Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 9:1 - ಕನ್ನಡ ಸಮಕಾಲಿಕ ಅನುವಾದ

1 ಯೊರ್ದನ್ ನದಿಯ ಈಚೆಯಲ್ಲಿ ಬೆಟ್ಟಗಳಲ್ಲಿಯೂ ತಗ್ಗುಗಳಲ್ಲಿಯೂ ಲೆಬನೋನಿಗೆ ಎದುರಾದ ಮೆಡಿಟೆರಿಯನ್ ಸಮುದ್ರದ ಸಮಸ್ತ ಪ್ರಾಂತಗಳಲ್ಲಿಯೂ ಇರುವ ಹಿತ್ತಿಯರ, ಅಮೋರಿಯರ, ಕಾನಾನ್ಯರ, ಪೆರಿಜೀಯರ, ಹಿವ್ವಿಯರ, ಯೆಬೂಸಿಯರ ಅರಸರು ಇದನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೊರ್ದನ್ ನದಿಯ ಆಚೆಗಿರುವ ಬೆಟ್ಟದ ಮೇಲಿನ ಪ್ರದೇಶ, ಕಣಿವೆ ಪ್ರದೇಶ, ಲೆಬನೋನಿನ ಎದುರಿಗಿರುವ ಮಹಾಸಾಗರದ ತೀರಪ್ರದೇಶ ಇವುಗಳಲ್ಲಿ ವಾಸವಾಗಿದ್ದ ಅಮೋರಿಯ, ಹಿತ್ತಿಯ, ಕಾನಾನ್, ಪೆರಿಜ್ಜೀಯ, ಹಿವ್ವಿಯ, ಯೆಬೂಸಿಯ ರಾಜರು ನಡೆದ ಸಂಗತಿಯನ್ನು ಕೇಳಿದರು ಹಾಗೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಜೋರ್ಡನ್ ಹೊಳೆಯ ಆಚೆ ಬೆಟ್ಟದ ಪ್ರದೇಶ, ಕಣಿವೆ ಪ್ರದೇಶ, ಲೆಬನೋನಿನ ಎದುರಿಗಿರುವ ಮಹಾಸಾಗರದ ತೀರಪ್ರದೇಶ ಇವುಗಳಲ್ಲಿ ವಾಸವಾಗಿದ್ದ ಅಮೋರಿಯ, ಹಿತ್ತಿಯ, ಕಾನಾನ್, ಪೆರಿಜ್ಜೀಯ, ಹಿವ್ವಿಯ, ಯೆಬೂಸಿಯ ರಾಜರು ನಡೆದ ಸಂಗತಿಯನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೊರ್ದನ್ ಹೊಳೆಯ ಆಚೆ ಬೆಟ್ಟದ ಮೇಲಿನ ಪ್ರದೇಶ, ಇಳಕಲಿನ ಪ್ರದೇಶ, ಲೆಬನೋನಿನ ಎದುರಿಗಿರುವ ಮಹಾಸಾಗರದ ತೀರಪ್ರದೇಶ ಇವುಗಳಲ್ಲಿ ವಾಸವಾಗಿದ್ದ ಅಮೋರಿಯ ಹಿತ್ತಿಯ ಕಾನಾನ್ ಪೆರಿಜ್ಜೀಯ ಹಿವ್ವಿಯ ಯೆಬೂಸಿಯ ರಾಜರು ನಡೆದ ಸಂಗತಿಯನ್ನು ಕೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಜೋರ್ಡನ್ ನದಿಯ ಪಶ್ಚಿಮದ ಎಲ್ಲ ಅರಸರು ಈ ವಿಷಯಗಳ ಬಗ್ಗೆ ಕೇಳಿದರು. ಇವರು ಹಿತ್ತಿಯರ, ಅಮೋರಿಯರ, ಕಾನಾನ್ಯರ, ಪೆರಿಜ್ಜೀಯರ, ಹಿವ್ವಿಯರ, ಯೆಬೂಸಿಯರ ರಾಜರಾಗಿದ್ದರು. ಅವರು ಬೆಟ್ಟಪ್ರದೇಶಗಳಲ್ಲಿ ಮತ್ತು ಸಮತಲ ಪ್ರದೇಶಗಳಲ್ಲಿ ವಾಸವಾಗಿದ್ದರು. ಅವರು ಭೂಮಧ್ಯಸಾಗರದ ತೀರ ಪ್ರದೇಶದಲ್ಲಿ, ಲೆಬನೋನಿನವರೆಗೆ ಸಹ ವಾಸವಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 9:1
32 ತಿಳಿವುಗಳ ಹೋಲಿಕೆ  

ಪಶ್ಚಿಮದಲ್ಲಿ ದೊಡ್ಡ ಸಮುದ್ರವೇ ನಿಮಗೆ ಮೇರೆಯಾಗಿರಬೇಕು. ಇದೇ ನಿಮ್ಮ ಪಶ್ಚಿಮ ಮೇರೆಯಾಗಿರುವುದು.


ಈಜಿಪ್ಟಿನ ವ್ಯಥೆಯಿಂದ ಬಿಡಿಸಿ ನಿಮ್ಮನ್ನು ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ಇರುವ ಹಾಲು ಜೇನು ಹರಿಯುವ ದೇಶಕ್ಕೆ ಬರಮಾಡುವೆನೆಂದು ವಾಗ್ದಾನ ಮಾಡಿದ್ದೇನೆ,’ ಎಂದು ಅವರಿಗೆ ತಿಳಿಸು.


ಜೀವವುಳ್ಳ ದೇವರು ನಿಮ್ಮ ಮಧ್ಯದಲ್ಲಿರುವುದನ್ನೂ, ಅವರು ಕಾನಾನ್ಯರನ್ನೂ, ಹಿತ್ತಿಯರನ್ನೂ, ಹಿವ್ವಿಯರನ್ನೂ, ಪೆರಿಜೀಯರನ್ನೂ, ಗಿರ್ಗಾಷಿಯರನ್ನೂ, ಅಮೋರಿಯರನ್ನೂ, ಯೆಬೂಸಿಯರನ್ನೂ ನಿಮ್ಮ ಮುಂದೆ ನಿಶ್ಚಯವಾಗಿ ಓಡಿಸಿಬಿಡುವುದನ್ನೂ ನೀವು ತಿಳಿಯುವಿರಿ.


ಏಕೆಂದರೆ ನನ್ನ ದೂತನು ನಿಮ್ಮ ಮುಂದೆ ಹೋಗಿ ಅಮೋರಿಯರು, ಹಿತ್ತಿಯರು, ಪೆರಿಜೀಯರು, ಕಾನಾನ್ಯರು, ಹಿವ್ವಿಯರು ಮತ್ತು ಯೆಬೂಸಿಯರು ಇರುವ ದೇಶಕ್ಕೆ ನಿಮ್ಮನ್ನು ಬರಮಾಡುವನು. ಅವರನ್ನು ನಾನು ನಿರ್ಮೂಲ ಮಾಡುವೆನು.


“ ‘ನೀವು ಯೊರ್ದನ್ ನದಿಯನ್ನು ದಾಟಿ ಯೆರಿಕೋವಿಗೆ ಬಂದಿರಿ. ಯೆರಿಕೋವಿನ ನಿವಾಸಿಗಳೂ ನಿಮ್ಮ ಸಂಗಡ ಯುದ್ಧಮಾಡಿದರು. ಹಾಗೆಯೇ ಅಮೋರಿಯರೂ ಪೆರಿಜೀಯರೂ ಕಾನಾನ್ಯರೂ ಹಿತ್ತಿಯರೂ ಗಿರ್ಗಾಷಿಯರೂ ಹಿವ್ವಿಯರೂ ಯೆಬೂಸಿಯರೂ ನಿಮ್ಮ ಸಂಗಡ ಯುದ್ಧಮಾಡಿದರು. ಆದರೆ ನಾನು ಅವರನ್ನು ನಿಮ್ಮ ಕೈಗೆ ಒಪ್ಪಿಸಿದೆನು.


ನಾನು ಯೊರ್ದನ್ ನದಿ ಮೊದಲುಗೊಂಡು ಪಶ್ಚಿಮಕ್ಕಿರುವ ಮೆಡಿಟೆರೆನಿಯನ್ ಸಮುದ್ರದವರೆಗೂ ರಾಷ್ಟ್ರಗಳನ್ನು ಸೋಲಿಸಿ, ಉಳಿದ ಸಕಲ ನಾಡನ್ನು ನಿಮ್ಮ ಗೋತ್ರಗಳಿಗೆ ಸೊತ್ತಾಗಿ ಕೊಟ್ಟಿದ್ದೇನೆ.


ಮನಸ್ಸೆಯ ಅರ್ಧ ಗೋತ್ರಕ್ಕೆ ಮೋಶೆಯು ಬಾಷಾನಿನಲ್ಲಿ ಸೊತ್ತನ್ನು ಕೊಟ್ಟಿದ್ದನು. ಇದಲ್ಲದೆ ಅವರ ಅರ್ಧ ಗೋತ್ರಕ್ಕೆ ಯೆಹೋಶುವನು ಸಹ ಯೊರ್ದನ್ ನದಿ ಪಶ್ಚಿಮಕ್ಕೆ ಅವರ ಸಹೋದರರ ನಡುವೆ ಸೊತ್ತನ್ನು ಕೊಟ್ಟಿದ್ದನು. ಇದಲ್ಲದೆ ಯೆಹೋಶುವನು ಅವರನ್ನು ಅವರ ಗುಡಾರಗಳಿಗೆ ಕಳುಹಿಸುವಾಗ ಅವರನ್ನು ಆಶೀರ್ವದಿಸಿ ಅವರಿಗೆ,


ಈಗ ನಿಮ್ಮ ದೇವರಾದ ಯೆಹೋವ ದೇವರು ಅವರಿಗೆ ವಾಗ್ದಾನ ಮಾಡಿದ ಪ್ರಕಾರ, ನಿಮ್ಮ ಸಹೋದರರಿಗೆ ವಿಶ್ರಾಂತಿ ಕೊಟ್ಟಿದ್ದಾರೆ. ಯೆಹೋವ ದೇವರ ಸೇವಕನಾದ ಮೋಶೆಯು ಯೊರ್ದನ್ ನದಿ ಆಚೆ ಕಡೆ ನಿಮಗೆ ಕೊಟ್ಟ ಸೊತ್ತಿನ ದೇಶದಲ್ಲಿರುವ ನಿಮ್ಮ ನಿವಾಸಗಳಿಗೆ ನೀವು ಹೊರಡಿರಿ.


ಅದು ಪಶ್ಚಿಮದ ಮೇರೆಯ ಮೆಡಿಟರೇನಿಯನ್ ಮಹಾಸಾಗರವಾಗಿದೆ. ಇದೇ ಯೆಹೂದ ಗೋತ್ರದವರಿಗೆ ಅವರ ಕುಟುಂಬಗಳ ಪ್ರಕಾರ ಉಂಟಾದ ಸುತ್ತಲಿರುವ ಮೇರೆ.


ಅದರೊಂದಿಗೆ ಗೆಬಾಲ್ಯರ ಪ್ರಾಂತ್ಯ, ಹೆರ್ಮೋನ್ ಬೆಟ್ಟದ ಕೆಳಗೆ ಇರುವ ಬಾಲ್ಗಾದಿನಿಂದ ಹಮಾತಿನ ದಾರಿಯವರೆಗೂ ಇರುವ ಲೆಬನೋನಿನ ಪೂರ್ವ ಪ್ರದೇಶ.


ಯೆಹೋಶುವನು ಸೇಯೀರಿಗೆ ಏರಿಹೋಗುವ ಹಾಲಾಕ್ ಬೆಟ್ಟ ಮೊದಲುಗೊಂಡು ಬಾಲ್ಗಾದಿನ ಮಟ್ಟಿಗೂ ಇರುವ ಲೆಬನೋನಿನ ಕಣಿವೆಯಲ್ಲಿ ಹೆರ್ಮೋನಿನ ಬೆಟ್ಟದ ಕೆಳಗಿರುವ ಎಲ್ಲಾ ದೇಶವನ್ನೂ ಬೆಟ್ಟಗಳನ್ನೂ ದಕ್ಷಿಣ ದೇಶವೆಲ್ಲವನ್ನೂ ತೆಗೆದುಕೊಂಡು ಅವುಗಳ ಅರಸುಗಳೆಲ್ಲರನ್ನೂ ಹಿಡಿದು ಅವರಿಗೆ ಮರಣದಂಡನೆ ವಿಧಿಸಿದನು.


ಅವರು ಹಾಗೆಯೇ ಮಾಡಿದರು. ಆ ಐದು ಮಂದಿ ಅರಸರನ್ನು ಅಂದರೆ ಯೆರೂಸಲೇಮಿನ ಅರಸನನ್ನೂ, ಹೆಬ್ರೋನಿನ ಅರಸನನ್ನೂ ಯರ್ಮೂತಿನ ಅರಸನನ್ನೂ ಲಾಕೀಷಿನ ಅರಸನನ್ನೂ ಎಗ್ಲೋನಿನ ಅರಸನನ್ನೂ ಆ ಗವಿಯೊಳಗಿಂದ ಅವನ ಬಳಿಗೆ ಹೊರಗೆ ತಂದರು.


ಇದಾದ ಮೇಲೆ ಯೆಹೋವ ದೇವರು ಇಸ್ರಾಯೇಲರು ದಾಟಿಹೋಗುವವರೆಗೆ ಅವರ ಮುಂದೆ ಯೊರ್ದನ್ ನದಿಯನ್ನು ಒಣಗಿ ಹೋಗುವಂತೆ ಮಾಡಿದ್ದನ್ನು ಯೊರ್ದನ್ ನದಿ ಪಶ್ಚಿಮದ ಆಚೆದಡದಲ್ಲಿ ವಾಸಿಸಿದ್ದ ಅಮೋರಿಯರ ಸಕಲ ಅರಸರು ಮತ್ತು ಸಮುದ್ರದ ಆಚೆಯಲ್ಲಿ ವಾಸಿಸಿದ್ದ ಕಾನಾನ್ಯರ ಸಕಲ ಅರಸರು ಕೇಳಿದಾಗ ಅವರ ಹೃದಯವು ಕುಂದಿಹೋಯಿತು. ಇಸ್ರಾಯೇಲರ ನಿಮಿತ್ತವಾಗಿ ಅವರಿಗೆ ಪ್ರಾಣಹೋದಂತೆ ಆಯಿತು.


ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ಯೊರ್ದನ್ ನದಿಯ ಮಧ್ಯದಲ್ಲಿ ಒಣನೆಲದಲ್ಲಿ ದೃಢವಾಗಿ ನಿಂತಿದ್ದರು. ಅಷ್ಟರಲ್ಲಿ ಇಸ್ರಾಯೇಲರೆಲ್ಲರೂ ಒಣನೆಲದ ಮೇಲೆ ನಡೆದರು. ಹೀಗೆ ಇಡೀ ರಾಷ್ಟ್ರವು ಯೊರ್ದನ್ ನದಿ ಆಚೆ ಸೇರಿತು.


ಯೆಹೋವ ದೇವರು ನಿಮ್ಮ ಹಾಗೆಯೇ ನಿಮ್ಮ ಸಹೋದರರನ್ನು ವಿಶ್ರಾಂತಿಪಡಿಸಿ, ಅವರು ನಿಮ್ಮ ದೇವರಾದ ಯೆಹೋವ ದೇವರು ತಮಗೆ ಕೊಡುವ ದೇಶವನ್ನು ಸ್ವಾಧೀನಮಾಡಿಕೊಳ್ಳುವವರೆಗೆ ಅವರಿಗೆ ಸಹಾಯಮಾಡಬೇಕು. ತರುವಾಯ ಯೆಹೋವ ದೇವರ ಸೇವಕನಾದ ಮೋಶೆಯು ಯೊರ್ದನ್ ನದಿಯ ಈಚೆಯಲ್ಲಿ ಸೂರ್ಯನು ಉದಯಿಸುವ ದಿಕ್ಕಿನಲ್ಲಿ ನಿಮಗೆ ಕೊಟ್ಟ ನಿಮ್ಮ ಸೊತ್ತಾಗಿರುವ ದೇಶಕ್ಕೆ ತಿರುಗಿಬಂದು, ಅದನ್ನು ಸ್ವಾಧೀನಮಾಡಿಕೊಂಡು, ಅದನ್ನು ಅನುಭವಿಸಿರಿ,” ಎಂದನು.


ಮರುಭೂಮಿಯೂ ಈ ಲೆಬನೋನ್ ಮೊದಲುಗೊಂಡು ಯೂಫ್ರೇಟೀಸ್ ಮಹಾ ನದಿಯವರೆಗೆ ಇರುವ ಹಿತ್ತಿಯರ ದೇಶವೆಲ್ಲಾ ನಿಮ್ಮದಾಗುವುದು. ನಿಮ್ಮ ಸೀಮೆ ಸೂರ್ಯನು ಅಸ್ತಮಿಸುವ ಮಹಾಸಾಗರದವರೆಗೂ ವಿಸ್ತರಿಸಿಕೊಳ್ಳುವುದು.


ನಿಮ್ಮ ದೇವರಾದ ಯೆಹೋವ ದೇವರು ನೀವು ಸ್ವತಂತ್ರಿಸಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ನಿಮ್ಮನ್ನು ಬರಮಾಡಿದಾಗ, ಅವರು ನಿಮಗಿಂತ ದೊಡ್ಡವರೂ ಬಲಿಷ್ಠರೂ ಆದ ಏಳು ಜನಾಂಗಗಳನ್ನು ಎಂದರೆ, ಗಿರ್ಗಾಷಿಯರನ್ನೂ ಹಿತ್ತಿಯರನ್ನೂ ಅಮೋರಿಯರನ್ನೂ ಕಾನಾನ್ಯರನ್ನೂ ಪೆರಿಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ಈ ಪ್ರಕಾರ ಬಹಳ ಜನಾಂಗಗಳನ್ನು ನಿಮ್ಮ ಮುಂದೆಯೇ ಹೊರಡಿಸುವರು.


ಯೊರ್ದನ್ ನದಿಯ ಆಚೆ ಪೂರ್ವದಿಕ್ಕಿನಲ್ಲಿ ಇರುವ ಎಲ್ಲಾ ಅರಾಬಾದನ್ನು ಸಹ, ಪಿಸ್ಗಾದ ಬೆಟ್ಟದ ತಗ್ಗಿನಲ್ಲಿರುವ ಬಯಲಿನ ಸಮುದ್ರದವರೆಗೆ ಸ್ವಾಧೀನಮಾಡಿಕೊಂಡರು.


ನಾನು ದಾಟಿ ಹೋಗಿ, ಯೊರ್ದನಿನ ಆಚೆಯಲ್ಲಿರುವ ಆ ಒಳ್ಳೆಯ ದೇಶವನ್ನೂ ಆ ಒಳ್ಳೆಯ ಬೆಟ್ಟವನ್ನೂ ಲೆಬನೋನನ್ನೂ ನೋಡುವುದಕ್ಕೆ ಅಪ್ಪಣೆಯಾಗಬೇಕು,” ಎಂದು ಬಿನ್ನೈಸಿದೆನು.


ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವುದನ್ನು ಅನುಸರಿಸಿ ನಡೆಯಬೇಕು. ಹಿತ್ತಿಯರನ್ನೂ ಅಮೋರಿಯರನ್ನೂ ಕಾನಾನ್ಯರನ್ನೂ, ಪೆರಿಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ನಿಮ್ಮ ಮುಂದೆಯೇ ಹೊರಡಿಸಿಬಿಡುತ್ತೇನೆ.


“ಕೆಂಪು ಸಮುದ್ರದಿಂದ ಫಿಲಿಷ್ಟಿಯರ ಸಮುದ್ರದವರೆಗೆ ಮರುಭೂಮಿಯಿಂದ ನದಿಯವರೆಗೂ ನಿಮ್ಮ ಮೇರೆಗಳನ್ನು ನೇಮಿಸುವೆನು. ದೇಶದ ನಿವಾಸಿಗಳನ್ನು ನಿಮ್ಮ ಕೈಗಳಿಗೆ ಒಪ್ಪಿಸುವೆನು. ನೀವು ಅವರನ್ನು ನಿಮ್ಮ ಎದುರಿನಿಂದ ಓಡಿಸಿಬಿಡುವಿರಿ.


ಅಮಾಲೇಕ್ಯರು ದೇಶದ ನೆಗೆವನಲ್ಲಿ ವಾಸವಾಗಿದ್ದಾರೆ. ಹಿತ್ತಿಯರೂ ಯೆಬೂಸಿಯರೂ ಅಮೋರಿಯರೂ ಪರ್ವತಗಳಲ್ಲಿಯೂ; ಕಾನಾನ್ಯರು ಸಮುದ್ರದ ಬಳಿಯಲ್ಲಿಯೂ ಯೊರ್ದನಿನ ತೀರದಲ್ಲಿಯೂ ವಾಸವಾಗಿದ್ದಾರೆ,” ಎಂದರು.


ಯೆಹೋವ ದೇವರು ಯೆಹೋಶುವನ ಸಂಗಡ ಇದ್ದರು. ಅವನ ಕೀರ್ತಿ ದೇಶದಲ್ಲೆಲ್ಲಾ ಹರಡಿತು.


ಆಗ ಇಸ್ರಾಯೇಲರು ಹಿವ್ವಿಯರಾದ ಅವರಿಗೆ, “ನೀವು ಒಂದು ವೇಳೆ ನಮ್ಮ ಹತ್ತಿರದಲ್ಲಿ ವಾಸಿಸುವವರು ಆಗಿರಬಹುದು. ನಾವು ನಿಮ್ಮ ಸಂಗಡ ಒಡಂಬಡಿಕೆಯನ್ನು ಮಾಡುವುದು ಹೇಗೆ?” ಎಂದರು.


ತಿರುಗಿಕೊಂಡು ಹೊರಟು ಅಮೋರಿಯರ ಬೆಟ್ಟಕ್ಕೂ, ಅದರ ಅರಾಬಾ ಸಮೀಪದ ಎಲ್ಲಾ ಪ್ರದೇಶದ ಗುಡ್ಡದಲ್ಲಿಯೂ ತಗ್ಗಿನಲ್ಲಿಯೂ ನೆಗೆವನಲ್ಲಿಯೂ ಸಮುದ್ರ ತೀರದಲ್ಲಿಯೂ ಇರುವ ಎಲ್ಲಾ ಸ್ಥಳಗಳಿಗೂ ಕಾನಾನ್ಯರ ದೇಶಕ್ಕೂ, ಲೆಬನೋನಿಗೂ ಯೂಫ್ರೇಟೀಸ್ ಎಂಬ ಮಹಾನದಿಯ ಬಳಿಗೂ ಹೋಗಿರಿ.


ಅವರು ಟೈರಿನ ಭದ್ರಸ್ಥಳಕ್ಕೂ, ಹಿವ್ವಿಯರ, ಕಾನಾನ್ಯರ ಸಕಲ ಪಟ್ಟಣಗಳಿಗೂ, ಅಲ್ಲಿಂದ ಯೆಹೂದದ ದಕ್ಷಿಣಕ್ಕೂ, ಬೇರ್ಷೆಬಕ್ಕೂ ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು