Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 7:10 - ಕನ್ನಡ ಸಮಕಾಲಿಕ ಅನುವಾದ

10 ಯೆಹೋವ ದೇವರು ಯೆಹೋಶುವನಿಗೆ, “ನೀನು ಎದ್ದೇಳು, ನೀನು ಈ ಪ್ರಕಾರ ಬೋರಲು ಬಿದ್ದಿರುವುದೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆಗ ಯೆಹೋವನು ಯೆಹೋಶುವನಿಗೆ ಹೇಳಿದ್ದೇನೆಂದರೆ “ಏಳು, ನೀನು ಈ ಪ್ರಕಾರ ಬೋರಲು ಬಿದ್ದಿರುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಸರ್ವೇಶ್ವರ ಯೆಹೋಶುವನಿಗೆ ಹೀಗೆ ಎಂದರು : “ನೀನು ಅಧೋಮುಖವಾಗಿ ಬಿದ್ದು ಇರುವುದೇಕೆ, ಏಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆಗ ಯೆಹೋವನು ಯೆಹೋಶುವನಿಗೆ ಹೇಳಿದ್ದೇನಂದರೆ - ಏಳು, ನೀನು ಈ ಪ್ರಕಾರ ಬೋರಲಬಿದ್ದಿರುವದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯೆಹೋವನು ಯೆಹೋಶುವನಿಗೆ, “ಮೇಲಕ್ಕೆ ಏಳು, ನೀನು ಹೀಗೆ ಬೋರಲು ಬಿದ್ದಿರುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 7:10
7 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಸಮುಯೇಲನಿಗೆ, “ಇಸ್ರಾಯೇಲಿನ ಅರಸನಾಗಿರದ ಹಾಗೆ ನಾನು ಅಲಕ್ಷ್ಯಮಾಡಿದ ಸೌಲನಿಗೋಸ್ಕರ ನೀನು ಎಷ್ಟರವರೆಗೆ ದುಃಖವುಳ್ಳವನಾಗಿರುವೆ? ನೀನು ನಿನ್ನ ಕೊಂಬನ್ನು ತೈಲದಿಂದ ತುಂಬಿಸಿಕೊಂಡು ಬಾ. ಬೇತ್ಲೆಹೇಮಿನವನಾದ ಇಷಯನ ಬಳಿಗೆ ನಿನ್ನನ್ನು ಕಳುಹಿಸುವೆನು. ಏಕೆಂದರೆ ಅವನ ಮಕ್ಕಳಲ್ಲಿ ನಾನು ಒಬ್ಬನನ್ನು ಅರಸನಾಗಿ ಆಯ್ದುಕೊಂಡೆನು,” ಎಂದರು.


ಅದಕ್ಕೆ ಸಮುಯೇಲನು ಹೇಳಿದ್ದೇನೆಂದರೆ, “ಯೆಹೋವ ದೇವರ ವಾಕ್ಯಕ್ಕೆ ವಿಧೇಯನಾದರೆ, ಯೆಹೋವ ದೇವರಿಗೆ ಆಗುವ ಸಂತೋಷ ದಹನಬಲಿಗಳಲ್ಲಿಯೂ ಯಜ್ಞಗಳಲ್ಲಿಯೂ ಆಗುವುದೋ? ಇಗೋ, ಯಜ್ಞಕ್ಕಿಂತ ವಿಧೇಯತೆಯು, ಟಗರುಗಳ ಕೊಬ್ಬಿಗಿಂತ ಮಾತುಕೇಳುವುದೇ ಉತ್ತಮವಾಗಿರುವುದು.


ಆಗ ಯೆಹೋವ ದೇವರು ಮೋಶೆಗೆ, “ನೀನು ನನಗೆ ಮೊರೆಯಿಡುವುದೇನು? ಇಸ್ರಾಯೇಲರಿಗೆ ಮುಂದಕ್ಕೆ ಹೊರಡಬೇಕೆಂದು ಹೇಳು.


ಚಿನ್ನ, ಬೆಳ್ಳಿ, ಕಂಚು, ಕಬ್ಬಿಣ, ಮುಂತಾದವುಗಳಲ್ಲಿ ನಿಪುಣರು ಲೆಕ್ಕವಿಲ್ಲದಷ್ಟು ಇದ್ದಾರೆ. ಎದ್ದು ಕೆಲಸ ಮಾಡು, ಯೆಹೋವ ದೇವರು ನಿನ್ನ ಸಂಗಡ ಇರಲಿ,” ಎಂದನು.


ಕಾನಾನ್ಯರೂ ದೇಶವಾಸಿಗಳೆಲ್ಲರೂ ಇದನ್ನು ಕೇಳಿ ನಮ್ಮ ಸುತ್ತಲೂ ಸುತ್ತಿಕೊಂಡು ನಮ್ಮ ಹೆಸರನ್ನು ಭೂಮಿಯಿಂದ ತೆಗೆದುಬಿಡುವರು, ಆಗ ನಿಮ್ಮ ಮಹತ್ತಾದ ಹೆಸರಿಗೆ ಏನು ಮಾಡುವಿರಿ?” ಎಂದನು.


ಇಸ್ರಾಯೇಲರು ಪಾಪಮಾಡಿದ್ದಾರೆ. ನಾನು ತಮಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನು ಮೀರಿದರು. ಅವರು ಅರ್ಪಿತವಾದದ್ದರಲ್ಲಿ ಕೆಲವೊಂದನ್ನು ಕಳವು ಮಾಡಿ ತೆಗೆದುಕೊಂಡು, ವಂಚನೆಮಾಡಿ ಅದನ್ನು ತಮ್ಮ ಸಲಕರಣೆಗಳಲ್ಲಿ ಬಚ್ಚಿಟ್ಟುಕೊಂಡಿದ್ದಾರೆ.


ಯೆಹೋವ ದೇವರು ಯೆಹೋಶುವನಿಗೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು