ಯೆಹೋಶುವ 6:6 - ಕನ್ನಡ ಸಮಕಾಲಿಕ ಅನುವಾದ6 ಆದ್ದರಿಂದ ನೂನನ ಮಗನಾದ ಯೆಹೋಶುವನು ಯಾಜಕರನ್ನು ಕರೆದು ಅವರಿಗೆ, “ನೀವು ಒಡಂಬಡಿಕೆಯ ಮಂಜೂಷವನ್ನು ಎತ್ತಿಕೊಳ್ಳಿರಿ. ಏಳುಮಂದಿ ಯಾಜಕರು ಏಳು ಟಗರು ಕೊಂಬುಗಳ ತುತೂರಿಗಳೊಂದಿಗೆ ಯೆಹೋವ ದೇವರ ಮಂಜೂಷದ ಮುಂದೆ ಹೋಗಲಿ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆಗ ನೂನನ ಮಗನಾದ ಯೆಹೋಶುವನು ಯಾಜಕರನ್ನು ಕರೆದು ಅವರಿಗೆ, “ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಹೋಗಿರಿ. ಏಳು ಮಂದಿ ಯಾಜಕರು ಕೊಂಬುಗಳನ್ನು ಹಿಡಿದುಕೊಂಡು ಯೆಹೋವನ ಮಂಜೂಷದ ಮುಂದೆ ನಡೆಯಲಿ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನೂನನ ಮಗ ಯೆಹೋಶುವನು ಯಾಜಕರನ್ನು ಕರೆದು ಅವರಿಗೆ, “ನೀವು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಹೋಗಿರಿ. ಏಳು ಮಂದಿ ಯಾಜಕರು ಕೊಂಬುಗಳನ್ನು ಹಿಡಿದುಕೊಂಡು ಸರ್ವೇಶ್ವರನ ಮಂಜೂಷದ ಮುಂದೆ ನಡೆಯಲಿ,” ಎಂದು ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆಗ ನೂನನ ಮಗನಾದ ಯೆಹೋಶುವನು ಯಾಜಕರನ್ನು ಕರೆದು ಅವರಿಗೆ - ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಹೋಗಿರಿ; ಏಳು ಮಂದಿ ಯಾಜಕರು ಕೊಂಬುಗಳನ್ನು ಹಿಡಿದುಕೊಂಡು ಯೆಹೋವನ ಮಂಜೂಷದ ಮುಂದೆ ನಡೆಯಲಿ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆದ್ದರಿಂದ ನೂನನ ಮಗನಾದ ಯೆಹೋಶುವನು ಯಾಜಕರನ್ನು ಒಟ್ಟಿಗೆ ಕರೆದು, ಅವರಿಗೆ, “ಯೆಹೋವನ ಪವಿತ್ರ ಪೆಟ್ಟಿಗೆಯನ್ನು ತೆಗೆದುಕೊಂಡು ಹೋಗಿರಿ. ಏಳು ಮಂದಿ ಯಾಜಕರು ತುತ್ತೂರಿಗಳನ್ನು ತೆಗೆದುಕೊಂಡು ಪೆಟ್ಟಿಗೆಯ ಮುಂದೆ ನಡೆಯಬೇಕು” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |