Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 7:22 - ಕನ್ನಡ ಸಮಕಾಲಿಕ ಅನುವಾದ

22 ಆಗ ಯೆಹೋಶುವನು ದೂತರನ್ನು ಕಳುಹಿಸಿದನು. ಅವರು ಡೇರೆಗಳಿಗೆ ಓಡಿದರು. ಆ ಡೇರೆಯಲ್ಲಿ ಹೂತಿಟ್ಟವುಗಳನ್ನು ತೆಗೆದರು. ಬೆಳ್ಳಿಯು ಅದರ ಕೆಳಗೆ ಮರೆಮಾಡಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆಗ ಯೆಹೋಶುವನು ಆಳುಗಳನ್ನು ಕಳುಹಿಸಲು ಅವರು ಓಡಿಹೋಗಿ ಹುಡುಕಲಾಗಿ ಆ ನಿಲುವಂಗಿಯು ಗುಡಾರದಲ್ಲಿ ಹೂತಿಡಲಾಗಿತ್ತು. ಬೆಳ್ಳಿಯು ಅದರ ಕೆಳಗೆ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆಗ ಯೆಹೋಶುವನು ಆಳುಗಳನ್ನು ಕಳುಹಿಸಲು ಅವರು ಓಡಿಹೋಗಿ ಹುಡುಕಿದರು. ಆ ನಿಲುವಂಗಿಯನ್ನು ಗುಡಾರದಲ್ಲಿ ಹೂತಿಡಲಾಗಿತ್ತು. ಅದರ ಕೆಳಗೆ ಬೆಳ್ಳಿ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆಗ ಯೆಹೋಶುವನು ಆಳುಗಳನ್ನು ಕಳುಹಿಸಲು ಅವರು ಓಡಿಹೋಗಿ ನೋಡಲಾಗಿ ಆ ನಿಲುವಂಗಿಯು ಗುಡಾರದಲ್ಲಿ ಹುಗಿದಿತ್ತು. ಬೆಳ್ಳಿಯು ಅದರ ಕೆಳಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆಗ ಯೆಹೋಶುವನು ಕೆಲವರನ್ನು ಗುಡಾರಕ್ಕೆ ಕಳುಹಿಸಿದನು. ಅವರು ಗುಡಾರಕ್ಕೆ ಓಡಿಹೋಗಿ ಹುಗಿದಿಟ್ಟಿದ್ದ ಆ ವಸ್ತುಗಳನ್ನು ಕಂಡರು. ಬೆಳ್ಳಿಯು ನಿಲುವಂಗಿಯ ಕೆಳಗಡೆ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 7:22
3 ತಿಳಿವುಗಳ ಹೋಲಿಕೆ  

ನಾನು ಕೊಳ್ಳೆಯಲ್ಲಿ ಒಂದು ಶಿನಾರ್ ದೇಶದ ಒಳ್ಳೆಯ ವಸ್ತ್ರವನ್ನೂ ಎರಡು ಕಿಲೋಗ್ರಾಂ ತೂಕದ ಬೆಳ್ಳಿಯನ್ನೂ ಅರ್ಧ ಕಿಲೋಗ್ರಾಂ ತೂಕದ ಒಂದು ಬಂಗಾರದ ಗಟ್ಟಿಯನ್ನು ಕಂಡು ಅವುಗಳನ್ನು ಆಶಿಸಿ ತೆಗೆದುಕೊಂಡೆನು. ಅವುಗಳನ್ನು ನನ್ನ ಗುಡಾರದ ಮಧ್ಯದಲ್ಲಿ ನೆಲದೊಳಗೆ ಬಚ್ಚಿಟ್ಟಿದ್ದೇನೆ, ಬೆಳ್ಳಿಯೂ ಅದರ ಕೆಳಗೆ ಇದೆ,” ಎಂದನು.


ಅವರು ಅವುಗಳನ್ನು ಡೇರೆಯ ಮಧ್ಯದಿಂದ ತೆಗೆದುಕೊಂಡು ಯೆಹೋಶುವನ ಬಳಿಗೂ ಸಮಸ್ತ ಇಸ್ರಾಯೇಲರ ಬಳಿಗೂ ತಂದು, ಯೆಹೋವ ದೇವರ ಮುಂದೆ ಇಟ್ಟರು.


ಆದ್ದರಿಂದ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ವಶಮಾಡಿಕೊಳ್ಳುವುದಕ್ಕೆ ಸೊತ್ತಾಗಿ ಕೊಡುವ ದೇಶದ ಸುತ್ತಲು ಇರುವ ಶತ್ರುಗಳಿಂದ ನಿಮ್ಮನ್ನು ಬಿಡಿಸಿ, ವಿಶ್ರಾಂತಿ ಕೊಡುವರು. ಆಗ ನೀವು ಅಮಾಲೇಕ್ಯರ ಜ್ಞಾಪಕವನ್ನು ಆಕಾಶದ ಕೆಳಗಿಂದ ಅಳಿಸಿಬಿಡಬೇಕು, ಇದನ್ನು ಮರೆಯಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು