Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 7:8 - ಕನ್ನಡ ಸಮಕಾಲಿಕ ಅನುವಾದ

8 ಯೆಹೋವ ದೇವರೇ, ಈಗ ಇಸ್ರಾಯೇಲರು ತಮ್ಮ ಶತ್ರುಗಳಿಗೆ ಬೆನ್ನು ತಿರುಗಿಸಿದರಲ್ಲಾ. ನಾನು ಏನು ಹೇಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಕರ್ತನೇ, ಇಸ್ರಾಯೇಲ್ಯರು ಶತ್ರುಗಳಿಗೆ ಬೆನ್ನು ತೋರಿಸಬೇಕಾಯಿತಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಸರ್ವೇಶ್ವರಾ, ಇಸ್ರಯೇಲರು ಶತ್ರುಗಳಿಗೆ ಬೆನ್ನು ತೋರಿಸಿದ್ದಾರಲ್ಲಾ! ನಾನು ಏನು ತಾನೇ ಹೇಳಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಕರ್ತನೇ, ಇಸ್ರಾಯೇಲ್ಯರು ಶತ್ರುಗಳಿಗೆ ಬೆನ್ನು ತೋರಿಸಿದ್ದಾರಲ್ಲಾ. ಇನ್ನೇನು ಹೇಳಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೆಹೋವನೇ, ಇಸ್ರೇಲರು ವೈರಿಗಳ ಮುಂದೆ ಸೋತು ಹೋಗಿದ್ದಾರಲ್ಲಾ! ಈಗ ನಾನೇನು ಹೇಳಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 7:8
8 ತಿಳಿವುಗಳ ಹೋಲಿಕೆ  

ನಾನು ಕಾವಲುಗಾರನಾಗಿ ನಿಲ್ಲುವೆನು. ಕಾವಲು ಗೋಪುರವನ್ನೇ ಹತ್ತಿ ನಿಂತುಕೊಳ್ಳುವೆನು. ಯೆಹೋವ ದೇವರು ನನಗೆ ಏನು ಹೇಳುವರೋ, ಯಾವ ಉತ್ತರ ಕೊಡುವರೋ, ಎಂದು ಎದುರು ನೋಡುವೆನು.


“ಆದರೆ ಈಗ ನಮ್ಮ ದೇವರೇ, ಇದರ ತರುವಾಯ ನಾವು ಏನು ಹೇಳೋಣ? ನಿಮ್ಮ ಆಜ್ಞೆಗಳನ್ನು ನಾವು ತೊರೆದಿದ್ದೇವೆ.


ಇದಲ್ಲದೆ ಯೆಹೋಶುವನು, “ಅಯ್ಯೋ, ಸಾರ್ವಭೌಮ ಯೆಹೋವ ದೇವರೇ, ನಮ್ಮನ್ನು ನಾಶಮಾಡುವ ಹಾಗೆ ನಮ್ಮನ್ನು ಅಮೋರಿಯರ ಕೈಯಲ್ಲಿ ಒಪ್ಪಿಸಿಕೊಡುವುದಕ್ಕಾಗಿ ನೀವು ಈ ಜನರನ್ನು ಯೊರ್ದನ್ ನದಿ ದಾಟಿಸಿದ್ದು ಏಕೆ? ನಾವು ಯೊರ್ದನ್ ನದಿ ಆಚೆಯಲ್ಲಿ ಇದ್ದಿದ್ದರೆ ಎಷ್ಟೋ ಒಳ್ಳೆಯದಾಗಿತ್ತು.


ಕಾನಾನ್ಯರೂ ದೇಶವಾಸಿಗಳೆಲ್ಲರೂ ಇದನ್ನು ಕೇಳಿ ನಮ್ಮ ಸುತ್ತಲೂ ಸುತ್ತಿಕೊಂಡು ನಮ್ಮ ಹೆಸರನ್ನು ಭೂಮಿಯಿಂದ ತೆಗೆದುಬಿಡುವರು, ಆಗ ನಿಮ್ಮ ಮಹತ್ತಾದ ಹೆಸರಿಗೆ ಏನು ಮಾಡುವಿರಿ?” ಎಂದನು.


ಜನರು ಪಾಳೆಯಕ್ಕೆ ಬಂದಾಗ ಇಸ್ರಾಯೇಲಿನ ಹಿರಿಯರು, “ಈ ಹೊತ್ತು ಯೆಹೋವ ದೇವರು ಫಿಲಿಷ್ಟಿಯರ ಮುಂದೆ ನಮ್ಮನ್ನು ಹೊಡೆಸಿದ್ದೇನು? ಯೆಹೋವ ದೇವರ ಒಡಂಬಡಿಕೆಯ ಮಂಜೂಷವು ನಮ್ಮಲ್ಲಿದ್ದು ನಮ್ಮನ್ನು ನಮ್ಮ ಶತ್ರುಗಳಿಂದ ತಪ್ಪಿಸಿ ರಕ್ಷಿಸುವ ಹಾಗೆ, ನಾವು ಅದನ್ನು ಶೀಲೋವಿನಿಂದ ತರಿಸೋಣ,” ಎಂದರು.


ವೈರಿಯ ಮುಂದೆ ನಾವು ಓಡಿಹೋಗುವಂತೆ ಮಾಡಿದ್ದೀರಿ. ನಮ್ಮ ವೈರಿಗಳು ನಮ್ಮ ಸೊತ್ತನ್ನು ಕೊಳ್ಳೆ ಹೊಡೆಯುತ್ತಾರೆ.


ಅವನ ಖಡ್ಗದ ಮೊನೆ ಮೊಂಡಾಗಿದೆ. ಯುದ್ಧದಲ್ಲಿ ನೀವು ಅವನನ್ನು ನಿಲ್ಲುವಂತೆ ಮಾಡಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು