Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 6:16 - ಕನ್ನಡ ಸಮಕಾಲಿಕ ಅನುವಾದ

16 ಏಳನೆಯ ಸಾರಿ ಯಾಜಕರು ತುತೂರಿಗಳನ್ನು ಊದುವಾಗ, ಯೆಹೋಶುವನು ಜನರಿಗೆ, “ಆರ್ಭಟಿಸಿರಿ! ಯೆಹೋವ ದೇವರು ನಿಮಗೆ ಈ ಪಟ್ಟಣವನ್ನು ಕೊಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಏಳನೆಯ ಸಾರಿ ಸುತ್ತುವಾಗ ಯಾಜಕರು ಕೊಂಬುಗಳನ್ನು ಊದಲು ಯೆಹೋಶುವನು ಜನರಿಗೆ, “ಆರ್ಭಟಿಸಿರಿ, ಯೆಹೋವನು ನಿಮಗೆ ಈ ಪಟ್ಟಣವನ್ನು ಕೊಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಏಳನೆಯ ಸಾರಿ ಸುತ್ತುವಾಗ ಯಾಜಕರು ಕೊಂಬುಗಳನ್ನು ಊದಿದರು. ಯೆಹೋಶುವ ಜನರಿಗೆ, “ಆರ್ಭಟಿಸಿರಿ, ಸರ್ವೇಶ್ವರಸ್ವಾಮಿ ನಿಮಗೆ ಈ ನಗರವನ್ನು ಕೊಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಏಳನೆಯ ಸಾರಿ ಸುತ್ತುವಾಗ ಯಾಜಕರು ಕೊಂಬುಗಳನ್ನು ಊದಲು ಯೆಹೋಶುವನು ಜನರಿಗೆ - ಆರ್ಭಟಿಸಿರಿ, ಯೆಹೋವನು ನಿಮಗೆ ಈ ಪಟ್ಟಣವನ್ನು ಕೊಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಏಳನೆಯ ಸಲ ಅವರು ನಗರವನ್ನು ಸುತ್ತುವಾಗ ಯಾಜಕರು ತುತ್ತೂರಿಗಳನ್ನು ಊದಿದರು. ಆಗ ಯೆಹೋಶುವನು ಜನರಿಗೆ, “ಈಗ ಆರ್ಭಟಿಸಿರಿ, ಯೆಹೋವನು ಈ ನಗರವನ್ನು ನಿಮಗೆ ಕೊಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 6:16
6 ತಿಳಿವುಗಳ ಹೋಲಿಕೆ  

ಆಗ ಯೆಹೂದ್ಯರು ಆರ್ಭಟಿಸಿದರು. ಯೆಹೂದ್ಯರು ಆರ್ಭಟಿಸಿದಾಗ, ದೇವರು ಅಬೀಯನ ಮತ್ತು ಯೆಹೂದದವರ ಮುಂದೆ ಯಾರೊಬ್ಬಾಮನನ್ನೂ, ಸಮಸ್ತ ಇಸ್ರಾಯೇಲರನ್ನೂ ಅಪಜಯಗೊಳಿಸಿದರು.


ಅವರು ಟಗರು ಕೊಂಬುಗಳ ತುತೂರಿಗಳಿಂದ ದೀರ್ಘಧ್ವನಿಗೈಯುವಾಗ, ಆ ತುತೂರಿಯ ಧ್ವನಿಯನ್ನು ಕೇಳುವ ಜನರೆಲ್ಲರೂ ಮಹಾ ರಭಸದಿಂದ ಆರ್ಭಟಿಸಬೇಕು. ಆಗ ಆ ಪಟ್ಟಣದ ಗೋಡೆಯು ನೆಲಸಮವಾಗಿ ಬಿದ್ದುಹೋಗುವುದು. ಜನರಲ್ಲಿ ಪ್ರತಿಯೊಬ್ಬನು ತನ್ನ ಮುಂದೆ ನೇರವಾಗಿ ಒಳಗೆ ನುಗ್ಗಿಹೋಗಬಹುದು,” ಎಂದು ಹೇಳಿದರು.


ಆದರೆ ಏಳನೆಯ ದಿನ ಸೂರ್ಯೋದಯವಾಗುವಾಗ, ಅವರು ಎದ್ದು ಪಟ್ಟಣವನ್ನು ಅದೇ ರೀತಿಯಾಗಿ ಏಳು ಸಾರಿ ಸುತ್ತಿಬಂದರು. ಆ ದಿನದಲ್ಲಿ ಮಾತ್ರವೇ ಪಟ್ಟಣವನ್ನು ಏಳು ಸಾರಿ ಸುತ್ತಿಬಂದರು.


ಯೆಹೂದದವರು ಹಿಂದಕ್ಕೆ ನೋಡಿದಾಗ, ಯುದ್ಧವು ಅವರ ಮುಂದೆಯೂ ಹಿಂದೆಯೂ ಇತ್ತು. ಆಗ ಯೆಹೋವ ದೇವರಿಗೆ ಅವರು ಮೊರೆಯಿಟ್ಟರು. ಯಾಜಕರು ತುತೂರಿಗಳನ್ನು ಊದಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು