Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 8:4 - ಕನ್ನಡ ಸಮಕಾಲಿಕ ಅನುವಾದ

4 ಅವರಿಗೆ ಆಜ್ಞಾಪಿಸಿ, “ಪಟ್ಟಣದ ಹಿಂದೆ ನೀವು ಹೊಂಚಿಕೊಂಡಿರಿ, ಪಟ್ಟಣಕ್ಕೆ ಬಹುದೂರ ಹೋಗಬೇಡಿರಿ. ನೀವೆಲ್ಲರೂ ಸಿದ್ಧವಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 “ನೀವು ಪಟ್ಟಣದ ಹಿಂಭಾಗದಲ್ಲಿ ಹೊಂಚುಹಾಕಿ ಕುಳಿತಿರಬೇಕು. ಪಟ್ಟಣಕ್ಕೆ ಬಹುದೂರವಾಗಿರಬೇಡಿರಿ; ಎಲ್ಲರೂ ಸಿದ್ಧವಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅವರಿಗೆ, “ನೀವು ನಗರದ ಹಿಂಭಾಗದಲ್ಲಿ ಹೊಂಚುಹಾಕಿ ಕುಳಿತಿರಬೇಕು. ನಗರದಿಂದ ಬಹುದೂರವಾಗಿರಬೇಡಿ. ಎಲ್ಲರೂ ಸಿದ್ಧವಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಮೂವತ್ತು ಸಾವಿರ ಯುದ್ಧವೀರರನ್ನು ಆರಿಸಿ ಅವರಿಗೆ - ನೀವು ಪಟ್ಟಣದ ಹಿಂಭಾಗದಲ್ಲಿ ಹೊಂಚುಹಾಕಿಕೊಂಡಿರ್ರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಹೋಶುವನು ಅವರಿಗೆ, “ಗಮನಕೊಟ್ಟು ಕೇಳಿರಿ. ನೀವು ನಗರದ ಹಿಂಭಾಗದ ಸ್ಥಳದಲ್ಲಿ ಅಡಗಿಕೊಂಡಿದ್ದು ಆಕ್ರಮಣಮಾಡಲು ಸಿದ್ಧರಾಗಿರಿ. ನಗರದಿಂದ ಬಹಳ ದೂರ ಹೋಗಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 8:4
14 ತಿಳಿವುಗಳ ಹೋಲಿಕೆ  

ಇಸ್ರಾಯೇಲರು ಗಿಬೆಯದ ಸುತ್ತಲೂ ಹೊಂಚಿ ನೋಡುವವರನ್ನು ಇಟ್ಟರು.


ನೀವು ಅವರ ಮಾತಿಗೆ ಒಪ್ಪಿಕೊಳ್ಳಬೇಡಿ, ಏಕೆಂದರೆ ನಾಲ್ವತ್ತಕ್ಕಿಂತಲೂ ಹೆಚ್ಚು ಜನರು ಅವನಿಗಾಗಿ ಹೊಂಚುಹಾಕಿದ್ದಾರೆ. ಅವನನ್ನು ಕೊಲ್ಲುವವರೆಗೆ ಊಟಮಾಡುವುದಿಲ್ಲ, ಪಾನ ಮಾಡುವುದಿಲ್ಲ, ಎಂದು ಅವರು ಶಪಥ ಮಾಡಿದ್ದಾರೆ. ಅವರ ಬೇಡಿಕೆಗೆ ನಿಮ್ಮ ಒಪ್ಪಿಗೆಯನ್ನೇ ಈಗ ಅವರು ಎದುರುನೋಡುತ್ತಾ ಇದ್ದಾರೆ,” ಎಂದು ಹೇಳಿದನು.


ಇದನ್ನು ನೋಡಿ ನಾನು, “ಬಲಕ್ಕಿಂತ ಜ್ಞಾನವು ಉತ್ತಮ; ಆದರೆ ಜನರು ಬಡವನ ಜ್ಞಾನವನ್ನು ತಿರಸ್ಕಾರ ಮಾಡುತ್ತಾರೆ, ಅವನ ಮಾತುಗಳನ್ನು ಯಾರೂ ಲಕ್ಷಿಸುವುದಿಲ್ಲ,” ಎಂದುಕೊಂಡೆನು.


ಪಟ್ಟಣದ ಹತ್ತು ಮಂದಿ ಅಧಿಕಾರಿಗಳ ಸ್ಥಿರತೆಗಿಂತ, ಜ್ಞಾನವು ಜ್ಞಾನಿಯನ್ನು ಹೆಚ್ಚಾಗಿ ಸ್ಥಿರಪಡಿಸುತ್ತದೆ.


ಸೌಲನು ಅಮಾಲೇಕ್ಯರ ಪಟ್ಟಣದವರೆಗೂ ಬಂದು, ತಗ್ಗಿನಲ್ಲಿ ಹೊಂಚಿಹಾಕಿದ್ದನು.


ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ಇಸ್ರಾಯೇಲರು ಈಜಿಪ್ಟಿನಿಂದ ಬರುವಾಗ ಅಮಾಲೇಕ್ಯರು ಅವರ ಮಾರ್ಗಕ್ಕೆ ಅಡ್ಡಗಟ್ಟಿ ತೊಂದರೆಪಡಿಸಿದರು, ಆದ್ದರಿಂದ ನಾನು ಅವರಿಗೆ ಮುಯ್ಯಿತೀರಿಸುವೆನು.


ತಾವು ಸೋತುಹೋದೆವೆಂಬುದು ಹೀಗೆ ಬೆನ್ಯಾಮೀನ್ಯರಿಗೆ ಆಗ ತಿಳಿಯಿತು. ಏಕೆಂದರೆ ಇಸ್ರಾಯೇಲರು ಗಿಬೆಯದ ಹತ್ತಿರ ಹೊಂಚು ಹಾಕುವದಕ್ಕೆ ಇಟ್ಟ ಜನರನ್ನು ನಂಬಿದ್ದರು. ಆದುದರಿಂದ ತಮ್ಮ ಸ್ಥಳವನ್ನು ಬಿಟ್ಟು ಬೆನ್ಯಾಮೀನ್ಯರ ಮುಂದೆ ಓಡಿಹೋದರು.


ಇಸ್ರಾಯೇಲರೆಲ್ಲರೂ ತಮ್ಮ ಸ್ಥಳದಿಂದ ಎದ್ದು, ಬಾಳ್ ತಾಮಾರಿನಲ್ಲಿ ವ್ಯೂಹವನ್ನು ಕಟ್ಟಿದರು. ಆಗ ಗಿಬೆಯದ ಗವಿಯಲ್ಲಿ ಹೊಂಚಿ ನೋಡುತ್ತಿದ್ದ ಇಸ್ರಾಯೇಲರು ಹೊರಟು ಬಂದರು.


ಶೆಕೆಮಿನ ಹಿರಿಯರು ಪರ್ವತ ಶಿಖರಗಳ ಮೇಲೆ ಅವನಿಗೋಸ್ಕರ ಹೊಂಚುಗಾರರನ್ನು ಇಟ್ಟು, ತಮ್ಮ ಸಮೀಪವಾಗಿ ಮಾರ್ಗದಲ್ಲಿ ಹಾದುಹೋಗುವ ಎಲ್ಲರನ್ನು ಸುಲಿದುಕೊಂಡರು. ಈ ವರ್ತಮಾನವು ಅಬೀಮೆಲೆಕನಿಗೆ ಮುಟ್ಟಿತು.


ಆಗ ಆಯಿ ಎಂಬ ಪಟ್ಟಣದಲ್ಲಿರುವ ಜನರೆಲ್ಲರನ್ನು ಕರೆದುಕೊಂಡು ಹಿಂದಟ್ಟುವುದಕ್ಕೆ ಕರೆಯಲಾದವರು ಯೆಹೋಶುವನನ್ನು ಹಿಂದಟ್ಟಿದರು. ಹೀಗೆ ಅವರು ಆ ಪಟ್ಟಣದಿಂದ ಹೊರಬಂದರು.


ಆಗ ಆಯಿ ಎಂಬ ಪಟ್ಟಣಕ್ಕೆ ಏರಿ ಹೋಗಲು ಯೆಹೋಶುವನೂ, ಸಮಸ್ತ ಸೈನಿಕರೂ ಎದ್ದರು. ಆದರೆ ಯೆಹೋಶುವನು ಪರಾಕ್ರಮಶಾಲಿಗಳಾದ ಮೂವತ್ತು ಸಾವಿರ ಜನರನ್ನು ಆಯ್ದುಕೊಂಡು ರಾತ್ರಿಯಲ್ಲಿ ಅವರನ್ನು ಕಳುಹಿಸಿದನು.


ಅರಸನು ರಾತ್ರಿಯಲ್ಲೇ ಎದ್ದು ತನ್ನ ಪರಿವಾರದವರಿಗೆ, “ಅರಾಮ್ಯರ ಹಂಚಿಕೆಯನ್ನು ಹೇಳುತ್ತೇನೆ ಕೇಳಿ. ನಾವು ಹಸಿವೆಯಿಂದ ಸಾಯುವವರಾಗಿದ್ದೇವೆ ಎಂಬುದನ್ನು ಅವರು ಬಲ್ಲರು. ಆದ್ದರಿಂದ ಪಾಳೆಯವನ್ನು ಬಿಟ್ಟು ಹೋಗಿ ಅಡವಿಯಲ್ಲಿ ಅಡಗಿಕೊಂಡಿದ್ದಾರೆ. ನಾವು ಪಟ್ಟಣದಿಂದ ಹೊರಗೆ ಹೋದ ಕೂಡಲೇ ನಮ್ಮನ್ನು ಸಜೀವಿಗಳನ್ನಾಗಿಯೇ ಹಿಡಿದು ಪಟ್ಟಣವನ್ನು ಪ್ರವೇಶಿಸಬೇಕೆಂದಿದ್ದಾರೆ.”


ಆದರೆ ಯಾರೊಬ್ಬಾಮನು ಅಡಗಿಕೊಂಡವರನ್ನು ಸುತ್ತಲೂ ಅವರ ಹಿಂದೆ ಬರಮಾಡಿದನು. ಆದ್ದರಿಂದ ಇಸ್ರಾಯೇಲರು ಯೆಹೂದದವರ ಮುಂದೆಯೂ, ಅವರ ಹಿಂದೆಯೂ ಬಂದರು.


ಆದ್ದರಿಂದ ಈಗ ನೀನೂ, ನಿನ್ನ ಸಂಗಡ ಇರುವ ಜನರೂ ಕೂಡಿ, ರಾತ್ರಿಯಲ್ಲಿ ಎದ್ದು, ಹೊಲದಲ್ಲಿ ಹೊಂಚುಹಾಕಿಕೊಂಡಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು