Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 9:21 - ಕನ್ನಡ ಸಮಕಾಲಿಕ ಅನುವಾದ

21 ಅದು ಏನೆಂದರೆ, ಪ್ರಧಾನರಾದ ನಾವು ಅವರಿಗೆ ಹೇಳಿದ ಹಾಗೆಯೇ ಅವರು ಜೀವದಿಂದ ಇರಲಿ. ಆದರೆ ಅವರು ಇಸ್ರಾಯೇಲಿನ ಎಲ್ಲಾ ಸಮೂಹಕ್ಕೆ ಕಟ್ಟಿಗೆ ಕಡಿಯುವವರೂ ನೀರು ತರುವವರೂ ಆಗಿರಲಿ,” ಪ್ರಧಾನರ ಮಾತಿನಂತೆಯೇ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅವರು ಸಮೂಹಕ್ಕೆಲ್ಲಾ ಕಟ್ಟಿಗೆ ಸೀಳುವವರೂ ನೀರು ಹೊರುವವರೂ ಆಗಿರಲಿ” ಎಂದು ಹೇಳಿದರು. ನಾಯಕರ ಮಾತಿನಂತೆಯೇ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಆದರೆ ನಮ್ಮ ಜನರಿಗೆ ಅವರು ಕಟ್ಟಿಗೆ ಕಡಿಯುವವರೂ ನೀರು ತರುವವರೂ ಆಗಿರಲಿ,” ಎಂದು ಹೇಳಿದರು. ನಾಯಕರ ಮಾತಿನಂತೆಯೇ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅವರು ಸಮೂಹಕ್ಕೆಲ್ಲಾ ಕಟ್ಟಿಗೆ ಒಡೆಯುವವರೂ ನೀರು ತರುವವರೂ ಆಗಿ ಬದುಕಲಿ ಎಂದು ಹೇಳಿದರು. ಪ್ರಧಾನರ ಮಾತಿನಂತೆಯೇ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆದ್ದರಿಂದ ಅವರು ಜೀವಂತವಾಗಿ ಉಳಿಯಲಿ. ಆದರೆ ಅವರು ನಮ್ಮ ಸೇವಕರಾಗಲಿ. ಅವರು ನಮಗಾಗಿ ಸೌಧೆಯನ್ನು ಕಡಿಯಲಿ ಮತ್ತು ನಮ್ಮೆಲ್ಲರಿಗಾಗಿ ನೀರು ತಂದುಹಾಕಲಿ” ಎಂದು ಉತ್ತರಿಸಿದರು. ಹೀಗೆ ಜನನಾಯಕರು ಆ ಜನರೊಂದಿಗೆ ಮಾಡಿಕೊಂಡ ಶಾಂತಿ ಒಪ್ಪಂದವನ್ನು ಮುರಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 9:21
9 ತಿಳಿವುಗಳ ಹೋಲಿಕೆ  

ನಿಮ್ಮ ಮಕ್ಕಳೂ ಹೆಂಡತಿಯರೂ ನಿಮ್ಮ ಪಾಳೆಯದಲ್ಲಿರುವ ಪರದೇಶಿಯರೂ ನಿಮಗಾಗಿ ಕಟ್ಟಿಗೆ ಕಡಿಯುವವರೂ ನೀರು ಸೇದುವವರೂ ಸಹ


ಯೆಹೋಶುವನು ಆ ದಿನ ಇರುವ ಹಾಗೆ ಗಿಬ್ಯೋನಿನವರ ಸಮೂಹಕ್ಕೂ ಯೆಹೋವ ದೇವರು ಆಯ್ದುಕೊಳ್ಳುವ ಸ್ಥಳದಲ್ಲಿರುವ ಅವರ ಬಲಿಪೀಠಕ್ಕೂ ಕಟ್ಟಿಗೆ ಕಡಿಯುವವರಾಗಿಯೂ ನೀರು ತರುವವರಾಗಿಯೂ ನೇಮಿಸಿದನು. ಅವರು ಇಂದಿನವರೆಗೂ ಅದೇ ಕೆಲಸ ಮಾಡುತ್ತಾರೆ.


ಈಗ ನೀವು ಶಾಪಗ್ರಸ್ತರು, ನೀವು ಯಾವಾಗಲೂ ದಾಸತ್ವದಿಂದ ಬಿಡುಗಡೆಯಾಗುವುದಿಲ್ಲ. ನೀವು ನನ್ನ ದೇವರ ಮನೆಗೆ ಕಟ್ಟಿಗೆ ಕಡಿಯುವವರೂ ನೀರು ತರುವವರೂ ಆಗಿರುವಿರಿ,” ಎಂದು ಹೇಳಿದನು.


ಯೆಹೋಶುವನು ಅವರ ಸಂಗಡ ಸಮಾಧಾನದ ಒಡಂಬಡಿಕೆ ಮಾಡಿಕೊಂಡನು. ಅವರನ್ನು ಜೀವದಿಂದ ಉಳಿಸುವುದಕ್ಕೆ ಅವರ ಸಂಗಡ ಒಡಂಬಡಿಕೆ ಮಾಡಿದನು. ಇದಲ್ಲದೆ ಸಭೆಯ ಪ್ರಧಾನರು ಅವರಿಗೆ ಪ್ರಮಾಣ ಮಾಡಿದರು.


ನಾವು ಅವರಿಗೆ ಇಟ್ಟ ಆಣೆಯ ನಿಮಿತ್ತ ಕೋಪವು ನಮ್ಮ ಮೇಲೆ ಬಾರದ ಹಾಗೆ ನಾವು ಅವರನ್ನು ಜೀವದಿಂದ ಉಳಿಸಬೇಕು. ಆದರೆ ನಾವು ಅವರಿಗೆ ಹೀಗೆ ಮಾಡೋಣ.


ಅದರ ಶಬ್ದವು ಸರ್ಪದಂತೆ ಹೊರಡುವುದು; ಏಕೆಂದರೆ ಅವರು ದಂಡಿನ ಸಂಗಡ ಸಂಚರಿಸಿ, ಕಟ್ಟಿಗೆ ಕಡಿಯುವವರ ಹಾಗೆ ಕೊಡಲಿಗಳ ಸಂಗಡ ಅದಕ್ಕೆ ವಿರೋಧವಾಗಿ ಬರುವರು.


ನೀವೆಲ್ಲರು ಈ ಹೊತ್ತು ನಿಮ್ಮ ದೇವರಾದ ಯೆಹೋವ ದೇವರ ಮುಂದೆ ನಿಂತಿದ್ದೀರಿ. ನಿಮ್ಮ ಗೋತ್ರಗಳ ಮುಖ್ಯಸ್ಥರೂ ಹಿರಿಯರೂ ಅಧಿಕಾರಿಗಳೂ ಇಸ್ರಾಯೇಲಿನ ಜನರೆಲ್ಲರೂ


ಈ ಸಮಯದಲ್ಲಿ ಯೆರೂಸಲೇಮಿನ ಅರಸನಾದ ಅದೋನೀಚೆದೆಕನು ಯೆಹೋಶುವನು ಯೆರಿಕೋವನ್ನೂ ಅದರ ಅರಸನನ್ನೂ ಹೇಗೋ ಹಾಗೆಯೇ ಆಯಿ ಎಂಬ ಪಟ್ಟಣವನ್ನು ಸ್ವಾಧೀನಪಡಿಸಿಕೊಂಡು, ಅದರ ಅರಸನನ್ನು ಸಂಹರಿಸಿಬಿಟ್ಟು ಸಂಪೂರ್ಣ ನಾಶಮಾಡಿದನೆಂಬ ಸಂಗತಿಯನ್ನು ಅವನು ಕೇಳಿದ್ದನು. ಹಾಗೆಯೇ ಗಿಬ್ಯೋನಿನ ನಿವಾಸಿಗಳು ಇಸ್ರಾಯೇಲಿನ ಸಂಗಡ ಸಮಾಧಾನ ಮಾಡಿಕೊಂಡು ಅವರಲ್ಲಿ ಇದ್ದರೆಂದೂ ಕೇಳಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು