Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋನನು 1:10 - ಕನ್ನಡ ಸಮಕಾಲಿಕ ಅನುವಾದ

10 ಆಗ ಆ ಮನುಷ್ಯರು ಬಹಳ ಭಯಪಟ್ಟು, “ನೀನು ಏನು ಮಾಡಿದ್ದೀ?” ಎಂದು ಅವನನ್ನು ಕೇಳಿದರು. ಏಕೆಂದರೆ ಯೆಹೋವ ದೇವರ ಸಮ್ಮುಖದಿಂದ ಅವನು ಓಡಿ ಹೋಗುತ್ತಿದ್ದಾನೆಂದು ಆ ಮನುಷ್ಯರಿಗೆ ತಿಳಿದಿತ್ತು. ಏಕೆಂದರೆ ಅವನೇ ಇದನ್ನು ಅವರಿಗೆ ಹೇಳಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಾನು ಯೆಹೋವನ ಸನ್ನಿಧಿಯಿಂದ ಓಡಿಹೋಗುತ್ತಿದ್ದೇನೆ ಎಂದು ಅವನು ಅವರಿಗೆ ಸೂಚಿಸಿದನು. ಇದನ್ನು ಕೇಳಿ ಅವರು ಬಹಳವಾಗಿ ಹೆದರಿ “ಇದೇನು ನೀನು ಮಾಡಿದ್ದು?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅಲ್ಲದೆ ತಾನು ಆ ಸ್ವಾಮಿಯ ಸನ್ನಿಧಿಯಿಂದ ಓಡಿಹೋಗುತ್ತಿರುವುದಾಗಿಯೂ ತಿಳಿಸಿದನು. ಇದನ್ನು ಕೇಳಿದ್ದೇ ನಾವಿಕರು ಭಯಭ್ರಾಂತರಾದರು. “ಎಂಥಾ ತಪ್ಪುಮಾಡಿದೆ!” ಎಂದು ಅವನನ್ನು ಖಂಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಇವನು ಯೆಹೋವನ ಸನ್ನಿಧಿಯಿಂದ ಓಡಿಬಂದವನು ಎಂಬದನ್ನು ಅವನು ಮೊದಲು ಹೇಳಿದ ಒಂದು ಮಾತಿನಿಂದ ಆ ಜನರು ತಿಳುಕೊಂಡಿದ್ದರು. ಈಗ ಇದನ್ನೂ ಕೇಳಿ ಬಹಳವಾಗಿ ಹೆದರಿ - ಇದೇನು ನೀನು ಮಾಡಿದ್ದು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ತಾನು ಯೆಹೋವನಿಂದ ದೂರ ಓಡಿಹೋಗುತ್ತಿರುವದಾಗಿ ಯೋನನು ಜನರಿಗೆ ತಿಳಿಸಿದನು. ಆಗ ಅವರು ಬಹಳವಾಗಿ ಹೆದರಿದರು. “ನಿನ್ನ ದೇವರಿಗೆ ವಿರುದ್ಧವಾಗಿ ಎಂಥಾ ಭಯಂಕರ ಕೃತ್ಯ ಮಾಡಿರುವೆ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋನನು 1:10
8 ತಿಳಿವುಗಳ ಹೋಲಿಕೆ  

ಆದರೆ ಯೋನನು ಯೆಹೋವ ದೇವರ ಸಮ್ಮುಖದಿಂದ ತಾರ್ಷೀಷಿಗೆ ಓಡಿಹೋಗುವುದಕ್ಕೆ ಎದ್ದು, ಯೊಪ್ಪಕ್ಕೆ ಇಳಿದು ತಾರ್ಷೀಷಿಗೆ ಹೋಗುವ ಹಡಗನ್ನು ಕಂಡು, ಪ್ರಯಾಣದ ದರವನ್ನು ಕೊಟ್ಟು, ಯೆಹೋವ ದೇವರ ಸಮ್ಮುಖದಿಂದ ತಪ್ಪಿಸಿಕೊಂಡು ಹೋಗಲು, ಪ್ರಯಾಣಮಾಡುತ್ತಿದ್ದ ಹಡಗಿನವರೊಡನೆ ತಾರ್ಷೀಷಿಗೆ ಹೋಗುವುದಕ್ಕೆ ಅದನ್ನು ಹತ್ತಿದನು.


ಆ ಗಾಳಿಯು ಕರುಣೆ ಇಲ್ಲದೆ ದುಷ್ಟರ ಮೇಲೆ ಬೀಸಲು, ಅವರು ಅದರ ಶಕ್ತಿಯಿಂದ ತಪ್ಪಿಸಿಕೊಳ್ಳಲು ಯತ್ನಿಸುವರು.


ಪಿಲಾತನು ಈ ಮಾತನ್ನು ಕೇಳಿದಾಗ ಬಹಳವಾಗಿ ಭಯಪಟ್ಟನು.


ಆಗ ಯೋವಾಬನು ಅರಸನಿಗೆ, “ಅರಸನಾದ ನನ್ನ ಒಡೆಯನ ಕಣ್ಣುಗಳು ಅದನ್ನು ಕಾಣುವ ಹಾಗೆ ನಿನ್ನ ದೇವರಾದ ಯೆಹೋವ ದೇವರು ತಮ್ಮ ಜನರನ್ನು ಈಗ ಇರುವುದಕ್ಕಿಂತ ನೂರರಷ್ಟಾಗಿ ಹೆಚ್ಚಿಸಲಿ; ಆದರೆ ನನ್ನ ಒಡೆಯನಾದ ಅರಸನು ಈ ಕಾರ್ಯವನ್ನು ಮಾಡಲು ಅಪೇಕ್ಷಿಸುವುದು ಏಕೆ?” ಎಂದನು.


ಆಗ ಯೆಹೋಶುವನು ಅವನಿಗೆ, “ನೀನು ನಮ್ಮನ್ನು ಸಂಕಷ್ಟಪಡಿಸಿದ್ದೇನು? ಇಂದು ಯೆಹೋವ ದೇವರು ನಿನ್ನನ್ನು ಸಂಕಷ್ಟಪಡಿಸುವರು,” ಎಂದನು. ಆಗ ಇಸ್ರಾಯೇಲರೆಲ್ಲರೂ ಅವನ ಮೇಲೆ ಕಲ್ಲೆಸೆದರು. ಕಲ್ಲೆಸೆದ ತರುವಾಯ ಉಳಿದವರನ್ನು ಬೆಂಕಿಯಿಂದ ಸುಟ್ಟುಬಿಟ್ಟು,


ಆಗ ಬಿರುಗಾಳಿ ಮತ್ತಷ್ಟು ತೀವ್ರಗೊಳ್ಳುತ್ತಿತ್ತು. ನಾವಿಕರು ಯೋನನಿಗೆ, “ಸಮುದ್ರ ಶಾಂತವಾಗಬೇಕಾದರೆ, ನಿನ್ನನ್ನು ಏನು ಮಾಡಬೇಕು? ಹೇಳು,” ಎಂದು ಕೇಳಿದರು.


ಯೆಹೋವ ದೇವರು ಸ್ತ್ರೀಗೆ, “ಇದೇನು ನೀನು ಮಾಡಿದ್ದು?” ಎಂದು ಕೇಳಲು, ಅದಕ್ಕೆ ಸ್ತ್ರೀಯು, “ಸರ್ಪವು ನನ್ನನ್ನು ವಂಚಿಸಿತು. ನಾನು ತಿಂದೆನು,” ಎಂದು ಉತ್ತರಕೊಟ್ಟಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು