ಯೆಹೋಶುವ 7:18 - ಕನ್ನಡ ಸಮಕಾಲಿಕ ಅನುವಾದ18 ಅವನ ಕುಟುಂಬಗಳು ಕುಟುಂಬಗಳಾಗಿ, ವ್ಯಕ್ತಿಗಳು ವ್ಯಕ್ತಿಗಳಾಗಿ ಬಂದಾಗ, ಜಿಮ್ರಿಯ ಮಗನಾದ ಕರ್ಮೀಯ ಮಗನಾದ ಆಕಾನನೂ ಯೆಹೂದ ಕುಲದವನೂ ಜೆರಹನ ಗೋತ್ರದವನೂ ಸಿಕ್ಕಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆ ಕುಟುಂಬದ ಪುರುಷರನ್ನು ಕರೆದಾಗ ಯೆಹೂದ ಕುಲದವನೂ ಜೆರಹನ ಗೋತ್ರದವನೂ ಜಬ್ದೀಯ ಕುಟುಂಬದವನೂ ಕರ್ಮೀಯನ ಮಗನೂ ಆದ ಆಕಾನನು ಹಿಡಿಯಲ್ಪಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಆ ಕುಟುಂಬದವರಲ್ಲಿ ಒಬ್ಬನಾದ ಮೇಲೆ ಒಬ್ಬನನ್ನು ಕರೆದಾಗ ಆಕಾನನು ಸಿಕ್ಕಿಕೊಂಡನು. ಯೆಹೂದ ಕುಲದವನೂ ಜೆರಹನ ಗೋತ್ರದವನೂ ಜಬ್ದೀಯ ಕುಟುಂಬದವನೂ ಹಾಗೂ ಕರ್ಮೀಯ ಮಗನೂ ಇವನೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಆ ಕುಟುಂಬದ ಪುರುಷರನ್ನು ಕರೆದಾಗ ಯೆಹೂದಕುಲದವನೂ ಜೆರಹನ ಗೋತ್ರದವನೂ ಜಬ್ದೀಯ ಕುಟುಂಬದವನೂ ಕರ್ಮೀಯ ಮಗನೂ ಆದ ಆಕಾನನು ಹಿಡಿಯಲ್ಪಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಆಗ ಯೆಹೋಶುವನು ಆ ಕುಟುಂಬದ ಎಲ್ಲ ಗಂಡಸರನ್ನು ಯೆಹೋವನ ಮುಂದೆ ಬರಲು ಹೇಳಿದನು. ಯೆಹೋವನು ಆಗ ಕರ್ಮೀಯ ಮಗನಾದ ಆಕಾನನನ್ನು ಸೂಚಿಸಿದನು. ಕರ್ಮೀಯು ಜಬ್ದೀಯ ಮಗನಾಗಿದ್ದನು, ಜಬ್ದೀಯು ಜೆರಹನ ಮಗನಾಗಿದ್ದನು. ಅಧ್ಯಾಯವನ್ನು ನೋಡಿ |