ಯೆಹೋಶುವ 6:23 - ಕನ್ನಡ ಸಮಕಾಲಿಕ ಅನುವಾದ23 ಅದರಂತೆ ಆ ಯೌವನಸ್ಥರು ಒಳಗೆ ಹೋಗಿ, ರಾಹಾಬಳನ್ನೂ ಅವಳ ತಂದೆಯನ್ನೂ ಅವಳ ತಾಯಿಯನ್ನೂ ಅವಳ ಸಹೋದರರನ್ನೂ ಅವಳಿಗಿದ್ದ ಸಮಸ್ತವನ್ನೂ ಅವಳ ಗೋತ್ರದ ಎಲ್ಲಾ ಸಂಬಂಧಿಕರನ್ನೂ ಹೊರಗೆ ಕರೆತಂದು ಇಸ್ರಾಯೇಲ್ ಪಾಳೆಯದ ಹೊರಗೆ ಅವರನ್ನು ಇರಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಆ ಯೌವನಸ್ಥರು ಹೋಗಿ ರಾಹಾಬಳನ್ನೂ ಅವಳ ತಂದೆತಾಯಿಯನ್ನು, ಸಹೋದರರನ್ನು, ಅವಳಿಗಿರುವುದೆಲ್ಲವನ್ನೂ, ಅವಳ ಗೋತ್ರದ ಎಲ್ಲಾ ಜನರನ್ನೂ ತಂದು ಇಸ್ರಾಯೇಲ್ಯರ ಪಾಳೆಯದ ಹೊರಗೆ ಇಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಅಂತೆಯೇ ಅವರು ಹೋಗಿ ರಾಹಾಬಳನ್ನೂ ಅವಳ ತಂದೆತಾಯಿಗಳನ್ನೂ ಸಹೋದರರನ್ನೂ ಅವಳಿಗಿದ್ದುದೆಲ್ಲವನ್ನೂ ಅವಳ ಎಲ್ಲಾ ಸಂಬಂಧಿಕರನ್ನೂ ಇಸ್ರಯೇಲರ ಪಾಳೆಯದ ಹೊರಗಡೆ ಸುಭದ್ರವಾಗಿರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಆ ಯೌವನಸ್ಥರು ಹೋಗಿ ರಾಹಾಬಳನ್ನೂ ಅವಳ ತಂದೆತಾಯಿಗಳನ್ನೂ ಸಹೋದರರನ್ನೂ ಅವಳಿಗಿರುವದೆಲ್ಲವನ್ನೂ ಅವಳ ಗೋತ್ರದ ಎಲ್ಲಾ ಜನರನ್ನೂ ತಂದು ಇಸ್ರಾಯೇಲ್ಯರ ಪಾಳೆಯದ ಹೊರಗೆ ಇಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಆ ಇಬ್ಬರು, ರಾಹಾಬಳ ಮನೆಗೆ ಹೋಗಿ ಅವಳನ್ನು ಹೊರಗೆ ಕರೆದುಕೊಂಡು ಬಂದರು. ಅವಳ ತಂದೆ, ತಾಯಿ, ಸಹೋದರರು ಮತ್ತು ಅವಳ ಎಲ್ಲ ಕುಟುಂಬದವರನ್ನು ಮತ್ತು ಅವಳ ಸಂಗಡ ಅಲ್ಲಿ ಇದ್ದ ಬೇರೆ ಎಲ್ಲ ಜನರನ್ನು ಸಹ ಅವರು ಹೊರಗೆ ಕರೆದುಕೊಂಡು ಬಂದರು. ಅವರೆಲ್ಲರನ್ನು ಇಸ್ರೇಲಿನ ಜನರ ಪಾಳೆಯದ ಹೊರಗಡೆ ಒಂದು ಸುರಕ್ಷಿತವಾದ ಸ್ಥಳದಲ್ಲಿ ಇರಿಸಿದರು. ಅಧ್ಯಾಯವನ್ನು ನೋಡಿ |