Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 9:24 - ಕನ್ನಡ ಸಮಕಾಲಿಕ ಅನುವಾದ

24 ಅದಕ್ಕವರು ಯೆಹೋಶುವನಿಗೆ, “ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ದೇಶವನ್ನೆಲ್ಲಾ ಒಪ್ಪಿಸಿಕೊಡುವುದಕ್ಕೂ, ದೇಶದ ನಿವಾಸಿಗಳನ್ನೆಲ್ಲಾ ನಿಮ್ಮ ಮುಂದೆ ನಾಶಮಾಡುವುದಕ್ಕೂ ತಮ್ಮ ಸೇವಕ ಮೋಶೆಗೆ ಆಜ್ಞಾಪಿಸಿದ್ದಾರೆಂದು, ನಿಮ್ಮ ಸೇವಕರಾದ ನಾವು ಕೇಳಿದೆವು. ಆದ್ದರಿಂದ ನಾವು ನಮ್ಮ ಪ್ರಾಣಕ್ಕಾಗಿ ಬಹಳ ಭಯಪಟ್ಟು ಈ ಕಾರ್ಯವನ್ನು ಮಾಡಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅವರು ಯೆಹೋಶುವನಿಗೆ “ನಿನ್ನ ದೇವರಾದ ಯೆಹೋವನು ತನ್ನ ಸೇವಕನಾದ ಮೋಶೆಗೆ ‘ನಾನು ನಿಮಗೆ ಈ ದೇಶವನ್ನೆಲ್ಲಾ ಕೊಡುವಾಗ ನೀವು ಇದರ ಎಲ್ಲಾ ನಿವಾಸಿಗಳನ್ನು ಸಂಹರಿಸಿ ಬಿಡಬೇಕೆಂದು’ ಆಜ್ಞಾಪಿಸಿದ್ದನ್ನು ಕೇಳಿ ನಮ್ಮ ಪ್ರಾಣ ತೆಗೆಯುವಿರೆಂದು ಹೆದರಿ ಹೀಗೆ ಮಾಡಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಅವರು ಯೆಹೋಶುವನಿಗೆ, “ನಿಮ್ಮ ದೇವರಾದ ಸರ್ವೇಶ್ವರ ತಮ್ಮ ದಾಸ ಮೋಶೆಗೆ, ‘ನಾನು ನಿಮಗೆ ಈ ದೇಶವನ್ನೆಲ್ಲ ಕೊಡುವಾಗ ನೀವು ಇದರ ನಿವಾಸಿಗಳನ್ನೆಲ್ಲಾ ಸಂಹರಿಸಬೇಕು’ ಎಂದು ಆಜ್ಞಾಪಿಸಿದ್ದಾರೆಂದು ಕೇಳಿ ನಮ್ಮ ಪ್ರಾಣ ತೆಗೆಯುವಿರೆಂದು ಹೆದರಿ ಹೀಗೆ ಮಾಡಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅವರು ಯೆಹೋಶುವನಿಗೆ - ನಿನ್ನ ದೇವರಾದ ಯೆಹೋವನು ತನ್ನ ಸೇವಕನಾದ ಮೋಶೆಗೆ - ನಾನು ನಿಮಗೆ ಈ ದೇಶವನ್ನೆಲ್ಲಾ ಕೊಡುವಾಗ ನೀವು ಇದರ ಎಲ್ಲಾ ನಿವಾಸಿಗಳನ್ನು ಸಂಹರಿಸಿಬಿಡಬೇಕೆಂದು ಆಜ್ಞಾಪಿಸಿದ್ದನ್ನು ಕೇಳಿ ನಮ್ಮ ಪ್ರಾಣ ತೆಗೆಯುವಿರೆಂದು ಹೆದರಿ ಹೀಗೆ ಮಾಡಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಗಿಬ್ಯೋನ್ಯರು, “ನೀವು ನಮ್ಮನ್ನು ಕೊಲ್ಲಬಹುದೆಂಬ ಭಯದಿಂದ ನಾವು ನಿಮಗೆ ಸುಳ್ಳು ಹೇಳಿದೆವು; ದೇವರು ತನ್ನ ಸೇವಕನಾದ ಮೋಶೆಗೆ ಈ ಎಲ್ಲ ಭೂಪ್ರದೇಶವನ್ನು ನಿಮಗೆ ಕೊಡಬೇಕೆಂದು ಆಜ್ಞಾಪಿಸಿರುವುದನ್ನೂ ಈ ಪ್ರದೇಶದ ಎಲ್ಲ ಜನರನ್ನು ಕೊಂದುಬಿಡಬೇಕೆಂದು ನಿಮಗೆ ಹೇಳಿರುವನೆಂದೂ ನಾವು ಕೇಳಿದ್ದೆವು. ಆದ್ದರಿಂದ ನಾವು ನಿಮಗೆ ಸುಳ್ಳು ಹೇಳಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 9:24
14 ತಿಳಿವುಗಳ ಹೋಲಿಕೆ  

ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾಗದವರಿಗೆ ಹೆದರಬೇಡಿರಿ. ಆದರೆ ಆತ್ಮ ಮತ್ತು ದೇಹ ಎರಡನ್ನೂ ನರಕದಲ್ಲಿ ನಾಶಮಾಡಬಲ್ಲ ದೇವರಿಗೆ ಭಯಪಡಿರಿ.


ಅದಕ್ಕೆ ಸೈತಾನನು, “ಚರ್ಮಕ್ಕೆ ಚರ್ಮ,” ಎಂದ ಹಾಗೆ, “ಒಬ್ಬ ಮನುಷ್ಯನು ತನ್ನ ಪ್ರಾಣ ಉಳಿಸಿಕೊಳ್ಳಲು ತನ್ನ ಸರ್ವಸ್ವವನ್ನೂ ಕೊಡುವನು.


ಅವರು ಅವನಿಗೆ, “ನಿಮ್ಮ ದೇವರಾದ ಯೆಹೋವ ದೇವರ ಹೆಸರಿನ ಮಹತ್ವ ಕೇಳಿ ನಿನ್ನ ಸೇವಕರಾದ ನಾವು ದೂರದೇಶದಿಂದ ಬಂದಿದ್ದೇವೆ. ಏಕೆಂದರೆ ದೇವರ ಕೀರ್ತಿಯನ್ನೂ, ಅವರು ಈಜಿಪ್ಟಿನಲ್ಲಿ ಮಾಡಿದ ಎಲ್ಲವನ್ನೂ ಕೇಳಿದ್ದೇವೆ.


“ಯೆಹೋವ ದೇವರು ನಿಮಗೆ ದೇಶವನ್ನು ಕೊಟ್ಟಿದ್ದಾರೆಂದೂ, ನಿಮ್ಮ ನಿಮಿತ್ತ ನಮಗೆ ಮಹಾ ಭೀತಿಯಾಗಿದೆ ಎಂದೂ ನಿಮಗೋಸ್ಕರ ದೇಶದ ನಿವಾಸಿಗಳೆಲ್ಲರೂ ಕಂಗೆಟ್ಟು ಹೋಗಿದ್ದಾರೆಂದೂ ನಾನು ಬಲ್ಲೆನು.


ಇವುಗಳನ್ನು ನಾವು ಕೇಳಿದಾಗಲೇ ನಮ್ಮ ಹೃದಯವು ಕುಂದಿಹೋಯಿತು. ಇನ್ನು ನಿಮ್ಮ ನಿಮಿತ್ತ ಯಾವನಲ್ಲಿಯೂ ಧೈರ್ಯವಿಲ್ಲದೆ ಹೋಯಿತು. ನಿಮ್ಮ ದೇವರಾದ ಯೆಹೋವ ದೇವರೇ ಮೇಲಿರುವ ಪರಲೋಕದಲ್ಲಿಯೂ ಕೆಳಗಿರುವ ಭೂಮಿಯ ಮೇಲೆಯೂ ದೇವರಾಗಿದ್ದಾರೆ.


ಪಟ್ಟಣದಲ್ಲಿರುವ ಎಲ್ಲಾ ಸ್ತ್ರೀಪುರುಷರನ್ನೂ ಹಿರಿಕಿರಿಯರನ್ನೂ ಕುರಿದನಗಳನ್ನೂ ಕತ್ತೆಗಳನ್ನೂ ಖಡ್ಗದಿಂದ ಸಂಪೂರ್ಣವಾಗಿ ನಾಶಮಾಡಿದರು.


ಅದೋನೀಚೆದೆಕನು ಅವನ ಜನರೂ ಬಹು ಭಯಪಟ್ಟರು. ಏಕೆಂದರೆ ಗಿಬ್ಯೋನ್ ಒಂದು ರಾಜಧಾನಿಯಷ್ಟು ಶ್ರೇಷ್ಠ ಪಟ್ಟಣವೂ ಅದು ಆಯಿ ಪಟ್ಟಣಕ್ಕಿಂತಲೂ ದೊಡ್ಡದಾಗಿತ್ತು. ಇದಲ್ಲದೆ ಅದರಲ್ಲಿರುವ ಜನರು ಪರಾಕ್ರಮಶಾಲಿಗಳಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು