ಯೆಹೋಶುವ 7:12 - ಕನ್ನಡ ಸಮಕಾಲಿಕ ಅನುವಾದ12 ಆದ್ದರಿಂದ ಇಸ್ರಾಯೇಲರು ತಮ್ಮ ಶತ್ರುಗಳ ಮುಂದೆ ನಿಲ್ಲಲಾರದೆ ತಮ್ಮ ಶತ್ರುಗಳಿಗೆ ಬೆನ್ನು ತೋರಿಸಿದ್ದಾರೆ. ಅದರಿಂದ ಅವರು ನಾಶನಕ್ಕೆ ಪಾತ್ರರಾದರು. ನೀವು ಶಾಪಕ್ಕೀಡಾದದ್ದನ್ನು ನಿಮ್ಮ ಮಧ್ಯದಲ್ಲಿಂದ ನಾಶಮಾಡದೆ ಇದ್ದರೆ, ಇನ್ನು ಮೇಲೆ ನಾನು ನಿಮ್ಮ ಸಂಗಡ ಇರುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆದುದರಿಂದ ಇಸ್ರಾಯೇಲ್ಯರು ಶತ್ರುಗಳ ಮುಂದೆ ನಿಲ್ಲಲಾರದೆ ಅವರಿಗೆ ಬೆನ್ನು ತೋರಿಸಿದ್ದಾರೆ. ಅವರು ಶಾಪಗ್ರಸ್ತರೇ ಸರಿ. ಶಾಪಕ್ಕೆ ಕಾರಣವಾದವರನ್ನು ನಿಮ್ಮ ಮಧ್ಯದಿಂದ ತೆಗೆದುಹಾಕುವ ತನಕ ನಾನು ನಿಮ್ಮ ಸಂಗಡ ಬರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಆದುದರಿಂದಲೇ ಇಸ್ರಯೇಲರು ಶತ್ರುಗಳ ಮುಂದೆ ನಿಲ್ಲಲಾರದೆ ಬೆನ್ನು ತೋರಿಸಿದ್ದಾರೆ. ಅವರು ಶಾಪಗ್ರಸ್ತರೇ ಸರಿ. ಶಾಪಕ್ಕೆ ಕಾರಣವಾದುದನ್ನು ನಿಮ್ಮ ಮಧ್ಯೆಯಿಂದ ತೆಗೆದುಹಾಕುವ ತನಕ ನಾನು ನಿಮ್ಮ ಸಂಗಡ ಬರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಆದದರಿಂದ ಇಸ್ರಾಯೇಲ್ಯರು ಶತ್ರುಗಳ ಮುಂದೆ ನಿಲ್ಲಲಾರದೆ ಅವರಿಗೆ ಬೆನ್ನು ತೋರಿಸುವರು. ಅವರು ಶಾಪಗ್ರಸ್ತರೇ. ಶಾಪಕ್ಕೆ ಕಾರಣವಾದದ್ದನ್ನು ನಿಮ್ಮ ಮಧ್ಯದಿಂದ ತೆಗೆದು ಹಾಕುವವರೆಗೆ ನಾನು ನಿಮ್ಮ ಸಂಗಡ ಬರುವದಿಲ್ಲ. ಎದ್ದು ಜನರನ್ನು ಶುದ್ಧಪಡಿಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಅದಕ್ಕಾಗಿಯೇ ಇಸ್ರೇಲಿನ ಸೈನ್ಯವು ಯುದ್ಧದಿಂದ ವಿಮುಖವಾಗಿ ಓಡಿಬಂತು. ಅವರು ತಪ್ಪನ್ನು ಮಾಡಿದ್ದರಿಂದಲೇ ಶಾಪಕ್ಕೆ ಗುರಿಯಾಗಿದ್ದಾರೆ. ಆ ಪಾಪವನ್ನು ನಿಮ್ಮಿಂದ ತೆಗೆದುಹಾಕಬೇಕು, ಅಲ್ಲಿಯವರೆಗೆ ನಾನು ನಿಮಗೆ ಸಹಾಯ ಮಾಡುವುದಿಲ್ಲ, ನಾನು ನಿಮ್ಮ ಸಂಗಡ ಬರುವುದೇ ಇಲ್ಲ. ಅಧ್ಯಾಯವನ್ನು ನೋಡಿ |