Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 6:17 - ಕನ್ನಡ ಸಮಕಾಲಿಕ ಅನುವಾದ

17 ಆದರೂ ಈ ಪಟ್ಟಣವೂ ಅದರಲ್ಲಿರುವ ಸಮಸ್ತವೂ ಯೆಹೋವ ದೇವರಿಗೆ ಅರ್ಪಿತವಾದವುಗಳು. ರಾಹಾಬಳೆಂಬ ವೇಶ್ಯೆಯೂ ಆಕೆಯ ಮನೆಯಲ್ಲಿ ಇರುವವರೆಲ್ಲರೂ ಮಾತ್ರ ಉಳಿಯಲಿ. ಏಕೆಂದರೆ ನಾವು ಕಳುಹಿಸಿದ ಗೂಢಚಾರರನ್ನು ಆಕೆಯು ಬಚ್ಚಿಟ್ಟಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಇದೂ ಇದರಲ್ಲಿರುವುದೆಲ್ಲವೂ ಯೆಹೋವನಿಗೆ ಅರ್ಪಿತವಾದವುಗಳೇ ಎಂದು ತಿಳಿಯಿರಿ. ವೇಶ್ಯೆಯಾದ ರಾಹಾಬಳೂ ಅವಳ ಸಂಗಡ ಮನೆಯಲ್ಲಿರುವವರೆಲ್ಲರೂ ಉಳಿಯಲಿ. ಏಕೆಂದರೆ ನಾವು ಕಳುಹಿಸಿದ ಗೂಢಚಾರರನ್ನು ಅವಳು ಅಡಗಿಸಿಟ್ಟಿದ್ದಳಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಇದೂ ಇದರಲ್ಲಿರುವುದೆಲ್ಲವೂ ಸರ್ವೇಶ್ವರನಿಗೆ ಮೀಸಲಾಗಿ ಆಹುತಿಯಾಗತಕ್ಕದೆಂದು ತಿಳಿಯಿರಿ. ವೇಶ್ಯೆಯಾದ ರಾಹಾಬಳು ಮತ್ತು ಅವಳ ಸಂಗಡ ಮನೆಯಲ್ಲಿರುವವರೆಲ್ಲರು ಉಳಿಯಲಿ. ಏಕೆಂದರೆ ನಾವು ಕಳಿಸಿದ ಗೂಢಚಾರರನ್ನು ಅವಳು ಬಚ್ಚಿಟ್ಟಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಇದೂ ಇದರಲ್ಲಿರುವದೆಲ್ಲವೂ ಕೇವಲ ಯೆಹೋವನ ಸೊತ್ತೇ ಎಂದು ತಿಳಿಯಿರಿ. ಸೂಳೆಯಾದ ರಾಹಾಬಳೂ ಅವಳ ಸಂಗಡ ಮನೆಯಲ್ಲಿರುವವರೆಲ್ಲರೂ ಉಳಿಯಲಿ; ನಾವು ಕಳುಹಿಸಿದ ದೂತರನ್ನು ಅವಳು ಅಡಗಿಸಿಟ್ಟಳಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಈ ನಗರ ಮತ್ತು ಇದರಲ್ಲಿರುವದೆಲ್ಲವೂ ಯೆಹೋವನ ಸ್ವತ್ತಾಗಿದೆ. ವೇಶ್ಯೆಯಾದ ರಾಹಾಬಳು ಮತ್ತು ಅವಳ ಮನೆಯಲ್ಲಿರುವ ಎಲ್ಲ ಜನರು ಮಾತ್ರ ಜೀವಸಹಿತ ಉಳಿಯಲಿ, ಅವರನ್ನು ಕೊಲ್ಲಬಾರದು. ಏಕೆಂದರೆ ರಾಹಾಬಳು ನಮ್ಮ ಆ ಇಬ್ಬರು ಗೂಢಚಾರರಿಗೆ ಸಹಾಯ ಮಾಡಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 6:17
26 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಆಜ್ಞಾಪಿಸಿದಂತೆ ಹಿತ್ತಿಯರನ್ನೂ, ಅಮೋರಿಯರನ್ನೂ, ಕಾನಾನ್ಯರನ್ನೂ, ಪೆರಿಜೀಯರನ್ನೂ, ಹಿವ್ವಿಯರನ್ನೂ, ಯೆಬೂಸಿಯರನ್ನೂ ಪೂರ್ಣವಾಗಿ ದಂಡಿಸಬೇಕು.


ಅದೇ ರೀತಿಯಾಗಿ ರಹಾಬಳೆಂಬ ವೇಶ್ಯೆಯು ಸಹ ಗೂಢಚಾರರನ್ನು ಸೇರಿಸಿಕೊಂಡು, ಅವರನ್ನು ಬೇರೆ ದಾರಿಯಿಂದ ಕಳುಹಿಸಿದ ಕ್ರಿಯೆಗಳಿಂದಲೇ ಆಕೆಯು ನೀತಿನಿರ್ಣಯವನ್ನು ಹೊಂದಿದಳಲ್ಲವೇ?


ಚೀಯೋನ್ ಪುತ್ರಿಯೇ, ಎದ್ದು ತುಳಿ. ಏಕೆಂದರೆ ನಿನ್ನ ಕೊಂಬನ್ನು ಕಬ್ಬಿಣವಾಗಿಯೂ ನಿನ್ನ ಗೊರಸುಗಳನ್ನು ಕಂಚಿನದಾಗಿಯೂ ಮಾಡುವೆನು. ನೀನು ಅನೇಕ ಜನಾಂಗಗಳನ್ನು ಚೂರುಚೂರಾಗಿ ಮಾಡುವೆ. ಅವರ ಕೊಳ್ಳೆಹೊಡೆದು ಸಂಪಾದಿಸಿದ್ದ ಸ್ವತ್ತನ್ನು ಯೆಹೋವ ದೇವರಿಗೂ ಅವರ ಸಂಪತ್ತನ್ನು ಲೋಕದ ಕರ್ತ ದೇವರಿಗೂ ಪ್ರತಿಷ್ಠೆಮಾಡುವೆನು.


ರಹಾಬಳೆಂಬ ವೇಶ್ಯೆಯು ಗೂಢಚಾರರನ್ನು ಸಮಾಧಾನವಾಗಿ ಸ್ವಾಗತಿಸಿದ್ದರಿಂದ ಅವಿಧೇಯರೊಂದಿಗೆ ನಾಶವಾಗದೆ ಉಳಿದದ್ದು ನಂಬಿಕೆಯಿಂದಲೇ.


ಅವರು ನಿಮ್ಮ ಸೇವೆಯನ್ನೂ ನೀವು ಪರಿಶುದ್ಧರಿಗೆ ಸೇವೆಮಾಡಿದ್ದರಲ್ಲಿ ಇನ್ನೂ ಮಾಡುತ್ತಿರುವುದರಲ್ಲಿ ದೇವರ ಹೆಸರಿನ ಕಡೆಗೆ ತೋರಿಸಿದ ಪ್ರೀತಿಯನ್ನೂ ಅವರು ಮರೆಯುವುದಕ್ಕೆ ದೇವರು ಅನ್ಯಾಯಗಾರರಲ್ಲ.


ನಿಯಮವು ನಂಬಿಕೆಯನ್ನು ಆಧಾರಗೊಂಡದ್ದಲ್ಲ. ಆದರೆ, “ನಿಯಮಗಳ ಕ್ರಿಯೆಗಳನ್ನು ಮಾಡುವವನು ಅವುಗಳ ಮೂಲಕ ಬದುಕುವನು.”


ಮೋಶೆಯ ನಿಯಮದ ಕ್ರಿಯೆಗಳನ್ನು ಆಶ್ರಯಿಸಿಕೊಳ್ಳುವವರೆಲ್ಲರೂ ಶಾಪಾಧೀನರಾಗಿದ್ದಾರೆ. ಏಕೆಂದರೆ, “ಮೋಶೆಯ ನಿಯಮದ ಗ್ರಂಥದಲ್ಲಿ ಬರೆದಿರುವವುಗಳನ್ನೆಲ್ಲಾ ನಿರಂತರವಾಗಿ ಕೈಗೊಳ್ಳದಿರುವ ಪ್ರತಿಯೊಬ್ಬನೂ ಶಾಪಗ್ರಸ್ತನು,” ಎಂದು ಬರೆದಿದೆ.


ನಾವು ದೇವರ ರಹಸ್ಯ ಜ್ಞಾನವನ್ನು ಕುರಿತು ಮಾತನಾಡುತ್ತೇವೆ. ಅದು ದೇವರು ನಮ್ಮ ಮಹಿಮೆಗಾಗಿ ಯುಗಗಳ ಮುಂಚೆಯೇ ನೇಮಿಸಿ, ಮರೆಮಾಡಿದ ಜ್ಞಾನವೇ ಆಗಿರುತ್ತದೆ.


“ಅದಕ್ಕೆ ನಾನು ಉತ್ತರವಾಗಿ ಅವರಿಗೆ, ‘ನಾನು ನಿಮಗೆ ನಿಜವಾಗಿ ಹೇಳುತ್ತೇನೆ: ನೀವು ಈ ನನ್ನ ಸಹೋದರರಲ್ಲಿ ಅತ್ಯಲ್ಪನಾದವನೊಬ್ಬನಿಗೆ, ಮಾಡಿದ್ದು ನನಗೇ ಮಾಡಿದಂತಾಯಿತು,’ ಎನ್ನುವೆನು.


ನಿನ್ನನ್ನು ಆಶೀರ್ವದಿಸುವವರನ್ನು ನಾನು ಆಶೀರ್ವದಿಸುವೆನು. ನಿನ್ನನ್ನು ಶಪಿಸುವವರನ್ನು ನಾನು ಶಪಿಸುವೆನು. ನಿನ್ನ ಮೂಲಕ ಭೂಲೋಕದ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದು.”


ಯಾವನಾದರೂ ಕರ್ತನನ್ನು ಪ್ರೀತಿಸದಿದ್ದರೆ, ಅವನು ಶಾಪಗ್ರಸ್ತನಾಗಲಿ! ಕರ್ತನೇ, ಬಾ!


“ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಮನುಷ್ಯಪುತ್ರನೇ, ನೀನು ಪ್ರತಿಯೊಂದು ರೀತಿಯ ಪಕ್ಷಿಗಳಿಗೂ ಮತ್ತು ಪ್ರತಿಯೊಂದು ಕಾಡುಮೃಗಗಳಿಗೂ, ‘ಮಾತನಾಡಿ ಒಟ್ಟಾಗಿ ಬನ್ನಿರಿ. ನಾನು ನಿಮಗಾಗಿ ಅರ್ಪಿಸುವ ನನ್ನ ಯಜ್ಞಕ್ಕೋಸ್ಕರ ಪ್ರತಿಯೊಂದು ಕಡೆಯಿಂದಲೂ ಸೇರಿರಿ. ಇದು ಇಸ್ರಾಯೇಲ್ ಪರ್ವತಗಳ ಮೇಲೆ ನಡೆಯುವ ಮಹಾಯಜ್ಞವಾಗಿದೆ. ಅಲ್ಲಿ ನೀವು ಮಾಂಸವನ್ನು ತಿನ್ನಬಹುದು ಮತ್ತು ರಕ್ತವನ್ನು ಕುಡಿಯಬಹುದು.


ಏಕೆಂದರೆ ಇದು ಸೇನಾಧೀಶ್ವರ ಯೆಹೋವನಾದ ದೇವರ ದಿವಸವೇ. ಆತನು ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುವ ದಿವಸವು, ಖಡ್ಗವು ಸಂಹರಿಸಿ ಅವರ ರಕ್ತದಿಂದ ತೃಪ್ತಿಯಾಗಿ ಮತ್ತವಾಗುವುದು. ಏಕೆಂದರೆ ಉತ್ತರ ದೇಶದಲ್ಲಿ ಯೂಫ್ರೇಟೀಸ್ ನದಿಯ ಬಳಿಯಲ್ಲಿ ಸೇನಾಧೀಶ್ವರ ಯೆಹೋವರಾದ ದೇವರಿಗೆ ಬಲಿ ಆಗುತ್ತದೆ.


ಯೆಹೋವ ದೇವರ ಖಡ್ಗವು ರಕ್ತದಲ್ಲಿ ಸ್ನಾನ ಮಾಡಿದೆ. ಅದು ಕುರಿ ಮತ್ತು ಹೋತಗಳ ರಕ್ತದಿಂದಲೂ, ಟಗರುಗಳ ಮೂತ್ರಪಿಂಡದ ಕೊಬ್ಬಿನಿಂದಲೂ ಮುಚ್ಚಲಾಗಿದೆ. ಏಕೆಂದರೆ ಯೆಹೋವ ದೇವರಿಗೆ ಬೊಚ್ರದಲ್ಲಿ ಬಲಿಯು, ಎದೋಮಿನ ದೇಶದಲ್ಲಿ ದೊಡ್ಡ ಕೊಲೆಯು ಉಂಟು.


ಇದಲ್ಲದೆ ಯಾವನಾದರೂ ಪ್ರಧಾನರ, ಹಿರಿಯರ ನಿರ್ಣಯದ ಪ್ರಕಾರ ಮೂರು ದಿವಸದಲ್ಲಿ ಬಾರದೆ ಇದ್ದರೆ, ಅವನ ಆಸ್ತಿಯೆಲ್ಲಾ ದಂಡವಾಗಿ ತೆಗೆದುಕೊಳ್ಳಲಾಗುವುದೆಂದೂ, ಅವನು ಸೆರೆಯಿಂದ ಬಂದವರ ಕೂಟದಿಂದ ಬಹಿಷ್ಕೃತನಾಗುವನು ಎಂದೂ ಪ್ರಕಟಿಸಿದರು.


ಕೇನ್ಯರಿಗೆ, “ಇಸ್ರಾಯೇಲರು ಈಜಿಪ್ಟಿನಿಂದ ಬಂದಾಗ ನೀವು ಅವರೆಲ್ಲರಿಗೆ ದಯೆ ತೋರಿಸಿದ್ದರಿಂದ, ನಾನು ನಿಮ್ಮನ್ನು ಅಮಾಲೇಕ್ಯರ ಸಂಗಡ ನಾಶಮಾಡದ ಹಾಗೆ, ನೀವು ಅವರ ಮಧ್ಯದಲ್ಲಿಂದ ಹೊರಟು ಹೋಗಿರಿ,” ಎಂದು ಹೇಳಿದನು. ಹಾಗೆಯೇ ಕೇನ್ಯರು ಅಮಾಲೇಕ್ಯರ ಮಧ್ಯದಿಂದ ಹೊರಟು ಹೋದರು.


ಆದರೆ ಇಸ್ರಾಯೇಲರು ಅರ್ಪಿತವಾದ ವಸ್ತುಗಳ ವಿಷಯದಲ್ಲಿ ಅಪನಂಬಿಕೆಯಿಂದ ನಡೆದುಕೊಂಡರು. ಯೆಹೂದ ಗೋತ್ರದ ಜೆರಹನ ಮೊಮ್ಮಗನೂ, ಜಿಮ್ರಿಯ ಮಗನೂ ಆದ ಕರ್ಮೀಯ ಮಗನಾದ ಆಕಾನನು ಅರ್ಪಿತವಾದ ವಸ್ತುಗಳಲ್ಲಿ ಕೆಲವನ್ನು ಕದ್ದುಕೊಂಡನು. ಇದರಿಂದ ಇಸ್ರಾಯೇಲರ ಮೇಲೆ ಯೆಹೋವ ದೇವರ ಕೋಪವು ಉರಿಯಿತು.


ಅವರು ಹೋಗಿ ಬೆಟ್ಟಕ್ಕೆ ಸೇರಿ ಹಿಂದಟ್ಟುವವರು ತಿರುಗಿ ಬರುವವರೆಗೂ ಮೂರು ದಿನ ಅಲ್ಲೇ ಇದ್ದರು. ಹಿಂದಟ್ಟುವವರು ಮಾರ್ಗದಲ್ಲೆಲ್ಲಾ ಅವರನ್ನು ಹುಡುಕಿ ಕಾಣದೆ ಹೋದರು.


ನೂನನ ಮಗನಾದ ಯೆಹೋಶುವನು ಇಬ್ಬರು ಗೂಢಚಾರರನ್ನು ಶಿಟ್ಟೀಮಿನಿಂದ ಗುಪ್ತವಾಗಿ ಕಳುಹಿಸಿ, ಅವರಿಗೆ, “ನೀವು ಹೋಗಿ ದೇಶವನ್ನೂ, ವಿಶೇಷವಾಗಿ ಯೆರಿಕೋ ಪಟ್ಟಣವನ್ನೂ ಸುತ್ತಿ ನೋಡಿರಿ,” ಎಂದನು. ಅವರು ಹೋಗಿ ರಾಹಾಬಳೆಂಬ ಹೆಸರುಳ್ಳ ಒಬ್ಬ ವೇಶ್ಯೆಯ ಮನೆಯಲ್ಲಿ ಇಳಿದು ಅಲ್ಲಿಯೇ ಉಳಿದುಕೊಂಡರು.


ಈಗ ನೀನು ಹೋಗಿ ಅಮಾಲೇಕ್ಯರನ್ನು ಹೊಡೆದು, ಅವರಿಗೆ ಉಂಟಾದದ್ದನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿಬಿಟ್ಟು, ಅವರನ್ನು ಕನಿಕರಿಸದೆ ಪುರುಷರನ್ನೂ, ಸ್ತ್ರೀಯರನ್ನೂ, ಚಿಕ್ಕವರನ್ನೂ, ಹಸುಗೂಸುಗಳನ್ನೂ, ದನಗಳನ್ನೂ, ಕುರಿಗಳನ್ನೂ, ಒಂಟೆಗಳನ್ನೂ, ಕತ್ತೆಗಳನ್ನೂ ಕೊಂದುಹಾಕು,’ ” ಎಂಬದು.


ಜೂಬಿಲಿ ಸಂವತ್ಸರದಲ್ಲಿ ಆ ಹೊಲವು ಬಿಡುಗಡೆಯಾಗುವಾಗ ಆ ಹೊಲವು ಯೆಹೋವ ದೇವರಿಗೆ ಪವಿತ್ರವಾದ ಹೊಲದಂತೆ ಆತನ ಸೊತ್ತಾಗಿಯೇ ಇರಬೇಕು, ಅದು ಯಾಜಕನಿಗೆ ಸಲ್ಲಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು