Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 7:9 - ಕನ್ನಡ ಸಮಕಾಲಿಕ ಅನುವಾದ

9 ಕಾನಾನ್ಯರೂ ದೇಶವಾಸಿಗಳೆಲ್ಲರೂ ಇದನ್ನು ಕೇಳಿ ನಮ್ಮ ಸುತ್ತಲೂ ಸುತ್ತಿಕೊಂಡು ನಮ್ಮ ಹೆಸರನ್ನು ಭೂಮಿಯಿಂದ ತೆಗೆದುಬಿಡುವರು, ಆಗ ನಿಮ್ಮ ಮಹತ್ತಾದ ಹೆಸರಿಗೆ ಏನು ಮಾಡುವಿರಿ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಾನು ಏನು ತಾನೇ ಹೇಳಲಿ? ಕಾನಾನ್ಯರೂ ಮತ್ತು ದೇಶದ ಬೇರೆ ಎಲ್ಲಾ ನಿವಾಸಿಗಳೂ ಇದನ್ನು ಕೇಳಿ ನಮ್ಮನ್ನು ಸುತ್ತುವರೆದು ಲೋಕದಲ್ಲಿ ನಮ್ಮ ಹೆಸರು ಉಳಿಯದಂತೆ ಮಾಡುವರು. ಆಗ ನಿನ್ನ ಮಹತ್ತಾದ ಹೆಸರನ್ನು ಉಳಿಸಿಕೊಳ್ಳಲು ಏನು ಮಾಡುವಿ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಕಾನಾನ್ಯರು ಮತ್ತು ನಾಡಿನ ಬೇರೆ ಎಲ್ಲಾ ನಿವಾಸಿಗಳೂ ಇದನ್ನು ಕೇಳಿ ನಮ್ಮನ್ನು ಸುತ್ತುವರೆದು ಲೋಕದಲ್ಲಿ ನಮ್ಮ ಹೆಸರೇ ಉಳಿಯದಂತೆ ಮಾಡುವರು. ಆಗ ನಿಮ್ಮ ಮಹತ್ತಾದ ಹೆಸರನ್ನು ಉಳಿಸಿಕೊಳ್ಳಲು ಏನು ಮಾಡುವಿರಿ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಕಾನಾನ್ಯರೂ ದೇಶದ ಬೇರೆ ಎಲ್ಲಾ ನಿವಾಸಿಗಳೂ ಇದನ್ನು ಕೇಳಿ ನಮ್ಮನ್ನು ಸುತ್ತಿಕೊಂಡು ಭೂಲೋಕದಲ್ಲಿ ನಮ್ಮ ಹೆಸರುಳಿಯದಂತೆ ಮಾಡುವರು. ನಿನ್ನ ಮಹಾನಾಮಕ್ಕೋಸ್ಕರ ಏನು ಮಾಡುವಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಈ ವಿಷಯವು ಕಾನಾನ್ಯರಿಗೂ ದೇಶದ ಉಳಿದ ಎಲ್ಲಾ ಜನರಿಗೂ ತಿಳಿಯುವುದು. ಆಗ ಅವರು ನಮ್ಮ ಮೇಲೆ ಧಾಳಿಮಾಡಿ ನಮ್ಮೆಲ್ಲರನ್ನು ಕೊಂದು ಹಾಕುತ್ತಾರೆ. ಆಗ ನೀನು ನಿನ್ನ ಕೀರ್ತಿಯನ್ನು ಉಳಿಸಿಕೊಳ್ಳಲು ಏನು ಮಾಡುವೆ?” ಎಂದು ಪ್ರಲಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 7:9
19 ತಿಳಿವುಗಳ ಹೋಲಿಕೆ  

‘ಕೇಡಿನ ನಿಮಿತ್ತವೂ ಬೆಟ್ಟಗಳಲ್ಲಿ ಅವರನ್ನು ಸಾಯಿಸಿ, ಭೂಮಿಯ ಮೇಲಿನಿಂದ ಅವರನ್ನು ಅಳಿಸಿಬಿಡುವುದಕ್ಕೂ, ದೇವರು ಅವರನ್ನು ಹೊರಗೆ ಬರಮಾಡಿದ್ದಾರೆ,’ ಎಂದು ಈಜಿಪ್ಟಿನವರು ಏಕೆ ಹೇಳಬೇಕು? ತಾವು ಕೋಪಾಗ್ನಿಯನ್ನು ಬಿಟ್ಟು ತಿರುಗಿಕೊಳ್ಳಿ. ನಿಮ್ಮ ಜನರಿಗೆ ವಿರೋಧವಾದ ಈ ಕೇಡಿನ ವಿಷಯದಲ್ಲಿ ತಮ್ಮ ಮನಸ್ಸನ್ನು ಬದಲಾಯಿಸಿರಿ.


ಅವರು, “ಬನ್ನಿರಿ, ರಾಷ್ಟ್ರವಾಗಿರದ ಹಾಗೆ ನಾವು ಅವರನ್ನು ನಿರ್ಮೂಲ ಮಾಡೋಣ; ಇಸ್ರಾಯೇಲರ ಹೆಸರು ಇನ್ನು ಜ್ಞಾಪಕಕ್ಕೆ ಬಾರದಿರಲಿ,” ಎನ್ನುತ್ತಾರೆ.


ತಂದೆಯೇ, ನಿಮ್ಮ ಹೆಸರನ್ನು ಮಹಿಮೆ ಪಡಿಸಿಕೊಳ್ಳಿರಿ,” ಎಂದರು. ಆಗ, “ಹೌದು, ನಾನು ಮಹಿಮೆಪಡಿಸಿದ್ದೇನೆ, ಪುನಃ ಮಹಿಮೆ ಪಡಿಸುವೆನು,” ಎಂಬ ಸ್ವರವು ಪರಲೋಕದಿಂದ ಕೇಳಿಸಿತು.


ಯೆಹೋವ ದೇವರ ಸಮ್ಮುಖ ಸೇವಕರಾದ ಯಾಜಕರು, ಅಂಗಳಕ್ಕೂ, ಬಲಿಪೀಠಕ್ಕೂ ನಡುವೆ ಅತ್ತು ಹೀಗೆ ಹೇಳಲಿ, “ಯೆಹೋವ ದೇವರೇ, ನಿನ್ನ ಜನರನ್ನು ಕನಿಕರಿಸು, ಜನಾಂಗಗಳು ನಿಂದಿಸುವುದಕ್ಕೆ ನಿನ್ನ ಬಾಧ್ಯತೆಯನ್ನು ದೂಷಣೆಗೆ ಗುರಿಮಾಡಬೇಡಿರಿ. ‘ಅವರ ದೇವರು ಎಲ್ಲಿ?’ ಎಂದು ಅವರು ಏಕೆ ನಿಂದಿಸಬೇಕು?”


ಆದರೆ ಅವರು ಯಾರ ಮಧ್ಯದಲ್ಲಿದ್ದರೋ, ನಾನು ಯಾರ ಮುಂದೆ ಅವರನ್ನು ಈಜಿಪ್ಟ್ ದೇಶದಿಂದ ಹೊರಗೆ ತಂದು ನನ್ನನ್ನು ತಿಳಿಯಪಡಿಸಿದೆನೋ ಆ ಜನಾಂಗಗಳ ಕಣ್ಣುಗಳ ಮುಂದೆ ನನ್ನ ಹೆಸರು ಅಪವಿತ್ರವಾಗದ ಹಾಗೆ ನನ್ನ ಹೆಸರಿಗೋಸ್ಕರವೇ ಈ ಕೆಲಸವನ್ನು ಮಾಡಿದೆನು.


ನೀವು ಯಾವ ದೇಶದಿಂದ ನಮ್ಮನ್ನು ಬರಮಾಡಿದಿರೋ, ಆ ದೇಶದವರು, ‘ಯೆಹೋವ ದೇವರು ಇಸ್ರಾಯೇಲರಿಗೆ ವಾಗ್ದಾನ ಮಾಡಿದ ನಾಡಿಗೆ ಅವರನ್ನು ಸೇರಿಸಲಾರದೆ ಹಗೆಮಾಡಿ, ಮರುಭೂಮಿಯಲ್ಲಿ ಕೊಲ್ಲುವುದಕ್ಕೆ ಕರೆದುಕೊಂಡು ಹೋದರು’ ಎಂದು ಹೇಳುವುದಕ್ಕೆ ಆಸ್ಪದವಾದೀತು.


ಆಗ ಮೋಶೆ ಯೆಹೋವ ದೇವರಿಗೆ, “ಹಾಗಾದರೆ ಈ ಸುದ್ದಿಯನ್ನು ಈಜಿಪ್ಟಿನವರು ಕೇಳುವರು. ನೀವು ಅವರಿಂದ ಈ ಜನರನ್ನು ನಿಮ್ಮ ಶಕ್ತಿಯಿಂದ ಬರಮಾಡಿದೆಯಲ್ಲಾ!


ಯೆಹೋವ ದೇವರೇ, ಈಗ ಇಸ್ರಾಯೇಲರು ತಮ್ಮ ಶತ್ರುಗಳಿಗೆ ಬೆನ್ನು ತಿರುಗಿಸಿದರಲ್ಲಾ. ನಾನು ಏನು ಹೇಳಲಿ.


ಯೆಹೋವ ದೇವರು ಯೆಹೋಶುವನಿಗೆ, “ನೀನು ಎದ್ದೇಳು, ನೀನು ಈ ಪ್ರಕಾರ ಬೋರಲು ಬಿದ್ದಿರುವುದೇನು?


ಏಕೆಂದರೆ ಯೆಹೋವ ದೇವರು ತಮ್ಮ ಮಹತ್ತಾದ ಹೆಸರಿಗೋಸ್ಕರ ತಮ್ಮ ಜನರನ್ನು ಕೈಬಿಡುವುದಿಲ್ಲ. ನಿಮ್ಮನ್ನು ತಮ್ಮ ಜನರಾಗಿ ಮಾಡಿಕೊಳ್ಳಲು ಇಚ್ಛೈಸಿದ್ದಾರಲ್ಲಾ?


ದೇವರೇ, ನಿಮ್ಮ ಹೆಸರಿಗೆ ತಕ್ಕಂತೆಯೇ ನಿಮ್ಮ ಸ್ತೋತ್ರವು ಭೂಮಿಯ ಕಟ್ಟಕಡೆಯವರೆಗೂ ಇದೆ; ನಿಮ್ಮ ಬಲಗೈ ನೀತಿಯಿಂದ ತುಂಬಿದೆ.


ನಮ್ಮ ರಕ್ಷಕರಾಗಿರುವವರೇ, ನಮ್ಮ ದೇವರೇ, ನಿಮ್ಮ ಹೆಸರಿನ ಘನದ ನಿಮಿತ್ತ ನಮಗೆ ಸಹಾಯಮಾಡಿರಿ. ನಿಮ್ಮ ಹೆಸರಿಗೆ ತಕ್ಕಂತೆ ನಮ್ಮನ್ನು ಬಿಡಿಸಿರಿ. ನಮ್ಮ ಪಾಪಗಳನ್ನು ತೊಳೆದುಬಿಡಿರಿ.


ಅವರು ಏಕ ಮನಸ್ಕರಾಗಿ ಆಲೋಚನೆ ಮಾಡಿಕೊಂಡಿದ್ದಾರೆ. ನಿಮಗೆ ವಿರೋಧವಾಗಿ ಒಡಂಬಟ್ಟಿದ್ದಾರೆ.


ನಮಗಲ್ಲ ಯೆಹೋವ ದೇವರೇ, ನಮಗಲ್ಲ, ನಿಮ್ಮ ಹೆಸರಿಗೆ ಮಾತ್ರ ಮಹಿಮೆ, ನಿಮ್ಮ ಪ್ರೀತಿ ಮತ್ತು ಸತ್ಯತೆಯ ನಿಮಿತ್ತ ನಿಮಗೆ ಮಹಿಮೆಯಾಗಲಿ.


ಆಗ ನನ್ನ ಶತ್ರು ಇದನ್ನು ನೋಡುವನು. ಅವನ ಮುಖವನ್ನು ಅವಮಾನದಿಂದ ಮುಚ್ಚಿಕೊಳ್ಳುವನು, “ನಿನ್ನ ಯೆಹೋವ ದೇವರು ಎಲ್ಲಿ?” ಎಂದು ನನ್ನನ್ನು ಜರೆದವರೇ ನಾಚಿಕೆಪಡುವರು. ಇದನ್ನು ನಾನು ಕಣ್ಣಾರೆ ಕಾಣುವೆನು. ಆ ಶತ್ರುಗಳಾದರೋ ಬೀದಿಯ ಕಸದಂತೆ ದಾರಿಹೋಕರ ತುಳಿತಕ್ಕೆ ಈಡಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು