Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 7:6 - ಕನ್ನಡ ಸಮಕಾಲಿಕ ಅನುವಾದ

6 ಆಗ ಯೆಹೋಶುವನು ತನ್ನ ವಸ್ತ್ರಗಳನ್ನು ಹರಿದುಕೊಂಡನು. ಇಸ್ರಾಯೇಲಿನ ಹಿರಿಯರೂ ತಮ್ಮ ತಲೆಗಳ ಮೇಲೆ ಧೂಳನ್ನು ಹಾಕಿಕೊಂಡು ಸಂಜೆಯವರೆಗೆ ಯೆಹೋವ ದೇವರ ಮಂಜೂಷದ ಮುಂದೆ ನೆಲದ ಮೇಲೆ ಬೋರಲು ಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಗ ಯೆಹೋಶುವನೂ ಮತ್ತು ಇಸ್ರಾಯೇಲ್ಯರ ಹಿರಿಯರೂ ತಮ್ಮ ಬಟ್ಟೆಗಳನ್ನು ಹರಿದುಕೊಂಡು, ತಲೆಯ ಮೇಲೆ ಭೂದಿಯನ್ನು ಹಾಕಿಕೊಂಡು ಸಾಯಂಕಾಲದವರೆಗೂ ಯೆಹೋವನ ಮಂಜೂಷದ ಮುಂದೆ ಬೋರಲು ಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆಗ ಯೆಹೋಶುವನು ಮತ್ತು ಇಸ್ರಯೇಲರ ಹಿರಿಯರು ದುಃಖ ತಾಳಲಾರದೆ ತಮ್ಮ ಬಟ್ಟೆಗಳನ್ನು ಹರಿದುಕೊಂಡು, ತಲೆಯ ಮೇಲೆ ಬೂದಿಯನ್ನು ಸುರಿದುಕೊಂಡು ಸಾಯಂಕಾಲದವರೆಗೆ ಸರ್ವೇಶ್ವರನ ಮಂಜೂಷದ ಮುಂದೆ ಅಧೋಮುಖರಾಗಿ ಬಿದ್ದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆಗ ಯೆಹೋಶುವನೂ ಇಸ್ರಾಯೇಲ್ಯರ ಹಿರಿಯರೂ ತಮ್ಮ ಬಟ್ಟೆಗಳನ್ನು ಹರಿದುಕೊಂಡು ತಲೆಯ ಮೇಲೆ ಬೂದಿಯನ್ನು ಹಾಕಿಕೊಂಡು ಸಾಯಂಕಾಲದವರೆಗೂ ಯೆಹೋವನ ಮಂಜೂಷದ ಮುಂದೆ ಬೋರಲಬಿದ್ದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಇದನ್ನು ಕೇಳಿ ಯೆಹೋಶುವನು ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು ಪವಿತ್ರ ಪೆಟ್ಟಿಗೆಯ ಮುಂದೆ ನೆಲದ ಮೇಲೆ ಬೋರಲಾಗಿ ಬಿದ್ದುಕೊಂಡನು. ಸಾಯಂಕಾಲದವರೆಗೂ ಯೆಹೋಶುವನು ಹಾಗೆಯೇ ಇದ್ದನು. ಇಸ್ರೇಲಿನ ಹಿರಿಯರೂ ಹಾಗೆಯೇ ಮಾಡಿದರು. ಅವರು ದುಃಖದಿಂದ ತಮ್ಮ ತಲೆಯ ಮೇಲೆ ಧೂಳನ್ನು ಸುರಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 7:6
30 ತಿಳಿವುಗಳ ಹೋಲಿಕೆ  

ರೂಬೇನನು ಗುಂಡಿಯ ಬಳಿಗೆ ತಿರುಗಿ ಬಂದಾಗ, ಯೋಸೇಫನು ಗುಂಡಿಯಲ್ಲಿ ಇಲ್ಲದ್ದರಿಂದ, ತನ್ನ ವಸ್ತ್ರಗಳನ್ನು ಹರಿದುಕೊಂಡನು.


ಆಗ ಯಾಕೋಬನು ತನ್ನ ವಸ್ತ್ರಗಳನ್ನು ಹರಿದುಕೊಂಡು ತನ್ನ ನಡುವಿಗೆ ಗೋಣಿಯನ್ನು ಕಟ್ಟಿಕೊಂಡು ತನ್ನ ಮಗನಿಗೋಸ್ಕರ ಬಹುದಿನ ದುಃಖಪಟ್ಟನು.


ಚೀಯೋನಿನ ಹಿರಿಯರು ನೆಲದ ಮೇಲೆ ಕುಳಿತುಕೊಂಡು ನಿಶ್ಶಬ್ದವಾಗಿದ್ದಾರೆ. ಅವರು ತಮ್ಮ ತಲೆಗಳ ಮೇಲೆ ಧೂಳು ಹಾಕಿಕೊಂಡಿದ್ದಾರೆ. ಅವರು ಗೋಣಿತಟ್ಟನ್ನು ಸುತ್ತಿಕೊಂಡಿದ್ದಾರೆ. ಯೆರೂಸಲೇಮಿನ ಕನ್ಯೆಯರು ತಮ್ಮ ತಲೆಯನ್ನು ನೆಲದ ಕಡೆಗೆ ಬಗ್ಗಿಸಿಕೊಂಡಿದ್ದಾರೆ.


ಆಗ ಅರಸನು ಎದ್ದು, ತನ್ನ ವಸ್ತ್ರಗಳನ್ನು ಹರಿದುಕೊಂಡು ನೆಲದ ಮೇಲೆ ಬಿದ್ದನು. ಅವನ ಸೇವಕರೆಲ್ಲರೂ ತಮ್ಮ ವಸ್ತ್ರಗಳನ್ನು ಹರಿದುಕೊಂಡು ಅವನ ಸುತ್ತಲು ನಿಂತರು.


ಇದಲ್ಲದೆ ಕಾನಾನ್ ದೇಶವನ್ನು ಸಂಚರಿಸಿ ನೋಡಿದವರಲ್ಲಿದ್ದ ನೂನನ ಮಗ ಯೆಹೋಶುವನೂ, ಯೆಫುನ್ನೆಯ ಮಗ ಕಾಲೇಬನೂ ತಮ್ಮ ವಸ್ತ್ರಗಳನ್ನು ಹರಿದುಕೊಂಡು,


ಆಗ ಅವರು ತಮ್ಮ ತಲೆಯ ಮೇಲೆ ಧೂಳನ್ನು ಸುರಿದುಕೊಂಡು ಅಳುತ್ತಾ ದುಃಖಿಸುತ್ತಾ ಹೀಗೆ ಕೂಗುವರು: “ ‘ಅಯ್ಯೋ! ಅಯ್ಯೋ! ದುಃಖಭರಿತ ಮಹಾನಗರಿಯೇ, ಸಮುದ್ರದ ಮೇಲೆ ಹಡಗುಗಳನ್ನು ಹೊಂದಿದವರೆಲ್ಲರೂ ಆಕೆಯ ವೈಭವದಿಂದಲೇ ಐಶ್ವರ್ಯವಂತರಾದರಲ್ಲಾ! ಒಂದು ತಾಸಿನಲ್ಲಿ ಆಕೆ ಹಾಳಾದಳಲ್ಲಾ?’


ಆದರೆ ಅಪೊಸ್ತಲರಾದ ಬಾರ್ನಬ ಮತ್ತು ಪೌಲರು ಇದನ್ನು ಕೇಳಿದಾಗ, ತಮ್ಮ ಬಟ್ಟೆಗಳನ್ನು ಹರಿದುಕೊಂಡು ಜನಸಮೂಹದ ಕಡೆಗೆ ಓಡಿಬಂದು ಕೂಗಿ ಹೇಳಿದ್ದೇನೆಂದರೆ:


ಅವರು ಯೋಬನನ್ನು ದೂರದಿಂದ ನೋಡಿದಾಗ, ಅವನನ್ನು ಗುರುತಿಸಲು ಸಾಧ್ಯವಾಗಲಿಲ್ಲ. ಅವರು ಗಟ್ಟಿಯಾಗಿ ಅಳಲು ಪ್ರಾರಂಭಿಸಿದರು. ತಮ್ಮ ತಮ್ಮ ಮೇಲಂಗಿಗಳನ್ನು ಹರಿದುಕೊಂಡು, ಧೂಳನ್ನು ತಮ್ಮ ತಲೆಯ ಮೇಲೆ ಸುರಿಸಿಕೊಂಡರು.


ಆಗ ಯೋಬನು ಎದ್ದು ತನ್ನ ಮೇಲಂಗಿಯನ್ನು ಹರಿದುಕೊಂಡನು. ನಂತರ ತನ್ನ ತಲೆ ಬೋಳಿಸಿಕೊಂಡು, ನೆಲಕ್ಕೆ ಬಿದ್ದು ಸಾಷ್ಟಾಂಗವೆರಗಿ,


ಆದದ್ದೆಲ್ಲಾ ಮೊರ್ದೆಕೈಗೆ ತಿಳಿದಾಗ ಮೊರ್ದೆಕೈ ತನ್ನ ವಸ್ತ್ರಗಳನ್ನು ಹರಿದುಕೊಂಡು ಗೋಣಿತಟ್ಟನ್ನು ಉಟ್ಟುಕೊಂಡು ಬೂದಿಯನ್ನು ಹಚ್ಚಿಕೊಂಡು ಪಟ್ಟಣದ ಮಧ್ಯದಲ್ಲಿ ಹೋಗಿ ಬಹು ದುಃಖದಿಂದ ಗೋಳಾಡಿದನು.


ದಾವೀದನು ಕೂಸಿಗೋಸ್ಕರ ದೇವರನ್ನು ಬೇಡಿಕೊಂಡನು. ಇದಲ್ಲದೆ ದಾವೀದನು ಉಪವಾಸ ಮಾಡಿ, ಒಳಗಿನ ಕೋಣೆಯಲ್ಲಿ ನೆಲದ ಮೇಲೆಯೇ ರಾತ್ರಿ ಕಳೆಯುತ್ತಿದ್ದನು.


ಸೌಲನೂ, ಅವನ ಮಗನಾದ ಯೋನಾತಾನನೂ ಇಸ್ರಾಯೇಲಿನ ಮನೆಯವರೂ ಯೆಹೋವ ದೇವರ ಜನರೂ ಖಡ್ಗದಿಂದ ಬಿದ್ದ ಕಾರಣ, ಅವರಿಗೋಸ್ಕರ ಗೋಳಾಡಿ ಅತ್ತು, ಅಸ್ತಮಾನದವರೆಗೂ ಉಪವಾಸವಾಗಿದ್ದರು.


ಅದೇ ದಿವಸದಲ್ಲಿ ಬೆನ್ಯಾಮೀನನಾದ ಒಬ್ಬನು ತನ್ನ ವಸ್ತ್ರಗಳನ್ನು ಹರಿದುಕೊಂಡು, ತನ್ನ ತಲೆಯ ಮೇಲೆ ಮಣ್ಣು ಹಾಕಿಕೊಂಡು, ಯುದ್ಧರಂಗದಿಂದ ಶೀಲೋವಿಗೆ ಓಡಿಬಂದನು.


ಆದ್ದರಿಂದ ಜನರು ಬೇತೇಲಿಗೆ ಬಂದು, ಅಲ್ಲಿ ದೇವರ ಮುಂದೆ ಸಾಯಂಕಾಲದವರೆಗೆ ಇದ್ದು, ತಮ್ಮ ಧ್ವನಿ ಎತ್ತಿ ಬಹಳವಾಗಿ ಅತ್ತು,


ಆಗ ಇಸ್ರಾಯೇಲರೆಲ್ಲರೂ ಸಮಸ್ತ ಸೇನೆಯೂ ಬೇತೇಲಿಗೆ ಹೊರಟು, ಅಲ್ಲಿ ಅಳುತ್ತಾ ಯೆಹೋವ ದೇವರ ಮುಂದೆ ಕುಳಿತುಕೊಂಡು, ಆ ಸಂಜೆಯವರೆಗೆ ಉಪವಾಸವಾಗಿದ್ದು, ಯೆಹೋವ ದೇವರಿಗೆ ದಹನಬಲಿಗಳನ್ನೂ ಸಮಾಧಾನದ ಸಮರ್ಪಣೆಗಳನ್ನೂ ಅರ್ಪಿಸಿದರು.


ಇಸ್ರಾಯೇಲರು ಯೆಹೋವ ದೇವರ ಬಳಿಗೆ ಹೋಗಿ, ಅವರ ಮುಂದೆ ಸಂಜೆಯವರೆಗೆ ಅತ್ತು, “ನಮ್ಮ ಸಹೋದರರಾದ ಬೆನ್ಯಾಮೀನ್ಯರ ಸಂಗಡ ಯುದ್ಧಮಾಡುವುದಕ್ಕೆ ಹೋಗಬೇಕೋ?” ಎಂದು ಯೆಹೋವ ದೇವರನ್ನು ಕೇಳಿದರು. ಅದಕ್ಕೆ ಯೆಹೋವ ದೇವರು, “ಅವರ ಮೇಲೆ ಹೋಗಿರಿ,” ಎಂದರು. ಎರಡನೆಯ ದಿವಸದಲ್ಲಿ ಇಸ್ರಾಯೇಲರು ಬೆನ್ಯಾಮೀನ್ಯರ ಬಳಿಗೆ ಬಂದರು.


“ನೀನು ಈ ಜನರ ಮಧ್ಯದಿಂದ ಎದ್ದು ಬಾ. ನಾನು ಅವರನ್ನು ಕ್ಷಣಮಾತ್ರದಲ್ಲಿ ದಹಿಸಿಬಿಡುತ್ತೇನೆ,” ಎಂದರು. ಆಗ ಅವರಿಬ್ಬರು ಬೋರಲು ಬಿದ್ದರು.


ಆಗ ಅವರು ಬೋರಲು ಬಿದ್ದು, “ದೇವರೇ, ಎಲ್ಲಾ ಮಾನವರ ಆತ್ಮಗಳ ದೇವರೇ, ಒಬ್ಬ ಮನುಷ್ಯನ ಪಾಪದ ದೆಸೆಯಿಂದ ನೀವು ಸಮಸ್ತ ಸಭೆಯ ಮೇಲೆ ಕೋಪಿಸಿಕೊಳ್ಳುತ್ತೀರೋ?” ಎಂದರು.


ಇದಲ್ಲದೆ ಯೆಹೋಶುವನು, “ಅಯ್ಯೋ, ಸಾರ್ವಭೌಮ ಯೆಹೋವ ದೇವರೇ, ನಮ್ಮನ್ನು ನಾಶಮಾಡುವ ಹಾಗೆ ನಮ್ಮನ್ನು ಅಮೋರಿಯರ ಕೈಯಲ್ಲಿ ಒಪ್ಪಿಸಿಕೊಡುವುದಕ್ಕಾಗಿ ನೀವು ಈ ಜನರನ್ನು ಯೊರ್ದನ್ ನದಿ ದಾಟಿಸಿದ್ದು ಏಕೆ? ನಾವು ಯೊರ್ದನ್ ನದಿ ಆಚೆಯಲ್ಲಿ ಇದ್ದಿದ್ದರೆ ಎಷ್ಟೋ ಒಳ್ಳೆಯದಾಗಿತ್ತು.


ಆಗ ದಾವೀದನೂ, ಅವನ ಸಂಗಡ ಇದ್ದ ಸಮಸ್ತ ಜನರೂ ತಮ್ಮ ವಸ್ತ್ರಗಳನ್ನು ಹರಿದುಕೊಂಡು,


ಅರಸನು ಮೋಶೆಯ ನಿಯಮದ ಪುಸ್ತಕದ ಮಾತುಗಳನ್ನು ಕೇಳಿದಾಗ, ತನ್ನ ವಸ್ತ್ರಗಳನ್ನು ಹರಿದುಕೊಂಡನು.


ಅರಸನು ದೇವರ ನಿಯಮದ ವಾಕ್ಯಗಳನ್ನು ಕೇಳಿದಾಗ, ತನ್ನ ವಸ್ತ್ರಗಳನ್ನು ಹರಿದುಕೊಂಡನು.


ಆದ್ದರಿಂದ ನಾನು ಹೇಳಿದ್ದನ್ನೆಲ್ಲಾ ಹಿಂತೆಗೆದುಕೊಂಡು, ಧೂಳಿನಲ್ಲಿಯೂ ಬೂದಿಯಲ್ಲಿಯೂ ಕುಳಿತು ಪಶ್ಚಾತ್ತಾಪಪಡುತ್ತೇನೆ,” ಎಂದನು.


ಅವನು ಅವಳನ್ನು ನೋಡಿದಾಗ, ತನ್ನ ವಸ್ತ್ರಗಳನ್ನು ಹರಿದುಕೊಂಡು, “ಅಯ್ಯೋ, ನನ್ನ ಮಗಳೇ, ನೀನು ನನ್ನನ್ನು ಬಹಳವಾಗಿ ಕುಂದಿಸಿದೆ. ನನ್ನನ್ನು ತೊಂದರೆ ಪಡಿಸುವವರಲ್ಲಿ ನೀನೂ ಒಬ್ಬಳಾದೆ. ಏಕೆಂದರೆ ನಾನು ಯೆಹೋವ ದೇವರಿಗೆ ನನ್ನ ಬಾಯಿತೆರೆದು, ಪ್ರಮಾಣಮಾಡಿದೆನು, ಹಿಂದೆಗೆಯಲಾರೆನು,” ಎಂದನು.


ಮೂರನೆಯ ದಿನದಲ್ಲಿ ಒಬ್ಬನು ತನ್ನ ವಸ್ತ್ರಗಳನ್ನು ಹರಿದುಕೊಂಡು, ತನ್ನ ತಲೆಯ ಮೇಲೆ ಮಣ್ಣು ಹಾಕಿಕೊಂಡು, ಸೌಲನ ಪಾಳೆಯದಿಂದ ಹೊರಟು ದಾವೀದನ ಬಳಿಗೆ ಬಂದು, ನೆಲದ ಮಟ್ಟಿಗೂ ಬಾಗಿ ನಮಸ್ಕರಿಸಿದನು.


ಆಗ ತಾಮಾರಳು ತನ್ನ ತಲೆಯ ಮೇಲೆ ಬೂದಿಯನ್ನು ಹಾಕಿಕೊಂಡು, ತಾನು ಧರಿಸಿಕೊಂಡಿದ್ದ ವಿವಿಧ ಬಣ್ಣದ ವಸ್ತ್ರವನ್ನು ಹರಿದು, ತನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಗಟ್ಟಿಯಾಗಿ ಅಳುತ್ತಾ ಹೋದಳು.


ಎಜ್ರನು ಪ್ರಾರ್ಥಿಸಿ ಅರಿಕೆಮಾಡಿ ಅತ್ತು ದೇವರ ಆಲಯದ ಮುಂದೆ ಅಡ್ಡಬಿದ್ದ ತರುವಾಯ ಇಸ್ರಾಯೇಲರಲ್ಲಿ ಸ್ತ್ರೀಯರೂ, ಪುರುಷರೂ, ಮಕ್ಕಳು ಮಹಾಕೂಟವಾಗಿ ಅವನ ಬಳಿಯಲ್ಲಿ ಕೂಡಿಕೊಂಡು ಬಂದರು. ಜನರು ಬಹಳವಾಗಿ ಅತ್ತರು.


ಅದೇ ತಿಂಗಳಿನ ಇಪ್ಪತ್ತನಾಲ್ಕನೆಯ ದಿವಸದಲ್ಲಿ ಇಸ್ರಾಯೇಲರು ಉಪವಾಸ ಮಾಡಿ, ಗೋಣಿತಟ್ಟನ್ನು ಉಟ್ಟುಕೊಂಡು, ತಮ್ಮ ಮೇಲೆ ಧೂಳನ್ನು ಹಾಕಿಕೊಂಡು ನೆರೆದುಬಂದರು.


ಇದಲ್ಲದೆ ಅರಸನ ಮಾತೂ ಅವನ ಕಟ್ಟಳೆಯೂ ಯಾವ ಯಾವ ಸೀಮೆಯಲ್ಲಿ ಯಾವ ಯಾವ ಸ್ಥಳಕ್ಕೆ ಹೋಯಿತೋ ಅಲ್ಲಿ ಯೆಹೂದ್ಯರೊಳಗೆ ಮಹಾ ದುಃಖವೂ ಉಪವಾಸವೂ ಅಳುವಿಕೆಯೂ ಗೋಳಾಡುವಿಕೆಯೂ ಉಂಟಾಗಿತ್ತು. ಅನೇಕರು ಗೋಣಿತಟ್ಟನ್ನು ಉಟ್ಟುಕೊಂಡು ಬೂದಿಯಲ್ಲಿ ಕುಳಿತುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು