ಯೆಹೋಶುವ 6:27 - ಕನ್ನಡ ಸಮಕಾಲಿಕ ಅನುವಾದ27 ಯೆಹೋವ ದೇವರು ಯೆಹೋಶುವನ ಸಂಗಡ ಇದ್ದರು. ಅವನ ಕೀರ್ತಿ ದೇಶದಲ್ಲೆಲ್ಲಾ ಹರಡಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಯೆಹೋವನು ಯೆಹೋಶುವನ ಸಂಗಡ ಇದ್ದುದರಿಂದ ಅವನ ಕೀರ್ತಿ ದೇಶದಲ್ಲೆಲ್ಲಾ ಹಬ್ಬಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಸರ್ವೇಶ್ವರಸ್ವಾಮಿ ಯೆಹೋಶುವನ ಸಂಗಡ ಇದ್ದುದರಿಂದ ಅವನ ಕೀರ್ತಿ ನಾಡಿನಲ್ಲೆಲ್ಲಾ ಹರಡಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಯೆಹೋವನು ಯೆಹೋಶುವನ ಸಂಗಡ ಇದ್ದದರಿಂದ ಅವನು ದೇಶದಲ್ಲೆಲ್ಲಾ ಕೀರ್ತಿಗೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಯೆಹೋವನು ಯೆಹೋಶುವನ ಸಂಗಡ ಇದ್ದನು. ಯೆಹೋಶುವನು ದೇಶದಲ್ಲೆಲ್ಲಾ ಸುಪ್ರಸಿದ್ಧನಾದನು. ಅಧ್ಯಾಯವನ್ನು ನೋಡಿ |
“ಆದ್ದರಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ, ‘ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಯೆಹೋವ ದೇವರು ಹೇಳುವುದೇನೆಂದರೆ: ನನಗೆ ಅದು ದೂರವಾಗಿರಲಿ. ಏಕೆಂದರೆ ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು. ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು.