ಯೆಹೋಶುವ 9:6 - ಕನ್ನಡ ಸಮಕಾಲಿಕ ಅನುವಾದ6 ಅನಂತರ ಅವರು ಗಿಲ್ಗಾಲಿನಲ್ಲಿ ಇರುವ ಪಾಳೆಯಕ್ಕೆ ಸೇರಿ ಯೆಹೋಶುವನ ಬಳಿಗೆ ಬಂದರು. ಅವರು ಅವನಿಗೂ ಇಸ್ರಾಯೇಲರಿಗೂ, “ನಾವು ದೂರದೇಶದಿಂದ ಬಂದೆವು. ಈಗ ನಮ್ಮ ಸಂಗಡ ಒಡಂಬಡಿಕೆ ಮಾಡಿಕೊಳ್ಳಿರಿ,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ತಾವು ರಾಯಭಾರಿಗಳೆಂದು ಗಿಲ್ಗಾಲಿನಲ್ಲಿದ್ದ ಯೆಹೋಶುವನ ಪಾಳೆಯಕ್ಕೆ ಬಂದರು. ಅವನಿಗೂ ಇಸ್ರಾಯೇಲ್ಯರಿಗೂ “ನಾವು ದೂರದೇಶದಿಂದ ಬಂದವರು. ನೀವು ನಮ್ಮ ಸಂಗಡ ಒಂದು ಒಪ್ಪಂದ ಮಾಡಿಕೊಳ್ಳಬೇಕು” ಎಂದು ಕೇಳಿ ಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ತಾವೂ ರಾಯಭಾರಿಗಳೆಂದು ಗಿಲ್ಗಾಲಿನಲ್ಲಿದ್ದ ಯೆಹೋಶುವನ ಪಾಳೆಯಕ್ಕೆ ಬಂದರು. ಅವನಿಗೂ ಇಸ್ರಯೇಲರಿಗೂ, “ನಾವು ದೂರದೇಶದಿಂದ ಬಂದವರು. ನೀವು ನಮ್ಮ ಸಂಗಡ ಒಂದು ಒಪ್ಪಂದ ಮಾಡಿಕೊಳ್ಳಿ,” ಎಂದು ಕೇಳಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ತಾವು ರಾಯಭಾರಿಗಳೆಂದು ಗಿಲ್ಗಾಲಿನಲ್ಲಿದ್ದ ಯೆಹೋಶುವನ ಪಾಳೆಯಕ್ಕೆ ಬಂದು ಅವನಿಗೂ ಇಸ್ರಾಯೇಲ್ಯರಿಗೂ - ನಾವು ದೂರದೇಶದಿಂದ ಬಂದೆವು; ನೀವು ನಮ್ಮ ಸಂಗಡ ಒಡಂಬಡಿಕೆಮಾಡಿಕೊಳ್ಳಿರಿ ಎಂದು ಹೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಅವರು ಇಸ್ರೇಲರ ಪಾಳೆಯಕ್ಕೆ ಹೋದರು. ಈ ಪಾಳೆಯವು ಗಿಲ್ಗಾಲಿನ ಹತ್ತಿರ ಇತ್ತು. ಅವರು ಯೆಹೋಶುವನ ಬಳಿಗೆ ಹೋಗಿ ಅವನಿಗೆ, “ನಾವು ಬಹುದೂರ ದೇಶದಿಂದ ಪ್ರಯಾಣ ಮಾಡಿ ಬಂದಿದ್ದೇವೆ. ನಾವು ನಿಮ್ಮ ಜೊತೆ ಶಾಂತಿ ಒಪ್ಪಂದವನ್ನು ಮಾಡಿಕೊಳ್ಳಲು ಇಚ್ಛಿಸುತ್ತೇವೆ” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |