Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 9:8 - ಕನ್ನಡ ಸಮಕಾಲಿಕ ಅನುವಾದ

8 ಅದಕ್ಕವರು ಯೆಹೋಶುವನಿಗೆ, “ನಾವು ನಿನ್ನ ಸೇವಕರು,” ಎಂದರು. ಆಗ ಯೆಹೋಶುವನು ಅವರಿಗೆ, “ನೀವು ಯಾರು? ಎಲ್ಲಿಂದ ಬಂದಿರಿ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವರು ಯೆಹೋಶುವನಿಗೆ “ನಾವು ನಿಮ್ಮ ದಾಸರು” ಎಂದರು. ಯೆಹೋಶುವನು ಅವರನ್ನು “ನೀವು ಯಾರು? ಎಲ್ಲಿಯವರು?” ಎಂದು ವಿಚಾರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅವರು ಯೆಹೋಶುವನಿಗೆ, “ನಾವು ನಿಮ್ಮ ಸೇವಕರು” ಎಂದರು. “ನೀವು ಯಾರು? ಎಲ್ಲಿಯವರು?” ಎಂದು ಆತ ವಿಚಾರಿಸಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವರು ಯೆಹೋಶುವನಿಗೆ - ನಾವು ನಿನ್ನ ದಾಸರಾಗಿದ್ದೇವೆನ್ನಲು ಅವನು ಅವರನ್ನು - ನೀವು ಯಾರು, ಎಲ್ಲಿಯವರು ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಹಿವ್ವಿಯರು ಯೆಹೋಶುವನಿಗೆ, “ನಾವು ನಿಮ್ಮ ಸೇವಕರು” ಎಂದು ಹೇಳಿದರು. ಆದರೆ ಯೆಹೋಶುವನು, “ನೀವು ಯಾರು? ಎಲ್ಲಿಂದ ಬಂದಿರುವಿರಿ?” ಎಂದು ಪ್ರಶ್ನಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 9:8
9 ತಿಳಿವುಗಳ ಹೋಲಿಕೆ  

ಆಗ ಅರಮನೆಯ ಆಡಳಿತಾಧಿಕಾರಿ, ಪಟ್ಟಣದ ರಾಜ್ಯಪಾಲರು, ಹಿರಿಯರು ಮತ್ತು ಪಾಲಕರು ಈ ಸಂದೇಶವನ್ನು ಯೇಹುವಿನ ಬಳಿಗೆ ಕಳುಹಿಸಿ, “ನಾವು ನಿಮ್ಮ ಸೇವಕರು ನೀವು ನಮಗೆ ಹೇಳುವುದನ್ನೆಲ್ಲಾ ಮಾಡುತ್ತೇವೆ. ನಾವು ಯಾರನ್ನೂ ಅರಸನನ್ನಾಗಿ ನೇಮಿಸುವುದಿಲ್ಲ. ನಿಮ್ಮ ದೃಷ್ಟಿಗೆ ಒಳ್ಳೆಯದಾಗಿರುವುದನ್ನು ನೀವು ಮಾಡಿರಿ,” ಎಂದರು.


ಆ ಪಟ್ಟಣವು ನಿಮಗೆ ಸಮಾಧಾನದ ಉತ್ತರಕೊಟ್ಟು ಬಾಗಿಲನ್ನು ತೆರೆದರೆ, ಅದರಲ್ಲಿರುವ ಜನರೆಲ್ಲರೂ ನಿಮಗೆ ಕಪ್ಪಕೊಟ್ಟು, ನಿಮಗಾಗಿ ಕೆಲಸ ಮಾಡಬೇಕು.


ನಮ್ಮ ಹಿರಿಯರೂ, ನಮ್ಮ ದೇಶವಾಸಿಗಳಾದ ಜನರೆಲ್ಲರೂ ನಮಗೆ ಹೇಳಿದ್ದೇನೆಂದರೆ, ‘ನೀವು ಪ್ರಯಾಣಕ್ಕಾಗಿ ರೊಟ್ಟಿಯನ್ನು ತೆಗೆದುಕೊಂಡು ಅವರೆದುರಿಗೆ ಹೋಗಿ, ಅವರಿಗೆ ನಾವು ನಿಮ್ಮ ಸೇವಕರು ಆದಕಾರಣ ಈಗ ನಮ್ಮ ಸಂಗಡ ಒಡಂಬಡಿಕೆ ಮಾಡಿಕೊಳ್ಳಿರಿ ಎಂದು ಹೇಳಿರಿ,’ ಎಂದರು.


ಯೆಹೋಶುವನು ಆ ದಿನ ಇರುವ ಹಾಗೆ ಗಿಬ್ಯೋನಿನವರ ಸಮೂಹಕ್ಕೂ ಯೆಹೋವ ದೇವರು ಆಯ್ದುಕೊಳ್ಳುವ ಸ್ಥಳದಲ್ಲಿರುವ ಅವರ ಬಲಿಪೀಠಕ್ಕೂ ಕಟ್ಟಿಗೆ ಕಡಿಯುವವರಾಗಿಯೂ ನೀರು ತರುವವರಾಗಿಯೂ ನೇಮಿಸಿದನು. ಅವರು ಇಂದಿನವರೆಗೂ ಅದೇ ಕೆಲಸ ಮಾಡುತ್ತಾರೆ.


ಇಗೋ, ಈಗಲೂ ನಾವು ನಿನ್ನ ಕೈಯಲ್ಲಿಯೇ ಇದ್ದೇವೆ. ನಿನ್ನ ದೃಷ್ಟಿಗೆ ಒಳ್ಳೆಯದಾಗಿಯೂ, ಸರಿಯಾಗಿಯೂ ತೋಚುವ ಹಾಗೆ ನಮಗೆ ಮಾಡು,” ಎಂದು ಉತ್ತರಕೊಟ್ಟರು.


ಈಗ ನೀವು ಶಾಪಗ್ರಸ್ತರು, ನೀವು ಯಾವಾಗಲೂ ದಾಸತ್ವದಿಂದ ಬಿಡುಗಡೆಯಾಗುವುದಿಲ್ಲ. ನೀವು ನನ್ನ ದೇವರ ಮನೆಗೆ ಕಟ್ಟಿಗೆ ಕಡಿಯುವವರೂ ನೀರು ತರುವವರೂ ಆಗಿರುವಿರಿ,” ಎಂದು ಹೇಳಿದನು.


ಆಗ ಗಿಬ್ಯೋನಿನ ಜನರು, “ಪರ್ವತಗಳಲ್ಲಿ ವಾಸವಾಗಿರುವ ಅಮೋರಿಯರ ಅರಸುಗಳೆಲ್ಲರೂ ನಮಗೆ ವಿರೋಧವಾಗಿ ಕೂಡಿಬಂದಿದ್ದಾರೆ. ನಿನ್ನ ಸೇವಕರರಾದ ನಮ್ಮನ್ನು ಕೈಬಿಡದೆ ಶೀಘ್ರವಾಗಿ ನಮ್ಮ ಬಳಿಗೆ ಬಂದು, ನಮ್ಮನ್ನು ಕಾಪಾಡು! ನಮಗೆ ಸಹಾಯಮಾಡು,” ಎಂದು ಗಿಲ್ಗಾಲಿನಲ್ಲಿ ಪಾಳೆಯ ಮಾಡಿದ್ದ ಯೆಹೋಶುವನ ಬಳಿಗೆ ಹೇಳಿ ಕಳುಹಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು