ಯೆಹೋಶುವ 7:7 - ಕನ್ನಡ ಸಮಕಾಲಿಕ ಅನುವಾದ7 ಇದಲ್ಲದೆ ಯೆಹೋಶುವನು, “ಅಯ್ಯೋ, ಸಾರ್ವಭೌಮ ಯೆಹೋವ ದೇವರೇ, ನಮ್ಮನ್ನು ನಾಶಮಾಡುವ ಹಾಗೆ ನಮ್ಮನ್ನು ಅಮೋರಿಯರ ಕೈಯಲ್ಲಿ ಒಪ್ಪಿಸಿಕೊಡುವುದಕ್ಕಾಗಿ ನೀವು ಈ ಜನರನ್ನು ಯೊರ್ದನ್ ನದಿ ದಾಟಿಸಿದ್ದು ಏಕೆ? ನಾವು ಯೊರ್ದನ್ ನದಿ ಆಚೆಯಲ್ಲಿ ಇದ್ದಿದ್ದರೆ ಎಷ್ಟೋ ಒಳ್ಳೆಯದಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಯೆಹೋಶುವನು “ಅಯ್ಯೋ, ಕರ್ತನೇ, ಯೆಹೋವನೇ, ನೀನು ಈ ಜನರನ್ನು ಯೊರ್ದನ್ ಹೊಳೆ ದಾಟಿಸಿದ್ದೇಕೆ? ನಮ್ಮನ್ನು ಅಮೋರಿಯರ ಕೈಗೊಪ್ಪಿಸಿ ನಾಶ ಮಾಡಬೇಕೆಂದಿರುವಿಯಾ? ನಾವು ಇಷ್ಟೇ ಸಾಕೆಂದು ಯೊರ್ದನ್ ನದಿಯ ಆಚೆ ಕಡೆಯಲ್ಲೇ ಇದ್ದಿದ್ದರೆ ಎಷ್ಟೋ ಚೆನ್ನಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಯೆಹೋಶುವನು, “ಅಯ್ಯೋ, ಸ್ವಾಮಿ ಸರ್ವೇಶ್ವರಾ, ನೀವು ಈ ಜನರನ್ನು ಜೋರ್ಡನ್ ನದಿ ದಾಟಿಸಿದ್ದೇಕೆ? ನಮ್ಮನ್ನು ಅಮೋರಿಯರ ಕೈಗೊಪ್ಪಿಸಿ ನಾಶಮಾಡಬೇಕೆಂದಿರುವಿರಾ? ನಾವು ಇಷ್ಟೇ ಸಾಕೆಂದು ಜೋರ್ಡನ್ ನದಿಯ ಆಚೆ ಕಡೆಯಲ್ಲೇ ಇದ್ದಿದ್ದರೆ ಎಷ್ಟೋ ಒಳ್ಳೆಯದಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಮತ್ತು ಯೆಹೋಶುವನು - ಅಯ್ಯೋ ಕರ್ತನೇ, ಯೆಹೋವನೇ, ನೀನು ಈ ಜನರನ್ನು ಯೊರ್ದನ್ ಹೊಳೆ ದಾಟಿಸಿದ್ದೇಕೆ? ನಮ್ಮನ್ನು ಅಮೋರಿಯರ ಕೈಗೆ ಒಪ್ಪಿಸಿ ನಾಶಮಾಡಬೇಕೆಂದಿದ್ದೀಯಾ? ನಾವು ಇಷ್ಟೇ ಸಾಕೆಂದು ಯೊರ್ದನ್ ಹೊಳೆಯ ಆಚೆಯಲ್ಲಿಯೇ ಇದ್ದರೆ ಎಷ್ಟೋ ಒಳ್ಳೇದಾಗಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಯೆಹೋಶುವನು, “ಯೆಹೋವನೇ ನನ್ನ ಒಡೆಯನೇ, ನಮ್ಮ ಜನರನ್ನು ನೀನು ಜೋರ್ಡನ್ ನದಿ ದಾಟಿಸಿ ಕರೆದುಕೊಂಡು ಬಂದೆ. ನಮ್ಮನ್ನು ಇಲ್ಲಿಯವರೆಗೆ ಕರೆದು ತಂದು ಅಮೋರಿಯರಿಂದ ನಾಶವಾಗಲು ನಮ್ಮನ್ನು ಬಿಟ್ಟು ಕೊಡುವುದೇಕೆ? ನಾವು ಇದ್ದುದರಲ್ಲಿ ತೃಪ್ತಿಪಟ್ಟುಕೊಂಡು ಜೋರ್ಡನ್ ನದಿಯ ಆಚೆಯಲ್ಲಿಯೇ ಇರಬೇಕಾಗಿತ್ತು. ಅಧ್ಯಾಯವನ್ನು ನೋಡಿ |