Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 9:17 - ಕನ್ನಡ ಸಮಕಾಲಿಕ ಅನುವಾದ

17 ಆಗ ಇಸ್ರಾಯೇಲರು ಪ್ರಯಾಣ ಮಾಡುವಾಗ ಮೂರನೆಯ ದಿವಸದಲ್ಲಿ ಗಿಬ್ಯೋನ್, ಕೆಫೀರಾ, ಬೇರೋತ್, ಕಿರ್ಯತ್ ಯಾರೀಮ್ ಎಂಬ ಅವರ ಪಟ್ಟಣಗಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಹೇಗೆಂದರೆ ಇಸ್ರಾಯೇಲ್ಯರು ಮೂರನೆಯ ದಿನದಲ್ಲಿ ಹೊರಟು ಗಿಬ್ಯೋನ್, ಕೆಫೀರಾ, ಬೇರೋತ್, ಕಿರ್ಯತ್ಯಾರೀಮ್ ಎಂಬ ಊರುಗಳನ್ನು ಸೇರಿದರು. ಆಗ ಆ ಊರುಗಳು ಆ ಜನರದ್ದೇ ಎಂದು ಗೊತ್ತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಹೇಗೆಂದರೆ - ಮೂರನೆಯ ದಿನದಂದು ಇಸ್ರಯೇಲರು ಹೊರಟು ಗಿಬ್ಯೋನ್, ಕೆಫೀರಾ, ಬೇರೋತ್, ಕಿರ್ಯತ್ಯಾರೀಮ್ ಎಂಬ ಊರುಗಳನ್ನು ಸೇರಿದರು. ಆಗ ಆ ಊರುಗಳು ಆ ಜನರದ್ದೇ ಎಂದು ಗೊತ್ತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಹೇಗಂದರೆ - ಇಸ್ರಾಯೇಲ್ಯರು ಮೂರನೆಯ ದಿನದಲ್ಲಿ ಹೊರಟು ಸೇರಿದಂಥ ಗಿಬ್ಯೋನ್, ಕೆಫೀರಾ, ಬೇರೋತ್, ಕಿರ್ಯತ್ಯಾರೀಮ್ ಎಂಬ ಊರುಗಳು ಅವರವೇ ಆಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆದ್ದರಿಂದ ಇಸ್ರೇಲರು ಅವರಿದ್ದ ಸ್ಥಳಕ್ಕೆ ಹೋದರು. ಮೂರನೆಯ ದಿನ ಇಸ್ರೇಲರು ಗಿಬ್ಯೋನ್, ಕೆಫೀರಾ, ಬೇರೋತ್ ಮತ್ತು ಕಿರ್ಯತ್ಯಾರೀಮ್ ಪಟ್ಟಣಗಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 9:17
24 ತಿಳಿವುಗಳ ಹೋಲಿಕೆ  

ಕಿರ್ಯತ್ ಯಾರೀಮ್, ಕೆಫೀರಾ, ಬೇರೋತ್ ಎಂಬ ಪಟ್ಟಣದವರು 743


ಕಿರ್ಯತ್ ಯಾರೀಮ್, ಕೆಫೀರಾ, ಬೇರೋತ್ ಎಂಬ ಪಟ್ಟಣದವರು 743 ಮಂದಿ ಇದ್ದರು.


ಮರುಭೂಮಿಯಲ್ಲಿ ಮೋಶೆಯು ಮಾಡಿದ ಯೆಹೋವ ದೇವರ ಗುಡಾರವೂ, ದಹನಬಲಿಪೀಠವೂ ಆ ಕಾಲದಲ್ಲಿ ಗಿಬ್ಯೋನಿನ ಉನ್ನತ ಸ್ಥಳದಲ್ಲಿ ಇದ್ದವು.


ಕಿರ್ಯತ್ ಯಾರೀಮಿನವರು ಬಂದು ಯೆಹೋವ ದೇವರ ಮಂಜೂಷವನ್ನು ತೆಗೆದುಕೊಂಡು, ಗುಡ್ಡದ ಮೇಲೆ ಇರುವ ಅಬೀನಾದಾಬನ ಮನೆಯಲ್ಲಿ ತಂದಿಟ್ಟರು. ಅವನ ಪುತ್ರನಾದ ಎಲಿಯಾಜರನನ್ನು ಯೆಹೋವ ದೇವರ ಮಂಜೂಷವನ್ನು ಕಾಯಲು ಪ್ರತಿಷ್ಠಿಸಿದರು.


ಇದಲ್ಲದೆ ಆ ಮೇರೆಯು ದಕ್ಷಿಣ ಎಲ್ಲೆಗೆ ಎದುರಾಗಿರುವ ಬೇತ್ ಹೋರೋನಿಗೆ ಎದುರಾಗಿ ಬೆಟ್ಟವನ್ನು ಹಿಡಿದು, ದಕ್ಷಿಣವಾಗಿ ಸುತ್ತಿಕೊಂಡು ಕಿರ್ಯತ್ ಯಾರೀಮ್ ಎಂಬ ಯೆಹೂದ ಗೋತ್ರದ ಪಟ್ಟಣವಾದ ಕಿರ್ಯತ್ ಬಾಳದ ಬಳಿಗೆ ಹೋಗಿ ಮುಗಿಯುವುದು. ಇದು ಪಶ್ಚಿಮ ಎಲ್ಲೆಯಾಗಿತ್ತು.


ಕಿರ್ಯತ್ ಯಾರೀಮ್ ಎಂಬ ಕಿರ್ಯತ್ ಬಾಳ್, ರಬ್ಬಾ ಎಂಬ ಎರಡು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು.


ಆ ಬೆಟ್ಟದ ಶಿಖರದಿಂದ ನೆಫ್ತೋಹದ ನೀರಿನ ಬುಗ್ಗೆಗೂ ಅಲ್ಲಿಂದ ಎಫ್ರೋನನ ಬೆಟ್ಟದ ಪಟ್ಟಣಗಳಿಗೂ ಅಲ್ಲಿಂದ ಕಿರ್ಯತ್ ಯಾರೀಮ್ ಆದ ಬಾಲಾ ಎಂಬ ಊರಿನವರೆಗೆ ಹೋಗುತ್ತದೆ.


ಅದೋನೀಚೆದೆಕನು ಅವನ ಜನರೂ ಬಹು ಭಯಪಟ್ಟರು. ಏಕೆಂದರೆ ಗಿಬ್ಯೋನ್ ಒಂದು ರಾಜಧಾನಿಯಷ್ಟು ಶ್ರೇಷ್ಠ ಪಟ್ಟಣವೂ ಅದು ಆಯಿ ಪಟ್ಟಣಕ್ಕಿಂತಲೂ ದೊಡ್ಡದಾಗಿತ್ತು. ಇದಲ್ಲದೆ ಅದರಲ್ಲಿರುವ ಜನರು ಪರಾಕ್ರಮಶಾಲಿಗಳಾಗಿದ್ದರು.


ಆದರೆ ಗಿಬ್ಯೋನಿನ ನಿವಾಸಿಗಳು ಯೆಹೋಶುವನು ಯೆರಿಕೋವಿಗೂ ಆಯಿಗೂ ಮಾಡಿದ್ದನ್ನು ಕೇಳಿದಾಗ,


ಅವರು ಅವನಿಗೆ, “ನಿಮ್ಮ ದೇವರಾದ ಯೆಹೋವ ದೇವರ ಹೆಸರಿನ ಮಹತ್ವ ಕೇಳಿ ನಿನ್ನ ಸೇವಕರಾದ ನಾವು ದೂರದೇಶದಿಂದ ಬಂದಿದ್ದೇವೆ. ಏಕೆಂದರೆ ದೇವರ ಕೀರ್ತಿಯನ್ನೂ, ಅವರು ಈಜಿಪ್ಟಿನಲ್ಲಿ ಮಾಡಿದ ಎಲ್ಲವನ್ನೂ ಕೇಳಿದ್ದೇವೆ.


ಆದರೆ ಅವರ ಸಂಗಡ ಒಡಂಬಡಿಕೆ ಮಾಡಿ, ಮೂರು ದಿವಸಗಳಾದ ತರುವಾಯ ಅವರು ತಮ್ಮ ನೆರೆಯವರೆಂದೂ, ತಮ್ಮಲ್ಲಿ ಇರುವವರೆಂದೂ ತಿಳಿದುಬಂತು.


ಆದರೆ ಪ್ರಧಾನರು ಅವರಿಗೆ ಇಸ್ರಾಯೇಲಿನ ದೇವರಾದ ಯೆಹೋವ ದೇವರ ಮೇಲೆ ಪ್ರಮಾಣ ಮಾಡಿದ್ದರಿಂದ ಇಸ್ರಾಯೇಲರು ಅವರ ಮೇಲೆ ದಾಳಿಮಾಡಲಿಲ್ಲ. ಆದರೆ ಇಸ್ರಾಯೇಲರೆಲ್ಲರೂ ಪ್ರಧಾನರಿಗೆ ವಿರೋಧವಾಗಿ ಗೊಣಗುಟ್ಟಿದರು.


ಆ ದಕ್ಷಿಣ ಎಲ್ಲೆಯೂ ಕಿರ್ಯತ್ ಯಾರೀಮ್ ತುದಿಯಿಂದ ಹೊರಟು, ಪಶ್ಚಿಮಕ್ಕೆ ಹೋಗಿ, ನೆಫ್ತೋಹದ ಜಲಬುಗ್ಗೆಯ ಬಳಿ ಮುಗಿಯುತ್ತದೆ.


ಯೆಹೂದದಲ್ಲಿರುವ ಕಿರ್ಯತ್ ಯಾರೀಮಿನಲ್ಲಿ ಇಳಿದುಕೊಂಡರು. ಆ ಸ್ಥಳಕ್ಕೆ ಈ ದಿನದವರೆಗೂ ಮಹನೇ ದಾನ್ ಎಂಬ ಹೆಸರಿದೆ.


ಅವರು ಕಿರ್ಯತ್ ಯಾರೀಮಿನ ನಿವಾಸಿಗಳಿಗೆ ದೂತರನ್ನು ಕಳುಹಿಸಿ, “ಫಿಲಿಷ್ಟಿಯರು ಯೆಹೋವ ದೇವರ ಮಂಜೂಷವನ್ನು ತಿರುಗಿ ಕಳುಹಿಸಿದ್ದಾರೆ, ನೀವು ಬಂದು ಅದನ್ನು ನಿಮ್ಮ ಬಳಿಗೆ ತೆಗೆದುಕೊಂಡು ಹೋಗಿರಿ,” ಎಂದು ಹೇಳಿದರು.


ಆದರೆ ಸೌಲನ ಮಗನಿಗೆ ಸೇನಾಪತಿಗಳು ಇಬ್ಬರಿದ್ದರು. ಒಬ್ಬನ ಹೆಸರು ಬಾಣನು. ಮತ್ತೊಬ್ಬನ ಹೆಸರು ರೇಕಾಬನು. ಇವರು ಬೆನ್ಯಾಮೀನ್ ಗೋತ್ರದಲ್ಲಿ ಬೇರೋತ್ ಗ್ರಾಮದವನಾದ ರಿಮ್ಮೋನನ ಮಕ್ಕಳು. ಏಕೆಂದರೆ ಬೇರೋತ್ ಬೆನ್ಯಾಮೀನ್ಯರಿಗೆ ಸೇರಿದ ಗ್ರಾಮ.


ಇನ್ನುಳಿದ ಕಾಲೇಬನ ವಂಶಜರು: ಕಾಲೇಬನಿಗೆ ಅವನ ಹೆಂಡತಿ ಎಫ್ರಾತಳಿಂದ ಜನಿಸಿದ ಚೊಚ್ಚಲ ಮಗನ ಹೆಸರು ಹೂರ್. ಹೂರನ ಮಗ ಶೋಬಾಲ್ ಕಿರ್ಯತ್ ಯಾರೀಮ್ ಪಟ್ಟಣವನ್ನೂ,


ಕಿರ್ಯತ್ ಯಾರೀಮ್ ಪಟ್ಟಣದ ಸ್ಥಾಪಕ ಶೋಬಾಲನು ಹಾರೋಯೆ ಜನರ, ಮಾನಹತಿಯರ ಅರ್ಧದಷ್ಟು ಜನರ,


ಹಾಗೂ ಕಿರ್ಯತ್ ಯಾರೀಮನವರ ಗೋತ್ರಗಳು: ಯೆತೆರಿಯರು, ಪೂತ್ಯರು, ಶುಮಾತ್ಯರು, ಮಿಷ್ರಾಗ್ಯರು, ಇವರಿಂದ ಚೊರ್‍ರಾತ್ಯರೂ, ಎಷ್ಟಾವೋಲ್ಯರೂ ಹುಟ್ಟಿದರು.


ಕಿರ್ಯತ್ ಯಾರೀಮಿನವನಾದ ಶೆಮಾಯನ ಮಗ ಊರೀಯ ಎಂಬುವವನು ಸಹ ಯೆಹೋವ ದೇವರ ಹೆಸರಿನಲ್ಲಿ ಪ್ರವಾದಿಸುತ್ತಿರಲಾಗಿ ಯೆರೆಮೀಯನ ಎಲ್ಲಾ ಮಾತುಗಳ ಪ್ರಕಾರ, ಈ ಪಟ್ಟಣಕ್ಕೂ, ಈ ದೇಶಕ್ಕೂ ವಿರೋಧವಾಗಿ ಪ್ರವಾದಿಸಿದನು.


ಗಿಬ್ಯೋನ್ಯನಾದ ಇಷ್ಮಾಯನು ಮೂವತ್ತು ಮಂದಿಯಲ್ಲಿ ಪರಾಕ್ರಮಶಾಲಿಯಾಗಿದ್ದ ಮತ್ತು ಮೂವತ್ತು ಮಂದಿಯ ಮುಖ್ಯಸ್ಥನಾಗಿದ್ದ; ಯೆರೆಮೀಯ, ಯಹಜಿಯೇಲ್, ಯೋಹಾನಾನ್, ಗೆದೇರದವನಾದ ಯೋಜಾಬಾದ್,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು