Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 8:2 - ಕನ್ನಡ ಸಮಕಾಲಿಕ ಅನುವಾದ

2 ನೀನು ಯೆರಿಕೋವಿಗೂ ಅದರ ಅರಸನಿಗೂ ಯಾವ ಪ್ರಕಾರ ಮಾಡಿದೆಯೋ ಹಾಗೆಯೇ ಆಯಿ ಎಂಬ ಪಟ್ಟಣಕ್ಕೂ ಅದರ ಅರಸನಿಗೂ ಮಾಡಬೇಕು. ಅದರ ಕೊಳ್ಳೆಯನ್ನೂ, ಪಶುಪ್ರಾಣಿಗಳನ್ನು ಮಾತ್ರವೇ ನಿಮಗೋಸ್ಕರ ಇಟ್ಟುಕೊಳ್ಳಿರಿ. ನೀವು ಆ ಪಟ್ಟಣದ ಹಿಂಭಾಗದಲ್ಲಿ ಹೊಂಚುಹಾಕಲು ಸ್ಥಳಮಾಡಿಕೊಳ್ಳಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯೆರಿಕೋವಿಗೂ ಅದರ ಅರಸನಿಗೂ ಮಾಡಿದಂತೆಯೇ ಆಯಿಗೂ ಅದರ ಅರಸನಿಗೂ ಮಾಡು. ಆದರೆ ಕೊಳ್ಳೆಯನ್ನೂ ಪಶುಪ್ರಾಣಿಗಳನ್ನೂ ನಿಮಗೋಸ್ಕರ ತೆಗೆದುಕೊಳ್ಳಬಹುದು. ನಿಮ್ಮಲ್ಲಿ ಕೆಲವರು ಆ ಊರಿನ ಹಿಂಬದಿಯಲ್ಲಿ ಹೊಂಚುಹಾಕಿಕೊಂಡಿರಲಿ” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಜೆರಿಕೋವಿಗೂ ಅದರ ಅರಸನಿಗೂ ಮಾಡಿದಂತೆಯೇ ಆಯಿಗೂ ಅದರ ಅರಸನಿಗೂ ಮಾಡು. ಆದರೆ ಕೊಳ್ಳೆಯನ್ನೂ ಪಶುಪ್ರಾಣಿಗಳನ್ನೂ ಈ ಸಾರಿ ನೀವೇ ಇಟ್ಟುಕೊಳ್ಳಬಹುದು. ನಿಮ್ಮಲ್ಲಿ ಕೆಲವರು ಆ ಊರಿನ ಹಿಂಬದಿಯಲ್ಲಿ ಹೊಂಚುಹಾಕಿಕೊಂಡಿರಲಿ,” ಎಂದು ಆಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೋಡು, ಆಯಿ ಎಂಬ ಊರಿನ ರಾಜ, ಪ್ರಜೆ, ನಗರ, ದೇಶ ಇವುಗಳನ್ನೆಲ್ಲಾ ನಿನಗೆ ಕೊಟ್ಟಿದ್ದೇನೆ. ಯೆರಿಕೋವಿಗೂ ಅದರ ಅರಸನಿಗೂ ಮಾಡಿದಂತೆಯೇ ಆಯಿಗೂ ಅದರ ಅರಸನಿಗೂ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಜೆರಿಕೊ ಮತ್ತು ಅದರ ಅರಸನಿಗೆ ಮಾಡಿದಂತೆಯೇ ನೀವು ‘ಆಯಿ’ ಮತ್ತು ಅದರ ಅರಸನಿಗೆ ಮಾಡಬೇಕು. ಈ ಸಲ ಮಾತ್ರ ನೀವು ಎಲ್ಲ ಸಂಪತ್ತನ್ನು ತೆಗೆದುಕೊಂಡು ನಿಮಗಾಗಿ ಇಟ್ಟುಕೊಳ್ಳಬೇಕು. ನೀವು ಈ ಸಂಪತ್ತನ್ನು ನಿಮ್ಮ ಜನರೊಂದಿಗೆ ಹಂಚಿಕೊಳ್ಳಿರಿ. ಈಗ, ನಿಮ್ಮ ಕೆಲವು ಯೋಧರಿಗೆ ಪಟ್ಟಣದ ಹಿಂಭಾಗದಲ್ಲಿ ಅಡಗಿಕೊಂಡಿರಲು ತಿಳಿಸು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 8:2
27 ತಿಳಿವುಗಳ ಹೋಲಿಕೆ  

ಆದರೆ ಸ್ತ್ರೀಯರನ್ನೂ ಚಿಕ್ಕವರನ್ನೂ ಪಶುಗಳನ್ನೂ ಪಟ್ಟಣದಲ್ಲಿರುವ ಎಲ್ಲಾ ಆಸ್ತಿಯನ್ನೂ ನಿಮಗಾಗಿ ತಗೆದುಕೊಳ್ಳಬಹುದು. ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವಂಥ ನಿಮ್ಮ ಶತ್ರುಗಳ ಆಸ್ತಿಯನ್ನು ನೀವೇ ಅನುಭೋಗಿಸಬಹುದು.


ಒಳ್ಳೆಯವನು ಮೊಮ್ಮಕ್ಕಳಿಗೆ ಆಸ್ತಿಯನ್ನು ಬಿಟ್ಟುಬಿಡುವನು; ಆದರೆ ಪಾಪಿಯ ಸಂಪತ್ತು ನೀತಿವಂತರಿಗಾಗಿ ಸಂಗ್ರಹವಾಗಿದೆ.


ಅವರು ಹಾಡುವುದಕ್ಕೂ, ಸ್ತುತಿಸುವುದಕ್ಕೂ ಆರಂಭಿಸಿದಾಗಲೇ ಯೆಹೋವ ದೇವರು ಯೆಹೂದದ ಮೇಲೆ ಬಂದ ಅಮ್ಮೋನ್, ಮೋವಾಬ್, ಸೇಯೀರ್ ಪರ್ವತಗಳ ಜನರನ್ನು ಸೋಲಿಸುವುದಕ್ಕೆ ಅವರಲ್ಲಿಯೇ ಹೊಂಚಿಕೊಳ್ಳುವವರನ್ನು ಇರಿಸಿದ್ದರು.


ಪಟ್ಟಣದಲ್ಲಿರುವ ಎಲ್ಲಾ ಸ್ತ್ರೀಪುರುಷರನ್ನೂ ಹಿರಿಕಿರಿಯರನ್ನೂ ಕುರಿದನಗಳನ್ನೂ ಕತ್ತೆಗಳನ್ನೂ ಖಡ್ಗದಿಂದ ಸಂಪೂರ್ಣವಾಗಿ ನಾಶಮಾಡಿದರು.


ಬಾಬಿಲೋನಿನ ಗೋಡೆಯ ಮೇಲೆ ಧ್ವಜವನ್ನೆತ್ತಿರಿ; ಪಹರೆಯನ್ನು ಬಲಪಡಿಸಿರಿ; ಕಾವಲುಗಾರರನ್ನು ನಿಲ್ಲಿಸಿರಿ; ಹೊಂಚಿಕೊಳ್ಳುವವರನ್ನು ಸಿದ್ಧಮಾಡಿರಿ; ಏಕೆಂದರೆ ಯೆಹೋವ ದೇವರು ಬಾಬಿಲೋನಿನ ನಿವಾಸಿಗಳಿಗೆ ವಿರೋಧವಾಗಿ ತಾನು ಹೇಳಿದ್ದನ್ನು ಯೋಚಿಸಿದ್ದನ್ನು ಮಾಡಿದ್ದಾರೆ.


ಕೌಜುಗವು ತನ್ನದಲ್ಲದ ಮರಿಗಳನ್ನು ಕೂಡಿಸಿಕೊಳ್ಳುವ ಹಾಗೆ, ಅನ್ಯಾಯವಾಗಿ ಐಶ್ವರ್ಯವನ್ನು ಸಂಪಾದಿಸುವವನು ಹಾಗೆಯೇ ಇದ್ದಾನೆ. ಅವನು ತನ್ನ ಮಧ್ಯಪ್ರಾಯದಲ್ಲಿ ಅದನ್ನು ಬಿಡುವನು. ತನ್ನ ಅಂತ್ಯದಲ್ಲಿ ಅವನು ಮೂರ್ಖನೆಂದು ಸಾಬೀತಾಗುತ್ತದೆ.


ನಂಬಿಗಸ್ತನಾದ ಮನುಷ್ಯನು ಆಶೀರ್ವಾದಗಳಲ್ಲಿ ತುಂಬಿತುಳುಕುವನು; ಆದರೆ ಧನವಂತನಾಗಲು ಆತುರಪಡುವವನು, ನಿರ್ದೋಷಿಯಾಗಿರುವುದಿಲ್ಲ.


“ನಿಶ್ಚಯವಾಗಿ ಮನುಷ್ಯನು ಮಾಯಾರೂಪದಿಂದ ನಡೆದಾಡುತ್ತಾನೆ; ಅವನು ಸಡಗರದಿಂದ ಐಶ್ವರ್ಯವನ್ನು ರಾಶಿಯಾಗಿ ಕೂಡಿಸಿಕೊಳ್ಳುತ್ತಾನೆ; ಆದರೆ ಅದನ್ನು ಅನುಭವಿಸುವವರು ಯಾರೋ ಅರಿಯನು.


ಆದರೆ ಯಾರೊಬ್ಬಾಮನು ಅಡಗಿಕೊಂಡವರನ್ನು ಸುತ್ತಲೂ ಅವರ ಹಿಂದೆ ಬರಮಾಡಿದನು. ಆದ್ದರಿಂದ ಇಸ್ರಾಯೇಲರು ಯೆಹೂದದವರ ಮುಂದೆಯೂ, ಅವರ ಹಿಂದೆಯೂ ಬಂದರು.


ಆ ದಿನದಲ್ಲಿ ಯೆಹೋಶುವನು ಮಕ್ಕೇದ ಊರನ್ನು ಸ್ವಾಧೀನಪಡಿಸಿಕೊಂಡನು. ಅದರ ಅರಸನನ್ನೂ ಜನರನ್ನೂ ಖಡ್ಗಕ್ಕೆ ತುತ್ತಾಗುವಂತೆ ಮಾಡಿದನು. ಅದರಲ್ಲಿರುವ ಎಲ್ಲವನ್ನೂ ನಾಶಮಾಡಿದನು. ಅದರಲ್ಲಿ ಒಬ್ಬರನ್ನಾದರೂ ಉಳಿಸದೆ ಸಂಪೂರ್ಣ ನಾಶಮಾಡಿ, ತಾನು ಯೆರಿಕೋವಿನ ಅರಸನಿಗೆ ಮಾಡಿದ ಹಾಗೆಯೇ ಮಕ್ಕೇದದ ಅರಸನಿಗೂ ಮಾಡಿದನು.


ಈ ಸಮಯದಲ್ಲಿ ಯೆರೂಸಲೇಮಿನ ಅರಸನಾದ ಅದೋನೀಚೆದೆಕನು ಯೆಹೋಶುವನು ಯೆರಿಕೋವನ್ನೂ ಅದರ ಅರಸನನ್ನೂ ಹೇಗೋ ಹಾಗೆಯೇ ಆಯಿ ಎಂಬ ಪಟ್ಟಣವನ್ನು ಸ್ವಾಧೀನಪಡಿಸಿಕೊಂಡು, ಅದರ ಅರಸನನ್ನು ಸಂಹರಿಸಿಬಿಟ್ಟು ಸಂಪೂರ್ಣ ನಾಶಮಾಡಿದನೆಂಬ ಸಂಗತಿಯನ್ನು ಅವನು ಕೇಳಿದ್ದನು. ಹಾಗೆಯೇ ಗಿಬ್ಯೋನಿನ ನಿವಾಸಿಗಳು ಇಸ್ರಾಯೇಲಿನ ಸಂಗಡ ಸಮಾಧಾನ ಮಾಡಿಕೊಂಡು ಅವರಲ್ಲಿ ಇದ್ದರೆಂದೂ ಕೇಳಿದ್ದನು.


ಇಸ್ರಾಯೇಲರು ಮರುಭೂಮಿಯಲ್ಲಿಯೂ ಬಯಲಿನಲ್ಲಿಯೂ ಓಡಿಸಿದ ಆಯಿ ಎಂಬ ಪಟ್ಟಣದ ನಿವಾಸಿಗಳೆಲ್ಲರನ್ನೂ ಖಡ್ಗದಿಂದ ಸಂಹರಿಸಿದ ನಂತರ ಅವರೆಲ್ಲರೂ ಪಟ್ಟಣಕ್ಕೆ ಹೋಗಿ ಅಲ್ಲಿದ್ದವರನ್ನು ಕೊಂದರು.


ಆಗ ಹೊಂಚುಗಾರರು ತ್ವರೆಯಾಗಿ ತಮ್ಮ ಸ್ಥಳದಿಂದ ಎದ್ದು ಪಟ್ಟಣದಲ್ಲಿ ಪ್ರವೇಶಿಸಿ, ಸೆರೆಹಿಡಿದು ಕೂಡಲೆ ಅದಕ್ಕೆ ಬೆಂಕಿಯನ್ನು ಹಚ್ಚಿದರು.


ಆಯಿ ಎಂಬ ಪಟ್ಟಣದ ಅರಸನು ಇದನ್ನು ಕಂಡಾಗ, ಆ ಪಟ್ಟಣದ ಜನರು ತ್ವರೆಪಟ್ಟು, ಉದಯಕಾಲದಲ್ಲಿ ಎದ್ದು, ನಿಶ್ಚಯಿಸಿದ ವೇಳೆಯಲ್ಲಿ ಆಯಿ ಎಂಬ ಪಟ್ಟಣದ ಅರಸನೂ ಅವನ ಜನರೆಲ್ಲರೂ ಇಸ್ರಾಯೇಲಿಗೆ ಎದುರಾಗಿ ಯುದ್ಧಮಾಡಲು ಬಯಲಿಗೆ ಹೊರಟರು. ಅವನೂ ಅವನ ಜನರೂ ಅರಾಬಾ ಎಂಬ ತಗ್ಗಾದ ಪ್ರದೇಶವು ಕಾಣುವ ಸ್ಥಳಕ್ಕೆ ಬಂದರು. ಆದರೆ ಅವನು ಪಟ್ಟಣದ ಹಿಂದೆ ತನಗೋಸ್ಕರ ಹೊಂಚಿಕೊಂಡಿರುವವರನ್ನು ಅರಿಯದೆ ಇದ್ದನು.


ಯೆಹೋಶುವನು ಹೆಚ್ಚು ಕಡಿಮೆ ಐದು ಸಾವಿರ ಜನರನ್ನು ಆಯ್ದುಕೊಂಡು, ಆ ಪಟ್ಟಣದ ಪಶ್ಚಿಮ ಕಡೆಯಲ್ಲಿ ಬೇತೇಲಿಗೂ, ಆಯಿ ಎಂಬ ಪಟ್ಟಣದ ನಡುವೆ ಹೊಂಚಿಹಾಕಿಕೊಂಡಿರಲು ಅವರನ್ನು ಇಟ್ಟನು.


ಯೆಹೋಶುವನು ಅವರನ್ನು ಕಳುಹಿಸಿದಾಗ ಅವರು ಹೋಗಿ ಹೊಂಚಿಕೊಂಡು ಬೇತೇಲಿಗೂ ಆಯಿ ಎಂಬ ಪಟ್ಟಣಕ್ಕೂ ನಡುವೆ ಆಯಿ ಎಂಬ ಪಟ್ಟಣಕ್ಕೆ ಪಶ್ಚಿಮದ ಕಡೆ ಅಡಗಿಕೊಂಡರು. ಆದರೆ ಯೆಹೋಶುವನು ಆ ರಾತ್ರಿ ಜನರ ಮಧ್ಯದಲ್ಲಿ ಉಳಿದನು.


ಆಗ ನೀವು ಹೊಂಚಿಕೊಳ್ಳುವ ಸ್ಥಳದಿಂದ ಎದ್ದು ಬಂದು ಪಟ್ಟಣವನ್ನು ಸ್ವಾಧೀನಮಾಡಿಕೊಳ್ಳಿರಿ. ನಿಮ್ಮ ದೇವರಾದ ಯೆಹೋವ ದೇವರು ಅದನ್ನು ನಿಮ್ಮ ಕೈಗೆ ಒಪ್ಪಿಸಿಕೊಡುವರು.


ಆಗ ಯೆಹೋವ ದೇವರು ನನಗೆ, “ನೀನು ಅವನಿಗೆ ಭಯಪಡಬೇಡ. ಏಕೆಂದರೆ ನಿನ್ನ ಕೈಯೊಳಗೆ ನಾನು ಅವನನ್ನೂ, ಅವನ ಸಮಸ್ತ ಜನರನ್ನೂ, ಅವನ ದೇಶವನ್ನೂ ಕೊಟ್ಟಿದ್ದೇನೆ. ನೀನು ಹೆಷ್ಬೋನಿನಲ್ಲಿ ವಾಸವಾಗಿದ್ದ ಅಮೋರಿಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರ ಇವನಿಗೂ ಮಾಡಬೇಕು,” ಎಂದರು.


ಆಗ ಆಯಿ ಎಂಬ ಪಟ್ಟಣಕ್ಕೆ ಏರಿ ಹೋಗಲು ಯೆಹೋಶುವನೂ, ಸಮಸ್ತ ಸೈನಿಕರೂ ಎದ್ದರು. ಆದರೆ ಯೆಹೋಶುವನು ಪರಾಕ್ರಮಶಾಲಿಗಳಾದ ಮೂವತ್ತು ಸಾವಿರ ಜನರನ್ನು ಆಯ್ದುಕೊಂಡು ರಾತ್ರಿಯಲ್ಲಿ ಅವರನ್ನು ಕಳುಹಿಸಿದನು.


ನೀವು ಪಟ್ಟಣವನ್ನು ಹಿಡಿದ ತರುವಾಯ, ಬೆಂಕಿ ಹಚ್ಚಿ, ಅದನ್ನು ಸುಟ್ಟುಬಿಟ್ಟು, ಯೆಹೋವ ದೇವರ ಆಜ್ಞೆಯ ಪ್ರಕಾರವೇ ಮಾಡಿರಿ. ನಾನು ಇದನ್ನು ನಿಮಗೆ ಆಜ್ಞಾಪಿಸಿದ್ದೇನೆ,” ಎಂದನು.


ಪಶುಗಳನ್ನು ಮಾತ್ರ ನಮಗೆ ತೆಗೆದುಕೊಂಡು, ಪಟ್ಟಣಗಳನ್ನು ಸೂರೆಮಾಡಿದೆವು.


ಆದರೆ ಗಿಬ್ಯೋನಿನ ನಿವಾಸಿಗಳು ಯೆಹೋಶುವನು ಯೆರಿಕೋವಿಗೂ ಆಯಿಗೂ ಮಾಡಿದ್ದನ್ನು ಕೇಳಿದಾಗ,


ಆ ಪಟ್ಟಣಗಳ ಎಲ್ಲಾ ಕೊಳ್ಳೆಯನ್ನೂ, ಪಶುಪ್ರಾಣಿಗಳನ್ನೆಲ್ಲಾ ಇಸ್ರಾಯೇಲರು ತಮಗೋಸ್ಕರ ಸುಲಿಗೆ ಮಾಡಿಕೊಂಡರು. ಖಡ್ಗದಿಂದ ಜನರನ್ನು ನಾಶಮಾಡಿದರು. ಒಬ್ಬರನ್ನೂ ಅವರು ಉಳಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು