Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 6:4 - ಕನ್ನಡ ಸಮಕಾಲಿಕ ಅನುವಾದ

4 ಏಳುಮಂದಿ ಯಾಜಕರು ಹೊತ್ತುಕೊಂಡಿದ್ದ ಮಂಜೂಷದ ಮುಂದೆ ಟಗರುಗಳ ಏಳು ಕೊಂಬುಗಳ ತುತೂರಿಗಳನ್ನು ಹಿಡಿದುಕೊಂಡು ಹೋಗಬೇಕು. ಆದರೆ ಅವರು ಏಳನೆಯ ದಿವಸ ಪಟ್ಟಣವನ್ನು ಏಳು ಸಾರಿ ಸುತ್ತಿ ಬರಬೇಕು. ಯಾಜಕರು ತುತೂರಿಗಳನ್ನು ಊದಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಏಳು ಮಂದಿ ಯಾಜಕರು ಕೊಂಬುಗಳನ್ನು ಹಿಡಿದುಕೊಂಡು ಮಂಜೂಷದ ಮುಂದೆ ನಡೆಯಲಿ. ಏಳನೆಯ ದಿನ ನೀವು ಪಟ್ಟಣವನ್ನು ಏಳು ಸಾರಿ ಸುತ್ತಬೇಕು; ಯಾಜಕರು ಕೊಂಬುಗಳನ್ನು ಊದಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಏಳುಮಂದಿ ಯಾಜಕರು ಕೊಂಬುಗಳನ್ನು ಹಿಡಿದುಕೊಂಡು ಮಂಜೂಷದ ಮುಂದೆ ನಡೆಯಲಿ. ಏಳನೆಯ ದಿವಸ ನೀವು ಪಟ್ಟಣವನ್ನು ಏಳುಸಾರಿ ಸುತ್ತಬೇಕು. ಯಾಜಕರು ಕೊಂಬುಗಳನ್ನು ಊದಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಏಳು ಮಂದಿ ಯಾಜಕರು ಕೊಂಬುಗಳನ್ನು ಹಿಡಿದುಕೊಂಡು ಮಂಜೂಷದ ಮುಂದೆ ನಡೆಯಲಿ. ಏಳನೆಯ ದಿವಸ ನೀವು ಪಟ್ಟಣವನ್ನು ಏಳುಸಾರಿ ಸುತ್ತಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಏಳು ಮಂದಿ ಯಾಜಕರಿಗೆ ಟಗರಿನ ಕೊಂಬಿನಿಂದ ಮಾಡಿದ ತುತ್ತೂರಿಗಳನ್ನು ಹಿಡಿದುಕೊಂಡು ಪವಿತ್ರ ಪೆಟ್ಟಿಗೆಯ ಮುಂದೆ ಹೋಗಲು ಹೇಳು. ಏಳನೆಯ ದಿನದಲ್ಲಿ ನಗರದ ಸುತ್ತಲೂ ನೀವು ಏಳುಸಲ ಸುತ್ತಬೇಕು. ಏಳನೆಯ ದಿನದಲ್ಲಿ ಸುತ್ತುವಾಗ ತುತ್ತೂರಿಯನ್ನು ಊದಬೇಕೆಂದು ಯಾಜಕರಿಗೆ ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 6:4
33 ತಿಳಿವುಗಳ ಹೋಲಿಕೆ  

ಆಗ ದೇವಾಲಯದಿಂದ ಬಂದ ಗಟ್ಟಿಯಾದ ಧ್ವನಿಯು, ಏಳು ದೇವದೂತರಿಗೂ, “ಹೋಗಿರಿ, ಏಳು ಬೋಗುಣಿಗಳಲ್ಲಿರುವ ದೇವರ ಕೋಪವನ್ನು ಭೂಮಿಯ ಮೇಲೆ ಸುರಿದುಬಿಡಿರಿ!” ಎಂದು ಹೇಳುವುದನ್ನು ನಾನು ಕೇಳಿದೆನು.


ಇದರಲ್ಲಿ ನೀವು ಯುದ್ಧಮಾಡಲು ಅವಶ್ಯವಲ್ಲ. ನೀವು ನೆಲೆಯಾಗಿ ನಿಂತುಕೊಂಡು, ಯೆಹೋವ ದೇವರು ನಿಮಗೆ ಕೊಡುವ ಬಿಡುಗಡೆಯನ್ನು ನೋಡಿರಿ. ಯೆಹೂದದವರೇ, ಯೆರೂಸಲೇಮಿನವರೇ, ಭಯಪಡಬೇಡಿರಿ, ಹೆದರಬೇಡಿರಿ. ಮೂರನೇ ದಿವಸ ಅವರೆದುರಿಗೆ ಹೊರಟು ಹೋಗಿರಿ. ಯೆಹೋವ ದೇವರು ನಿಮ್ಮ ಸಂಗಡ ಇದ್ದಾರೆ,” ಎಂದನು.


ಆಗ ದೇವರ ಸನ್ನಿಧಿಯಲ್ಲಿ ನಿಂತಿರುವ ಏಳು ದೇವದೂತರನ್ನು ಕಂಡೆನು. ಅವರಿಗೆ ಏಳು ತುತೂರಿಗಳನ್ನು ಕೊಡಲಾಗಿತ್ತು.


ಜನರ ಸಂಗಡ ಆಲೋಚನೆ ಮಾಡಿದ ತರುವಾಯ ಯೆಹೋಷಾಫಾಟನು, ಪರಿಶುದ್ಧತ್ವದ ವೈಭವದಿಂದ ಯೆಹೋವ ದೇವರಿಗೆ ಹಾಡುವಂತೆ ಸಂಗೀತಗಾರರನ್ನು ನೇಮಿಸಿದನು. ಅವರು ಸೈನ್ಯದ ಮುಂದೆ ಹೋಗುತ್ತಾ, “ಯೆಹೋವ ದೇವರಿಗೆ ಕೃತಜ್ಞತಾ ಸ್ತುತಿಮಾಡಿರಿ. ಅವರ ಪ್ರೀತಿಯು ಯುಗಯುಗಕ್ಕೂ ಇರುವುದು,” ಎಂದು ಹಾಡುವಂತೆ ನೇಮಿಸಿದನು.


ತನ್ನ ಸೇವಕನಿಗೆ, “ನೀನು ಹೋಗಿ ಸಮುದ್ರದ ಕಡೆಗೆ ನೋಡು,” ಎಂದನು. ಅವನು ಹೋಗಿ ನೋಡಿ, “ಏನೂ ಇಲ್ಲ,” ಎಂದನು. ಅವನು, “ಏಳು ಸಾರಿ ತಿರುಗಿ ಹೋಗಿ ನೋಡು,” ಎಂದನು.


ಯಾಜಕನು ತನ್ನ ಎಡಗೈಯಲ್ಲಿರುವ ಎಣ್ಣೆಯಲ್ಲಿ ತನ್ನ ಬಲಗೈ ಬೆರಳನ್ನು ಅದ್ದಿ, ತನ್ನ ಬೆರಳಿನಿಂದ ಆ ಎಣ್ಣೆಯನ್ನು ಏಳು ಸಾರಿ ಯೆಹೋವ ದೇವರ ಎದುರಿನಲ್ಲಿ ಚಿಮುಕಿಸಬೇಕು.


ನಾಲ್ಕು ಜೀವಿಗಳಲ್ಲಿ ಒಂದು, ಆ ಏಳು ದೂತರಿಗೆ, ಯುಗಯುಗಾಂತರಗಳಲ್ಲಿಯೂ ಜೀವಿಸುವವರಾದ ದೇವರ ಕೋಪದಿಂದ ತುಂಬಿದ್ದ ಏಳು ಚಿನ್ನದ ಬೋಗುಣಿಗಳನ್ನು ಕೊಟ್ಟಿತು.


ನಾನು ಪರಲೋಕದಲ್ಲಿ ಆಶ್ಚರ್ಯಕರವಾದ ಮತ್ತೊಂದು ಮಹಾ ಚಿಹ್ನೆಯನ್ನು ಕಂಡೆನು. ಏಳುಮಂದಿ ದೂತರಲ್ಲಿ ಕಡೆಯ ಏಳು ಉಪದ್ರವಗಳಿದ್ದವು. ಏಕೆಂದರೆ, ಅವುಗಳಲ್ಲಿ ದೇವರ ಕೋಪವು ಸಂಪೂರ್ಣವಾಗುವುದು.


ಸಿಂಹದ ಘರ್ಜನೆಯಂತೆ ಮಹಾ ಸ್ವರದಿಂದ ಕೂಗಿದನು. ಅವನು ಕೂಗಿದಾಗ, ಏಳು ಗುಡುಗುಗಳು ಮಾತನಾಡಿದವು.


ಆಗ ಏಳು ತುತೂರಿಗಳನ್ನು ಹಿಡಿದಿರುವ ಏಳು ದೇವದೂತರು ಅವುಗಳನ್ನು ಊದಲು ಸಿದ್ಧರಾದರು.


ಆಗ ನಾನು, ಸಿಂಹಾಸನದ ಮಧ್ಯದಲ್ಲಿಯೂ ನಾಲ್ಕು ಜೀವಿಗಳು ಮತ್ತು ಹಿರಿಯರ ಮಧ್ಯದಲ್ಲಿಯೂ ಒಂದು ಕುರಿಮರಿಯು ಬಲಿಗೋಸ್ಕರ ವಧೆಯಾಗಿದ್ದಂತೆ ನಿಂತಿರುವುದನ್ನು ಕಂಡೆನು. ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು. ಅವು ಭೂಮಿಯ ಮೇಲೆಲ್ಲಾ ಕಳುಹಿಸಲಾದ ದೇವರ ಏಳು ಆತ್ಮಗಳು.


ಸಿಂಹಾಸನದ ಮೇಲೆ ಕುಳಿತಿದ್ದವರ ಬಲಗೈಯಲ್ಲಿ ಒಂದು ಚರ್ಮದ ಸುರುಳಿಯನ್ನು ಕಂಡೆನು. ಅದರ ಒಳಗೂ ಹಿಂಭಾಗದಲ್ಲಿಯೂ ಬರೆಯಲಾಗಿತ್ತು. ಅದು ಏಳು ಮುದ್ರೆಗಳಿಂದ ಮುದ್ರಿತವಾಗಿತ್ತು.


ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ರಹಸ್ಯ ಏನೆಂದರೆ: ಆ ಏಳು ನಕ್ಷತ್ರಗಳು, ಆ ಏಳು ಸಭೆಗಳ ಸಂದೇಶಕರು, ಆ ಏಳು ದೀಪಸ್ತಂಭಗಳು, ಆ ಏಳು ಸಭೆಗಳಾಗಿರುತ್ತವೆ.


ಯೋಹಾನನು, ಅಂದಿನ ಏಷ್ಯಾ ಪ್ರಾಂತದಲ್ಲಿರುವ ಏಳು ಸಭೆಗಳಿಗೆ ಬರೆಯುವುದೇನೆಂದರೆ, ಗತಕಾಲ, ವರ್ತಮಾನ, ಭವಿಷ್ಯತ್ ಕಾಲಗಳಲ್ಲಿರುವ ದೇವರಿಂದ ಮತ್ತು ತಮ್ಮ ಸಿಂಹಾಸನದ ಮುಂದಿರುವ ಏಳು ಆತ್ಮಗಳಿಂದ,


ಆಗ ಎಲೀಷನು, “ನೀನು ಹೋಗಿ ಯೊರ್ದನಿನಲ್ಲಿ ಏಳು ಸಾರಿ ಸ್ನಾನಮಾಡು, ಆಗ ನಿನ್ನ ಶರೀರವು ಮೊದಲಿನಂತೆ ಮಾರ್ಪಡುವುದು, ನೀನು ಶುದ್ಧನಾಗುವೆ,” ಎಂದು ಹೇಳಲು, ಅವನ ಬಳಿಗೆ ಸೇವಕನನ್ನು ಕಳುಹಿಸಿದನು.


ಆಗ ಬಿಳಾಮನು ಬಾಲಾಕನಿಗೆ, “ಇಲ್ಲಿ ನನಗೆ ಏಳು ಬಲಿಪೀಠಗಳನ್ನು ಕಟ್ಟಿ, ನನಗೆ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಸಿದ್ಧಮಾಡು,” ಎಂದನು.


ಆಗ ಅವನು, “ಜೆರುಬ್ಬಾಬೆಲನಿಗೆ ಯೆಹೋವ ದೇವರ ವಾಕ್ಯವು ಇದೇ: ‘ಪರಾಕ್ರಮದಿಂದಲ್ಲ, ಶಕ್ತಿಯಿಂದಲ್ಲ, ನನ್ನ ಆತ್ಮದಿಂದಲೇ,’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.


ನಿದ್ರೆ ಹತ್ತಿದವನಂತಿದ್ದ ನನ್ನನ್ನು ಎಬ್ಬಿಸಿದನು. ಅವನು ನನಗೆ, “ನೀನು ಏನು ನೋಡುತ್ತೀ?” ಎಂದು ಕೇಳಿದಾಗ ನಾನು, “ಏಳು ದೀಪಗಳುಳ್ಳ ಬಂಗಾರದ ದೀಪಸ್ತಂಭ ಒಂದನ್ನು ನೋಡುತ್ತಿದ್ದೇನೆ. ಅದರ ಮೇಲೆ ಎಣ್ಣೆಯ ಪಾತ್ರೆಗಳಿವೆ.


ಆ ದಿನದಲ್ಲಿ ದೊಡ್ಡ ತುತೂರಿಯು ಊದಲಾಗುವುದು. ಆಗ ಅಸ್ಸೀರಿಯ ದೇಶದಲ್ಲಿ ಚದರಿಹೋದವರೂ, ಈಜಿಪ್ಟ್ ದೇಶದಲ್ಲಿ ಗಡೀಪಾರಾದವರೂ, ಯೆರೂಸಲೇಮಿನ ಪರಿಶುದ್ಧ ಪರ್ವತದ ಬಳಿಗೆ ಬಂದು ಯೆಹೋವ ದೇವರನ್ನು ಆರಾಧಿಸುವರು.


ಆದುದರಿಂದ ಈಗ ನೀವು ಏಳು ಹೋರಿಗಳನ್ನು, ಏಳು ಟಗರುಗಳನ್ನು ತೆಗೆದುಕೊಂಡು ನನ್ನ ದಾಸನಾದ ಯೋಬನ ಬಳಿಗೆ ಬನ್ನಿರಿ. ನಿಮ್ಮ ದೋಷಪರಿಹಾರಕ್ಕಾಗಿ ದಹನಬಲಿಯನ್ನು ಅರ್ಪಿಸಿರಿ; ನನ್ನ ದಾಸನಾದ ಯೋಬನು ನಿಮ್ಮ ಪರವಾಗಿ ಪ್ರಾರ್ಥನೆಮಾಡುವನು. ನಾನು ನಿಮ್ಮ ಬುದ್ಧಿಹೀನತೆಯ ಪ್ರಕಾರ ದಂಡಿಸದಂತೆ, ಅವನ ಪ್ರಾರ್ಥನೆಯನ್ನು ಸ್ವೀಕರಿಸುವೆನು. ನೀವು ನನ್ನ ದಾಸನಾದ ಯೋಬನಂತೆ ನನ್ನ ವಿಷಯವಾಗಿ ಸತ್ಯವನ್ನು ಆಡಲಿಲ್ಲ,” ಎಂದು ಹೇಳಿದರು.


ಇದಲ್ಲದೆ ಕೊಹಾತ್ಯರ ಮಕ್ಕಳಲ್ಲಿಯೂ, ಕೋರಹೀಯರ ಮಕ್ಕಳಲ್ಲಿರುವ ಲೇವಿಯರು ಗಟ್ಟಿಯಾಗಿ ದೊಡ್ಡ ಶಬ್ದದಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರನ್ನು ಸ್ತುತಿಸಲು ಎದ್ದು ನಿಂತರು.


ದೇವರು ತಾವೇ ಅಧಿಪತಿಯಾಗಿ ನಮ್ಮ ಸಂಗಡ ಇದ್ದಾರೆ. ಇದಲ್ಲದೆ ನಿಮಗೆ ವಿರೋಧವಾಗಿ ಜಯಧ್ವನಿ ಮಾಡುವ ತುತೂರಿಗಳನ್ನು ಹಿಡಿದುಕೊಂಡ ಅವರ ಯಾಜಕರು ನಮಗಿದ್ದಾರೆ. ಇಸ್ರಾಯೇಲರೇ, ನೀವು ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಯುದ್ಧಮಾಡಬೇಡಿರಿ. ನೀವು ಜಯಹೊಂದುವುದಿಲ್ಲ,” ಎಂದನು.


ಯಾಜಕನು ತನ್ನ ಬೆರಳನ್ನು ರಕ್ತದಲ್ಲಿ ಅದ್ದಿ, ಯೆಹೋವ ದೇವರ ಮುಂದಿನ ಪವಿತ್ರ ಸ್ಥಳದ ತೆರೆಯ ಮುಂದೆ ರಕ್ತವನ್ನು ಏಳು ಸಾರಿ ಚಿಮುಕಿಸಬೇಕು.


ಅನಂತರ ದೇವರು ಏಳನೆಯ ದಿನವನ್ನು ಆಶೀರ್ವದಿಸಿ, ಅದನ್ನು ಪವಿತ್ರ ದಿನವನ್ನಾಗಿ ಮಾಡಿದರು. ಏಕೆಂದರೆ ಆ ದಿನದಲ್ಲಿ ದೇವರು ಸೃಷ್ಟಿಸಿದ ತಮ್ಮ ಎಲ್ಲಾ ಕೆಲಸಗಳಿಂದ ವಿಶ್ರಮಿಸಿಕೊಂಡರು.


ಯುದ್ಧ ಸನ್ನದ್ಧರಾದ ನೀವೆಲ್ಲರೂ ಪಟ್ಟಣವನ್ನು ಒಂದು ಸಾರಿ ಸುತ್ತಬೇಕು. ಈ ಪ್ರಕಾರ ಆರು ದಿವಸ ಮಾಡಬೇಕು.


ಅವರು ಟಗರು ಕೊಂಬುಗಳ ತುತೂರಿಗಳಿಂದ ದೀರ್ಘಧ್ವನಿಗೈಯುವಾಗ, ಆ ತುತೂರಿಯ ಧ್ವನಿಯನ್ನು ಕೇಳುವ ಜನರೆಲ್ಲರೂ ಮಹಾ ರಭಸದಿಂದ ಆರ್ಭಟಿಸಬೇಕು. ಆಗ ಆ ಪಟ್ಟಣದ ಗೋಡೆಯು ನೆಲಸಮವಾಗಿ ಬಿದ್ದುಹೋಗುವುದು. ಜನರಲ್ಲಿ ಪ್ರತಿಯೊಬ್ಬನು ತನ್ನ ಮುಂದೆ ನೇರವಾಗಿ ಒಳಗೆ ನುಗ್ಗಿಹೋಗಬಹುದು,” ಎಂದು ಹೇಳಿದರು.


ಟಗರಿನ ಕೊಂಬುಗಳ ಏಳು ತುತೂರಿಗಳನ್ನು ಊದುತ್ತಾ ಯೆಹೋವ ದೇವರ ಒಡಂಬಡಿಕೆಯ ಮಂಜೂಷದ ಮುಂದೆ ನಡೆಯುತ್ತಾ ಹೋದರು. ಯುದ್ಧಕ್ಕೆ ಸಿದ್ಧವಾದ ಜನರು ಅವರ ಮುಂದೆ ಹೋದರು. ಆದರೆ ಹಿಂದಿನ ಸೈನ್ಯದವರು ಯೆಹೋವ ದೇವರ ಮಂಜೂಷದ ಹಿಂದೆ ನಡೆದರು. ಯಾಜಕರು ತುತೂರಿಗಳನ್ನು ಊದುತ್ತಾ ಹೊರಟರು.


ಆಗ ಅವನು ಇಳಿದು ಹೋಗಿ ದೇವರ ಮನುಷ್ಯನ ಮಾತಿನ ಪ್ರಕಾರ ಯೊರ್ದನಿನಲ್ಲಿ ಏಳು ಸಾರಿ ಮುಳುಗಿದನು. ಆಗ ಅವನ ಶರೀರವು ಚಿಕ್ಕ ಮಗುವಿನ ಶರೀರದ ಹಾಗೆ ಮಾರ್ಪಟ್ಟಿತು, ಅವನು ಶುದ್ಧನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು