದ್ದರಿಂದ ಆ ಸ್ಥಳಕ್ಕೆ ಇಂದಿನವರೆಗೂ ಗಿಲ್ಗಾಲೆಂಬ ಹೆಸರಿರುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆಗ ಯೆಹೋವನು ಯೆಹೋಶುವನಿಗೆ, “ನೀವು ಈಜಿಪ್ಟಿನಲ್ಲಿ ಗುಲಾಮರಾಗಿದ್ದಾಗ ಅವಮಾನಕ್ಕೆ ಗುರಿಯಾಗಿದ್ದಿರಿ. ಆದರೆ ಇಂದು ಆ ನಾಚಿಕೆಯನ್ನು ತೆಗೆದು ಹಾಕಿದ್ದೇನೆ” ಎಂದನು. ಆದ್ದರಿಂದ ಯೆಹೋಶುವನು ಆ ಸ್ಥಳಕ್ಕೆ “ಗಿಲ್ಗಾಲ್” ಎಂದು ಹೆಸರಿಟ್ಟನು. ಈಗಲೂ ಆ ಸ್ಥಳಕ್ಕೆ “ಗಿಲ್ಗಾಲ್” ಎಂಬ ಹೆಸರಿದೆ. ಅಧ್ಯಾಯವನ್ನು ನೋಡಿ |
“ಇಗೋ, ನಾನು ಸುನ್ನತಿ ಇಲ್ಲದವರ ಸಂಗಡ ಸುನ್ನತಿ ಉಳ್ಳವರೆಲ್ಲರನ್ನೂ, ಈಜಿಪ್ಟನ್ನೂ, ಯೆಹೂದವನ್ನೂ, ಎದೋಮನ್ನೂ, ಅಮ್ಮೋನನ ಮಕ್ಕಳನ್ನೂ, ಮೋವಾಬನ್ನೂ, ಮರುಭೂಮಿಯ ನಿವಾಸಿಗಳಾಗಿರುವ ಕಟ್ಟಕಡೆಯ ಮೂಲೆಯಲ್ಲಿ ಇರುವವರನ್ನೂ ನಾನು ಶಿಕ್ಷಿಸುವ ದಿವಸಗಳು ಬರುತ್ತವೆ. ಏಕೆಂದರೆ ಈ ಜನಾಂಗಗಳವರು ಸುನ್ನತಿಯಿಲ್ಲದವರು. ಇಸ್ರಾಯೇಲಿನ ಮನೆತನದವರೆಲ್ಲರೂ ಹೃದಯದಲ್ಲಿ ಸುನ್ನತಿ ಇಲ್ಲದವರಾಗಿದ್ದಾರೆ,” ಎಂದು ಯೆಹೋವ ದೇವರು ಅನ್ನುತ್ತಾರೆ.