Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 6:12 - ಕನ್ನಡ ಸಮಕಾಲಿಕ ಅನುವಾದ

12 ಯೆಹೋಶುವನು ಮರುದಿನ ಬೆಳಿಗ್ಗೆ ಎದ್ದನು. ಯಾಜಕರು ಯೆಹೋವ ದೇವರ ಮಂಜೂಷವನ್ನು ತೆಗೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯೆಹೋಶುವನು ಬೆಳಗಿನ ಜಾವದಲ್ಲೇ ಎದ್ದನು. ಯಾಜಕರು ಯೆಹೋವನ ಮಂಜೂಷವನ್ನು ಹೊತ್ತುಕೊಂಡು ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಯೆಹೋಶುವನು ಬೆಳಗಿನ ಜಾವದಲ್ಲೇ ಎದ್ದನು. ಯಾಜಕರು ಮಂಜೂಷವನ್ನು ಹೊತ್ತುಕೊಂಡು ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಯೆಹೋಶುವನು ಬೆಳಿಗ್ಗೆ ಎದ್ದನು. ಯಾಜಕರು ಯೆಹೋವನ ಮಂಜೂಷವನ್ನು ಹೊತ್ತುಕೊಂಡು ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯೆಹೋಶುವನು ಮರುದಿನ ಬೆಳಿಗ್ಗೆ ಎದ್ದನು. ಯಾಜಕರು ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಪುನಃ ಹೊತ್ತುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 6:12
11 ತಿಳಿವುಗಳ ಹೋಲಿಕೆ  

ಯೆಹೋಶುವನು ಬೆಳಿಗ್ಗೆ ಎದ್ದು, ಅವನೂ, ಇಸ್ರಾಯೇಲರೆಲ್ಲರೂ ಶಿಟ್ಟೀಮಿನಿಂದ ಪ್ರಯಾಣಮಾಡಿ, ಯೊರ್ದನ್ ನದಿ ಬಳಿಗೆ ಬಂದು, ದಾಟುವುದಕ್ಕಿಂತ ಮುಂಚೆ ಅಲ್ಲಿ ಇಳಿದುಕೊಂಡರು.


ಮೋಶೆ ಯೆಹೋವ ದೇವರು ಒಡಂಬಡಿಕೆಯ ಮಂಜೂಷವನ್ನು ಹೊರುವ ಲೇವಿಯರಿಗೆ,


ಅಬ್ರಹಾಮನು ಬೆಳಿಗ್ಗೆ ಎದ್ದು, ತನ್ನ ಕತ್ತೆಗೆ ತಡಿ ಕಟ್ಟಿ, ತನ್ನ ಸೇವಕರಲ್ಲಿ ಇಬ್ಬರನ್ನೂ, ತನ್ನ ಮಗ ಇಸಾಕನನ್ನೂ, ದಹನಬಲಿಗಳಿಗಾಗಿ ಕಟ್ಟಿಗೆಗಳನ್ನೂ ತೆಗೆದುಕೊಂಡು, ದೇವರು ತನಗೆ ಹೇಳಿದ ಸ್ಥಳಕ್ಕೆ ಹೋದನು.


ಹೀಗೆಯೇ ಯೆಹೋವ ದೇವರ ಮಂಜೂಷವು ಪಟ್ಟಣವನ್ನು ಒಂದು ಸಾರಿ ಸುತ್ತಿದ ಮೇಲೆ ಅವರು ಪಾಳೆಯಕ್ಕೆ ಬಂದು ಅಲ್ಲಿ ರಾತ್ರಿಯನ್ನು ಕಳೆದರು.


ಟಗರಿನ ಕೊಂಬುಗಳ ಏಳು ತುತೂರಿಗಳನ್ನು ಊದುತ್ತಾ ಯೆಹೋವ ದೇವರ ಒಡಂಬಡಿಕೆಯ ಮಂಜೂಷದ ಮುಂದೆ ನಡೆಯುತ್ತಾ ಹೋದರು. ಯುದ್ಧಕ್ಕೆ ಸಿದ್ಧವಾದ ಜನರು ಅವರ ಮುಂದೆ ಹೋದರು. ಆದರೆ ಹಿಂದಿನ ಸೈನ್ಯದವರು ಯೆಹೋವ ದೇವರ ಮಂಜೂಷದ ಹಿಂದೆ ನಡೆದರು. ಯಾಜಕರು ತುತೂರಿಗಳನ್ನು ಊದುತ್ತಾ ಹೊರಟರು.


ಆಗ ಇಸ್ರಾಯೇಲರು ಉದಯದಲ್ಲಿ ಎದ್ದು ಗಿಬೆಯಕ್ಕೆ ಎದುರಾಗಿ ಪಾಳೆಯಮಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು