Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 8:29 - ಕನ್ನಡ ಸಮಕಾಲಿಕ ಅನುವಾದ

29 ಆಯಿ ಎಂಬ ಪಟ್ಟಣದ ಅರಸನನ್ನು ಸಾಯಂಕಾಲದವರೆಗೂ ಒಂದು ಮರದಲ್ಲಿ ತೂಗಿಹಾಕಿಸಿದನು. ಸೂರ್ಯ ಅಸ್ತಮಿಸುವಾಗ ಯೆಹೋಶುವನು ಅವನ ಹೆಣವನ್ನು ಮರದಿಂದ ಇಳಿಸಿ, ಅದನ್ನು ಆ ಪಟ್ಟಣದ ಬಾಗಿಲಿನ ದ್ವಾರದಲ್ಲಿ ಹಾಕಲು ಆಜ್ಞಾಪಿಸಿದನು. ಆಗ ಅವರು ಹಾಗೆಯೇ ಮಾಡಿದರು. ಆ ದೊಡ್ಡ ಕಲ್ಲು ಕುಪ್ಪೆಯನ್ನು ಅದರ ಮೇಲೆ ಇಟ್ಟರು. ಅದು ಇಂದಿನವರೆಗೂ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆಯಿ ಊರಿನ ಅರಸನನ್ನು ಸಾಯಂಕಾಲದವರೆಗೂ ಮರಕ್ಕೆ ನೇತು ಹಾಕಿಸಿ ಸೂರ್ಯನು ಅಸ್ತಮಿಸುವಾಗ ಯೆಹೋಶುವನು ಅವನ ಶವವನ್ನು ಕೆಳಗಿಳಿಸಿ ಅದನ್ನು ಊರಬಾಗಿಲಲ್ಲಿ ಹಾಕಿಸಿ ಅದರ ಮೇಲೆ ಕಲ್ಲಿನ ದೊಡ್ಡ ರಾಶಿಯನ್ನು ಹಾಕಿಸಿದನು. ಅದು ಇಂದಿನ ವರೆಗೂ ಹಾಗೆಯೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಆಯಿಯ ಅರಸನನ್ನು ಸಂಜೆಯವರೆಗೂ ಮರಕ್ಕೆ ನೇತುಹಾಕಿಸಿದನು. ಸೂರ್ಯನು ಅಸ್ತಮಿಸುತ್ತಲೆ ಅವನ ಶವವನ್ನು ಕೆಳಗಿಳಿಸಿ ಅದನ್ನು ಊರಬಾಗಿಲಿನಲ್ಲಿ ಹಾಕಿಸಿ ಅದರ ಮೇಲೆ ಕಲ್ಲಿನ ದೊಡ್ಡ ರಾಶಿಯನ್ನು ಮಾಡಿಸಿದನು. ಅದು ಇಂದಿನವರೆಗೂ ಹಾಗೆಯೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಆಯಿ ಎಂಬ ಊರಿನ ಅರಸನನ್ನು ಸಾಯಂಕಾಲದವರೆಗೂ ಮರದಲ್ಲಿ ನೇತುಹಾಕಿಸಿ ಸೂರ್ಯನು ಅಸ್ತವಿುಸುತ್ತಲೇ ಅವನ ಶವವನ್ನು ಕೆಳಗಿಳಿಸಿ ಅದನ್ನು ಊರು ಬಾಗಲಲ್ಲಿ ಹಾಕಿಸಿಬಿಟ್ಟು ಅದರ ಮೇಲೆ ಕಲ್ಲಿನ ದೊಡ್ಡ ಕುಪ್ಪೆಯನ್ನು ಮಾಡಿಸಿದನು. ಅದು ಇಂದಿನವರೆಗೂ ಹಾಗೆಯೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಯೆಹೋಶುವನು “ಆಯಿ”ಯ ಅರಸನನ್ನು ಒಂದು ಮರಕ್ಕೆ ಸಾಯಂಕಾಲದವರೆಗೂ ನೇತುಹಾಕಿದನು. ಸೂರ್ಯನು ಮುಳುಗಿದ ಮೇಲೆ, ಯೆಹೋಶುವನು ಆ ಅರಸನ ಶವವನ್ನು ಮರದಿಂದ ಕೆಳಗಿಳಿಸಿ ನಗರದ ದ್ವಾರದಲ್ಲೇ ಬಿಸಾಡಿ ಅದರ ಮೇಲೆ ಕಲ್ಲಿನ ದೊಡ್ಡ ಕುಪ್ಪೆಯನ್ನು ಮಾಡಿಸಿದನು. ಅದು ಇಂದಿನವರೆಗೂ ಹಾಗೆಯೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 8:29
14 ತಿಳಿವುಗಳ ಹೋಲಿಕೆ  

ಅವರು ಅಬ್ಷಾಲೋಮನನ್ನು ತೆಗೆದುಕೊಂಡು, ಅಡವಿಯಲ್ಲಿರುವ ಒಂದು ದೊಡ್ಡ ಗುಂಡಿಯಲ್ಲಿ ಹಾಕಿ, ಅವನ ಮೇಲೆ ದೊಡ್ಡ ಕಲ್ಲಿನ ಕುಪ್ಪೆಯನ್ನು ಹಾಕಿದರು. ಆದರೆ ಇಸ್ರಾಯೇಲರೆಲ್ಲರೂ ತಮ್ಮ ಗುಡಾರಗಳಿಗೆ ಓಡಿಹೋದರು.


ಅವರ ಮೇಲೆ ಕಲ್ಲುಕುಪ್ಪೆ ಕೂಡಿಸಿದರು. ಅದು ಈ ದಿನದವರೆಗೂ ಇದೆ. ಆಗ ಯೆಹೋವ ದೇವರು ತಮ್ಮ ಕೋಪದ ಉರಿಯನ್ನು ಬಿಟ್ಟು ತಿರುಗಿದರು. ಆದ್ದರಿಂದ ಆ ಸ್ಥಳವು ಈವರೆಗೂ ಆಕೋರಿನ ಕಣಿವೆ ಎಂದು ಕರೆಯಲಾಗುತ್ತದೆ.


ಹೆರೋದನು ದೇವರಿಗೆ ಸಲ್ಲಿಸಬೇಕಾದ ಮಹಿಮೆ ಸಲ್ಲಿಸದೇ ಹೋದದ್ದರಿಂದ ಕೂಡಲೇ ಒಬ್ಬ ದೇವದೂತನು ಅವನನ್ನು ಹೊಡೆಯಲು ಅವನು ಹುಳ ಬಿದ್ದು ಸತ್ತುಹೋದನು.


ಯೆಹೋವ ದೇವರು ನಿಮ್ಮ ಬಲಗಡೆಯಲ್ಲಿದ್ದಾರೆ; ಅವರು ತಮ್ಮ ತೀರ್ಪಿನ ದಿನದಲ್ಲಿ ಅರಸರನ್ನು ದಂಡಿಸುವರು.


ದೇವರು ಅಧಿಪತಿಗಳಿಗೆ ಶಿಸ್ತನ್ನು ನೀಡಿ, ಅವರನ್ನು ದಾರಿಯಿಲ್ಲದ ಕಾಡಿನಲ್ಲಿ ಅಲೆಯುವಂತೆ ಮಾಡಿದರು.


ಅವರು ಮೊರ್ದೆಕೈಗೋಸ್ಕರ ಹಾಮಾನನು ಸಿದ್ಧಮಾಡಿದ್ದ ಅದೇ ಗಲ್ಲುಮರದಲ್ಲಿ ಅವನನ್ನು ನೇತುಹಾಕಿದರು. ಆಗ ಅರಸನ ಕೋಪವು ಶಾಂತವಾಯಿತು.


ಆಗ ಗೆಜೆರಿನ ಅರಸನಾದ ಹೋರಾಮನು ಲಾಕೀಷಿಗೆ ಸಹಾಯಮಾಡಲು ಬಂದನು. ಆದರೆ ಯೆಹೋಶುವನು ಒಬ್ಬರೂ ಉಳಿಯದಂತೆ ಅವನನ್ನೂ, ಅವನ ಜನರನ್ನೂ ಸದೆಬಡಿದನು.


ಯೆಹೋವ ದೇವರು ಲಿಬ್ನವನ್ನೂ, ಅದರ ಅರಸನನ್ನೂ ಇಸ್ರಾಯೇಲಿನ ಕೈಯಲ್ಲಿ ಒಪ್ಪಿಸಿಕೊಟ್ಟರು. ಯೆಹೋಶುವನು ಅದನ್ನೂ, ಅದರಲ್ಲಿರುವ ಎಲ್ಲರನ್ನೂ ನಾಶಮಾಡಿದನು. ಅದರಲ್ಲಿ ಒಬ್ಬರನ್ನಾದರೂ ಉಳಿಸದೆ ಖಡ್ಗದಿಂದ ಹೊಡೆದು ಯೆರಿಕೋವಿನ ಅರಸನಿಗೆ ಮಾಡಿದ ಹಾಗೆ ಅದರ ಅರಸನಿಗೂ ಮಾಡಿದನು.


ಅದು ಪಸ್ಕಹಬ್ಬದ ಸಿದ್ಧತೆಯ ದಿನವಾಗಿತ್ತು. ಮರುದಿನ ವಿಶೇಷ ಸಬ್ಬತ್ ದಿನದಲ್ಲಿ ದೇಹಗಳು ಶಿಲುಬೆಯ ಮೇಲೆ ಇರಬಾರದೆಂದು ಅವರ ಕಾಲುಗಳನ್ನು ಮುರಿದು ಅವರನ್ನು ತೆಗೆದುಬಿಡಬೇಕೆಂದು ಯೆಹೂದ್ಯ ನಾಯಕರು ಪಿಲಾತನನ್ನು ಕೇಳಿಕೊಂಡರು.


ಯೆರಿಕೋವಿನ ಅರಸನು ಬೇತೇಲ್ ಬಳಿಯಲ್ಲಿರುವ ಆಯಿ ಪಟ್ಟಣದ ಅರಸನು.


ಆಯಿ ಎಂಬ ಪಟ್ಟಣದ ಅರಸನನ್ನು ಜೀವಸಹಿತ ಹಿಡಿದು ಯೆಹೋಶುವನ ಬಳಿಗೆ ತಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು